ಕನ್ನಡ ಸುದ್ದಿ  /  Astrology  /  Horoscope Today Astrology Prediction 2nd April 2024 Sagittarius Capricorn Aquarius Pisces Sts

Horoscope Today: ಸ್ವಂತ ಉದ್ದಿಮೆಯನ್ನು ಆರಂಭಿಸುವ ಕನಸು ನನಸಾಗಲಿದೆ; ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ; ಏಪ್ರಿಲ್‌ 2ರ ರಾಶಿಫಲ

2 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (2nd April 2024 2024 Daily Horoscope).

ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(2nd April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ: ಅಷ್ಟಮಿ 03.14 ರವರೆಗೂ ಇದ್ದು ನಂತರ ನವಮಿ ಆರಂಭವಾಗಲಿದೆ.

ನಕ್ಷತ್ರ : ಪೂರ್ವಾಷಾಢ ನಕ್ಷತ್ರವು ಸಂಜೆ 06.22 ರವರೆಗೂ ಇದ್ದು ನಂತರ ಉತ್ತರಾಷಾಢ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.16

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 03.00 ರಿಂದ 04.30

ರಾಶಿಫಲ

ಧನಸ್ಸು

ಆತ್ಮೀಯರಿಗೆ ನೀಡಿದ ಮಾತನ್ನು ಉಳಿಸಿಕೊಳ್ಳಲು ಹಣದ ಸಹಾಯ ಮಾಡಬೇಕಾಗುತ್ತದೆ. ಉದ್ಯೋಗದಲ್ಲಿನ ಲೋಪ ದೋಷ ತಿದ್ದಲು ಹೆಚ್ಚು ಪ್ರಯತ್ನ ಪಡುವಿರಿ. ಸಂಪಾದಿಸಿದ ಹಣದಲ್ಲಿ ಬಹು ಭಾಗವನ್ನು ಧಾರ್ಮಿಕ ಕ್ರಿಯಾ ವಿಧಿಗಳಿಗಾಗಿ ಬಳಸುವಿರಿ. ಸ್ವಂತ ಉದ್ದಿಮೆಯನ್ನು ಆರಂಭಿಸುವ ಕನಸು ನನಸಾಗಲಿದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಬಹು ದಿನಗಳ ನಿರೀಕ್ಷಿತ ಕೆಲಸ ಒಂದು ಸೋದರರ ಸಹಾಯದಿಂದ ನೆರವೇರುತ್ತದೆ. ಬೇರೆಯವರ ಮಾತನ್ನು ನಂಬುವ ಮೊದಲು ಒಮ್ಮೆ ಯೋಚಿಸಿ ನೋಡಿ. ವಿದ್ಯಾರ್ಥಿಗಳು ನಿರೇಕ್ಷಿಸಿದ ಯಶಸ್ಸನ್ನು ಗಳಿಸಲಿದ್ದಾರೆ. ಮಕ್ಕಳಿಗೆ ವಿವಾಹ ಯೋಗವಿದೆ. ಧಾರ್ಮಿಕ ಕೇಂದ್ರಕ್ಕೆ ಹಣದ ಸಹಾಯ ಮಾಡುವಿರಿ. ತೆಗೆದುಕೊಂಡ ನಿರ್ಧಾರಗಳನ್ನು ಸಾಧ್ಯವಾದಷ್ಟೂ ಬದಲಿಸದಿರಿ.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಮಕರ

ಕುಟುಂಬದಲ್ಲಿ ಅಸಮಾಧಾನ ಮರೆಯಾಗಿ ಪರಸ್ಪರ ಅನ್ಯೋನ್ಯತೆ ಏರ್ಪಡುತ್ತದೆ. ಉದ್ಯೋಗದಲ್ಲಿ ತಡವಾದರೂ ಧನಾತ್ಮಕ ಫಲಿತಾಂಶ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ನಿರೀಕ್ಷಿಸಬಹುದು. ವಿದ್ಯಾರ್ಥಿಗಳು ಕಲಿಕೆಯ ಅವಧಿಯಲ್ಲಿಯೇ ಉದ್ಯೋಗ ಸಂಪಾದಿಸುತ್ತಾರೆ. ಗಾಯನ ಬಲ್ಲವರಿಗೆ ವಿನೂತನ ಅವಕಾಶಗಳ ಲಭ್ಯತೆ ಇದೆ. ಸಂಗೀತ ಮತ್ತು ನೃತ್ಯದ ಕಲಾವಿದರಿಗೆ ವಿಶೇಷವಾದ ಸಾಮಾಜಿಕ ಗೌರವ ಲಭಿಸುತ್ತದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ಹಣಕಾಸಿನ ವ್ಯವಹಾರವನ್ನು ಆರಂಭಿಸದಿರಿ. ಮಾರಾಟ ಪ್ರತಿನಿಧಿಗಳಿಗೆ ಹೆಚ್ಚಿನ ಲಾಭಾಂಶ ದೊರೆಯಲಿದೆ. ಮಕ್ಕಳ ಭವಿಷ್ಯಕ್ಕಾಗಿ ಹೊಸ ಯೋಜನೆ ರೂಪಿಸುವಿರಿ.

ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಕುಂಭ

ತಾವಿರುವ ಪರಿಸ್ಥಿತಿಯನ್ನು ಅಥೈಸಿಕೊಂಡು ಸನ್ನಿವೇಶಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳುವಿರಿ. ಯಾವುದೇ ತೊಂದರೆ ಉಂಟಾಗಲು ಆಸ್ಪದ ನೀಡುವುದಿಲ್ಲ. ಉದ್ಯೋಗದಲ್ಲಿ ಆತಂಕದ ಪರಿಸ್ಥಿತಿ ಎದುರಾಗುತದೆ. ಹಿರಿಯ ಅಧಿಕಾರಿಗಳ ಅನುಕಂಪದಿಂದ ಸುಸ್ಥಿತಿಯನ್ನು ಗಳಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಮಟ್ಟ ತಲುಪಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವರು. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸಿ. ಕುಟುಂಬದವರ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಆತ್ಮೀಯರ ಸಹಾಯ ತಿರಸ್ಕರಿಸುವ ಕಾರಣ ವಿವಾಹದ ಮಾತುಕತೆ ಅಪೂರ್ಣಗೊಳ್ಳಲಿದೆ. ಪುಟ್ಟ ಮಕ್ಕಳಿಗೆ ಕೆಮ್ಮು ಅಥವ ಕಫದ ತೊಂದರೆ ಉಂಟಾಗುತ್ತದೆ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ಮೀನ

ಸ್ನೇಹಿತರೊಡನೆ ಸಮಾಜಸೇವೆಗೆಂದು ಯೋಜನೆಯನ್ನು ರೂಪಿಸುವಿರಿ. ಖ್ಯಾತ ಸಂಸ್ಥೆಯೊಂದಕ್ಕೆ ತಾಂತ್ರಿಕ ಸಹಾಯ ಒದಗಿಸುವ ಮೂಲಕ ಆದಾಯ ಹೆಚ್ಚಿಸಿಕೊಳ್ಳುವಿರಿ. ಉದ್ಯೋಗದಲ್ಲಿ ವಿಶೇಷ ಅನುಕೂಲತೆಗಳು ದೊರೆಯುತ್ತವೆ. ಕೆಲಸ ಕಾರ್ಯಗಳಲ್ಲಿ ಯಾವುದೇ ಅಡ್ಡಿ ಆತಂಕಗಳು ಎದುರಾಗುವುದಿಲ್ಲ. ಹಣದ ಕೊರತೆ ಉಂಟಾಗುತ್ತದೆ. ವಿದ್ಯಾರ್ಥಿಗಳು ವಿಶೇಷವಾದ ಗೌರವಕ್ಕೆ ಪಾತ್ರರಾಗುತ್ತಾರೆ. ವಿವಾಹ ಯೋಗವಿದೆ. ದಂಪತಿ ನಡುವೆ ಇದ್ದ ಮನಸ್ತಾಪ ಕೊನೆಗೊಳ್ಳಲಿದೆ. ಆಡುವ ಮಾತಿನ ಮೇಲೆ ಹಿಡಿತವಿದ್ದಲ್ಲಿ ಯಾವುದೇ ಸಮಸ್ಯೆ ತಲೆದೋರದು. ಮನೆಯ ಮುಂದಿರುವ ಗಿಡ ಸಂರಕ್ಷಿಸುವ ಕೆಲಸದಲ್ಲಿ ಸಂತಸ ಕಾಣುವಿರಿ. ಮಾತನ್ನು ಕಡಿಮೆಮಾಡಿ ಮೌನದಿಂದ ಕೆಲಸ ಸಾಧಿಸಲು ಪ್ರಯತ್ನಿಸುವಿರಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).