ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕುಟುಂಬದಲ್ಲಿ ಸಂತಸ ನೆಲೆಸಲಿದೆ, ಅನಾರೋಗ್ಯ ಕಾಡಬಹುದು; ಸಿಂಹದಿಂದ ವೃಶ್ಚಿಕರಾಶಿವರೆಗಿನ ದಿನಭವಿಷ್ಯ

Horoscope Today: ಕುಟುಂಬದಲ್ಲಿ ಸಂತಸ ನೆಲೆಸಲಿದೆ, ಅನಾರೋಗ್ಯ ಕಾಡಬಹುದು; ಸಿಂಹದಿಂದ ವೃಶ್ಚಿಕರಾಶಿವರೆಗಿನ ದಿನಭವಿಷ್ಯ

30 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (30th April 2024 Daily Horoscope).

ಏಪ್ರಿಲ್‌ 30ರ ದಿನಭವಿಷ್ಯ ಸಿಂಹದಿಂದ ವೃಶ್ಚಿಕರಾಶಿವರೆಗೆ
ಏಪ್ರಿಲ್‌ 30ರ ದಿನಭವಿಷ್ಯ ಸಿಂಹದಿಂದ ವೃಶ್ಚಿಕರಾಶಿವರೆಗೆ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (30th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣಪಕ್ಷ, ಮಂಗಳವಾರ

ತಿಥಿ: ಸಪ್ತಮಿ ರಾತ್ರಿ 2.35 ರವರೆಗೂ ಇರುತ್ತದೆ, ಅನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ಉತ್ತರಾಷಾಢ ನಕ್ಷತ್ರವು ರಾತ್ರಿ 1.23 ರವರೆಗೂ ಇರುತ್ತದೆ. ಅನಂತರ ಶ್ರವಣ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 5.59

ಸೂರ್ಯಾಸ್ತ: ಸಂಜೆ 6.34

ರಾಹುಕಾಲ: ಮಧ್ಯಾಹ್ನ 3.28 ರಿಂದ ಸಂಜೆ 5.02

ಸಿಂಹ

ಕುಟುಂಬದ ಮಂಗಳ ಕಾರ್ಯಗಳು ಸರಳ ರೀತಿಯಲ್ಲಿ ನಡೆಯಲಿದೆ. ಸ್ನೇಹಿತರ ಸಹಾಯದಿಂದ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆತಂಕದ ಛಾಯೆ ಇದ್ದರೂ ವರಮಾನದಲ್ಲಿ ತೊಂದರೆ ಕಂಡುಬಾರದು. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗಿಯಾಗುತ್ತಾರೆ. ಉನ್ನತ ವಿದ್ಯಾಭ್ಯಾಸಕ್ಕೆ ಹೊರದೇಶಕ್ಕೆ ತೆರಳುವಿರಿ. ಹಣದ ಕೊರತೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಮನದಲ್ಲಿನ ಆಸೆ ಆಕಾಂಕ್ಷೆಗಳು ಪೂರ್ಣಗೊಳ್ಳುತ್ತದೆ. ಬ್ಯಾಂಕ್‌ ವ್ಯವಹಾರಗಳ ಮೇಲೆ ಹೆಚ್ಚಿನ ಗಮನವಿರಲಿ.

ಪರಿಹಾರ: ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ : ಹಸಿರು ಬಣ್ಣ

ಕನ್ಯಾ

ದಿಟ್ಟತನದಿಂದ ಎದುರಾಗುವ ಸವಾಲುಗಳನ್ನು ಮಣಿಸುವಿರಿ. ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ವಾದ ವಿವಾದ ಕಂಡು ಬರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಒತ್ತಡಕ್ಕೆ ಒಳಗಾಗದೆ ಸಹನೆಯಿಂದ ವ್ಯವಹರಿಸುವಿರಿ. ವಿದ್ಯಾರ್ಥಿಗಳು ಸುಲಭವಾಗಿ ಸಹಪಾಠಿಗಳ ಪ್ರಭಾವಕ್ಕೆ ಮಣಿಯುತ್ತಾರೆ. ಕಲಿಕೆಯಲ್ಲಿ ಆತ್ಮವಿಶ್ವಾಸದ ಬೇಕಾಗುತ್ತದೆ. ಸಮಾಜಕ್ಕೆ ಸಹಾಯವಾಗುವ ಕೆಲಸವನ್ನು ನಿರ್ವಹಿಸುವಿರಿ. ವಂಶದ ಆಸ್ತಿ ವಿವಾದ ಬಗೆಹರಿಯುತ್ತದೆ. ಕಂತಿನ ವ್ಯಾಪಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಆತ್ಮೀಯರೂಬ್ಬರಿಂದ ಹಣದ ಸಹಾಯ ದೊರೆಯಲಿದೆ. ತಪ್ಪನ್ನು ಖಂಡಿಸುವ ಕಾರಣ ವಿರೋಧಿಗಳು ಹೆಚ್ಚಲಿದ್ದಾರೆ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ.

ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ನೀಲಿ ಬಣ್ಣ

ತುಲಾ

ಮಕ್ಕಳು ಮತ್ತು ಮೊಮ್ಮಕ್ಕಳ ಆಗಮನ ಕುಟುಂಬದ ಸಂತೋಷವನ್ನು ಹೆಚ್ಚಿಸುತ್ತದೆ. ಉದ್ಯೋಗದಲ್ಲಿ ಎಲ್ಲರ ಸಹಮತದಿಂದ ಬದಲಾವಣೆ ಮಾಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹಣಕಾಸಿನ ತೊಂದರೆ ಕಂಡು ಬರುವುದಿಲ್ಲ. ವಿದ್ಯಾರ್ಥಿಗಳು ಕ್ರಿಯಾಶೀಲತೆಯಿಂದ ಜವಾಬ್ದಾರಿಯಿಂದ ಮುಂದುವರೆಯುವಿರಿ. ಬೇಸರ ನೀಡಲು ಮನರಂಜನೆಯ ಮೊರೆ ಹೋಗುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಸಮಾಜದಲ್ಲಿ ನಾಯಕತ್ವದ ಸ್ಥಾನಮಾನ ದೊರೆಯುತ್ತದೆ. ಸಂಗಾತಿಯ ಸಲುವಾಗಿ ಹೆಚ್ಚಿನ ಖರ್ಚು ವೆಚ್ಚ ಇರಲಿದೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವಿರಿ. ಆತ್ಮೀಯರ ಜೊತೆಗೂಡಿ ಹಣವನ್ನು ಷೇರುಮಾರುಕಟ್ಟೆಯಲ್ಲಿ ತೊಡಗಿಸುವಿರಿ.

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ವೃಶ್ಚಿಕ

ಅನೀಕ್ಷಿತ ಘಟನೆಯಿಂದ ಕುಟುಂಬದಲ್ಲಿ ಬೇಸರ ಉಂಟಾಗುತ್ತದೆ. ಕೌಟುಂಬಿಕ ಜೀವನದಲ್ಲಿ ಬೇಸರವಿರುತ್ತದೆ. ಉದ್ಯೋಗದಲ್ಲಿ ಕೋಪ ತಾಪ ತೋರದೆ ಎಲ್ಲರೊಂದಿಗೆ ಸ್ನೇಹದಿಂದ ನಡೆದುಕೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ಬದಲಾವಣೆಗಳು ಕಾಣುವುದಿಲ್ಲ. ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುತ್ತಾರೆ. ಹಗಲುಗನಸು ಕಾಣದೆ ಕೆಲಸ ಕಾರ್ಯಗಳಲ್ಲಿ ಮುಂದುವರೆಯುವಿರಿ. ಪ್ರಾಮಾಣಿಕತೆಗೆ ತಕ್ಕ ಬೆಲೆ ದೊರೆಯಲಿದೆ. ಪಾಲುದಾರಿಕೆಯ ವ್ಯಾಪಾರದಲ್ಲಿ ನಿರೀಕ್ಷಿತ ಮಟ್ಟದ ಲಾಭವಿರುತ್ತದೆ. ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಮಾನಸಿಕ ಒತ್ತಡದಿಂದ ಅನಾರೋಗ್ಯ ಉಂಟಾಗುತ್ತದೆ. ಬದಲಾವಣೆಗಾಗಿ ದೂರದೂರಿಗೆ ಪ್ರಯಾಣ ಬೆಳೆಸುವಿರಿ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).