ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಹಣಕಾಸಿನ ವ್ಯವಹಾರದಲ್ಲಿ ಎಚ್ಚರವಿರಲಿ, ಒಂಟಿಯಾಗಿ ಸಮಸ್ಯೆಗಳನ್ನು ಎದುರಿಸುವಿರಿ; ಧನುರಾಶಿಯಿಂದ ಮೀನದವರೆಗೆ ದಿನಭವಿಷ್ಯ

Horoscope Today: ಹಣಕಾಸಿನ ವ್ಯವಹಾರದಲ್ಲಿ ಎಚ್ಚರವಿರಲಿ, ಒಂಟಿಯಾಗಿ ಸಮಸ್ಯೆಗಳನ್ನು ಎದುರಿಸುವಿರಿ; ಧನುರಾಶಿಯಿಂದ ಮೀನದವರೆಗೆ ದಿನಭವಿಷ್ಯ

30 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (30th April 2024 2024 Daily Horoscope).

ಏಪ್ರಿಲ್‌ 30ರ ದಿನಭವಿಷ್ಯ ಧನುರಾಶಿಯಿಂದ ಮೀನದವರೆಗೆ
ಏಪ್ರಿಲ್‌ 30ರ ದಿನಭವಿಷ್ಯ ಧನುರಾಶಿಯಿಂದ ಮೀನದವರೆಗೆ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(30th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣಪಕ್ಷ, ಮಂಗಳವಾರ

ತಿಥಿ: ಸಪ್ತಮಿ ರಾತ್ರಿ 2.35 ರವರೆಗೂ ಇರುತ್ತದೆ, ಅನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ಉತ್ತರಾಷಾಢ ನಕ್ಷತ್ರವು ರಾತ್ರಿ 1.23 ರವರೆಗೂ ಇರುತ್ತದೆ. ಅನಂತರ ಶ್ರವಣ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 5.59

ಸೂರ್ಯಾಸ್ತ: ಸಂಜೆ 6.34

ರಾಹುಕಾಲ: ಮಧ್ಯಾಹ್ನ 3.28 ರಿಂದ ಸಂಜೆ 5.02

ಧನಸ್ಸು

ಬಂಧು ಬಳಗದವರ ಆಗಮನದಿಂದ ಕುಟುಂಬದಲ್ಲಿ ಸಂತಸವಿರುತ್ತದೆ. ಉದ್ಯೋಗದಲ್ಲಿ ಸಮಸ್ಯೆಗಳು ಇರುವುದಿಲ್ಲ ಹಾಗೆಯೇ ಪ್ರಗತಿಯೂ ಇರುವುದಿಲ್ಲ. ವಿದ್ಯಾರ್ಥಿಗಳು ಒತ್ತಡವಿಲ್ಲದೆ ಕ್ರೀಡೆ ಮನರಂಜನೆಗಳಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಾರೆ. ಹಣಕಾಸಿನ ವ್ಯವಹಾರದಲ್ಲಿ ಸ್ವಂತ ನಿರ್ಧಾರಗಳಿಗೆ ಬದ್ದರಾಗಿರಿ. ಅನಿರೀಕ್ಷಿತ ಧನ ಲಾಭವಿದೆ. ಅಜೀರ್ಣದ ತೊಂದರೆಯಿಂದ ಬಳಲುವಿರಿ. ವಿವಾಹದ ಕೆಲಸ ಕಾರ್ಯಗಳಲ್ಲಿ ಅಡ್ಡಿಯನ್ನು ದೂರ ಮಾಡುವಿರಿ. ಅಳುಕಿನ ಮನಸ್ಸಿನಿಂದ ತೆಗೆದುಕೊಳ್ಳುವ ನಿರ್ಧಾರ ತೊಂದರೆಗಳಿಗೆ ದಾರಿಯಾಗುತ್ತದೆ. ಹಣದ ಕೊರತೆಯು ದೂರವಾಗಲಿದೆ. ಯಾವುದೇ ಕೆಲಸವಾದರೂ ನಿರಾಸೆ ತೋರುವಿರಿ. ಆಡಂಬದ ಜೀವನ ಇಷ್ಟಪಡುವುದಿಲ್ಲ.

ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ

ಹಣಕಾಸಿನ ವಿವಾದಗಳಿಂದ ದೂರ ಉಳಿಯುವಿರಿ. ಕುಟುಂಬದಲ್ಲಿ ಬೇಸರದ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಯಿಂದ ನಿಮ್ಮ ಜವಾಬ್ದಾರಿಯು ಹೆಚ್ಚುತ್ತದೆ. ಕೇಳದೇ ಹೋದರೂ ಸ್ನೇಹಿತರ ಸಹಾಯ ದೊರೆಯಲಿದೆ. ನಿರಾಸೆಯ ಕಾರಣ ಉದ್ಯೋಗ ಬದಲಿಸಲು ತೀರ್ಮಾನಿಸುವಿರಿ. ಕ್ರಮೇಣವಾಗಿ ಹಣದ ಸಮಸ್ಯೆಯು ದೂರವಾಗುತ್ತದೆ. ಎಲ್ಲರ ಜೊತೆಯಲ್ಲಿ ಶಾಂತಿ ಸಹನೆಯಿಂದ ವರ್ತಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಏಕಾಂಗಿಯಾಗಿ ಕೆಲಸ ನಿರ್ವಹಿಸುವಿರಿ. ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತದ ಕಡಿಮೆಯಾಗುತ್ತದೆ. ಮಕ್ಕಳೊಂದಿಗೆ ಮನರಂಜನಾ ಸ್ಥಳಕ್ಕೆ ಭೇಟಿ ನೀಡುವಿರಿ. ಚಾಡಿ ಮಾತನ್ನು ನಂಬದಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ.

ಪರಿಹಾರ: ಸಹೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು ಬಣ್ಣ

ಕುಂಭ

ಬೇಸರದ ಕಾರಣ ಕುಟುಂಬದಲ್ಲಿ ಅಸಹಕಾರ ಭಾವನೆ ನೆಲೆಸಿರುತ್ತದೆ. ಪರಸ್ಪರ ಸಮಾಲೋಚನೆಯಿಂದ ಕೌಟುಂಬಿಕ ಸಮಸ್ಯೆಯೊಂದು ಕೊನೆಗೊಳ್ಳುತ್ತದೆ. ಉದ್ಯೋಗದಲ್ಲಿ ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಿರಿ. ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಿರಿ. ಆತ್ಮೀಯರ ಒತ್ತಾಯಕ್ಕೆ ಮಣಿದು ಉದ್ಯೋಗ ಬದಲಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ ಕಂಡುಬರುತ್ತದೆ. ಸರಳವಾದ ಕೆಲಸ ಕಾರ್ಯಗಳಿಗೂ ಹೆಚ್ಚಿನ ಪ್ರಯತ್ನದ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ಕಲಿಕೆಯಲ್ಲಿ ತೊಡಗುತ್ತಾರೆ. ಪ್ರಯೋಜನವಿಲ್ಲದ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಹಿರಿಯರ ಅನುಭವದಿಂದ ಪಾಠವನ್ನು ಕಲಿಯುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಂದು ಬಣ್ಣ

ಮೀನ

ಹಣದ ವಿಚಾರದಲ್ಲಿ ಮಾನಸಿಕ ಒತ್ತಡ ಇರಲಿದೆ. ಕುಟುಂಬದಲ್ಲಿ ಸಹಕಾರದ ವಾತಾವರಣವಿರುತ್ತದೆ. ಅನಾವಶ್ಯಕ ಮಾತನ್ನು ಕಡಿಮೆ ಮಾಡಿ ಕೆಲಸದಲ್ಲಿ ಶ್ರದ್ದೆ ವಹಿಸುವಿರಿ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳಲ್ಲಿ ನಿರೀಕ್ಷೆಯಂತೆ ಯಶಸ್ಸು ದೊರೆಯುವುದಿಲ್ಲ. ಧೃಡವಾದ ಸಂಕಲ್ಪದಿಂದ ಮಾತ್ರ ಕೆಲಸ ಕಾರ್ಯಗಳಲ್ಲಿ ಜಯಗಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿರಾಸಕ್ತಿ ಎದುರಾಗುತ್ತದೆ. ಖರ್ಚು ವೆಚ್ಚಗಳು ಹೆಚ್ಚಾಗಲಿವೆ. ವಿದ್ಯಾರ್ಥಿಗಳು ದುಡುಕದೆ ಬುದ್ಧಿವಂತಿಕೆಯಿಂದ ಉನ್ನತ ಅಧ್ಯಯನದಲ್ಲಿ ಮುಂದುವರೆಯುತ್ತಾರೆ. ಪ್ರವಾಸದಿಂದ ಲಾಭವಿದೆ ಉದ್ಯೋಗವನ್ನರಸಿ ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ. ಒಂಟಿಯಾಗಿ ಎದುರಾಗುವ ಸಮಸ್ಯೆಗಳ ವಿರುದ್ದ ಜಯಗಳಿಸುವಿರಿ.

ಪರಿಹಾರ: ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).