ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹ ಮುಂದೂಡಿಕೆ,ಮಕ್ಕಳ ಬಗ್ಗೆ ಅಸಮಾಧಾನ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹ ಮುಂದೂಡಿಕೆ,ಮಕ್ಕಳ ಬಗ್ಗೆ ಅಸಮಾಧಾನ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹ ಮುಂದೂಡಿಕೆ,ಮಕ್ಕಳ ಬಗ್ಗೆ ಅಸಮಾಧಾನ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಜುಲೈ 3ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ಕುಟುಂಬದಲ್ಲಿ ನಡೆಯಬೇಕಾದ ವಿವಾಹ ಮುಂದೂಡಿಕೆ,ಮಕ್ಕಳ ಬಗ್ಗೆ ಅಸಮಾಧಾನ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಕುಟುಂಬದಲ್ಲಿ ನಡೆಯಬೇಕಾದ ವಿವಾಹ ಮುಂದೂಡಿಕೆ,ಮಕ್ಕಳ ಬಗ್ಗೆ ಅಸಮಾಧಾನ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(3rd July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ : ದ್ವಾದಶಿ ಬೆಳಗ್ಗೆ 06.49 ರವರೆಗು ಇದ್ದು ಉಪರಿ ತ್ರಯೋದಶಿ ಇರುತ್ತದೆ.

ನಕ್ಷತ್ರ : ರೋಹಿಣಿ ನಕ್ಷತ್ರವು ರಾತ್ರಿ 04.26 ರವರೆಗೆ ಇದ್ದು ನಂತರ ಮೃಗಶಿರ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.56

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 12.27 ರಿಂದ 02.03

ರಾಶಿಫಲ

ಧನಸ್ಸು

ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಮಕ್ಕಳ ಜೊತೆ ಸಂತೋಷದಿಂದ ದಿನ ಕಳೆಯುವಿರಿ. ಸಂಗಾಯೊಂದಿಗೆ ಉತ್ತಮ ಸ್ನೇಹಿತರಂತೆ ಬಾಳುವಿರಿ. ವೃತ್ತಿ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳಿಗೆ ಆದ್ಯತೆ ನೀಡುವಿರಿ. ಹಿರಿಯ ಅಧಿಕಾರಿಗಳ ಸಹಕಾರ ನಿಮಗಿರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಯಾರ ಪ್ರಭಾವಕ್ಕೂ ಒಳಗಾಗುವುದಿಲ್ಲ. ಮೊದಲ ಆದ್ಯತೆಯನ್ನು ನಿಮ್ಮ ಸ್ವಂತ ಕೆಲಸ ಕಾರ್ಯಗಳಿಗೆ ನೀಡಿ. ಜನ ಸೇವಾ ಸಂಘದ ನಾಯಕತ್ವವನ್ನು ಒಪ್ಪಿಕೊಳ್ಳುವಿರಿ. ಬಿಡುವಿಲ್ಲದ ದುಡಿಮೆ ಇರುತ್ತದೆ. ನಿಮಗೆ ಅನುಕೂಲಕರವಾಗುವಂತಹ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುವಿರಿ. ಯಾರ ಬುದ್ಧಿವಾದವನ್ನು ಕೇಳುವುದಿಲ್ಲ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸು ಗೆಂಪು

ಮಕರ

ಹಣ ಉಳಿಸಲು ಯೋಜನೆಗಳನ್ನು ರೂಪಿಸುವಿರಿ. ಸಂಗಾತಿಯ ಮನಸ್ಸಿಗೆ ಬೇಸರವಾಗುವಂತೆ ನಡೆದುಕೊಳ್ಳುವಿರಿ. ದಂಪತಿ ನಡುವೆ ಉತ್ತಮ ಹೊಂದಾಣಿಕೆ ಇರುವುದಿಲ್ಲ. ಹಿರಿಯರ ಸಲಹೆ ಸೂಚನೆಯನ್ನು ಪಾಲಿಸುವಿರಿ. ಮಕ್ಕಳ ಬಗ್ಗೆ ಅಸಮಾಧಾನವಿರುತ್ತದೆ. ಕಾರಣವಿಲ್ಲದೆ ಯಾರನ್ನೂ ಹೊಗಳುವುದಿಲ್ಲ. ಬೇರೆಯವರ ಕೆಲಸ ಕಾರ್ಯಗಳ ಬಗ್ಗೆ ಟೀಕೆ ಮಾಡುವಿರಿ. ಸಣ್ಣಪುಟ್ಟ ಕೆಲಸ ಮಾಡಿದರೂ ವಿಶ್ರಾಂತಿ ತೆಗೆದುಕೊಳ್ಳುವಿರಿ. ಆತುರದಿಂದ ಉದ್ಯೋಗವನ್ನು ಬದಲಿಸುವ ನಿರ್ಧಾರಕ್ಕೆ ಬರುವಿರಿ. ವಂಶಾಧಾರಿತ ವೃತ್ತಿಯೊಂದನ್ನು ಆರಂಭಿಸುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಧಾರ್ಮಿಕ ಸ್ಥಳಕ್ಕೆ ಭೇಟಿಯನ್ನು ನೀಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕುಂಭ

ನಿಮ್ಮ ಮನಸ್ಸಿನಲ್ಲಿ ಎಲ್ಲರ ಬಗ್ಗೆ ಒಳ್ಳೆಯ ಭಾವನೆ ಇರುತ್ತದೆ. ಕಷ್ಟದ ವೇಳೆಯಲ್ಲಿ ಸಂಗಾತಿಯಿಂದ ಸಹಾಯ ದೊರೆಯುತ್ತದೆ. ಸಮಾಜದ ಗಣ್ಯ ವ್ಯಕ್ತಿಗಳ ಸ್ನೇಹ ದೊರೆಯುತ್ತದೆ. ಕುಟುಂಬದಲ್ಲಿ ನಡೆಯಬೇಕಾದ ವಿವಾಹವು ಮುಂದೆ ಹೋಗಬಹುದು. ಉತ್ತಮ ಆರೋಗ್ಯ ನಿಮ್ಮ ಸಂತೋಷವನ್ನು ಹೆಚ್ಚಿಸುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಎದುರಾಗುತ್ತವೆ. ಯಾವುದೇ ಮಾತನ್ನು ಮರುಮಾಚದೆ ಎಲ್ಲರೊಡನೆ ಹಂಚಿಕೊಳ್ಳುವಿರಿ. ವಿಶ್ರಾಂತಿ ಇಲ್ಲದೆ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ನಿಮ್ಮ ಸ್ವಾತಂತ್ರಕ್ಕೆ ಅಡ್ಡಿ ಬಂದರೆ ಕೋಪಗೊಳ್ಳುವಿರಿ. ಕೆಲಸ ಕಾರ್ಯಗಳಿಗೆ ಬೇರೆಯವರಿಂದ ಪ್ರಶಂಸೆಯನ್ನು ನಿರೀಕ್ಷಿಸುವಿರಿ. ಯಾರಾದರೂ ನಿಮ್ಮನ್ನು ವಿರೋಧಿಸಿದಲ್ಲಿ ಮೌನಕ್ಕೆ ಶರಣಾಗುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ

ಮೀನ

ನಿಮ್ಮ ಪ್ರಯತ್ನಕ್ಕೆ ತಕ್ಕಂತಹ ಪ್ರತಿಫಲ ಇರುತ್ತದೆ. ಸಂಗಾತಿಯೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಗಾಳಿ ಮಾತುಗಳಿಗೆ ಕಿವಿಗೊಳದೆ ಸ್ವಂತ ನಿರ್ಧಾರಗಳಿಗೆ ಬದ್ಧರಾಗುವಿರಿ. ಉತ್ತಮ ಆದಾಯವಿದ್ದರೂ ಖರ್ಚು ವೆಚ್ಚಗಳು ಹೆಚ್ಚಾಗಿರುತ್ತವೆ. ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಾಯಿಸುವುದಿಲ್ಲ. ಬೇರೆಯವರ ಆಸೆ ಆಕಾಂಕ್ಷೆಗಳನ್ನು ಪೂರೈಸುವಲ್ಲಿ ಸಂತಸ ಕಾಣುವಿರಿ. ಆದರೆ ಹಟದ ಗುಣವಿರುತ್ತದೆ. ಸದಾಕಾಲ ನಿಮ್ಮ ಮನಸ್ಸು ಹಣದ ಗಳಿಕೆಯ ಬಗ್ಗೆ ಯೋಚಿಸುತ್ತದೆ. ಗೆಳೆಯರನ್ನು ಗೌರವದಿಂದ ಕಾಣುವಿರಿ. ವಯಸ್ಸಿನ ಮಿತಿ ಇಲ್ಲದೆ ಎಲ್ಲರೂ ನಿಮ್ಮ ಸಹವಾಸವನ್ನು ಬಯಸಿ ಬರುತ್ತಾರೆ. ಬಂಧು ಬಳಗದಿಂದ ದೂರ ಉಳಿಯಲು ಬಯಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಸಹನೆಯಿಂದ ವರ್ತಿಸುವಿರಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 8

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.