ಅತಿಯಾದ ಖರ್ಚು ಕಷ್ಟಕ್ಕೆ ದೂಡುತ್ತದೆ, ಅಪಾಯಕಾರಿ ಕೆಲಸಕ್ಕೆ ಕೈ ಹಾಕುವಿರಿ, ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಅತಿಯಾದ ಖರ್ಚು ಕಷ್ಟಕ್ಕೆ ದೂಡುತ್ತದೆ, ಅಪಾಯಕಾರಿ ಕೆಲಸಕ್ಕೆ ಕೈ ಹಾಕುವಿರಿ, ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಅತಿಯಾದ ಖರ್ಚು ಕಷ್ಟಕ್ಕೆ ದೂಡುತ್ತದೆ, ಅಪಾಯಕಾರಿ ಕೆಲಸಕ್ಕೆ ಕೈ ಹಾಕುವಿರಿ, ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಜುಲೈ 2ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ)

ಅತಿಯಾದ ಖರ್ಚು ಕಷ್ಟಕ್ಕೆ ದೂಡುತ್ತದೆ, ಅಪಾಯಕಾರಿ ಕೆಲಸಕ್ಕೆ ಕೈ ಹಾಕುವಿರಿ, ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಅತಿಯಾದ ಖರ್ಚು ಕಷ್ಟಕ್ಕೆ ದೂಡುತ್ತದೆ, ಅಪಾಯಕಾರಿ ಕೆಲಸಕ್ಕೆ ಕೈ ಹಾಕುವಿರಿ, ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (2nd July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ : ಏಕಾದಶಿ ಬೆಳಗ್ಗೆ 08.40 ರವರೆಗೂ ಇದ್ದು ನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ : ಕೃತಿಕಾ ನಕ್ಷತ್ರವು ಬೆ 05.08 ರವರೆಗೂ ಇದ್ದು ನಂತರ ರೋಹಿಣಿ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ05.56

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 03.39 ರಿಂದ 05.15

ರಾಶಿಫಲ

ಮೇಷ

ನಿಮ್ಮ ಮನಸ್ಸಿಗೆ ಒಪ್ಪುವ ವ್ಯಕ್ತಿಗಳೊಂದಿಗೆ ಸ್ನೇಹ ಬೆಳೆಸುವಿರಿ. ಎಲ್ಲರೊಂದಿಗೆ ಹೊಂದಿಕೊಂಡು ಬಾಳುವ ಕಾರಣ ಸುಖ ಸಂತೋಷದ ಜೀವನ ನಡೆಸುವಿರಿ. ಸ್ನೇಹಿತರ ಮತ್ತು ಬಂಧು ಬಳಗದವರ ಭೇಟಿಗಾಗಿ ಮನರಂಜನಾ ಕೂಟವನ್ನು ಏರ್ಪಡಿಸುವಿರಿ. ಎಲ್ಲರ ಬಗ್ಗೆ ಅನುಕಂಪವನ್ನು ತೋರುವಿರಿ. ಮನಸ್ಸಿನಲ್ಲಿರುವ ವಿಚಾರಗಳನ್ನು ಮುಚ್ಚಿಡದೆ ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ಮನಸ್ಸಿಗೆ ಬೇಸರ ಉಂಟಾದಲ್ಲಿ ಎಲ್ಲರೊಂದಿಗೆ ದೂರ ಉಳಿಯುವಿರಿ. ತೆಗೆದುಕೊಳ್ಳುವ ನಿರ್ಧಾರಗಳನ್ನು ಸುಲಭವಾಗಿ ಬದಲಾಯಿಸುವುದಿಲ್ಲ. ಮನದಲ್ಲಿರುವ ಕೋಪವನ್ನು ತೋರ್ಪಡಿಸಿಕೊಳ್ಳುವುದಿಲ್ಲ. ಪ್ರಭಾವಶಾಲಿ ವ್ಯಕ್ತಿಯಾಗಿ ಬಾಳುವಿರಿ. ಆತಂಕದ ಸನ್ನಿವೇಶದಲ್ಲಿಯೂ ನಿಮ್ಮ ಘನತೆ ಮತ್ತು ಗೌರವವನ್ನು ಕಾಪಾಡಿಕೊಳ್ಳುವಿರಿ. ನೆರೆಹೊರೆಯ ಜನರೊಂದಿಗೆ ಉತ್ತಮ ಬಾಂಧವ್ಯ ಇರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ವೃಷಭ

ಪ್ರೀತಿ ವಿಶ್ವಾಸಕ್ಕೆ ಬೆಲೆ ನೀಡುವಿರಿ. ಯಾರಿಗೂ ಮೋಸ ಮಾಡದೆ ಜೀವನದಲ್ಲಿ ಮುಂದುವರೆಯುವಿರಿ. ಹಣದ ವಿಚಾರದಲ್ಲಿ ಎಚ್ಚರಿಕೆಯಿಂದ ವರ್ತಿಸಿ. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಿದರೆ ತೊಂದರೆ ಇರುತ್ತದೆ. ಯೋಚನೆಯೇ ಮಾಡದೆ ಖರ್ಚು ಮಾಡಿ ಕಷ್ಟಕ್ಕೆ ಸಿಲುಕುವಿರಿ. ಅನಾರೋಗ್ಯದಿಂದ ಬಳಲುವಿರಿ. ನಿಮಗೆ ತಿಳಿಯದೆ ಬಿಕ್ಕಟ್ಟಿನ ಸನ್ನಿವೇಶಕ್ಕೆ ಸಿಲುಕುವಿರಿ. ಸುಲಭವಾಗಿ ಯಾರನ್ನು ನಂಬುವುದಿಲ್ಲ. ಆತ್ಮವಿಶ್ವಾಸ ಕಡಿಮೆ ಇರುತ್ತದೆ. ನಿಮ್ಮ ಕಷ್ಟದ ಪರಿಸ್ಥಿತಿಯಲ್ಲಿ ಸ್ನೇಹಿತರ ಸಹಾಯವಿರುತ್ತದೆ. ಸ್ನೇಹಾ ಪ್ರೀತಿಗೆ ವಿಶೇಷವಾದ ಸ್ಥಾನ ನೀಡುವಿರಿ. ನಿಮ್ಮದೇ ಆದ ತಪ್ಪು ತಿಳುವಳಿಕೆಯಿಂದ ಆತ್ಮೀಯರ ಬಗ್ಗೆ ಸಂದೇಹ ಪಡುವಿರಿ.

ಪರಿಹಾರ : ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ

ಮಿಥುನ

ನಿಮ್ಮಲ್ಲಿ ವಿಶೇಷವಾದ ಆಕರ್ಷಣ ಗುಣವಿರುತ್ತದೆ. ನೀವು ತೋರುವ ಸಮರ್ಪಣಾ ಮನೋಭಾವನೆ ಉದ್ಯೋಗದಲ್ಲಿ ಯಶಸ್ಸನ್ನು ನೀಡುತ್ತದೆ. ಎಲ್ಲರೊಂದಿಗೆ ನಂಬಿಕೆ ಉಳಿಸಿಕೊಳ್ಳುವಿರಿ. ನಿಮಗೆ ಅಸಾಧ್ಯವೆನಿಸುವ ಕೆಲಸ ಕಾರ್ಯಗಳನ್ನು ಬೇರೆಯವರಿಗೆ ಒಪ್ಪಿಸುವಿರಿ. ವಿನಾಕಾರಣ ಕೋಪ ಬರುತ್ತದೆ. ಯೋಚನೆ ಮಾಡದೆ ತಪ್ಪು ಕಂಡಾಗ ಖಂಡಿಸುವಿರಿ. ಸಮಾಜಕ್ಕೆ ಯಾವುದಾದರೂ ಕೊಡುಗೆ ಕೊಡಬೇಕೆಂಬ ಆಸೆ ಇರುತ್ತದೆ. ಜನಪ್ರಿಯ ವ್ಯಕ್ತಿಯಾಗಿ ಬಾಳುವಿರಿ. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವಿರಿ. ಯಾವುದೇ ವಿಚಾರವಾದರೂ ಏಕಾಗ್ರತೆಯಿಂದ ಪೂರ್ಣಗೊಳಿಸುವಿರಿ. ದೈಹಿಕವಾಗಿ ಸದೃಢವಾಗುವಿರಿ. ಸ್ವತಂತ್ರ ಜೀವನ ನಡೆಸಲು ಬಯಸುವಿರಿ. ಕಷ್ಟದ ಸಂದರ್ಭದಲ್ಲಿ ಬೇರೆಯವರನ್ನು ಅವಲಂಬಿಸುವುದಿಲ್ಲ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು

ಕಟಕ

ದಂಪತಿ ನಡುವೆ ಉತ್ತಮ ಭಾವನೆ ಮತ್ತು ಪ್ರೀತಿ ವಿಶ್ವಾಸಗಳಿರುತ್ತದೆ. ಬೇರೆಯವರ ಆಚಾರ ವಿಚಾರಗಳಲ್ಲಿ ಆಸಕ್ತಿ ತೋರಿಸುವುದಿಲ್ಲ. ಬುದ್ಧಿವಂತಿಕೆಯ ತೀರ್ಮಾನ ತೆಗೆದುಕೊಳ್ಳುವಿರಿ. ಮುಂಗೋಪವಿರುತ್ತದೆ. ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ನಿಮ್ಮ ಮನಸ್ಸಿನಲ್ಲಿರುವ ವಿಚಾರಗಳು ಎಲ್ಲರಿಗೂ ಅರ್ಥವಾಗುವುದಿಲ್ಲ. ಬೇರೆಯವರಿಗೆ ತೊಂದರೆ ಕೊಡದೆ ಹೋದರೂ ದಬ್ಬಾಳಿಕೆಯನ್ನು ಸಹಿಸುವುದಿಲ್ಲ. ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ. ಶಾಂತವಾಗಿ ಕಂಡರೂ ಕೋಪವನ್ನು ತಡೆದುಕೊಳ್ಳಲಾಗಿರಿ. ವಿದ್ಯೆ ಇದ್ದಷ್ಟು ಮಾಡಲು ಕೆಲಸ ಕಾರ್ಯಗಳಿದ್ದಷ್ಟು ನೆಮ್ಮದಿಯಿಂದ ಬಾಳುವಿರಿ. ಬೇಸಾಯದಲ್ಲಿ ಆಸಕ್ತಿ ಇರುತ್ತದೆ. ಅಪಾಯದ ಸುಳಿವಿದ್ದರೂ ಒಮ್ಮೆ ಆರಂಭಿಸಿದ ಕೆಲಸವನ್ನು ಕೈ ಬಿಡುವುದಿಲ್ಲ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಆಕಾಶ ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.