ಕನ್ನಡ ಸುದ್ದಿ  /  Astrology  /  Horoscope Today Astrology Prediction 2nd March 2024 Sagittarius Capricorn Aquarius Pisces Sts

Horoscope Today: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಗೃಹಾಲಂಕಾರಕ್ಕೆ ಹೆಚ್ಚಿನ ಹಣ ಖರ್ಚು; ಮಾರ್ಚ್‌ 2ರ ರಾಶಿ ಭವಿಷ್ಯ

2 ಮಾರ್ಚ್‌ 2024, ಶುಕ್ರವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (2nd March 2024 Daily Horoscope).

2 ಮಾರ್ಚ್‌ 2024, ಶುಕ್ರವಾರದ ದಿನಭವಿಷ್ಯ
2 ಮಾರ್ಚ್‌ 2024, ಶುಕ್ರವಾರದ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(2nd March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ : ಸಪ್ತಮಿ ರಾತ್ರಿ 03.20 ವರೆಗೂ ಇದ್ದು ನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ವಿಶಾಖ ನಕ್ಷತ್ರವು 10.19 ರವರೆಗೆ ಇರುತ್ತದೆ ನಂತರ ಅನೂರಾಧಾ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.34

ಸೂರ್ಯಾಸ್ತ: ಸಂಜೆ 06.27

ರಾಹುಕಾಲ : ಬೆಳಗ್ಗೆ09.00 ರಿಂದ 10.30

 

ಧನಸ್ಸು

ಕುಟುಂಬದಲ್ಲಿ ಮಂಗಳಕಾರ್ಯದ ಜವಾಬ್ದಾರಿ ನಿಮ್ಮದಾಗುತ್ತದೆ. ಹೊಸ ಮನೆಯನ್ನು ಕೊಳ್ಳುವ ಮಾತುಕತೆ ನಡೆಯುತ್ತದೆ. ಸುಲಭವಾಗಿ ಹಣ ಖರ್ಚು ಮಾಡುವುದಿಲ್ಲ. ಕುಟುಂದಲ್ಲಿ ನೆಮ್ಮದಿ ಇರುತ್ತದೆ. ಸಂಗೀತ ನಾಟ್ಯದಲ್ಲಿ ಉತ್ತಮ ಅಭಿಋಚಿ ಇರುತ್ತದೆ. ಉದ್ಯೋಗದಲ್ಲಿ ಎದುರಾಗುವ ಸಮಸ್ಯೆಯನ್ನು ಬಗೆಹರಿಸುವಿರಿ. ಆತುರದ ನಿರ್ಧಾರಗಳಿಂದ ತೊಂದರೆ ಇರಲಿದೆ. ನಿಮ್ಮಿಂದ ಸಹಾಯ ಪಡೆದವರೊಬ್ಬರು ವಿರೋಧಿಗಳಾಗುತ್ತಾರೆ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಯಶಸ್ಸು ದೊರೆಯಲಿದೆ. ಕ್ರೀಡಾಪಟುಗಳಿಗೆ ವಿಶೇಷ ಆದ್ಯತೆ ದೊರೆಯುತ್ತದೆ. ವಿಶೇಷವಾದ ಗ್ರಹಣ ಶಕ್ತಿ ಇರುತ್ತದೆ. ಪಾಲುದಾರಿಕೆಯ ವ್ಯವಹಾರದಲ್ಲಿ ಲಾಭವಿದೆ. ಮನೆಯನ್ನು ಅಲಂಕರಿಸಲು ಹೆಚ್ಚಿನ ಹಣ ಬೇಕಾಗುತ್ತದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ಮಕರ

ಆತುರದಿಂದ ಕೆಲಸ ಕಾರ್ಯಗಳಲ್ಲಿ ತೊಂದರೆ ಎದುರಾಗುತ್ತದೆ. ಸಹನೆ ಮತ್ತು ಬುದ್ದಿವಂತಿಕೆಯಿಂದ ಕುಟುಂಬದ ಸಮಸ್ಯೆಯನ್ನು ಬಗೆಹರಿಸುವಿರಿ. ಉದ್ಯೋಗದಲ್ಲಿ ಸ್ನೇಹದಿಂದ ವರ್ತಿಸಿದರೆ ಉನ್ನತ ಸ್ಥಾನ ದೊರೆಯುತ್ತದೆ. ಸಂಗಾತಿಯ ನಡುವೆ ಹಣಕಾಸಿನ ವಿಚಾರವಾಗಿ ಮನಸ್ತಾಪ ಇರುತ್ತದೆ. ವಿದ್ಯಾರ್ಥಿಗಳು ಆರಂಭದಲ್ಲಿ ಆತಂಕದ ಪರಿಸ್ಥಿತಿಯನ್ನು ಎದುರಿಸಿದರೂ ತದನಂತರ ಶುಭಫಲಗಳನ್ನು ಪಡೆಯುತ್ತಾರೆ. ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸುವ ಕೇಂದ್ರಗಳ ನಿರ್ವಹಣೆಯ ಜವಾಬ್ದಾರಿ ಒಪ್ಪಿಕೊಳ್ಳುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ಇರುತ್ತದೆ. ಸಾರಿಗೆ ವ್ಯವಸ್ಥೆಯ ಸಂಸ್ಠೆಯಲ್ಲಿ ಉದ್ಯೋಗ ದೊರೆಯುತ್ತದೆ. ಸ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ಲಾಭವಿದೆ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ

ಕುಂಭ

ನಿಮ್ಮ ಮನಸ್ಸಿನ ವಿಚಾರಗಳನ್ನು ಯಾರಿಗೂ ತಿಳಿಸುವುದಿಲ್ಲ. ಮೌನವಾಗಿದ್ದುಕೊಂಡು ಎಲ್ಲವನ್ನೂ ಸಾಧಿಸಬಲ್ಲಿರಿ. ಕುಟುಂಬದಲ್ಲಿ ಉತ್ತಮ ಪರಿವರ್ತನೆ ಕಂಡು ಬರುತ್ತದೆ. ಉದ್ಯೋಗದಲ್ಲಿ ಬೇಸರವುಂಟಾಗಿ ಉದ್ಯೋಗ ಬದಲಾವಣೆ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಆಸಕ್ತಿ ಇರುವುದಿಲ್ಲ. ಜನಸೇವೆಗೆ ಪೂರಕವಾದ ವ್ಯಾಪಾರ ಮಾಡುವಿರಿ. ಸಂಗಾತಿಯೊಂದಿಗೆ ವಿದೇಶದಕ್ಕೆ ತೆರಳುವ ಯೋಗವಿದೆ. ವಂಶದಿಂದ ಬಂದಿರುವ ಆಸ್ತಿಯನ್ನು ವಿಲೇವಾರಿ ಮಾಡುವಿರಿ. ವಯೋವೃದ್ದರಿಗೆ ನೆರವಾಗುವಿರಿ. ಮಾರಾಟ ಪ್ರತಿನಿಧಿಗಳಿಗೆ ಉತ್ತಮ ಲಾಭ ದೊರೆಯುತ್ತದೆ. ಧಾರ್ಮಿಕ ಕೇಂದ್ರಕ್ಕೆ ಎಲ್ಲರೊಂದಿಗೆ ಭೇಟಿ ನೀಡುವಿರಿ. ಆರೋಗ್ಯದ ಬಗ್ಗೆ ಗಮನ ಇರಲಿ.

ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೆಂಪು

ಮೀನ

ಕಷ್ಟ ನಷ್ಟಗಳಿಗೆ ಬೆದರುವುದಿಲ್ಲ. ಎಚ್ಚರಿಕೆಯಿಂದ ಕೆಲಸ ಕಾರ್ಯಗಳಲ್ಲಿ ಮುಂದುವರಿಯುವಿರಿ. ಕುಟುಂಬದ ಹಣದ ಕೊರತೆ ಬಗೆಹರಿಯುತ್ತದೆ. ಸ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ಲಾಭವಿದೆ. ಸ್ವಂತ ಉದ್ಯಮ ಆರಂಭಿಸುವಿರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯ್ಕುತ್ತದೆ. ವೃತ್ತಿ ಬದಲಾವಣೆಯ ಸೂಚನೆಗಳಿವೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕಲುಷಿತ ಉಪಹಾರ ಸೇವನೆಯಿಂದ ಆರೋಗ್ಯ ಕುಂಠಿತಗೊಳ್ಳಬಹುದು. ಬೆಳ್ಳಿ ಮತ್ತು ಚಿನ್ನದ ಒಡವೆಗಳ ಖರೀದಿಗೆ ಹೆಚ್ಚಿನ ಹಣ ಖರ್ಚುಮಾಡುವಿರಿ. ಗಣ್ಯವ್ಯಕ್ತಿಯೊಬ್ಬರನ್ನು ಭೇಟಿ ಮಾಡುವಿರಿ. ಮಕ್ಕಳೊಂದಿಗೆ ಮನರಂಜನಾ ಸ್ಥಳಕ್ಕೆ ತೆರಳುವಿರಿ.

ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಂದು

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).