ಕನ್ನಡ ಸುದ್ದಿ  /  Astrology  /  Horoscope Today Astrology Prediction 31st March 2024 Leo Virgo Libra Scorpio Daily Horoscope Sts

Horoscope Today: ಈ ರಾಶಿಯವರು ಗೋಶಾಲೆಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿದರೆ ಶುಭ ಫಲ; ಮಾರ್ಚ್‌ 31ರ ದಿನ ಭವಿಷ್ಯ

ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (31st March 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಮಾರ್ಚ್‌ 31ರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಮಾರ್ಚ್‌ 31ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (31st March 2024 Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯನ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ : ಷಷ್ಠಿ ಸಂಜೆ 05.04 ರವರೆಗೂ ಇರುತ್ತದೆ ನಂತರ ಸಪ್ತಮಿ ಆರಂಭವಾಗಲಿದೆ.

ನಕ್ಷತ್ರ : ಜ್ಯೇಷ್ಠ ನಕ್ಷತ್ರವು ಸಂಜೆ 06.55 ರವರೆಗೂ ಇರುತ್ತದೆ. ನಂತರ ಮೂಲ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.17

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: ಸಂಜೆ 04.30 ರಿಂದ 06.00

ರಾಶಿಫಲ

ಸಿಂಹ

ಆತ್ಮ ವಿಶ್ವಾಸ ಜೀವನದ ರೂಪುರೇಷೆಗಳನ್ನು ನಿರ್ಧರಿಸುತ್ತದೆ. ಕುಟುಂಬದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿನ ಹಠಾತ್‌ ಬದಲಾವಣೆಗಳಿಗೆ ಹೊಂದಿಕೊಳ್ಳುವಿರಿ. ಅಧಿಕಾರ ದೊರೆತಾಗ ಮನದಲ್ಲಿ ಹೊಸ ಚೈತನ್ಯ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಒತ್ತಡ ಅಧಿಕವಾಗಿರುತ್ತದೆ. ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ಸಾಲ ತೆಗೆದುಕೊಳ್ಳಬೇಕಾಗುತ್ತದೆ. ಪಾಲುದಾರಿಕೆ ವ್ಯಾಪಾರದಲ್ಲಿ ದೀರ್ಘಕಾಲದ ಒಡಂಬಡಿಕೆ ಉಂಟಾಗುತ್ತದೆ. ಮೊಮ್ಮಕ್ಕಳ ಜೊತೆಯಲ್ಲಿ ಹಿರಿಯರು ಸಂತೋಷದಿಂದ ಬಾಳುತ್ತಾರೆ. ಉತ್ತಮ ಆರೋಗ್ಯ ನಿಮ್ಮದಾಗಲಿದೆ. ಸಂಧಿಗ್ದ ಪರಿಸ್ಥಿತಿಯಲ್ಲಿ ಧೈರ್ಯ ಗೆಡದೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಿರಿ.

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು ಪಶ್ಚಿಮ

ಅದೃಷ್ಟದ ಬಣ್ಣ : ನೇರಳೆ ಬಣ್ಣ

ಕನ್ಯಾ

ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಬಂಧು ಬಳಗದವರ ಜೊತೆ ಆರೋಗ್ಯಪೂರ್ಣ ಸಂಬಂಧ ಇರುತ್ತದೆ. ಉದ್ಯೋಗದಲ್ಲಿ ಕೆಲವೊಮ್ಮೆ ಸ್ವಂತ ಹಣ ಖರ್ಚು ಮಾಡಬೇಕಾಗಬಹುದು, ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳ ಸಮಸ್ಯೆಗಳು ಸಹಪಾಠಿಗಳ ಸಹಾಯದಿಂದ ಪರಿಹಾರವಾಗುತ್ತದೆ. ಹಣಕಾಸಿನ ಬಗ್ಗೆ ಕುಟುಂಬದ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು. ಆರೋಗ್ಯದ ವಿಚಾರವನ್ನು ಕಡೆಗಣಿಸುವ ಗುಣ ಒಳ್ಳೆಯದಲ್ಲ. ಸಹೋದರಿಯರೊಂದಿಗೆ ಮನೆಯಲ್ಲಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರವಾಸ ಕೈಗೊಳ್ಳುವಿರಿ. ಕುಟುಂಬದ ಸದಸ್ಯರೊಂದಿಗೆ ಪ್ರೀತಿ ಹೆಚ್ಚಾಗುತ್ತದೆ. ವಿವಾಹದ ವಿಚಾರದಲ್ಲಿ ಆಸಕ್ತಿ ತೋರುವುದಿಲ್ಲ.

ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ತುಲಾ

ಕುಟುಂಬದ ಕೆಲಸದಲ್ಲಿನ ಆತುರದ ಕಾರಣ ಬೇಸರದ ವಾತಾವರಣ ತಲೆದೋರುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳ ಅಹಿತಕರ ವರ್ತನೆಯಿಂದ ಮನಸ್ಸಿಗೆ ನೋವುಂಟಾಗುತ್ತದೆ. ಶಾಂತಮನಸ್ಕರಾಗಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸುವಿರಿ. ವ್ಯಾಪಾರ ವಹಿವಾಟಿನಲ್ಲಿ ನಷ್ಟ ತಡೆಗಟ್ಟುವಲ್ಲಿ ಯಶಸ್ವಿಯಾಗುವಿರಿ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಗುರಿ ತಲುಪಲಿದ್ದಾರೆ. ಮಕ್ಕಳ ಮನದಲ್ಲಿನ ಆಸೆಗಳನ್ನು ಪೂರೈಸುವಿರಿ. ಪ್ರೀತಿಪಾತ್ರರೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ. ಧೀರ್ಘಕಾಲದಿಂದ ಉಳಿದಿರುವ ಪ್ರಮುಖ ಯೋಜನೆ ಕಾರ್ಯಗತವಾಗುತ್ತದೆ. ಆರೋಗ್ಯ ಸಮಸ್ಯೆಗಳು ಕಾಡಬಹುದು. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಶ್ಚಿಕ

ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆಯ ಕೊರತೆ ಕಂಡುಬರುತ್ತದೆ. ದಾನ ಧರ್ಮಗಳಲ್ಲಿ ತೊಡಗಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಲಹೆಯಂತೆ ನಡೆದುಕೊಳ್ಳುವಿರಿ. ವ್ಯಾಪಾರ ವ್ಯವಹಾರದಲ್ಲಿ ಹಣದ ಕೊರತೆ ಕಾಣದು. ದಿನ ಕಳೆದಂತೆ ಕುಟುಂಬದ ಸದಸ್ಯರು ಪ್ರೀತಿಯಿಂದ ವರ್ತಿಸುತ್ತಾರೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡದಿಂದ ದೂರವಾಗಬೇಕು. ಸಂಗಾತಿಯ ಜೊತೆ ಹಣದ ವಿಚಾರವಾಗಿ ವಿವಾದ ಉಂಟಾಗುತ್ತದೆ. ಸಾಲದ ವಿಚಾರದಲ್ಲಿ ಜಾಗರೂಕತೆಯಿಂದ ವರ್ತಿಸಿ. ಮಕ್ಕಳ ವಿಚಾರವಾಗಿ ಅನಾವಶ್ಯಕ ಚಿಂತೆ ಮಾಡುವಿರಿ. ಮನೆಗೆ ಅನವಶ್ಯಕವಾದ ಪದಾರ್ಥಗಳನ್ನು ಕೊಳ್ಳಲು ಹಣ ವಿನಿಯೋಗಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).