ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಐಷಾರಾಮಿ ಜೀವನಕ್ಕಾಗಿ ಹಣ ಖರ್ಚು, ತಾಳ್ಮೆಯಿಂದ ವರ್ತಿಸಲ್ಲ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Horoscope Today: ಐಷಾರಾಮಿ ಜೀವನಕ್ಕಾಗಿ ಹಣ ಖರ್ಚು, ತಾಳ್ಮೆಯಿಂದ ವರ್ತಿಸಲ್ಲ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

30 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (30th June 2024 Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (30th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ: ನವಮಿ ಹ. 01.04 ರವರೆಗು ಇದ್ದು ಆನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ: ರೇವತಿ ನಕ್ಷತ್ರವು ಬೆ. 08.58 ರವರೆಗೆ ಇದ್ದು ಆನಂತರ ಅಶ್ವಿನಿ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.56

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: ಸಂಜೆ 05.15 ರಿಂದ 06.51

ಸಿಂಹ ರಾಶಿ

ಬುದ್ಧಿವಂತಿಕೆಯಿಂದ ಅವಶ್ಯಕತೆ ಇರುವಷ್ಟು ಹಣವನ್ನು ಸಂಪಾದಿಸುವಿರಿ. ಯಾವುದೇ ಸಂದರ್ಭ ಎದುರಾದರೂ ಬೇರೆಯವರ ಅಧೀನದಲ್ಲಿ ಇರುವುದಿಲ್ಲ. ಐಷಾರಾಮಿ ಜೀವನಕ್ಕಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡುವಿರಿ. ಸರಿಯಲ್ಲದ ಆಹಾರ ಕ್ರಮವು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ದೇಹದ ತೂಕ ಹೆಚ್ಚುವ ಕಾರಣ ನೆಮ್ಮದಿ ಕಳೆದುಕೊಳ್ಳುವಿರಿ. ಗಂಟಲಿಗೆ ಸಂಬಂಧಪಟ್ಟಂತಹ ಅನಾರೋಗ್ಯ ನಿಮ್ಮನ್ನು ಕಾಡಲಿದೆ. ಸಂದಿಗ್ದಮಯ ಸಮಯ ಸನ್ನಿವೇಶಗಳನ್ನು ಸರಿಪಡಿಸಬಲ್ಲಿರಿ. ಬೇರೆಯವರಿಗೆ ಅಸಾಧ್ಯವಾದ ವಿಚಾರಗಳನ್ನು ಸುಲಭವಾಗಿ ತಿಳಿದುಕೊಳ್ಳುವಿರಿ. ಸೋಲಿಗೆ ಹೆದರುವುದಿಲ್ಲ.

ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಕನ್ಯಾ ರಾಶಿ

ಆರಂಭಿಸಿದ ಕೆಲಸ ಕಾರ್ಯಗಳು ಸುಗಮವಾಗಿ ಸಾಗಲಾರದು. ಇದರಿಂದ ಬೇಸರಕ್ಕೆ ಒಳಗಾಗುವಿರಿ. ಹಾಸ್ಯ ಪ್ರಿಯರು. ಅನಾವಶ್ಯಕವಾಗಿ ಬೇರೆಯವರನ್ನು ಟೀಕಿಸುವಿರಿ. ಸದಾ ಉತ್ಸಾಹದಿಂದ ಜೀವನ ನಡೆಸುವಿರಿ. ಎಲ್ಲರೂ ಮೆಚ್ಚುವಂತೆ ಮಾತನಾಡುವಿರಿ. ಕುಟುಂಬದಲ್ಲಿ ನಡೆಯಬೇಕಿತ್ತ ವಿವಾಹವು ಮುಂದೂಡಲ್ಪಡುತ್ತದೆ. ನಿಮ್ಮ ಮನಸ್ಸನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಾಗದು. ವದಂತಿಯನ್ನು ಹರಡದೆ ಹೋದರು ವದಂತಿಯನ್ನು ಇಷ್ಟಪಡುವಿರಿ. ತಾಳ್ಮೆಯಿಂದ ವರ್ತಿಸುವುದಿಲ್ಲ. ಸಂಕೋಚದ ಸ್ವಭಾವ ಇರುವ ಕಾರಣ ನಿಮ್ಮ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಲಿವೆ. ಅತಿಯಾದ ಬುದ್ಧಿವಂತಿಕೆ ಇರುತ್ತದೆ.

ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 2

ಅಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ತುಲಾ ರಾಶಿ

ಯಾವುದೇ ರೀತಿಯ ಸಮಸ್ಯೆಗಳು ಎದುರಾದರೂ ಸಹನೆ ಕಳೆದುಕೊಳ್ಳದೆ ಮಾತು ಕತೆಯಿಂದ ಸರಿಪಡಿಸುವಿರಿ. ನಿಮ್ಮ ಮನಸ್ಸಿಗೆ ಒಪ್ಪುವ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಎಲ್ಲದನ್ನು ಆಕರ್ಷಿಸುವಂತಹ ಗುಣ ನಿಮಗಿರುತ್ತದೆ. ನಿಮ್ಮ ಮಕ್ಕಳಿಗೆ ನಿಮ್ಮ ಮೇಲೆ ವಿಶೇಷವಾದ ಪ್ರೀತಿ ಇರುತ್ತದೆ. ದಂಪತಿಗಳ ನಡುವೆ ಉತ್ತಮ ಅನುಬಂಧ ಇರುತ್ತದೆ. ದುಡುಕಿನ ಮಾತುಗಳನ್ನಾಡುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಉತ್ತಮ ಬದಲಾವಣೆಗಳು ಕಂಡುಬರುವೆ. ಉದ್ಯೋಗ ಬದಲಿಸುವ ತೀರ್ಮಾನ ಮಾಡುವಿರಿ. ಕುಟುಂಬದ ಹಿರಿಯರ ಜವಾಬ್ದಾರಿಯನ್ನು ಗೌರವದಿಂದ ಒಪ್ಪಿಕೊಳ್ಳುವಿರಿ. ಸ್ವಂತ ಉದ್ದಿಮೆ ಇದ್ದಲ್ಲಿ ನೌಕರರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುವುದಿಲ್ಲ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಆಕಾಶ ನೀಲಿ

ವೃಶ್ಚಿಕ ರಾಶಿ

ಮನೆಯ ಜನರಲ್ಲಿ ಪರಸ್ಪರ ಹೊಂದಾಣಿಕೆಯ ಬುದ್ಧಿ ಇರುತ್ತದೆ. ಪ್ರೀತಿ ಮಮತೆಯಿಂದ ಮಕ್ಕಳನ್ನು ನೋಡಿಕೊಳ್ಳುವಿರಿ. ವಿಶೇಷ ಚೇತನರಿಗೆ ಜೀವನ ನಡೆಸಲು ಸಹಾಯ ಮಾಡುವಿರಿ. ಕಲಾವಿದರಿಗೆ ವಿಶೇಷ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶ ದೊರೆಯುತ್ತದೆ. ನಿಮ್ಮಲ್ಲಿರುವ ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ಸಮಾನ ಮಸ್ಕರೊಂದಿಗೆ ಸ್ನೇಹವನ್ನು ಬೆಳೆಸುವಿರಿ. ಧಾರ್ಮಿಕ ಆಚರಣೆಯಲ್ಲಿ ನಂಬಿಕೆ ಇರುತ್ತದೆ. ಇಲ್ಲಸಲ್ಲದ ಅಪವಾದಗಳು ಎದುರಾಗಲಿವೆ. ಮಕ್ಕಳ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಲಭಿಸುತ್ತದೆ. ಮನದಲ್ಲಿ ಕೋಪವಿದ್ದರೂ ಕೆಲಸ ಕಾರ್ಯಗಳಲ್ಲಿ ತೊಂದರೆಯಾಗುವುದಿಲ್ಲ. ನಿಮ್ಮ ಆತ್ಮೀಯ ಸ್ನೇಹಿತರೊಬ್ಬರಿಂದಲೇ ಸಮಸ್ಯೆಯೂ ಉಂಟಾಗುತ್ತದೆ. ಉದ್ಯೋಗದ ವಿಚಾರದಲ್ಲಿ ದೊರಕುವ ಅವಕಾಶಗಳ ಆಯ್ಕೆಯಲ್ಲಿ ಗಲಿಬಿಲಿಗೊಳ್ಳುವಿರಿ.

ಪರಿಹಾರ: ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)