ಕನ್ನಡ ಸುದ್ದಿ  /  Astrology  /  Horoscope Today Astrology Prediction 31st March 2024 Sagittarius Capricorn Aquarius Pisces Sts

ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದ, ಅನಗತ್ಯ ಖರ್ಚುಗಳಿಂದ ಮನಸ್ಸಿಗೆ ಬೇಸರ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (31st March 2024 Daily Horoscope).

ಧನು, ಮಕರ, ಕುಂಭ, ಮೀನ ರಾಶಿಯವರ ಮಾರ್ಚ್‌ 31ರ ದಿನ ಭವಿಷ್ಯ
ಧನು, ಮಕರ, ಕುಂಭ, ಮೀನ ರಾಶಿಯವರ ಮಾರ್ಚ್‌ 31ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(31st March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯನ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ : ಷಷ್ಠಿ ಸಂಜೆ 05.04 ರವರೆಗೂ ಇರುತ್ತದೆ ನಂತರ ಸಪ್ತಮಿ ಆರಂಭವಾಗಲಿದೆ.

ನಕ್ಷತ್ರ : ಜ್ಯೇಷ್ಠ ನಕ್ಷತ್ರವು ಸಂಜೆ 06.55 ರವರೆಗೂ ಇರುತ್ತದೆ. ನಂತರ ಮೂಲ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.17

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: ಸಂಜೆ 04.30 ರಿಂದ 06.00

ರಾಶಿ ಫಲ

ಧನಸ್ಸು

ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳು ಇರಲಿವೆ. ಉದ್ಯೋಗದಲ್ಲಿ ಎಲ್ಲರ ಗೌರವ ಗಳಿಸುವಿರಿ. ಉದ್ಯಮಿಗಳಿಗೆ ತೊಂದರೆಗಳು ಎದುರಾಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಯಾವುದೇ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳದಿರಿ. ವಿದ್ಯಾರ್ಥಿಗಳು ತಪ್ಪಿಲ್ಲದೇ ಹೋದರೂ ಸಂದಿಗ್ದತೆಗೆ ಸಿಲುಕುವರು. ದಿನನಿತ್ಯದ ಜೀವನಕ್ಕೆ ಹೆಚ್ಚಿನ ಹಣದ ಅಗತ್ಯವಿರುತ್ತದೆ. ಅನಗತ್ಯ ಖರ್ಚುಗಳ ಕಾರಣ ಸಹನೆ ಕಳೆದುಕೊಳ್ಳುವಿರಿ. ಪರಿಸರವನ್ನು ಬದಲಿಸಲು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಿರಿ. ವಿವಾಹದ ಬಗ್ಗೆ ಮಾತು ಕತೆ ನಡೆಯಲಿದೆ. ಸೋದರನ ಸಂಯಮದಿಂದ ದೊಡ್ಡ ಜವಾಬ್ದಾರಿ ದೂರವಾಗುವುದು. ನೆರೆಹೊರೆಯವರಿಂದ ಸಮಸ್ಯೆ ಆಗಬಹುದು.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು ಬಣ್ಣ

ಮಕರ

ಕುಟುಂಬದ ವಿವಾದ ಕೊನೆಗೊಂಡು ನೆಮ್ಮದಿ ನೆಲೆಸುತ್ತದೆ. ಅನಾರೋಗ್ಯದಿಂದ ಚೇತರಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಆಂತರಿಕ ಬದಲಾವಣೆ ಸಾಧ್ಯತೆ ಹೆಚ್ಚಾಗಿದ್ದು ಎಚ್ಚರಿಕೆ ಇರಲಿ. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ನೂತನ ಸಾಧನೆ ಮಾಡಲಿದ್ದಾರೆ. ವ್ಯಾಪಾರ ವ್ಯವಹಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಸಂಬಂಧಿಕರ ಭೇಟಿ ಹೊಸ ಬದಲಾವಣೆಗೆ ಕಾರಣವಾಗುತ್ತದೆ. ಮಕ್ಕಳ ಜೊತೆ ಪ್ರೀತಿ ಸಂತೋಷದಿಂದ ಬಾಳುವಿರಿ. ಜನರಿಂದ ದೂರವಿರಲು ಪ್ರಯತ್ನಿಸುವಿರಿ. ತಪ್ಪು ನಿರ್ಧಾರದ ಕಾರಣ ತೊಂದರೆಗೊಳಗಾಗಬಹುದು. ಸಂಗಾತಿಗೆ ಇಷ್ಟವಾದ ಉಡುಗೊರೆ ನೀಡಿ ದಿನದ ಕೆಲಸ ಆರಂಭಿಸಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಕುಂಭ

ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಎದುರಾದರೂ ತೊಂದರೆ ಇರದು. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಉದ್ಯೋಗದಲ್ಲಿ ಯಾವುದೇ ಪ್ರಗತಿ ಇರುವುದಿಲ್ಲ. ಮಕ್ಕಳ ಅಧ್ಯಯನದ ಮೇಲೆ ಹೆಚ್ಚು ಗಮನ ನೀಡುವಿರಿ. ವ್ಯಾಪಾರ ವ್ಯವಹಾರದಲ್ಲಿ ನಷ್ಟವಿರದು. ವಿದ್ಯಾರ್ಥಿಗಳಿಗೆ ಉಡುಗೊರೆಗಳ ಮಹಾಪೂರವೇ ದೊರೆಯಲಿದೆ. ತಪ್ಪನ್ನು ಒಪ್ಪಿ ಸರಿದಾರಿಗೆ ಮರಳುವಿರಿ. ಅರ್ಥಪೂರ್ಣ ಮಾತಿನ ಮೂಲಕ ಎಲ್ಲರ ಗಮನ ಸೆಳೆಯುವಿರಿ. ವಿಚಾರಗೋಷ್ಠಿಗಳಲ್ಲಿ ಭಾಗವಹಿಸುವಿರಿ. ಸಮಾಜಸೇವೆಗೆ ಮನಸ್ಸು ಹಾತೊರೆಯುತ್ತದೆ. ಅನಾವಶ್ಯಕ ಪ್ರಯಾಣ ಬೇಸರಕ್ಕೆ ಕಾರಣವಾಗುತ್ತದೆ. ಕ್ರಮಬದ್ಧವಲ್ಲದ ಆಹಾರ ಸೇವನೆ ಅಜೀರ್ಣಕ್ಕೆ ಕಾರಣವಾಗಲಿದೆ. ವಾಹನ ಚಾಲನೆ ವೇಳೆ ಎಚ್ಚರಿಕೆ ಇರಲಿ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಮೀನ

ಕುಟುಂಬದಲ್ಲಿನ ಬದಲಾವಣೆಗೆ ಹೊಂದಿಕೊಂಡು ಬಾಳಬೇಕಾಗುತ್ತದೆ. ಹಣಕಾಸಿನ ಸಮಸ್ಯೆಯೊಂದು ಎದುರಾಗುತ್ತದೆ. ಉದ್ಯೋಗದಲ್ಲಿ ದೊಡ್ಡ ಮಟ್ಟದ ಯಶಸ್ಸು ದೊರೆಯುತ್ತದೆ. ವ್ಯಾಪಾರ ವಹಿವಾಟಿನಲ್ಲಿ ಹೂಡಿದ ಬಂಡವಾಳಕ್ಕೆ ಮೋಸ ಆಗದು. ಆದಾಯಕ್ಕೆ ತಕ್ಕ ಖರ್ಚು ವೆಚ್ಚಗಳು ಇರಲಿವೆ. ಆರೋಗ್ಯದಲ್ಲಿ ತೊಂದರೆ ಕಾಣದು. ಆತ್ಮವಿಶ್ವಾಸದ ಕೊರತೆ ಕಾಡುತ್ತದೆ. ದೈಹಿಕ ಸಬಲತೆ ಕಡಿಮೆ. ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯಿಂದ ತಮ್ಮ ಕಾರ್ಯ ಸಾಧಿಸುವರು. ಕೋಪವನ್ನು ನಿಯಂತ್ರಿಸಿ. ನಿಮಗೆ ಅಸಾಧ್ಯವಾದುದು ಯಾವುದೂ ಇಲ್ಲ. ಪ್ರೀತಿ ಮತ್ತು ಸಕಾರಾತ್ಮಕ ದೃಷ್ಟಿಯಿಂದ ಹೆಚ್ಚಿನ ಲಾಭ ಗಳಿಸುವಿರಿ. ವಿವಾಹ ಯೋಗವಿದೆ. ದೊರೆವ ಸಮಯವನ್ನು ಸರಿಯಾಗಿ ಬಳಸಿಕೊಳ್ಳುವಿರಿ.

ಪರಿಹಾರ: ದೇವರಿಗೆ ತುಪ್ಪದ ದೀಪ ಹಚ್ಚಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಕಂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).