ಕನ್ನಡ ಸುದ್ದಿ  /  Astrology  /  Horoscope Today Astrology Prediction 3rd April 2024 Leo Virgo Libra Scorpio Daily Horoscope Sts

Horoscope Today: ಆಹಾರಕ್ಕೆ ಸಂಬಂಧಿಸಿದ ವ್ಯಾಪಾರ ಆರಂಭಿಸುವಿರಿ, ಸ್ವಂತ ವಾಹನ ಕೊಳ್ಳಲಿದ್ದೀರಿ; ಏಪ್ರಿಲ್‌ 3ರ ದಿನ ಭವಿಷ್ಯ

3 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (3rd April 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (3rd April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ: ಅಷ್ಟಮಿ 03.14 ರವರೆಗೂ ಇದ್ದು ನಂತರ ನವಮಿ ಆರಂಭವಾಗಲಿದೆ.

ನಕ್ಷತ್ರ : ಪೂರ್ವಾಷಾಢ ನಕ್ಷತ್ರವು ಸಂಜೆ 06.22 ರವರೆಗೂ ಇದ್ದು ನಂತರ ಉತ್ತರಾಷಾಢ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.16

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 03.00 ರಿಂದ 04.30

ರಾಶಿಫಲ

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ -ಉತ್ತರಾಯನ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ: ನವಮಿ 01.41 ರವರೆಗೂ ಇದ್ದು ನಂತರ ದಶಮಿ ಆರಂಭವಾಗಲಿದೆ.

ನಕ್ಷತ್ರ: ಉತ್ತರಾಷಾಢ ನಕ್ಷತ್ರವು ಸಂಜೆ 05.29 ರವರೆಗೂ ಇದ್ದು ನಂತರ ಶ್ರವಣ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.15

ಸೂರ್ಯಾಸ್ತ: ಸಂಜೆ 06.31

ರಾಹುಕಾಲ : 12.00 ರಿಂದ 01.30

ರಾಶಿಫಲ

ಸಿಂಹ

ಕುಟುಂಬದಲ್ಲಿನ ಹೆಚ್ಚಿನ ಜವಾಬ್ದಾರಿಯು ನಿಮ್ಮದಾಗುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ. ಮಾಡುವ ಕೆಲಸ ಕಾರ್ಯಗಳಿಗೆ ಪ್ರಶಂಸೆ ದೊರೆಯಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ವಿಚಾರಗಳ ಹೆಚ್ಚಿನ ಅಧ್ಯಯನಕ್ಕೆ ವಿದೇಶಕ್ಕೆ ತೆರಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹೇರಳ ಲಾಭವಿರುತ್ತದೆ. ವಿದ್ಯಾರ್ಥಿಗಳ ಆತ್ಮವಿಶ್ವಾಸ ಉತ್ತಮ ಫಲಿತಾಂಶ ನೀಡುತ್ತದೆ. ಸೋದರ ಅಥವಾ ಸೋದರಿಯಿಂದ ಉಡುಗೊರೆ ದೊರೆಯಲಿದೆ. ಆಹಾರಕ್ಕೆ ಸಂಬಂಧಿಸಿದ ವ್ಯಾಪಾರವನ್ನು ಆರಂಭಿಸುವಿರಿ. ಹಿರಿಯರ ಮನ ನೋಯಿಸುವ ಕೆಲಸ ಮಾಡುವುದಿಲ್ಲ. ಸ್ವಂತ ವಾಹನ ಕೊಳ್ಳುವ ಅವಕಾಶವಿದೆ. ಬಿಡುವಿಲ್ಲದ ಕೆಲಸ ಕಾರ್ಯದ ನಡುವೆ ವಿಶ್ರಾಂತಿ ತೆಗೆದುಕೊಳ್ಳಿ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು ದಕ್ಷಿಣ

ಅದೃಷ್ಟದ ಬಣ್ಣ : ಬಿಳಿ

ಕನ್ಯಾ

ಮೊದಲು ಅಪೂರ್ಣಗೊಂಡ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ದುಡಿದು ಬೇಸತ್ತ ಕಾರಣ ವಿಶ್ರಾಂತಿ ಪಡೆಯಲು ಪರಸ್ಠಳಕ್ಕೆ ತೆರಳುವಿರಿ. ಆತ್ಮ ವಿಶ್ವಾಸ ಬೆಳೆಸಿಕೊಳ್ಳಲು ಧ್ಯಾನದ ಮಾರ್ಗ ಅನುಸರಿಸುವಿರಿ. ತಂದೆಯವರ ಅನಾವಶ್ಯಕ ಖರ್ಚು ವೆಚ್ಚಗಳ ಖಡಿತಗೊಳಿಸುವಿರಿ. ಉದ್ಯೋಗದಲ್ಲಿ ತೊಂದರೆ ಇರುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಸಿನಿಂದ ಕಲಿಕೆಯಲ್ಲಿ ತೊಡಗುತ್ತಾರೆ. ಗೃಹಾಲಂಕಾರ ಪದಾರ್ಥಗಳಿಗೆ ಹೆಚ್ಚಿನ ಹಣವನ್ನು ವಿನಿಯೋಗಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಹೊಸ ಹಣಕಾಸಿನ ವ್ಯವಹಾರಕ್ಕೆ ತಾಲೀಮು ನಡೆಸುವಿರಿ. ಮನೆಯಲ್ಲಿ ಸಾಕು ಪ್ರಾಣಿಗಳ ಬಗ್ಗೆ ಕಾಳಜಿ ಇರುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ತುಲಾ

ಬೇರೆಯವರ ಕೆಲಸಗಳಲ್ಲಿ ತಪ್ಪನ್ನು ಕಂಡುಹಿಡಿಯುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುವುದು. ಉದ್ಯೋಗದಲ್ಲಿ ಸಹೋದ್ಯೋಗಿಗಳ ಪ್ರೀತಿ ವಿಶ್ವಾಸ ಸಂಪಾದಿಸಿದರೆ ಯಾವುದೇ ಅಡೆ ತಡೆಗಳು ಎದುರಾಗುವುದಿಲ್ಲ. ವ್ಯಾಪಾರ ವ್ಯವಹಾರಗಳು ಆತಂಕದ ನಡುವೆಯೂ ಸುಗಮವಾಗಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಹಕಾರ ನೀಡಬೇಕು. ಅವಿವಾಹಿತರಿಗೆ ವಿವಾಹ ಯೋಗವಿದೆ. ಬಹುದಿನಗಳ ನಂತರ ಸರ್ಕಾರಕ್ಕೆ ಸಂಬಂಧಿಸಿದ ಕೆಲಸ ಒಂದು ಯಶಸ್ವಿಯಾಗಲಿದೆ. ಹಣ ಉಳಿತಾಯದ ಬಗ್ಗೆ ಯೋಚನೆ ಮಾಡುವಿರಿ. ಮಕ್ಕಳ ವಿದ್ಯಾಭ್ಯಾಸದ ಸಲುವಾಗಿ ಹೆಚ್ಚಿನ ಹಣದ ಅವಶಕತೆ ಇರಲಿದೆ. ವೈವಾಹಿಕ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡುಬರಲಿವೆ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ವೃಶ್ಚಿಕ

ನೆರವೇರದ ಕೆಲಸ ಕಾರ್ಯಗಳ ಬಗ್ಗೆ ಚಿಂತೆ ಮಾಡುವಿರಿ. ಇದರಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ. ಕುಟುಂಬದಲ್ಲಿನ ನಿರ್ಧಾರಗಳನ್ನು ಬದಲಾಯಿಸದಿರಿ. ಉದ್ಯೋಗದಲ್ಲಿ ಆತಂಕದ ಪರಿಸ್ಥಿತಿ ಎದುರಾದರೂ ತೊಂದರೆ ಆಗದು. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಪಡೆಯುವಿರಿ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಮುಂದುವರೆಯುವರು. ತಂದೆ ಅಥವಾ ತಾಯಿಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಹಣಕಾಸಿನ ವ್ಯವಹಾರ ಲಾಭದಾಯಕವಲ್ಲ. ಇರುವ ವಾಹನವನ್ನು ಆತ್ಮೀಯರಿಗೆ ನೀಡಿ ಹೊಸ ವಾಹನ ಕೊಳ್ಳುವಿರಿ. ಮಾಡಿದ ತಪ್ಪನ್ನು ಸುಲಭವಾಗಿ ಒಪ್ಪುವುದಿಲ್ಲ. ದಂಪತಿ ನಡುವೆ ಮಕ್ಕಳ ಸಲುವಾಗಿ ಮನಸ್ತಾಪ ಉಂಟಾಗಲಿದೆ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಎಲೆ ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).