ಕನ್ನಡ ಸುದ್ದಿ  /  Astrology  /  Horoscope Today Astrology Prediction 3 March 2024 Leo Virgo Libra Scorpio Daily Horoscope Sts

Horoscope Today: ವ್ಯಾಪಾರ ವ್ಯವಹಾರದಲ್ಲಿ ಲಾಭ, ಶಾಂತಿಯಿಂದ ಇದ್ರೆ ಕುಟುಂಬದಲ್ಲಿ ನೆಮ್ಮದಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 3, ಭಾನುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (3 March 2024 Daily Horoscope).

ಮಾರ್ಚ್​ 3ರ ದಿನಭವಿಷ್ಯ
ಮಾರ್ಚ್​ 3ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (3 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಭಾನುವಾರ

ತಿಥಿ : ಅಷ್ಟಮಿ ರಾ.03.10 ರವರೆಗು ಇದ್ದು ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಅನೂರಾಧ ನಕ್ಷತ್ರವು ಬೆ.11.05 ರವರೆಗೆ ಇರುತ್ತದೆ. ಆನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.34

ಸೂರ್ಯಾಸ್ತ: ಸ.06.27

ರಾಹುಕಾಲ : ಬೆ.04.30 ರಿಂದ ಸ.06.00

ರಾಶಿ ಫಲಗಳು

ಸಿಂಹ

ಆತ್ಮವಿಶ್ವಾಸದ ಕೊರತೆ ಕಂಡು ಬರುತ್ತದೆ. ಆದರೆ ಗೆಲ್ಲಲೇ ಬೇಕೆಂಬ ಹಠದಿಂದ ಆತ್ಮೀಯರ ಸಹಾಯ ಬಯಸುವಿರಿ. ಪ್ರಯೋಜನವಿಲ್ಲದ ವಿಚಾರಗಳಿಗೆ ಯೋಚನೆ ಮಾಡುವಿರಿ. ಉದ್ಯೋಗದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಕಂಡುಬರುವುದಿಲ್ಲ. ಒಂದೇ ರೀತಿಯ ಜೀವನದಿಂದ ಬೇಸರ ಉಂಟಾಗುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಅನುಭವಸ್ಥರ ಮಾರ್ಗದರ್ಶನ ಮುಖ್ಯ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕಲಿಕೆಯಲ್ಲಿ ಹಿಂದುಳಿಯುವುದಿಲ್ಲ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಬೇಕು. ನಿಮ್ಮ ಮನಸ್ಸಿಗೆ ಒಪ್ಪುವ ವಸ್ತುಗಳನ್ನು ಸಂಗ್ರಹಿಸುವಿರಿ. ಹಣವನ್ನು ಉಳಿಸಲು ಹೊಸ ಯೋಜನೆಗಳನ್ನು ರೂಪಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಕನ್ಯಾ

ಮನಸ್ಸು ಸದಾಕಾಲ ಒಳಿತನ್ನೆ ಬಯಸುತ್ತದೆ. ಇದರಿಂದ ಕುಟುಂಬದ ಜನರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಅಪೂರ್ಣಗೊಂಡ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಆತ್ಮವಿಶ್ವಾಸದಿಂದ ಉದ್ಯೋಗದಲ್ಲಿನ ಜವಾಬ್ದಾರಿಯನ್ನು ನಿರ್ವಹಿಸುವಿರಿ. ನಿಮ್ಮಲ್ಲಿರುವ ಒಳ್ಳೆಯ ಭಾವನೆಗಳಿಗೆ ಎಲ್ಲರೂ ತಲೆಬಾಗುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ವಿರುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳ ಜೊತೆಗೂಡಿ ಅಭ್ಯಾಸದಲ್ಲಿ ನಿರತರಾಗುತ್ತಾರೆ. ಭವಿಷ್ಯದ ಜೀವನಕ್ಕಾಗಿ ರೂಪುರೇಷಗಳನ್ನು ರೂಪಿಸುವಿರಿ. ಯಾವುದೇ ವಿಚಾರದಲ್ಲಿ ಬೇರೆಯವರಿಗೆ ವಚನ ನೀಡುವ ಮುನ್ನ ಯೋಚಿಸಿ. ದುಡುಕುತನದಿಂದ ತೆಗೆದುಕೊಳ್ಳುವ ನಿರ್ಧಾರಗಳು ವಿವಾದಕ್ಕೆ ಕಾರಣವಾಗುತ್ತದೆ. ಅತಿಯಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ತುಲಾ

ಪ್ರತಿ ವಿಚಾರದಲ್ಲಿಯೂ ಮಾಸಿಕ ಒತ್ತಡಕ್ಕೆ ಒಳಗಾಗುವಿರಿ. ಶಾಂತಿ ಸಹನೆಯನ್ನು ಕಾಪಾಡಿಕೊಂಡರೆ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಕುಟುಂಬದಲ್ಲಿನ ಜವಾಬ್ದಾರಿ ನಿಮ್ಮದಾಗುತ್ತದೆ. ಕೆಲಸ ಕಾರ್ಯಗಳ ಮಧ್ಯೆ ಮನರಂಜನೆಗೂ ಸಮಯ ನೀಡುವಿರಿ. ಅನಾವಶ್ಯಕ ಹೆಚ್ಚು ವೆಚ್ಚಗಳು ಎದುರಾಗಲಿವೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯಲಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ರೂಪಗೊಳ್ಳುತ್ತದೆ. ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಹಣಕಾಸಿನ ವಿಚಾರಗಳನ್ನು ರಹಸ್ಯವಾಗಿ ಇಡುವಿರಿ. ಹೊಸ ವಾಹನವನ್ನು ಕೊಳ್ಳುವಿರಿ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಶ್ಚಿಕ

ನಿಮ್ಮ ಮುಖದಲ್ಲಿರುವ ಮಂದಹಾಸ ಕುಟುಂಬದ ನಿರೀಕ್ಷೆಗಳನ್ನು ಹೆಚ್ಚಿಸುತ್ತದೆ. ಎಲ್ಲರ ಸಹಾಯ ದೊರೆಯುವ ಕಾರಣ ಮನಸ್ಸು ನಿರಾಳವಾಗಿರುತ್ತದೆ. ಕೈ ಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಉದ್ಯೋಗದಲ್ಲಿ ಕೆಲವೊಂದು ಬಾರಿ ದೃಢವಾದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಆದಾಯ ದೊರೆಯಲಿದೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಮನರಂಜನೆಗೆ ಆಸ್ಪದ ಇರುವುದಿಲ್ಲ. ಸಂಬಂಧಿತ ತೊಂದರೆ ಕಂಡು ಬರುತ್ತದೆ. ಸೋದರದ ನಡುವಿನ ಮನಸ್ತಾಪವು ಕೊನೆಗೊಳ್ಳುತ್ತದೆ. ದುಂದು ವೆಚ್ಚವನ್ನು ಕಡಿತಗೊಳಿಸುವುದು ಒಳ್ಳೆಯದು. ಹಣ ಉಳಿಸಲು ಸಾಧ್ಯವಾಗದು.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

---------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).