ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕಾನೂನು ಪ್ರಕರಣದಲ್ಲಿ ಜಯ, ಸ್ಟಾಕ್‌ ಷೇರು ವ್ಯವಹಾರದಲ್ಲಿ ಲಾಭ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಕಾನೂನು ಪ್ರಕರಣದಲ್ಲಿ ಜಯ, ಸ್ಟಾಕ್‌ ಷೇರು ವ್ಯವಹಾರದಲ್ಲಿ ಲಾಭ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

2 ಮೇ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (2nd May 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (2nd May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಗುರುವಾರ

ತಿಥಿ: ನವಮಿ ರಾತ್ರಿ 10.35 ರವರೆಗೂ ಇದ್ದು ನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ : ಧನಿಷ್ಠ ನಕ್ಷತ್ರವು ರಾತ್ರಿ 10.55 ರವರೆಗೂ ಇದ್ದು ನಂತರ ಶತಭಿಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.34

ರಾಹುಕಾಲ: 01.54 ರಿಂದ 03.28

ರಾಶಿಫಲ

ಮೇಷ

ಕುಟುಂಬದಲ್ಲಿ ನಿಮ್ಮ ಮಾತು ಮತ್ತು ತೀರ್ಮಾನವನ್ನು ಎಲ್ಲರೂ ಒಪ್ಪುತ್ತಾರೆ. ಹೊಂದಾಣಿಕೆಯ ಗುಣ ಇರುವ ಕಾರಣ ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ. ವ್ಯಾಪಾರ ವ್ಯವಹಾರದಲ್ಲಿ ಯಾರನ್ನೂ ನಂಬಿಕೆಯಿಂದ ನೋಡುವುದಿಲ್ಲ. ವಿದ್ಯಾರ್ಥಿಗಳಿಗೆ ಜವಾಬ್ದಾರಿ ಕಡಿಮೆ ಆದರೂ ಒತ್ತಡ ಇರುತ್ತದೆ. ಆತ್ಮೀಯರ ಸಹಾಯದಿಂದ ನಿರೀಕ್ಷಿತ ಮಟ್ಟ ತಲುಪಲು ಸಾಧ್ಯವಾಗುತ್ತದೆ. ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮುನ್ನ ಎಲ್ಲರೊಂದಿಗೆ ಚರ್ಚಿಸುವಿರಿ. ತಂದೆಯಿಂದ ನಿಮಗೆ ಹಣದ ಸಹಾಯ ದೊರಲಿದೆ. ಸ್ಟಾಕ್ ಮತ್ತು ಷೇರಿನಲ್ಲಿನ ಹಣದ ಹೂಡಿಕೆ ಉತ್ತಮ ಆದಾಯವನ್ನು ನೀಡುತ್ತದೆ. ಮನೆಯವರ ಜೊತೆಯಲ್ಲಿ ಸಂತೋಷವಾಗಿರಲು ಸಮಯ ಮೀಸಲಿಡುವಿರಿ. ಕುಟುಂಬದ ಹಿರಿಯರಿಗೆ ಸಂಬಂಧಿಸಿದ ಮಂಗಳ ಕಾರ್ಯದ ಖರ್ಚು ನಿಮ್ಮದಾಗಲಿದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೇರಳೆ

ವೃಷಭ

ಕುಟುಂಬದಲ್ಲಿ ಪರಸ್ಪರ ಹೊಂದಾವಣಿಕೆಯ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಆಂತರಿಕ ಬದಲಾವಣೆಗಳು ಉಂಟಾದರೂ ತೊಂದರೆ ಇರದು. ಮಾನಸಿಕ ಸದೃಢತೆಯು ಮನದ ಆತಂಕವನ್ನು ದೂರ ಮಾಡುತ್ತದೆ. ಕುಟುಂಬದ ಅಸ್ತಿಯನ್ನುಸಮಾನವಾಗಿ ಹಂಚುವ ಕಾರ್ಯ ನಡೆಯುತ್ತದೆ. ಮಕ್ಕಳಿಗೆ ಎಲ್ಲಾ ಕೆಲಸದಲ್ಲೂ ಉತ್ತೇಜನ ದೊರೆಯಲಿದೆ. ದಾಂಪತ್ಯದಲ್ಲಿ ಪರಸ್ಪರ ಅನ್ಯೋನ್ಯತೆ ಉಂಟಾಗಲಿದೆ. ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಬಂಡವಾಳದ ಅವಶ್ಯಕತೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಎಲ್ಲರ ಮನ ಗೆಲ್ಲುತ್ತಾರೆ. ಒಂಟಿ ಎಂಬ ಭಾವನೆ ಮನದಲ್ಲಿ ಮೂಡುತ್ತದೆ. ಮನದಲ್ಲಿ ವೈರಾಗ್ಯ ಭಾವನೆ ಮೂಡುತ್ತದೆ. ಸಂಗಾತಿ ಜೊತೆಯಲ್ಲಿ ಪಾಲುದಾರಿಕೆಯ ವ್ಯಾಪಾರ ಆರಂಭಿಸುವ ಸೂಚನೆಗಳಿವೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಗುಲಾಬಿ

ಮಿಥುನ

ಕೌಟುಂಬಿಕ ಜೀವನದಲ್ಲಿ ಒತ್ತಡವು ಮರೆಯಾಗಿ ಸಂತೋಷ ಶುರುವಾಗುತ್ತದೆ. ಉದ್ಯೋಗದಲ್ಲಿ ಸೇವಾ ಮನೋಭಾವನೆ ತೋರುವಿರಿ. ಅನುಕರಣೀಯ ಮನೋಭಾವನೆಯಿಂದ ಎಲ್ಲರ ಮನ ಗೆಲ್ಲುವಿರಿ. ವ್ಯಾಪಾರ ವ್ಯವಹಾರವು ಸರಾಗವಾಗಿ ಮುಂದುವರೆಯುತ್ತದೆ. ಕುಟುಂಬದ ಸದಸ್ಯರಿಂದ ಹಣದ ಸಹಾಯ ದೊರೆಯುತ್ತದೆ. ಕಾನೂನು ಪ್ರಕರಣದಲ್ಲಿ ಜಯ ಲಭಿಸುತ್ತದೆ. ನೀವು ಪ್ರೀತಿಪಾತ್ರರ ಜೊತೆ ವಿವಾಹವಾಗುವ ಸೂಚನೆಗಳಿವೆ. ಯಾವುದೆ ತೊಂದರೆ ಇರದು ಆದರೂ ಎಚ್ಚರಿಕೆ ಇರಲಿ. ಜೀವನದ ಪ್ರಮುಖ ವಿಷಯದ ಬಗ್ಗೆ ಕುಟುಂಬದಲ್ಲಿ ಚರ್ಚಿಸುವಿರಿ. ಸಂಗಾತಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ದಿನಾಂತ್ಯಕ್ಕೆ ಅನಾವಶ್ಯಕ ಖರ್ಚು ವೆಚ್ಚ ಎದುರಾಗುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ಕಟಕ

ಕುಟುಂಬದಲ್ಲಿ ಶಾಂತಿ ನೆಮ್ಮದಿ ಮರುಕಳಿಸುತ್ತದೆ. ಒತ್ತಡದ ಮನೋಭಾವನೆಯಿಂದ ಯಾವುದೇ ಕೆಲಸವನ್ನು ಮಾಡುವುದಿಲ್ಲ. ದಿನ ನಿತ್ಯದ ಖರ್ಚು ವೆಚ್ಚಗಳು ಕಡಿಮೆ ಆಗಲಿದೆ. ಬಂದು ಬಳಗದವರಿಂದ ಪಡೆದ ಸಾಲದ ಹಣವನ್ನು ಮರುಪಾವತಿ ಮಾಡುವಿರಿ. ಭೂವಿವಾದದಲ್ಲಿ ಕಾನೂನು ರೀತ್ಯಾ ಜಯವಿದೆ. ವಿವಾದಾತ್ಮಕ ವಿಷಯಗಳಿಂದ ದೂರ ಉಳಿಯುವಿರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಲಭಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿನ ಆದಾಯ ಹೆಚ್ಚುತ್ತದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸಿಕೊಳ್ಳಲಿದ್ದಾರೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಜೀವನದ ಪ್ರಮುಖ ಬದಲಾವಣೆಗಳ ಬಗ್ಗೆ ಕುಟುಂಬದೊಂದಿಗೆ ಚರ್ಚಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).