ಕನ್ನಡ ಸುದ್ದಿ  /  Astrology  /  Horoscope Today Astrology Prediction 2nd March 2024 Aries Taurus Gemini Cancer Daily Horoscope Sts

Horoscope Today: ಸಹನೆಯಿಂದ ವರ್ತಿಸಿದಲ್ಲಿ ನಿರೀಕ್ಷಿತ ಯಶಸ್ಸು, ಭೂ ವ್ಯವಹಾರದಲ್ಲಿ ಆತುರ ಬೇಡ; ಮಾರ್ಚ್‌ 2ರ ದಿನ ಭವಿಷ್ಯ

2 ಮಾರ್ಚ್‌ 2024, ಶುಕ್ರವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (2nd March 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನಭವಿಷ್ಯ
ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (2nd March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ : ಸಪ್ತಮಿ ರಾತ್ರಿ 03.20 ವರೆಗೂ ಇದ್ದು ನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ವಿಶಾಖ ನಕ್ಷತ್ರವು 10.19 ರವರೆಗೆ ಇರುತ್ತದೆ ನಂತರ ಅನೂರಾಧಾ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.34

ಸೂರ್ಯಾಸ್ತ: ಸಂಜೆ 06.27

ರಾಹುಕಾಲ : ಬೆಳಗ್ಗೆ09.00 ರಿಂದ 10.30

ರಾಶಿ ಫಲ

ಮೇಷ

ಆತುರದ ನಿರ್ಧಾರದಿಂದ ಆತಂಕದ ಪರಿಸ್ಥಿತಿ ಎದುರಾಗಲಿದೆ. ಆರೋಗ್ಯದ ಬಗ್ಗೆ ಗಮನ ನೀಡಿರಿ. ನಿಮ್ಮ ದುಡುಕಿನ ಮಾತಿನಿಂದ ಕುಟುಂಬದಲ್ಲಿ ಬೇಸರ ಉಂಟಾಗಬಹುದು. ಉದ್ಯೋಗದಲ್ಲಿ ಉನ್ನತ ಮಟ್ಟ ತಲುಪಿವಿರಿ. ಏಕಾಂಗಿಯಾಗಿ ಇರಲು ಬಯಸುವಿರಿ. ಶಾಂತಿ ಸಹನೆಯಿಂದ ವರ್ತಿಸಿದಲ್ಲಿ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ವಿದ್ಯಾರ್ಥಿಗಳು ಒಳ್ಳೆಯ ನಡವಳಿಕೆಯಿಂದ ಶಿಕ್ಷಕರ ಪ್ರೀತಿಯನ್ನು ಸಂಪಾದಿಸುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭವಿದೆ. ಭೂ ವ್ಯವಹಾರದಲ್ಲಿ ಆತುರ ಬೇಡ. ದ್ರವವರೂಪದ ಆಹಾರದ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ. ಮನೆಯ ಜನರ ಸಲುವಾಗಿ ಬೇರೆಯವರಿಂದ ಹಣವನ್ನು ಪಡೆಯುವಿರಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಪ್ಪು

ವೃಷಭ

ಕುಟುಂಬದಲ್ಲಿ ಬಿಗುವಿನ ವಾತಾವರಣ ಇರುತ್ತದೆ. ಜೀವನದಲ್ಲಿ ಯಶಸ್ಸಿನ ಜೊತೆ ವಿರೋಧಿಗಳು ಹೆಚ್ಚುತ್ತಾರೆ. ಹಟ ಮತ್ತು ಛಲದ ಗುಣದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸಸ್ಸು ಗಳಿಸುವಿರಿ. ಉದ್ಯೋಗದಲ್ಲಿ ಉನ್ನತ ಸ್ಥಾನ ಲಭಿಸುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ದೂರದ ಊರಿಗೆ ತೆರಳಬೇಕಾಗುತ್ತದೆ. ಹೃದಯದ ಸಮಸ್ಯೆ ಇರುವವರು ವೈದ್ಯರನ್ನು ಭೇಟಿ ಮಾಡಬೇಕು. ಮೌನದಿಂದ ವರ್ತಿಸುವುದು ಒಳಿತು. ವಾಹನಗಳ ಬಿಡಿ ಭಾಗಗಳ ಮಾರಾಟದಲ್ಲಿ ಲಾಭ ಗಳಿಸುವಿರಿ. ಸ್ನೇಹಿತರ ಒಡೆತನದಲ್ಲಿ ಇರುವ ಸಂಸ್ಥೆಯ ಜವಾಬ್ದಾರಿ ದೊರೆಯುತ್ತದೆ. ಪ್ರಾಣಿಗಳಿಂದ ದೂರ ಇರುವುದು ಒಳ್ಳೆಯದು.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ತಿಳಿ ಹಸಿರು

ಮಿಥುನ

ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ನಿಮ್ಮ ನೆರವಿನಿಂದ ಕುಟುಂಬದಲ್ಲಿ ಧಾರ್ಮಿಕ ಕಾರ್ಯವೊಂದು ನಡೆಯಲಿದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಪ್ರಶಂಸೆ ಲಭಿಸುತ್ತದೆ. ವಾದ ಉಂಟಾದಲ್ಲಿ ಸಹನೆ ಕಳೆದುಕೊಳ್ಳುವಿರಿ. ದಾಂಪತ್ಯದಲ್ಲಿ ಬಿನಾಭಿಪ್ರಾಯ ಇರುತ್ತದೆ. ವಿದ್ಯಾರ್ಥಿಗಳು ಹೊಣೆಯನ್ನು ಅರಿತು ಅಧ್ಯಯನ ಮುಂದುವರಿಸುವರು. ವಿವಾಹದ ವಿಚಾರದಲ್ಲಿ ಒಮ್ಮತ ಕಾಣುವುದಿಲ್ಲ. ವ್ಯಾಪಾರ ಮತ್ತು ಹಣದ ವ್ಯವಹಾರಗಳಲ್ಲಿ ಲಾಭವಿರುತ್ತದೆ. ಕಂತು ವ್ಯಾಪಾರದಲ್ಲಿ ಹಿನ್ನೆಡೆ ಇರುತ್ತದೆ. ಸುಟ್ಟ ಗಾಯದಿಂದ ಬಳಲುವ ಸಾಧ್ಯತೆಗಳಿವೆ. ದಂಪತಿಗೆ ಸಂಬಂಧಿಸಿದ ಕಾರ್ಯಕ್ರಮವನ್ನು ಆರಂಭಿಸುವಿರಿ. ವಾಹನ ಲಾಭವಿದೆ.

ಪರಿಹಾರ : ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನಸುಗೆಂಪು

ಕಟಕ

ನ್ಯಾಯ ನೀತಿಯ ಬೋಧನೆಯಲ್ಲಿ ದಿನ ಕಳೆಯುವಿರಿ. ಆರೋಗ್ಯದ ತೊಂದರೆ ಎದುರಾಗಲಿದೆ. ಬಂಧು ಬಳಗದವರಿಗಾಗಿ ಯಾತ್ರಾ ಸ್ಥಳಕ್ಕೆ ಪ್ರವಾಸ ಏರ್ಪಡಿಸುವಿರಿ. ಹುಟ್ಟೂರಿನಲ್ಲಿ ಇರುವ ಧಾರ್ಮಿಕ ಕೇಂದ್ರವೊಂದರ ದುರಸ್ತಿಯ ಕಾರ್ಯಭಾರ ನಿಮದಾಗುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಾಯ ಇರುತ್ತದೆ. ಸೊಗಸಾದ ಮಾತಿನಿಂದ ಎಲ್ಲರ ಮನ ಗೆಲ್ಲುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನ ಮಾಡುವ ಸಲುವಾಗಿ ವಿದೇಶಕ್ಕೆ ತೆರಳುವರು. ಸಹಾಯ ಅರಸಿ ಬಂದವರಿಗೆ ನಿರಾಶೆ ಮಾಡುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ಲಾಭವಿರುತ್ತದೆ. ತಂದೆಯ ಜೊತೆ ಹಣಕಾಸಿನ ವಿವಾದ ಇರುತ್ತದೆ. ವೈಭವದ ಜೀವನಕ್ಕೆ ಹೆಚ್ಚಿನ ಹಣ ವೆಚ್ಚವಾಗುತ್ತದೆ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).