ಕನ್ನಡ ಸುದ್ದಿ  /  Astrology  /  Horoscope Today Astrology Prediction 31st March 2024 Aries Taurus Gemini Cancer Daily Horoscope Sts

Horoscope Today: ಉದ್ಯೋಗದಲ್ಲಿ ಒತ್ತಡ, ಬಿಡುವಿಲ್ಲದ ದುಡಿಮೆಯಿಂದ ಬೇಸರ; ಮೇಷ, ವೃಷಭ, ಮಿಥುನ, ಕಟಕ, ರಾಶಿಯವರ ಮಾರ್ಚ್‌ 31ರ ರಾಶಿಫಲ

ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (31st March 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ, ರಾಶಿಯವರ ಮಾರ್ಚ್‌ 31ರ ದಿನ ಭವಿಷ್ಯ
ಮೇಷ, ವೃಷಭ, ಮಿಥುನ, ಕಟಕ, ರಾಶಿಯವರ ಮಾರ್ಚ್‌ 31ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (31st March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯನ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ : ಷಷ್ಠಿ ಸಂಜೆ 05.04 ರವರೆಗೂ ಇರುತ್ತದೆ ನಂತರ ಸಪ್ತಮಿ ಆರಂಭವಾಗಲಿದೆ.

ನಕ್ಷತ್ರ : ಜ್ಯೇಷ್ಠ ನಕ್ಷತ್ರವು ಸಂಜೆ 06.55 ರವರೆಗೂ ಇರುತ್ತದೆ. ನಂತರ ಮೂಲ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.17

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: ಸಂಜೆ 04.30 ರಿಂದ 06.00

ರಾಶಿಫಲ

ಮೇಷ

ಪ್ರಯೋಜನಕಾರಿ ಕೆಲಸಗಳನ್ನು ಹುಡುಕಿ, ಅದನ್ನೇ ಮುಂದುವರೆಸುವಿರಿ. ಕುಟುಂಬದಲ್ಲಿ ಬೇಜವಾಬ್ದಾರಿತನ ಮನೆ ಮಾಡುತ್ತದೆ. ಮನಸ್ಸನ್ನು ಹತೋಟಿಯಲ್ಲಿರಿಸಿ ದಿನದ ಕೆಲಸವನ್ನು ಮುಂದುವರಿಸಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಇರಲಿದೆ. ವಿದ್ಯಾರ್ಥಿಗಳು ದೃಢವಾದ ಮನಸ್ಸಿನಿಂದ ಮುಂದುವರೆಯುತ್ತಾರೆ. ಕ್ರಿಯಾಶೀಲ ವ್ಯಕ್ತಿತ್ವ ಸಾಮಾಜಿಕ ಬದ್ಧತೆಯನ್ನು ಹೆಚ್ಚಿಸುತ್ತದೆ. ಷೇರಿನ ಮೂಲಕ ಹಣವನ್ನು ಉಳಿಸಲು ಯಶಸ್ವಿಯಾಗುವಿರಿ. ಸೋದರಿಯ ದಾಂಪತ್ಯದ ವಿವಾದ ಬಗೆಹರಿಯುತ್ತದೆ. ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಬಯಸದೇ ಹೋದರೂ ಉಡುಗೊರೆಗಳು ದೊರೆಯುತ್ತವೆ. ಸಂಬಂಧಿಕರ ಪ್ರೀತಿ ವಿಶ್ವಾಸ ಹೊಸ ಆಸೆಗೆ ಕಾರಣವಾಗುತ್ತದೆ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರ ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ವೃಷಭ

ಕುಟುಂಬದಲ್ಲಿನ ದೈನಂದಿನ ಕೆಲಸಗಳ ಬಗ್ಗೆ ಎಚ್ಚರವಿರಲಿ. ವ್ಯಾಪಾರ ವ್ಯವಹಾರದಲ್ಲಿನ ನಿರ್ಧಾರ ಬದಲಾಯಿಸದಿರಿ. ಉದ್ಯೋಗದಲ್ಲಿ ಅನಾವಶ್ಯಕ ಒತ್ತಡ ಉಂಟಾಗಲಿದೆ. ವಿದ್ಯಾರ್ಥಿಗಳು ಸಹಪಾಠಿಗಳ ಜೊತೆ ಪ್ರೀತಿ ವಿಶ್ವಾಸದಿಂದ ಇರುವಿರಿ. ಅನಿರೀಕ್ಷಿತ ಆದಾಯ ಆತ್ಮವಿಶ್ವಾಸ ಮೂಡಿಸುತ್ತದೆ. ಆಸಕ್ತಿಯಿಂದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ಕೌಟುಂಬಿಕ ಜೀವನದಲ್ಲಿ ಹೊಸ ತಿರುವು ಉಂಟಾಗಲಿದೆ. ಸೋದರಿಯ ಮದುವೆ ನಿಶ್ಚಯವಾಗಲಿದೆ. ಕುಟುಂಬದ ಹಿರಿಯರು ಮನೆ ಕೊಳ್ಳುವ ಬಗ್ಗೆ ಮಾತನಾಡಬಹುದು. ಮನೆಯ ವಿವಾದ ಕೊನೆಗೊಂಡು ಮನಸ್ಸು ಶಾಂತವಾಗಿರುತ್ತದೆ, ದಿನವಿಡೀ ಬಿಡುವಿಲ್ಲದೆ ದುಡಿಯಬೇಕಾಗುತ್ತದೆ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು ಪೂರ್ವ

ಅದೃಷ್ಟದ ಬಣ್ಣ : ಹಳದಿ ಬಣ್ಣ

ಮಿಥುನ

ಅನಾವಶ್ಯಕ ಚಿಂತೆಯು ಕುಟುಂಬದ ನೆಮ್ಮದಿ ಕೆಡಿಸುತ್ತದೆ. ಉದ್ಯೋಗದ ಸಂಪೂರ್ಣ ಜವಾಬ್ದಾರಿ ದೊರೆತು ಮಾನಸಿಕ ತೃಪ್ತಿ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಸದ್ಗುಣ ಬೆಳೆಸಿಕೊಳ್ಳುತ್ತಾರೆ. ದಾನ, ಧರ್ಮ ಕಾರ್ಯಗಳಲ್ಲಿ ಭಾಗಿಯಾಗುವ ಕಾರಣ ನೆಮ್ಮದಿ ಇರುತ್ತದೆ. ದುಂದು ವೆಚ್ಚದಿಂದ ಹಣದ ಕೊರತೆ ಉಂಟಾಗುತ್ತದೆ. ಆರ್ಥಿಕ ಸಹಾಯದಿಂದ ಸಂಬಂಧಿಕರ ಮನಸ್ಸನ್ನು ಗೆಲ್ಲುವಿರಿ. ನಿಮ್ಮಲ್ಲಿನ ಪ್ರತಿಭೆಯನ್ನು ಪರಿಣಾಮಕಾರಿಯಾಗಿ ಬಳಸಲು ಪ್ರಯತ್ನಿಸಿ. ಜೀವನ ಸಂಗಾತಿಯೊಡನೆ ಭಾವನಾತ್ಮಕ ಸಂಬಂಧ ಇರುತ್ತದೆ. ಚಿನ್ನ ಬೆಳ್ಳಿಯ ಒಡವೆಗಾಗಿ ಹೆಚ್ಚಿನ ಹಣ ವಿನಿಯೋಗಿಸುವಿರಿ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಸಿರುಬಣ್ಣ

ಕಟಕ

ದೈಹಿಕ ಸದೃಢತೆಗಾಗಿ ಬಿರುಸಿನ ನಡಿಗೆ ಮತ್ತು ಸರಳ ವ್ಯಾಯಾಮವನ್ನು ಅನುಲಂಬಿಸುವಿರಿ. ಉದ್ಯೋಗದಲ್ಲಿನ ಅನುಕೂಲತೆಗಳು ನೆಮ್ಮದಿಯ ಸನ್ನಿವೇಶವನ್ನು ಸೃಷ್ಠಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ತೆಗೆದುಕೊಳ್ಳುವ ತೀರ್ಮಾನ ಯಶಸ್ಸು ನೀಡುತ್ತದೆ. ಎಲ್ಲರಿಗೂ ಜೀವನದ ಮೌಲ್ಯವನ್ನುಅರ್ಥ ಮಾಡಿಸಲು ಕಾರ್ಯಕ್ರಮವೊಂದನ್ನು ಆಯೋಜಿಸುವಿರಿ. ಸಾಮಾನ್ಯ ಜನರ ಆಶೋತ್ತರಗಳನ್ನು ಈಡೇರಿಸಲು ರಾಜಕೀಯವನ್ನು ಆಶ್ರಯಿಸುವಿರಿ. ಹಣಕಾಸಿನ ಬಗ್ಗೆ ಅವಸರದ ತೀರ್ಮಾನ ಕೈಗೊಂಡು ತೊಂದರೆಗೆ ಒಳಗಾಗುವಿರಿ. ಮುಂದಿನ ಪರಿಸ್ಥಿತಿಯನ್ನು ಆವಲೋಕಿಸಿ ಯಾವುದೇ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).