ಕನ್ನಡ ಸುದ್ದಿ  /  Astrology  /  Horoscope Today Astrology Prediction 29th November 2023 Aries Taurus Gemini Cancer Daily Horoscope Sts

ಪರರ ಹಣಕಾಸಿನ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿದರೆ ಸಮಸ್ಯೆಗೆ ಸಿಲುಕುವಿರಿ; ಬುಧವಾರದ ದಿನಭವಿಷ್ಯ

29 ನವೆಂಬರ್‌, ಬುಧವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th November 2023 Daily Horoscope).

29 ನವೆಂಬರ್‌, ಬುಧವಾರದ ರಾಶಿ ಭವಿಷ್ಯ
29 ನವೆಂಬರ್‌, ಬುಧವಾರದ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th November 2023 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ದಕ್ಷಿಣಾಯನ-ಶರದೃತು-ಕಾರ್ತಿಕ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ: ಬಿದಿಗೆ 01.21 ವರೆಗೆ ಇರಲಿದ್ದು ಆನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ: ಮೃಗಶಿರ ನಕ್ಷತ್ರ 02.14 ರವರೆಗೂ ಇದ್ದು ನಂತರ ಆರ್ದ್ರಾ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.24

ಸೂರ್ಯಾಸ್ತ: ಸಂಜೆ 05.50

ರಾಹುಕಾಲ: ಮಧ್ಯಾಹ್ನ12.00 ರಿಂದ 01.30

ರಾಶಿ ಫಲಗಳು

ಮೇಷ

ಯಾವುದೇ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ಬಿಡುವಿಲ್ಲದ ಕೆಲಸಗಳಿಂದ ಮಾನಸಿಕ ಸ್ಥೈರ್ಯ ಕಡಿಮೆಯಾಗುತ್ತದೆ. ಒತ್ತಡಕ್ಕೆ ಒಳಗಾಗದೆ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ವಿಶ್ರಾಂತಿಯ ಅವಶ್ಯಕತೆ ಇದೆ. ಸಾಧ್ಯವಾದಷ್ಟು ಖರ್ಚು ವೆಚ್ಚಗಳನ್ನು ಕಡಿಮೆ ಮಾಡಿ. ಸಿಡುಕುತನ ತೋರದೆ ಕುಟುಂಬದ ಜನರೊಂದಿಗೆ ಶಾಂತಿಯಿಂದ ವರ್ತಿಸಿ. ಸಮಸ್ಯೆಗಳು ಎದುರಾದಾಗ ಸೂಕ್ತ ಪರಿಹಾರ ಕಂಡುಹಿಡಿಯಿರಿ. ಅತಿ ಮುಖ್ಯವಾದ ಕೆಲಸವೊಂದು ಮುಂದೂಡಲ್ಪಡುತ್ತದೆ. ಸಂಗಾತಿಯ ಒಳ್ಳೆಯ ಮನಸ್ಸು ಜೀವನದಲ್ಲಿ ಹೊಸ ಆಸೆಯನ್ನು ನೀಡುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಇರುತ್ತದೆ. ನೀವು ಮಾಡುವ ಕೆಲಸ ಕಾರ್ಯಗಳಿಗೆ ಎಲ್ಲರಿಂದ ಉತ್ತಮ ಪ್ರಶಂಸೆ ಲಭಿಸುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಮತ್ತು ಹಾಲನ್ನು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ವೃಷಭ

ಕುಟುಂಬದಲ್ಲಿಅಸಹಜ ಪರಿಸ್ಥಿತಿಯೊಂದನ್ನು ಎದುರಿಸುವಿರಿ. ಉದ್ಯೋಗದಲ್ಲಿ ನಿರೀಕ್ಷಿಸಿದ ಗೆಲುವು ಸಾಧಿಸುವಿರಿ. ಯಾವುದೇ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಡಿರಿ. ಪರಿಸ್ಥಿತಿಯನ್ನು ಸರಿಯಾಗಿ ಅವಲೋಕಿಸಿ ತೀರ್ಮಾನ ಕೈಗೊಳ್ಳಿರಿ. ವಿದ್ಯಾರ್ಥಿಗಳು ಶಿಕ್ಷಕರ ಮಾಗದರ್ಶನ ದೊರೆತು ಯಶಸ್ಸು ಕಾಣುವರು. ಇದ್ದ ಹಣವನ್ನೆಲ್ಲಾ ಖರ್ಚು ಮಾಡುವಿರಿ. ಮನರಂಜನಾ ಕೂಟ ಮತ್ತು ಓಡಾಟಕ್ಕೆ ಹೆಚ್ಚಿನ ಹಣದ ಅವಶ್ಯಕತೆ ಇದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಆತ್ಮೀಯರೊಬ್ಬರ ಭೇಟಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಮಕ್ಕಳ ಜೊತೆ ಸಂತಸದಿಂದ ದಿನ ಕಳೆಯುವಿರಿ. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಬಹುದು. ಅನಾವಶ್ಯಕವಾದ ವಾದ ವಿವಾದಗಳು ಕುಟುಂಬದಲ್ಲಿ ಬೇಸರ ಉಂಟುಮಾಡುತ್ತದೆ.

ಪರಿಹಾರ : ಕುಟುಂಬದಲ್ಲಿರುವ ಹೆಣ್ಣು ಮಕ್ಕಳಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ

ಮಿಥುನ

ಆತ್ಮವಿಶ್ವಾಸದ ಕೊರತೆ ಕಾಣದು. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಕಂಡುಬರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಮಾನಸಿಕ ಒತ್ತಡವಿದ್ದರೂ ಯಾವುದೇ ತೊಂದರೆ ಎದುರಾಗದು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಅಭ್ಯಾಸದಲ್ಲಿ ಮುಂದುವರೆಯಬೇಕು. ಅವಧಿಗಿಂತ ಮುಂಚಿತವಾಗಿ ಕೆಲಸ ಕಾರ್ಯಗಳಲ್ಲಿ ನಿರತರಾಗುವ ಕಾರಣ ಎಲ್ಲರ ಮೆಚ್ಚುಗೆ ಗಳಿಸುವಿರಿ. ತಾಳ್ಮೆಯಿಂದ ಇರಿ, ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಿ ತೊಂದರೆಗೆ ಒಳಗಾಗುವಿರಿ. ಕೆಲಸದ ಒತ್ತಡದ ನಡುವೆಯೂ ಮನರಂಜನೆಗೆ ಆದ್ಯತೆ ನೀಡುವಿರಿ. ವಿವಾಹದ ವಿಚಾರದಲ್ಲಿ ಶುಭಸುದ್ದಿಯೊಂದು ಬರಲಿದೆ. ಸ್ವಂತ ಉದ್ದಿಮೆ ಇದ್ದಲ್ಲಿ ಕಾರ್ಮಿಕರ ನಡುವೆ ಅನಾವಶ್ಯಕ ವಾದ ವಿವಾದಗಳು ಇರುತ್ತವೆ. ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು.

ಪರಿಹಾರ : ಕತ್ತಿನಲ್ಲಿ ತಾಮ್ರದ ನಾಣ್ಯವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹಳದಿ

ಕಟಕ

ಕುಟುಂಬದಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಉದ್ಯೋಗದಲ್ಲಿ ಪ್ರತಿಯೊಂದು ಕೆಲಸದಲ್ಲಿಯೂ ಶ್ರಮ ವಹಿಸಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ನಡೆಯಲಿದೆ. ಉತ್ತಮ ಲಾಭವಿದ್ದರೂ ಮನಸ್ಸಿನಲ್ಲಿ ಆತಂಕವಿರುತ್ತದೆ. ವಿದ್ಯಾರ್ಥಿಗಳು ಗಂಭೀರವಾಗಿ ಕಲಿಕೆಯಲ್ಲಿ ನಿರತರಾಗುತ್ತಾರೆ. ದಿನಾಂತ್ಯಕ್ಕೆ ಹಣದ ಕೊರತೆ ಅನುಭವಿಸುವಿರಿ. ಕೆಲಸ ಕಾರ್ಯಗಳು ಕಡಿಮೆ ಪ್ರಮಾಣದಲ್ಲಿ ಇದ್ದರೂ ಹೆಚ್ಚಿನ ಪ್ರಯತ್ನದಿಂದ ಗುರಿ ತಲುಪುವಿರಿ. ಆತ್ಮೀಯರಿಗೆ ಕೊಟ್ಟಿದ್ದ ಮಾತನ್ನು ಮರೆತು ಸಂದಿಗ್ಧತೆಗೆ ಸಿಲುಕುವಿರಿ. ಸ್ವಂತ ಕೆಲಸಗಳಿಗೆ ಮೊದಲ ಆದ್ಯತೆ ನೀಡುವಿರಿ. ಅನಿರೀಕ್ಷಿತವಾಗಿ ನಡೆಯುವ ಘಟನೆಗೊಂದು ಬೇಸರ ಮೂಡಿಸುತ್ತದೆ.

ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ