Horoscope Today: ಮಾಡುವ ಕೆಲಸಕ್ಕೆ ತಕ್ಕ ಪ್ರತಿಫಲ, ಸೋದರಮಾವನಿಂದ ಆರ್ಥಿಕ ಬೆಂಬಲ; ಮೇ 2ರ ದಿನ ಭವಿಷ್ಯ
2 ಮೇ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (2nd May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (2nd May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಗುರುವಾರ
ತಿಥಿ: ನವಮಿ ರಾತ್ರಿ 10.35 ರವರೆಗೂ ಇದ್ದು ನಂತರ ದಶಮಿ ಆರಂಭವಾಗುತ್ತದೆ.
ನಕ್ಷತ್ರ : ಧನಿಷ್ಠ ನಕ್ಷತ್ರವು ರಾತ್ರಿ 10.55 ರವರೆಗೂ ಇದ್ದು ನಂತರ ಶತಭಿಷ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.58
ಸೂರ್ಯಾಸ್ತ: ಸಂಜೆ 06.34
ರಾಹುಕಾಲ: 01.54 ರಿಂದ 03.28
ರಾಶಿಫಲ
ಸಿಂಹ
ಸತತ ದುಡಿಮೆಯಿಂದ ಬೇಸತ್ತು ವಿಶ್ರಾಂತಿ ಪಡೆಯಲು ನಿರ್ಧರಿಸುವಿರಿ. ಬೇರೆಯವರಿಗೆ ಅಸಾಧ್ಯವಾಗುವ ಕೆಲಸವೊಂದನ್ನು ಸರಳ ರೀತಿಯಲ್ಲಿ ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ಅಧಿಕಾರಿಗಳಿಗೆ ಸಮಾನವಾದ ಸ್ಥಾನ ಗಳಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಹಣಕಾಸಿನ ತೊಂದರೆ ಕಾಣದು. ವಿದ್ಯಾರ್ಥಿಗಳು ಬದಲಾದ ಸನ್ನಿವೇಶದ ಲಾಭವನ್ನು ಪಡೆಯುವರು. ಸೋದರ ಮಾವನಿಂದ ಆರ್ಥಿಕ ಬೆಂಬಲ ದೊರೆಯುತ್ತದೆ. ವ್ಯಾಪಾರದ ವಿಚಾರವಾಗಿ ಅವಸರದ ತೀರ್ಮಾನ ಕೈಗೊಳ್ಳುವಿರಿ. ಹಿರಿಯರ ಸಹಾನುಭೂತಿ ದೊರೆಯುತ್ತದೆ. ಆತ್ಮೀಯರ ತಿಳುವಳಿಕೆಯ ಲಾಭ ಪಡೆಯುವಿರಿ. ಕೋಪಗೊಳ್ಳದೆ ಮನಬಿಚ್ಚಿ ಮಾತನಾಡಿದಲ್ಲಿ ಧನಾತ್ಮಕ ಫಲಗಳು ದೊರೆಯುತ್ತವೆ. ಉತ್ತಮ ಆರೋಗ್ಯ ಇರಲಿದೆ.
ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ 3
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ : ಕಂದು
ಕನ್ಯಾ
ಕುಟುಂಬದ ಮುಖ್ಯ ವಿಚಾರವು ಮುಂದೂಡಲ್ಪಡುತ್ತದೆ. ಉದ್ಯೋಗದಲ್ಲಿನ ಸಮಸ್ಯೆಯೊಂದು ನಿವಾರಣೆಯಾಗುತ್ತದೆ. ಮಾಡುವ ಪ್ರಯತ್ನಕ್ಕೆ ತಕ್ಕ ಯಶಸ್ಸು ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ತಾಳ್ಮೆಯಿಂದ ವರ್ತಿಸಿರಿ. ತೆಗೆದುಕೊಂಡ ನಿರ್ಧಾರಗಳನ್ನು ಬದಲಿಸದಿರಿ. ಬ್ಯಾಂಕ್ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಸ್ನೇಹಿತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಆಸಕ್ತಿ ವಹಿಸುವಿರಿ. ವಿದ್ಯಾರ್ಥಿಗಳಿಗೆ ಯಾವ ವಿಚಾರವೂ ಅಸಾಧ್ಯವಲ್ಲ. ಸಂಗಾತಿಯ ಜೊತೆ ಹಣಕಾಸಿನ ವಿಚಾರದಲ್ಲಿ ಅಸಮಾಧಾನ ಉಂಟಾಗುತ್ತದೆ. ವ್ಯಾಪಾರಕ್ಕೆ ಸಂಬಂಧಿಸಿದಂತೆ ದೀರ್ಘ ಪ್ರಯಾಣ ಮಾಡಬೇಕಾಗುತ್ತದೆ. ನೆರೆಹೊರೆಯವರ ಭೂವಿವಾದ ಶಾಶ್ವತ ಪರಿಹಾರ ದೊರೆವಂತೆ ಮಾಡುವಿರಿ. ಸಮಾಜದ ನಾಯಕತ್ವ ಲಭಿಸುತ್ತದೆ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ಕಪ್ಪು
ತುಲಾ
ಎಲ್ಲರ ಮೆಚ್ಚುಗೆ ಗಳಿಸುವ ಬುದ್ಧಿವಂತಿಕೆ ನಿಮ್ಮಲ್ಲಿ ಇರುತ್ತದೆ. ನಿಮಗೆ ಲಾಭ ಇರದ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ. ಉದ್ಯೋಗದಲ್ಲಿ ಅಧಿಕಾರಿಗಳಿಗೆ ವಿಶೇಷ ಸವಲತ್ತುಗಳು ದೊರೆಯಲಿವೆ. ತಂದೆಯವರ ಕೆಲಸ ಕಾರ್ಯಗಳಲ್ಲಿ ನೆರವಾಗುವಿರಿ. ತಾಯಿಯ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ. ವಿದ್ಯಾರ್ಥಿಗಳು ಅಭ್ಯಾಸದ ಒತ್ತಡವನ್ನು ಮರೆತು ಕ್ರೀಡೆ, ಮನರಂಜನೆಯಲ್ಲಿ ಪಾಲ್ಗೊಳ್ಳುತ್ತಾರೆ. ಕಷ್ಟ ನಷ್ಟಗಳಿಗೆ ಹೆದರದ ಮನಸ್ಥಿತಿ ಇರುತ್ತದೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ವ್ಯವಸಾಯ ಮತ್ತು ಪಶು ಸಂಗೋಪನೆಯಲ್ಲಿ ಆಸಕ್ತಿ ಮೂಡಲಿದೆ. ಮನೆಮಂದಿಯೊಡನೆ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ. ವಾಹನ ಚಾಲನೆ ವೇಳೆ ಎಚ್ಚರಿಕೆ ವಹಿಸಿ. ಹಣಕಾಸಿನ ವಿಚಾರದಲ್ಲಿ ಬೇಸರ ಮೂಡಲಿದೆ.
ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ತಿಳಿ ಹಸಿರು
ವೃಶ್ಚಿಕ
ನಿಮ್ಮ ರೀತಿ ನೀತಿ ಕುಟುಂಬದಲ್ಲಿ ಬೇಸರವನ್ನು ಉಂಟುಮಾಡುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ನಡುವೆ ವಾದ ವಿವಾದ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಎಲ್ಲರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಿ. ವಿದ್ಯಾರ್ಥಿಗಳು ಹೆತ್ತವರ ನಿರೀಕ್ಷೆಯಂತೆ ಉನ್ನತ ಮಟ್ಟ ತಲುಪಲ್ಲಿದ್ದಾರೆ. ಬೇಸರ ಕಳೆಯಲು ದೂರದ ಸ್ಥಳಕ್ಕೆ ಪ್ರಯಾಣ ಬೆಳೆಸುವಿರಿ. ಪಾಲುದಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವಿರಿ. ಸಾಮಾಜಿಕ ಸಮಾರಂಭಗಳಲ್ಲಿ ಮುಂದಾಳತ್ವ ವಹಿಸುವಿರಿ. ಪ್ರಭಾವಿ ಜನರ ಸ್ನೇಹ ಲಭಿಸುತ್ತದೆ. ನಿಮಗೆ ಇಷ್ಟವೆನಿಸುವ ಚಿನ್ನ ಬೆಳ್ಳಿಯ ವಸ್ತುಗಳಿಗಾಗಿ ಹಣ ವಿನಿಯೋಗಿಸುವಿರಿ. ಮನೆಯಲ್ಲಿ ಸಾಕಿರುವ ಪ್ರಾಣಿಗಳಿಂದ ತೊಂದರೆ ಆಗಬಹುದು ಎಚ್ಚರಿಕೆ ಇರಲಿ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನಸು ಗೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).