ಮದುವೆ ಪ್ರಯತ್ನದಲ್ಲಿ ಯಶಸ್ಸು, ಕೆಲಸದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮದುವೆ ಪ್ರಯತ್ನದಲ್ಲಿ ಯಶಸ್ಸು, ಕೆಲಸದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

ಮದುವೆ ಪ್ರಯತ್ನದಲ್ಲಿ ಯಶಸ್ಸು, ಕೆಲಸದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

2 ಜೂನ್‌ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (2nd June 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಪಂಚಾಂಗಕರ್ತ ಬ್ರಹ್ಮಶ್ರೀ ಚಿಲಕಮರ್ತಿ ಪ್ರಭಾಕರ ಚಕ್ರವರ್ತಿ ಶರ್ಮ ಅವರು ಈ ಮಾಹಿತಿ ಒದಗಿಸಿದ್ದಾರೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (2nd June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ: ಏಕಾದಶಿ

ನಕ್ಷತ್ರ: ರೇವತಿ

ಸೂರ್ಯೋದಯ: ಬೆಳಗ್ಗೆ 05:23

ಸೂರ್ಯಾಸ್ತ: ಸಂಜೆ 07:15

ರಾಹುಕಾಲ: ಸಂಜೆ 05:31 ರಿಂದ 07:15 ವರೆಗೆ

ರಾಶಿ ಫಲ

ಸಿಂಹ ರಾಶಿ

ರಾಶಿಯವರಿಗೆ ಇಂದು ಅನುಕೂಲಕರ ದಿನವಾಗಿದೆ. ಆರ್ಥಿಕ ಸಮಸ್ಯೆ ಪರಿಹಾರವಾಗಲಿದೆ. ವ್ಯವಹಾರಗಳಲ್ಲಿ ಚುರುಕು ಚಟುವಟಿಕೆಗಳು ನಡೆಯಲಿವೆ. ವಿವಿಧ ಮೂಲಗಳಿಂದ ಆದಾಯ ದೊರೆಯಲಿದೆ. ನಿಮ್ಮ ಮಧ್ಯಸ್ಥಿಕೆಯಿಂದ ಸಮಸ್ಯೆಯೊಂದು ಬಗೆಹರಿಯಲಿದೆ. ಫೋನ್ ಸಂದೇಶಗಳ ಬಗ್ಗೆ ಎಚ್ಚರದಿಂದ ವ್ಯವಹರಿಸಬೇಕು. ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಿ. ಸಂಬಂಧಿಕರನ್ನು ಭೇಟಿ ಮಾಡಲಿದ್ದೀರಿ. ಸಿಂಹ ರಾಶಿಯವರು ಇನ್ನಷ್ಟು ಶುಭ ಫಲಿತಾಂಶಗಳನ್ನು ಪಡೆಯಲು ನವಗ್ರಹ ಪೀಡಹರ ಸ್ತೋತ್ರವನ್ನು ಪಠಿಸಿ. ಸೂರ್ಯಾಸ್ತವನ್ನು ಆನಂದಿಸುವುದು ಒಳ್ಳೆಯದು.

ಕನ್ಯಾ ರಾಶಿ

ಕನ್ಯಾ ರಾಶಿಯವರಿಗೆ ಇಂದು ಸಾಧಾರಣ ಫಲಿತಾಂಶಗಳಿವೆ. ಬಹಳ ದಿನಗಳಿಂದ ಬರಬೇಕಿದ್ದ ಬಾಕಿ ಹಣ ದೊರೆಯಲಿದೆ. ವಿಶ್ರಾಂತಿ ಇಲ್ಲದೆ ಕೆಲಸ ಮಾಡುವಿರಿ. ನಿರೀಕ್ಷೆಗಳು ನಿಜವಾಗುತ್ತವೆ. ಕೆಲಸದಲ್ಲಿ ಉತ್ತಮ ಫಲಿತಾಂಶಕ್ಕಾಗಿ ಇನ್ನಷ್ಟು ಶ್ರಮ ವಹಿಸಬೇಕಿದೆ. ಸ್ನೇಹಿತರೊಂದಿಗೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದೀರಿ. ಮಕ್ಕಳಿಗೆ ಒಳ್ಳೆಯದಾಗುತ್ತದೆ. ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಮೂರನೇ ವ್ಯಕ್ತಿಗಳ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬೇಡಿ. ಕನ್ಯಾ ರಾಶಿಯವರಿಗೆ ಹೆಚ್ಚಿನ ಶುಭ ಫಲಗಳನ್ನು ಪಡೆಯಲು ಸೂರ್ಯನನ್ನು ಪೂಜಿಸಿ, ದೇವಸ್ಥಾನಗಳಿಗೆ ಭೇಟಿ ನೀಡುವುದರಿಂದ ಒಳ್ಳೆಯ ಫಲಿತಾಂಶ ಸಿಗುತ್ತದೆ.

ತುಲಾ ರಾಶಿ

ತುಲಾ ರಾಶಿಯವರಿಗೆ ಇಂದು ಉತ್ತಮ ದಿನ. ಆರ್ಥಿಕ ಲಾಭವಿದೆ. ಆದರೂ ಹೆಚ್ಚಿನ ಖರ್ಚಿನ ಬಗ್ಗೆ ಗಮನ ಹರಿಸಬೇಕು. ಸಂಬಂಧಿಕರೊಂದಿಗೆ ಬಾಂಧವ್ಯ ಬಲಗೊಳ್ಳುತ್ತವೆ. ಸಂತಾನಲಾಭವಿದೆ. ಪ್ರಮುಖ ಕಾರ್ಯಕ್ರಮಗಳನ್ನು ಮುಂದೂಡಲಿದ್ದೀರಿ. ಕೆಲಸ ಕಾರ್ಯಗಳು ಯಾವುದೇ ಅಡೆ ತಡೆ ಇಲ್ಲದೆ ಸಾಗುತ್ತದೆ. ಮದುವೆಯ ಪ್ರಯತ್ನ ಫಲ ನೀಡಲಿದೆ. ದಿಢೀರ್‌ ಪ್ರವಾಸವನ್ನು ಯೋಜಿಸಲಿದ್ದೀರಿ. ಆರೋಗ್ಯದ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ತುಲಾ ರಾಶಿಯವರಿಗೆ ನವಗ್ರಹ ಪೀಡಹರ ಮಂತ್ರ ಪಠಣೆ ಹೆಚ್ಚು ಶುಭ ಫಲಿತಾಂಶಗಳನ್ನು ನೀಡುತ್ತದೆ. ಸೂರ್ಯ ನಮಸ್ಕಾರ ಮಾಡಿದರೆ ಇನ್ನಷ್ಟು ಒಳ್ಳೆಯದು.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಇಂದು ಅನುಕೂಲಕರವಾಗಿಲ್ಲ. ಆತುರದ ನಿರ್ಧಾರಗಳಿಂದ ಯಾವುದೇ ಪ್ರಯೋಜನವಿಲ್ಲ. ಆಪ್ತ ಸ್ನೇಹಿತರ ಸಲಹೆಯನ್ನು ಅನುಸರಿಸಿ. ಖರ್ಚು ವೆಚ್ಚಗಳು ಸಮನಾಗಿರಲಿವೆ. ಪ್ರಮುಖ ಅಂಶಗಳ ಮೇಲೆ ಕೇಂದ್ರೀಕರಿಸಿ. ಪ್ರಮುಖ ವಿಚಾರದ ಬಗ್ಗೆ ಬಹಳ ಯೋಚನೆ ಮಾಡುವಿರಿ. ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಆರೋಗ್ಯದ ಕಡೆ ಗಮನ ಹರಿಸುವುದು ಅಗತ್ಯ. ವೃಶ್ಚಿಕ ರಾಶಿಯವರು ಹೆಚ್ಚು ಶುಭ ಫಲಗಳಿಗಾಗಿ ಆದಿತ್ಯ ಹೃದಯವನ್ನು ಪಠಿಸಬೇಕು. ನವಗ್ರಹ ದೇವಸ್ಥಾನಗಳಲ್ಲಿ ಪೂಜೆ ಮಾಡಿಸಿದರೆ ಶುಭ.

ಬರಹ: ಬ್ರಹ್ಮಶ್ರೀ ಚಿಲಕಮರ್ತಿ ಪ್ರಭಾಕರ ಚಕ್ರವರ್ತಿ ಶರ್ಮ

ಮೊಬೈಲ್ : 9494981000

www.chilakamarthi.com

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.