ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಇಷ್ಟವಿಲ್ಲದಿದ್ದರೂ ವಿಶೇಷ ಜವಾಬ್ದಾರಿ ನಿಮ್ಮ ಹೆಗಲೇರಲಿದೆ, ನವ ವಿವಾಹಿತರಿಗೆ ಸಂತಾನ ಲಾಭ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಷ್ಟವಿಲ್ಲದಿದ್ದರೂ ವಿಶೇಷ ಜವಾಬ್ದಾರಿ ನಿಮ್ಮ ಹೆಗಲೇರಲಿದೆ, ನವ ವಿವಾಹಿತರಿಗೆ ಸಂತಾನ ಲಾಭ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಜುಲೈ 2ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ)

ಇಷ್ಟವಿಲ್ಲದಿದ್ದರೂ ವಿಶೇಷ ಜವಾಬ್ದಾರಿ ನಿಮ್ಮ ಹೆಗಲೇರಲಿದೆ, ನವ ವಿವಾಹಿತರಿಗೆ ಸಂತಾನ ಲಾಭ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಇಷ್ಟವಿಲ್ಲದಿದ್ದರೂ ವಿಶೇಷ ಜವಾಬ್ದಾರಿ ನಿಮ್ಮ ಹೆಗಲೇರಲಿದೆ, ನವ ವಿವಾಹಿತರಿಗೆ ಸಂತಾನ ಲಾಭ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(2nd July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ : ಏಕಾದಶಿ ಬೆಳಗ್ಗೆ 08.40 ರವರೆಗೂ ಇದ್ದು ನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ : ಕೃತಿಕಾ ನಕ್ಷತ್ರವು ಬೆ 05.08 ರವರೆಗೂ ಇದ್ದು ನಂತರ ರೋಹಿಣಿ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ05.56

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 03.39 ರಿಂದ 05.15

ರಾಶಿಫಲ

ಧನಸ್ಸು

ಸಮಾಜದಲ್ಲಿ ನಿಮ್ಮ ಸಲಹೆ ಸೂಚನೆಗಳಿಗೆ ವಿಶೇಷ ಮೌಲ್ಯ ದೊರೆಯುತ್ತದೆ. ಸುಲಭವಾಗಿ ಎಲ್ಲರನ್ನು ನಂಬುವಿರಿ. ವಿರೋಧಿಗಳನ್ನು ಸ್ನೇಹಿತರಂತೆ ಭಾವಿಸುವಿರಿ. ನಿಮ್ಮನ್ನು ಅನೇಕರು ಪ್ರಶಂಸಿಸುವುದಲ್ಲದೆ ನಿಮ್ಮ ಅನುಯಾಯಿಗಳಾಗುತ್ತಾರೆ. ಉತ್ಸಾಹಕ್ಕೆ ಕೊರತೆ ಇರುವುದಿಲ್ಲ. ಸೋಲಿಗೆ ಬೇಸರ ಪಡುವುದಿಲ್ಲ. ನೀವು ಇಷ್ಟಪಡದೆ ಹೋದರು ವಿಶೇಷ ಜವಾಬ್ದಾರಿಗಳು ದೊರೆಯುತ್ತವೆ. ಯಾರನ್ನು ಪೂರ್ಣವಾಗಿ ನಂಬುವುದಿಲ್ಲ. ನಿಮ್ಮಲ್ಲಿ ವಿಶೇಷವಾದ ಬುದ್ಧಿ ಶಕ್ತಿ ಇರುತ್ತದೆ. ಉದಾರದಿಂದ ಅಗತ್ಯವಿದ್ದವರಿಗೆ ಹಣದ ಸಹಾಯ ಮಾಡುವಿರಿ. ಮಾಡುವ ತಪ್ಪನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳುವಿರಿ. ಉತ್ತಮ ನಾಯಕರಾಗುವಿರಿ. ಉನ್ನತಮಟ್ಟದ ಜೀವನವನ್ನು ನಡೆಸುವಿರಿ. ವಿದ್ಯಾರ್ಥಿಗಳಿಗೆ ಉನ್ನತ ಪದವಿ ದೊರೆಯುತ್ತದೆ. ಸರಳ ವಿಚಾರಗಳನ್ನು ಸಹ ಹೆಚ್ಚಿನ ಪ್ರಾಶಸ್ತ್ಯದಿಂದ ನೋಡುವಿರಿ. ದಿಢೀರನೆ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ವಂಶದ ಹಿರಿಯನನ್ನು ಭೇಟಿ ಮಾಡುವ ಅವಕಾಶ ನಿಮ್ಮದಾಗುತ್ತದೆ.

ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಮಕರ

ಸವಾಲೆನಿಸುವ ಅಪಾಯದ ವಿಚಾರಗಳಿಗೆ ಪ್ರಾಮುಖ್ಯತೆ ನೀಡುವಿರಿ. ಮಕ್ಕಳ ಜೀವನದ ಬಗ್ಗೆ ಜಾಗರೂಕತೆ ವಹಿಸುವಿರಿ. ಎಲ್ಲರೊಂದಿಗೆ ಶಾಂತಿಯಿಂದ ವರ್ತಿಸುವಿರಿ. ನಿಮಗೆ ತೊಂದರೆ ನೀಡಿದವರೆಗೂ ಒಳಿತನ್ನು ಬಯಸುವಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಆಸಕ್ತಿ ಕಡಿಮೆಯಾಗಬಹುದು. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಿರುತ್ತದೆ. ಸೋದರ ಮಾವನ ಜೊತೆ ಹಣಕಾಸಿನ ವಿಚಾರದಲ್ಲಿ ಬೇಸರ ಉಂಟಾಗಲಿದೆ. ನಿಮಗೆ ಅರಿವಿಲ್ಲದಂತೆ ನಂಬಿದ ಸ್ನೇಹಿತನಿಗೆ ನಿಮ್ಮಿಂದ ತೊಂದರೆ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮಲ್ಲಿ ಎಷ್ಟೇ ಹಣವಿದ್ದರೂ ಸರಳ ಜೀವನವನ್ನು ಇಷ್ಟಪಡುವಿರಿ. ದಂಪತಿಗಳಲ್ಲಿ ಪರಸ್ಪರ ಹೊಂದಾಣಿಕೆಯ ಗುಣ ಕಂಡು ಬರುತ್ತದೆ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ

ಕುಂಭ

ಸಂದಿಗ್ದ ಪರಿಸ್ಥಿತಿಯಲ್ಲಿ ಸಂಗಾತಿಯಿಂದ ಸಹಾಯ ದೊರೆಯುತ್ತದೆ. ಹಣಕಾಸಿನ ತೊಂದರೆ ಕಂಡುಬರುವುದಿಲ್ಲ. ನವ ವಿವಾಹಿತರಿಗೆ ಸಂತಾನ ಲಾಭವಿದೆ. ನಿಮ್ಮ ಒಳ್ಳೆಯತನದಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನಿಮ್ಮ ಕಲ್ಪನೆಗಳಿಗೆ ಜೀವ ನೀಡುವ ಪ್ರಯತ್ನ ಮಾಡುವಿರಿ. ಕೆಲಸ ಕಾರ್ಯಗಳು ಅತಿಯಾದ ಕಾರಣ ಕುಟುಂಬದಿಂದ ಹೊರಗುಳಿಯುವಿರಿ. ಮಕ್ಕಳು ಮನರಂಜನೆಗಾಗಿ ಹೆಚ್ಚಿನ ಹಣವನ್ನು ವೆಚ್ಚ ಮಾಡುತ್ತಾರೆ. ಖರ್ಚು ವೆಚ್ಚದ ವೆಚ್ಚದ ಮೇಲೆ ನಿಯಂತ್ರಣ ಸಾಧಿಸುವಿರಿ. ಆತ್ಮೀಯರಿಗೆ ಸಾಲವಾಗಿ ನೀಡಿದ್ದ ಹಣವನ್ನು ಮರಳಿ ಪಡೆಯುವಿರಿ. ನಿಮ್ಮ ವಯಸ್ಸಿನ ಜನರ ನಡುವೆ ನಿಮ್ಮ ಮಾತಿಗೆ ಪ್ರಾಮುಖ್ಯತೆ ದೊರೆಯುತ್ತದೆ.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಳದಿ

ಮೀನ

ಉದ್ಯೋಗಸ್ಥರಿಗೆ ಹಣಕಾಸಿನ ತೊಂದರೆ ಕಂಡುಬರುವುದಿಲ್ಲ. ಆದರೆ ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಲಾಭ ಇರುತ್ತದೆ. ಸಭೆ ಸಮಾರಂಭದಲ್ಲಿ ಗಂಭೀರವಾಗಿ ವರ್ತಿಸುವಿರಿ. ಬೇರೆಯವರ ಜೊತೆ ಉತ್ತಮ ಒಡನಾಟ ಇರುವುದಿಲ್ಲ. ಏಕಾಂಗಿಯಾಗಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಮಕ್ಕಳು ಉದ್ಯೋಗದ ಸಲುವಾಗಿ ಕುಟುಂಬದಿಂದ ದೂರ ಉಳಿಯಬೇಕಾಗುತ್ತದೆ. ಆಪ್ತರಿಂದ ಹಣದ ಸಹಾಯ ದೊರೆಯುತ್ತದೆ. ದಂಪತಿ ನಡುವೆ ಉತ್ತಮ ಅನುಬಂಧ ಇರುತ್ತದೆ. ನಿಮ್ಮ ಮನಸ್ಸಿನ ವಿಚಾರವನ್ನು ಯಾರಿಗೂ ಹೇಳುವುದಿಲ್ಲ. ಕೋಪ ಬೇಗನೆ ಬರುತ್ತದೆ. ಸೋಲಿನ ವೇಳೆ ಅಸಹನೆಯಿಂದ ವರ್ತಿಸುವಿರಿ. ನಿಮ್ಮ ಕಷ್ಟ ಗಳಿಗೆ ಬೇರೆಯವರನ್ನು ದೂರುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.