ಕನ್ನಡ ಸುದ್ದಿ  /  Astrology  /  Horoscope Today Astrology Prediction 3rd April 2024 Sagittarius Capricorn Aquarius Pisces Sts

Horoscope Today: ಸಂಬಂಧಿಕರೊಂದಿಗೆ ಮನಸ್ತಾಪ, ಪಶು ಸಂಗೋಪನೆಯಲ್ಲಿ ಉತ್ತಮ ಆದಾಯ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

3 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (3rd April 2024 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(3rd April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ: ಅಷ್ಟಮಿ 03.14 ರವರೆಗೂ ಇದ್ದು ನಂತರ ನವಮಿ ಆರಂಭವಾಗಲಿದೆ.

ನಕ್ಷತ್ರ : ಪೂರ್ವಾಷಾಢ ನಕ್ಷತ್ರವು ಸಂಜೆ 06.22 ರವರೆಗೂ ಇದ್ದು ನಂತರ ಉತ್ತರಾಷಾಢ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.16

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 03.00 ರಿಂದ 04.30

ರಾಶಿಫಲ

ಧನಸ್ಸು

ಹೊಸತನದ ನಿರೀಕ್ಷೆಯಿಂದ ದಿನವನ್ನು ಆರಂಭಿಸುವಿರಿ. ನಿರೀಕ್ಷಿತ ಯಶಸ್ಸು ದೊರೆಯುವ ಕಾರಣ ಸಂತಸದಿಂದ ಇರುವಿರಿ. ಕುಟುಂಬದಲ್ಲಿ ಸ್ನೇಹಮಯ ವಾತಾವರಣ ಇರುತ್ತದೆ. ಉದ್ಯೋಗದಲ್ಲಿನ ಅಡ್ಡಿ ಆತಂಕಗಳು ತಾವಾಗಿಯೇ ದೂರವಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಬಿಡುವಿಲ್ಲದೆ ಕಾರ್ಯ ನಿರ್ವಹಿಸಬೇಕಾಗುತ್ತದೆ. ಹಣದ ತೊಂದರೆ ಎದುರಾಗದು. ವಿದ್ಯಾರ್ಥಿಗಳು ಸಹಪಾಠಿಗಳ ಸ್ನೇಹ ಗಳಿಸಿ ಉನ್ನತ ಸ್ಥಾನ ಗಳಿಸುತ್ತಾರೆ. ಮಕ್ಕಳಿಗೆ ವಿವಾಹ ನಿಶ್ಚಯವಾಗುತ್ತದೆ. ಸಂಬಂಧಿಕರ ಮಾತಿನಿಂದ ಬೇಸರಗೊಂದು ದೂರವಾಗುವಿರಿ. ನಿಮ್ಮ ಮನ ಸೆಳೆವ ಚಿನ್ನದ ಆಭರಣವನ್ನು ಕೊಳ್ಳುವಿರಿ. ತಾಯಿಯಿಂದ ಹಣದ ಸಹಾಯ ದೊರೆಯುತ್ತದೆ. ಆರೋಗ್ಯದ ಬಗ್ಗೆ ಗಮನವಿರಲಿ

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೇಸರಿ

ಮಕರ

ಕುಟುಂಬದವರನ್ನು ಗಮನವಿಟ್ಟು ಪೋಷಿಸುವಿರಿ. ಕುಟುಂಬದ ಯೋಗಕ್ಷೇಮಕ್ಕೆ ಮೊದಲ ಆದ್ಯತೆ ನೀಡುವಿರಿ. ಕ್ರಿಯಾಶೀಲತೆಯಿಂದ ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಉದ್ಯೋಗದಲ್ಲಿ ಸೇವಾ ಮನೋಭಾವ ಇರುವ ಕಾರಣ ಯಾವುದೇ ತೊಂದರೆ ಎದುರಾಗದು. ಮೇಲಧಿಕಾರಿಗಳ ಪ್ರಶಂಸೆ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಾಗದು. ವಿದ್ಯಾರ್ಥಿಗಳಿಗೆ ಶುಭ ಫಲಗಳಿವೆ. ಕುಟುಂಬದ ಆಸ್ತಿಯ ವಿವಾದವು ಪರಿಹಾರಗೊಳ್ಳುವುದು. ಪಶು ಸಂಗೋಪನೆಯಲ್ಲಿ ಉತ್ತಮ ಆದಾಯವಿರುತ್ತದೆ. ಬಳಸದ ವಸ್ತುಗಳನ್ನು ವಿಲೇವಾರಿ ಮಾಡುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ವಹಿಸಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಡು ಬಾದಾಮಿ

ಕುಂಭ

ಅವಿರತ ಪ್ರಯತ್ನದಿಂದ ಕುಟುಂಬದ ಕಠಿಣವಾದ ಕೆಲಸವೊಂದನ್ನು ಯಶಸ್ವಿಗೊಳಿಸುವಿರಿ. ಹಟವನ್ನು ಬಿಟ್ಟಲ್ಲಿ ಹೆಚ್ಚಿನ ಅನುಕೂಲತೆಗಳು ದೊರೆಯಲಿವೆ. ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವಿರಿ. ವ್ಯಾಪಾರ ವ್ಯವಹಾರದಲ್ಲಿ ಯಾವುದೇ ಬದಲಾವಣೆಗಳು ಎದುರಾಗದು. ಹಣಕಾಸಿನ ವಿಚಾರಗಳು ಸ್ವಂತ ಇಚ್ಛೆಗೆ ಅನುಗುಣವಾಗಿ ನಡೆಯಲಿವೆ. ಹಣದ ಕೊರತೆ ಕಂಡು ಬರುತ್ತದೆ. ಸೋದರಿಯ ಸಹಾಯವಿದೆ. ಪಾಲುದಾರಿಕೆಯ ವ್ಯವಹಾರವೊಂದರಲ್ಲಿ ಉತ್ತಮ ಲಾಭ ಗಳಿಸಿರುವಿರಿ. ಜಗಳ ಕದನವಿಲ್ಲದೆ ಮೌನದಿಂದ ಕೆಲಸ ಸಾಧಿಸುವಿರಿ. ವಂಶದ ಹಳೆಯ ಮನೆಯನ್ನು ಪುನರುಜ್ಜೀವನಗೊಳಿಸುವಿರಿ. ತಂದೆಯವರಿಗೆ ಹಣದ ಕೊರತೆ ಕಾಡಲಿದೆ. ಶುಚಿಯಾದ ಆಹಾರ ಸೇವಿಸಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಮೀನ

ಸ್ನೇಹಿತರ ಜೊತೆಯಲ್ಲಿ ಪ್ರವಾಸಕ್ಕೆ ತೆರಳುವಿರಿ. ಗಳಿಸಿದ ಹಣವೆಲ್ಲಾ ಖರ್ಚಾಗುತ್ತದೆ. ಉದ್ಯೋಗದಲ್ಲಿ ಧನಾತ್ಮಕ ಬದಲಾವಣೆಗಳು ಉಂಟಾಗಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಲಭಿಸುತ್ತದೆ. ಕೃಷಿಯಲ್ಲಿ ಆಸಕ್ತಿ ಮೂಡುತ್ತದೆ. ವಿಶಾಲವಾದ ವಾಸಸ್ಥಾನಕ್ಕೆ ಸ್ಥಳ ಬದಲಾವಣೆ ಮಾಡುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಸ್ವಂತ ಬಳಕೆಗಾಗಿ ವಾಹನವನ್ನು ಕೊಳ್ಳುವಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯವೊಂದನ್ನು ಆಯೋಜಿಸುವಿರಿ. ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ತೋರುವಿರಿ. ಹಣಕಾಸು ಸಂಸ್ಥೆಯನ್ನು ಆರಂಭಿಸುವ ಯೋಜನೆ ಸಿದ್ದಪಡಿಸುವಿರಿ. ದ್ರವರೂಪದ ಆಹಾರ ಸೇವನೆಯ ವೇಳೆ ಎಚ್ಚರಿಕೆ ಇರಲಿ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಿತ್ತಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).