ಕನ್ನಡ ಸುದ್ದಿ  /  Astrology  /  Horoscope Today Astrology Prediction 3rd April 2024 Aries Taurus Gemini Cancer Daily Horoscope Sts

Horoscope Today: ಹಣಕಾಸಿನ ವಿಚಾರಗಳು ಬಗೆಹರಿಯಲಿವೆ, ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

3 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (3rd April 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (3rd April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ -ಉತ್ತರಾಯನ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ: ನವಮಿ 01.41 ರವರೆಗೂ ಇದ್ದು ನಂತರ ದಶಮಿ ಆರಂಭವಾಗಲಿದೆ.

ನಕ್ಷತ್ರ: ಉತ್ತರಾಷಾಢ ನಕ್ಷತ್ರವು ಸಂಜೆ 05.29 ರವರೆಗೂ ಇದ್ದು ನಂತರ ಶ್ರವಣ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.15

ಸೂರ್ಯಾಸ್ತ: ಸಂಜೆ 06.31

ರಾಹುಕಾಲ : 12.00 ರಿಂದ 01.30

ರಾಶಿಫಲ

ಮೇಷ

ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವುದರಿಂದ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಅನಾವಶ್ಯಕವಾದ ಹೊಗಳಿಕೆಗೆ ಮರುಳಾಗುವುದಿಲ್ಲ. ಒತ್ತಡಕ್ಕೆ ಒಳಗಾಗದೆ ಸಮಯಕ್ಕೆ ಅನುಗುಣವಾಗುವಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿನ ಬದಲಾವಣೆಗಳಿಗೆ ಹೊಂದಿಕೊಳ್ಳಬೇಕಾಗುತ್ತದೆ. ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಪ್ರಯತ್ನಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿನ ಆದಾಯ ಕುಂಠಿತಗೊಳ್ಳಲಿದೆ. ಪಾಲುದಾರಿಕೆ ವ್ಯಾಪಾರವಾದಲ್ಲಿ ನಷ್ಟವಾಗದು. ವಿದ್ಯಾರ್ಥಿಗಳು ಕಲಿಕೆಯಲ್ಲಿ ಪ್ರೌಢಿಮೆ ಸಾಧಿಸಲಿದ್ದಾರೆ. ಬೇಸರದಿಂದ ದೂರವಾಗಲು ಮನರಂಜನಾ ಸ್ಥಳಕ್ಕೆ ಭೇಟಿ ನೀಡುವಿರಿ. ಹಣಕಾಸಿನ ವ್ಯವಹಾರದಲ್ಲಿ ಯಾವುದೇ ಆಸಕ್ತಿ ತೋರುವುದಿಲ್ಲ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ವೃಷಭ

ಕುಟುಂಬದಲ್ಲಿ ಪ್ರತಿಯೊಬ್ಬರಲ್ಲಿಯೂ ಪರಸ್ಪರ ಸಹಕಾರ ಇರುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳ ಜೊತೆ ಸಹನೆಯಿಂದ ವರ್ತಿಸಿ ಕೆಲಸ ಸಾಧಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಗಳಿಸುವಿರಿ. ವಿದ್ಯಾರ್ಥಿಗಳೂ ಸಹಪಾಠಿಗಳ ಜೊತೆಗೂಡಿ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಸ್ವಂತ ನಿರ್ಧಾರಗಳನ್ನು ಎಲ್ಲರೊಂದಿಗೆ ಚರ್ಚಿಸಿ ಕಾರ್ಯಗತಗೊಳಿಸುವಿರಿ. ಯಾವುದೇ ರೀತಿಯ ಅನುಮಾನ ಉಂಟಾದಲ್ಲಿ ಆತ್ಮೀಯರ ಸಲಹೆ ಸೂಚನೆಗಳನ್ನು ಪಾಲಿಸುವಿರಿ. ಪ್ರಯಾಣಿಸುವ ವೇಳೆಯಲ್ಲಿ ಎಚ್ಚರಿಕೆಯ ಅಗತ್ಯವಿದೆ. ವಿವಾಹದ ಮಾತುಕತೆ ನಡೆಯಲಿದೆ. ಪಾಲುದಾರಿಕೆಯ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಕುಟುಂಬದ ಹಿರಿಯರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ : ತಿಳಿ ಹಸಿರು

ಮಿಥುನ

ಮಕ್ಕಳ ಬಗ್ಗೆ ಅನಾವಶ್ಯಕ ಚಿಂತೆ ಮಾಡುವಿರಿ. ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಖರ್ಚಿನಲ್ಲಿ ಹಿಡಿತ ಇರುವ ಕಾರಣ ಹಣದ ತೊಂದರೆ ಉಂಟಾಗುವುದಿಲ್ಲ. ಕುಟುಂಬದ ಸದಸ್ಯರ ಮನದಾಳವನ್ನು ಅರಿತು ನಡೆಯುವಿರಿ. ಕೌಟುಂಬಿಕ ವಿಚಾರಗಳಲ್ಲಿ ನಿಮ್ಮದೇ ಅಂತಿಮ ತೀರ್ಮಾನ ಆಗಲಿದೆ. ಉದ್ಯೋಗದಲ್ಲಿ ಬಯಸಿದ ಅನುಕೂಲತೆಗಳು ಲಭ್ಯವಾಗುತ್ತದೆ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ತಂದೆ ತಾಯಿಗಳ ಸಹಾಯ ದೊರೆಯುತ್ತದೆ. ಕಷ್ಟಪಟ್ಟು ಓದುವ ಕಾರಣ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡುತ್ತಾರೆ. ಹಣದ ಉಳಿತಾಯಕ್ಕಾಗಿ ಹಲವು ಯೋಜನೆಯಲ್ಲಿ ಹಣ ವಿನಿಯೋಗಿಸುವಿರಿ. ಸಮಾಜ ಸೇವೆಯಲ್ಲಿ ನೆಮ್ಮದಿಯನ್ನು ಕಾಣುವಿರಿ. ಅನಿರೀಕ್ಷಿತ ಧನಲಾಭ ಇರುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನಸು ಗೆಂಪು

ಕಟಕ

ಎಲ್ಲರ ಮನ ಒಪ್ಪುವ ಕೆಲಸ ಕಾರ್ಯಗಳನ್ನು ಮಾಡುವಿರಿ. ಹಣಕಾಸಿನ ಕೊರತೆ ಕ್ರಮೇಣವಾಗಿ ಕಡಿಮೆಯಾಗಲಿದೆ. ಉಡುಗೊರೆಯಾಗಿ ದೊರೆಯುವ ಹಣ ಸದ್ವಿನಿಯೋಗವಾಗಲಿದೆ. ಉದ್ಯೋಗದಲ್ಲಿ ಆತುರದ ನಿರ್ಧಾರ ಕೈಗೊಳ್ಳದಿರಿ. ಉದ್ಯೋಗದಲ್ಲಿನ ಬದಲಾವಣೆಗಳು ನಿಮ್ಮ ಪರವಾಗಿರುತ್ತದೆ. ಕೆಲಸ ಬದಲಿಸುವ ಸಾದ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಾಗದು. ಮೊದಲು ಸ್ವಂತ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ವಿದ್ಯಾರ್ಥಿಗಳು ಚುರುಕುತನದಿಂದ ಆಟ ಪಾಠಗಳಲ್ಲಿ ಮುಂದಿರುತ್ತಾರೆ. ಆರೋಗ್ಯದ ಬಗ್ಗೆ ಗಮನ ನೀಡಿ. ಕುಟುಂಬದಲ್ಲಿನ ಹಣಕಾಸಿನ ವಿವಾದ ಬಗೆಹರಿಯಲಿದೆ. ಮನೆಯ ಅಂದ ಹೆಚ್ಚಿಸುವ ಸಲುವಾಗಿ ಹೆಚ್ಚಿನ ಹಣ ಖರ್ಚಾಗಲಿದೆ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).