Horoscope Today: ಸಂಗಾತಿಯೊಂದಿಗೆ ವಿವಾದ ಉಂಟಾಗಲಿದೆ, ಅನಾರೋಗ್ಯ ಕಾಡಬಹುದು; ಧನು ರಾಶಿಯಿಂದ ಮೀನದವರೆಗಿನ ದಿನ ಭವಿಷ್ಯ
ಜನವರಿ 2, ಮಂಗಳವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (January 2nd, 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (January 2nd 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ದಕ್ಷಿಣಾಯನ, ಹಿಮಂತ ಋತು, ಮಾರ್ಗಶಿರ ಮಾಸ, ಕೃಷ್ಣಪಕ್ಷ, ಮಂಗಳವಾರ
ತಿಥಿ: ಷಷ್ಠಿ ಬೆಳಿಗ್ಗೆ 2.11 ರವರೆಗೂ ಇರುತ್ತದೆ. ಅನಂತರ ಸಪ್ತಮಿ ಆರಂಭವಾಗುತ್ತದೆ.
ನಕ್ಷತ್ರ: ಪುಬ್ಬ ನಕ್ಷತ್ರವು ಬೆಳಿಗ್ಗೆ 9.40 ರವೆಗೂ ಇರುತ್ತದೆ. ಅನಂತರ ಉತ್ತರ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಿಗ್ಗೆ 6.41
ಸೂರ್ಯಾಸ್ತ: ಸಂಜೆ 6.04
ರಾಹುಕಾಲ: ಮಧ್ಯಾಹ್ನ 3.00 ರಿಂದ ಸಂಜೆ 4.30
ರಾಶಿ ಫಲಗಳು
ಧನಸ್ಸು
ತಪ್ಪನ್ನು ಖಂಡಿಸಿ ಒಳ್ಳೆಯದನ್ನು ಪ್ರೋತ್ಸಾಹಿಸುವಿರಿ. ಇದರಿಂದ ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ. ಕುಟುಂಬದಲ್ಲಿ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಉದ್ಯೋಗದಲ್ಲಿ ಸಾಕಷ್ಟು ಉತ್ತಮ ಬದಲಾವಣೆಗಳು ಆಗಲಿವೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಪಾಲುಗಾರಿಕೆಯ ವ್ಯವಹಾರವನ್ನು ಮಾಡುವಿರಿ. ಬೇಸರ ಕಳೆಯಲು ಕುಟುಂಬದ ಸದಸ್ಯದ ಜೊತೆಯಲ್ಲಿ ದೀರ್ಘಕಾಲದ ಪ್ರವಾಸ ಕೈಗೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವಿರುತ್ತದೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡದ ನಡುವೆಯೂ ಅಭ್ಯಾಸದಲ್ಲಿ ನಿರತರಾಗುತ್ತಾರೆ. ಸಂಗಾತಿಯ ದುಡುಕುತನದ ಮಾತುಕತೆ ಬೇಸರವನ್ನು ಉಂಟು ಮಾಡುತ್ತದೆ. ಮಕ್ಕಳ ಜೀವನದಲ್ಲಿ ನೆನಪಿಡಬೇಕಾದಂತಹ ಘಟನೆಗಳು ನಡೆಯಲಿವೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ತುಪ್ಪವನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಬೂದು ಬಣ್ಣ
ಮಕರ
ಅಧಿಕವಾದ ಕೆಲಸ ಕಾರ್ಯಗಳನ್ನು ನಿರ್ವಹಿಸಲಾರದೆ ಬೇಸರಕ್ಕೆ ಒಳಗಾಗಬಹುದು. ಕುಟುಂಬದಲ್ಲಿ ಆಗಬೇಕಾದ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆಯನ್ನು ನೀಡುವಿರಿ. ಉದ್ಯೋಗದಲ್ಲಿನ ಸಮಸ್ಯೆಗಳು ಮರೆಯಾಗುತ್ತವೆ. ಉದ್ಯೋಗದಲ್ಲಿ ಮೇಲ್ಮಟ್ಟದ ಸ್ಥಾನವನ್ನು ಗಳಿಸುವಿರಿ. ಹಣಕಾಸಿನ ತೊಂದರೆ ಎದುರಾಗುವುದಿಲ್ಲ. ಹಿರಿಯ ಸೋದರನಿಂದ ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಶ್ರದ್ಧೆ ತೋರಿಸಬೇಕು. ಸಂಗಾತಿಯ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದ ಉಂಟಾಗಲಿದೆ. ಸ್ವಂತ ಬಳಕೆಗಾಗಿ ಹೊಸ ವ್ಯಾಪಾರವನ್ನು ಕೊಳ್ಳುವಿರಿ.
ಪರಿಹಾರ : ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕಂದು ಬಣ್ಣ
ಕುಂಭ
ಆತ್ಮವಿಶ್ವಾಸದ ಕೊರತೆ ನಿಮಗಿರುತ್ತದೆ. ಯಾವುದೇ ಕೆಲಸ ಕಾರ್ಯವಾದರೂ ಬೇರೆಯವರ ಸಹಾಯವನ್ನು ಎದುರು ನೋಡುವಿರಿ. ಕುಟುಂಬದಲ್ಲಿ ಯಾವುದೇ ಬದಲಾವಣೆಗಳು ಇಲ್ಲದ ಕಾರಣ ಬೇಸರವಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಇರುತ್ತದೆ. ಹಠದ ಗುಣದಿಂದಾಗಿ ಕೆಲವರ ವಿರೋಧವನ್ನು ಎದುರಿಸಬೇಕಾಗುತ್ತದೆ. ಸಮಯಕ್ಕೆ ತಕ್ಕಂತಹ ತೀರ್ಮಾನ ತೆಗೆದುಕೊಳ್ಳದ ಕಾರಣ ಅವಕಾಶವಂಚಿತರಾಗುವಿರಿ. ಪಾಲುದಾರಿಕೆಯ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಸದ್ದಿಲ್ಲದೆ ಕರ್ತವ್ಯ ನಿರ್ವಹಿಸಿ ಉನ್ನತ ಸ್ಥಾನ ಗಳಿಸುತ್ತಾರೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗವನ್ನು ಆರಂಭಿಸುವಿರಿ. ಹಣಕಾಸಿನ ವಿಚಾರವಾಗಿ ಸೋದರಿಯ ಜೊತೆಯಲ್ಲಿ ವಾದ ವಿವಾದ ಇರುತ್ತದೆ.
ಪರಿಹಾರ: ತಲೆಗೆ ಹಾಲನ್ನು ಹಚ್ಚಿಕೊಂಡು ಸ್ನಾನ ಮಾಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಬೂದುಬಣ್ಣ
ಮೀನ
ಅನಾವಶ್ಯಕವಾಗಿ ಯಾರನ್ನು ಅನುಮಾನದ ದೃಷ್ಟಿಯಿಂದ ನೋಡಬೇಡಿರಿ. ಮಾತಿನಲ್ಲಿ ನಯ ವಿನಯ ಇದ್ದರೆ ಎಲ್ಲರ ಗೌರವ ಮತ್ತು ಸಹಕಾರವನ್ನು ಗಳಿಸುವಿರಿ. ಉದ್ಯೋಗದಲ್ಲಿ ಹಿರಿತನದಿಂದ ಬಡ್ತಿ ದೊರೆಯುತ್ತದೆ. ಬಿಡುವಿನ ವೇಳೆ ಸಣ್ಣ ಉದ್ಯೋಗ ಮಾಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹಣದ ಕೊರತೆ ಉಂಟಾಗುವುದಿಲ್ಲ. ಆದರೆ ಖರ್ಚು ವೆಚ್ಚಗಳನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ವಿದ್ಯಾರ್ಥಿಗಳು ಬುದ್ಧಿವಂತಿಕೆಯಿಂದ ವಿದ್ಯಾಭ್ಯಾಸದಲ್ಲಿ ಉನ್ನತಿ ಪಡೆಯುತ್ತಾರೆ. ಅವಶ್ಯಕತೆ ಇದ್ದಲ್ಲಿ ಮಾತ್ರ ಉದ್ಯೋಗವನ್ನು ಬದಲಾಯಿಸಿರಿ. ಯಾವುದೇ ವಿಚಾರವಾದರೂ ತೆಗೆದುಕೊಂಡ ನಿರ್ಧಾರವನ್ನು ಬದಲಿಸದಿರಿ. ಶೀತದ ಕಾರಣ ಅನಾರೋಗ್ಯ ಉಂಟಾಗಬಹುದು. ಮನೆಯಲ್ಲಿ ಸಾಕಿರುವ ಪ್ರಾಣಿಗಳಿಂದ ದೂರವಿರಿ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಕೆಂಪು ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕಪ್ಪುಬಣ್ಣ
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).