ಪ್ರೀತಿ ವಿಶ್ವಾಸದಿಂದ ವಿರೋಧಿಗಳನ್ನೂ ಗೆಲ್ಲುವಿರಿ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
3 ಜೂನ್ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (3rd June 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (3rd June 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಸೋಮವಾರ
ತಿಥಿ: ದ್ವಾದಶಿ ರಾತ್ರಿ 10.59 ರವರೆಗೂ ಇದ್ದು ನಂತರ ತ್ರಯೋದಶಿ ಆರಂಭವಾಗುತ್ತದೆ
ನಕ್ಷತ್ರ: ಅಶ್ವಿನಿ ನಕ್ಷತ್ರವು ರಾತ್ರಿ 11.13ರವರೆಗೂ ಇದ್ದು ನಂತರ ಭರಣಿ ನಕ್ಷತ್ರ ಆರಂಭವಾಗುತ್ತದೆ
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.42
ರಾಹುಕಾಲ: ಬೆಳಗ್ಗೆ 07.34 ರಿಂದ 09.10
ರಾಶಿಫಲ
ಸಿಂಹ
ಸೋದರನ ಸಹಾಯದಿಂದ ನಿಮ್ಮ ಮನದ ಒತ್ತಡಗಳು ಕಡಿಮೆ ಆಗಲಿವೆ. ಕುಟುಂಬದಲ್ಲಿನ ಹಣಕಾಸಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸುವಿರಿ. ನಿಮ್ಮ ಹಟದ ಸ್ವಭಾವ ಬೇರೆಯವರಲ್ಲಿ ಕಿರಿಕಿರಿ ಉಂಟುಮಾಡಲಿದೆ. ಆತಂಕದಿಂದ ಆರಂಭಿಸಿದ ಕೆಲಸವೊಂದನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ನಿಮ್ಮ ಮನದ ಭಾವನೆಗಳನ್ನು ಯಾರಿಗೂ ತಿಳಿಸುವುದಿಲ್ಲ. ನೀವು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದಲ್ಲಿ ಪರಿಹಾರ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಸಮಯ ವ್ಯರ್ಥ ಮಾಡದೇ ಯಾವುದಾದರೊಂದು ಕೆಲಸದಲ್ಲಿ ಮಗ್ನರಾಗುವಿರಿ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಿಮ್ಮ ವಿರೋಧಿಗಳೂ ಶರಣಾಗುತ್ತಾರೆ. ಆತ್ಮೀಯರಿಂದ ಉಡುಗೊರೆಯೊಂದು ದೊರೆಯಲಿದೆ.
ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ನೀಲಿ
ಕನ್ಯಾ
ಹತಾಶೆಯ ಸಮಯದಲ್ಲಿ ನಿಮಗೆ ನೀವೇ ಸಮಾಧಾನ ಮಾಡಿಕೊಳ್ಳುವಿರಿ. ನಿಮ್ಮಲ್ಲಿನ ಆತ್ಮ ವಿಶ್ವಾಸ ಹೊಸ ನಿರೀಕ್ಷೆಗಳನ್ನು ಸೃಷ್ಠಿಸುತ್ತದೆ. ಅನಾವಶ್ಯಕ ಟೀಕೆಗಳಿಂದ ದೂರ ಉಳಿಯುವಿರಿ. ಪರಿಶುದ್ದವಾದ ಮನಸ್ಸಿನಿಂದ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಹಣದ ನಷ್ಟ ಕಡಿಮೆ ಮಾಡುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಮನದ ಆಶೋತ್ತರಗಳು ಈಡೇರಲಿವೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರ ಇರಲಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಮಕ್ಕಳ ಜೊತೆ ಪ್ರೀತಿಯಿಂದ ದಿನ ಕಳೆಯುವಿರಿ. ಸಂತಾನ ಲಾಭವಿದೆ. ತಾಳ್ಮೆಯಿಂದ ವರ್ತಿಸಿದಷ್ಟೂ ಒಳ್ಳೆಯದು. ವಿಶೇಷ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಾಧ್ಯತೆ ಇದೆ. ನಿಮ್ಮ ನಿಸ್ವಾರ್ಥ ಸೇವೆಯಿಂದ ಸಮಾಜದ ಕೇಂದ್ರಬಿಂದುವಾಗುವಿರಿ. ನಿಮ್ಮ ಕೆಲಸಗಳಿಗೆ ತಕ್ಕ ಫಲಿತಾಂಶ ದೊರೆಯುತ್ತದೆ.
ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿ ದಾರದಲ್ಲಿ ಕತ್ತಿನಲ್ಲಿ ಧರಿಸಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ : ನೇರಳೆ
ತುಲಾ
ಪ್ರೀತಿ ವಿಶ್ವಾಸದಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಕುಂಠಿತಗೊಂಡಿದ್ದ ದೈಹಿಕ ಶಕ್ತಿ ಸುದಾರಿಸುತ್ತದೆ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಕುಟುಂಬದಲ್ಲಿ ಒಮ್ಮತದ ಭಾವನೆ ಇರುತ್ತದೆ. ಆತುರದ ತೀರ್ಮಾನದಿಂದ ತೊಂದರೆ ಎದುರಾಗಬಹುದು. ಹೊಸ ವ್ಯಾಪಾರವನ್ನು ಆರಂಭಿಸಿದಲ್ಲಿ ಯಾವುದೇ ಪ್ರಯೋಜನ ಇರುವುದಿಲ್ಲ. ಪಾಲುದಾರಿಕೆ ವ್ಯಾಪಾದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ಮಕ್ಕಳ ಆಶೋತ್ತರಗಳನ್ನು ಈಡೇರಿಸುವಿರಿ. ಸದಾಕಾಲ ಯಾವುದಾದರೊಂದು ಕೆಲಸದಲ್ಲಿ ತೊಡಗುವಿರಿ. ಸಂಗಾತಿ ಮತ್ತು ಮಕ್ಕಳಜೊತೆ ವಿಹಾರಕ್ಕೆ ತೆರಳುವಿರಿ. ಏಕಾಂಗಿತನ ನಿಮ್ಮನ್ನು ಕಾಡಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡುತ್ತದೆ. ನಿಮ್ಮ ವ್ಯಕ್ತಿತ್ವವನ್ನು ಎಲ್ಲರೂ ಮೆಚ್ಚುತ್ತಾರೆ.
ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು ಈಶಾನ್ಯ
ಅದೃಷ್ಟದ ಬಣ್ಣ: ಗುಲಾಬಿ
ವೃಶ್ಚಿಕ
ಸುಲಭವಾಗಿ ಎಲ್ಲರನ್ನೂ ನಂಬುವಿರಿ. ನಿಮ್ಮ ವಿಶ್ವಾಸವನ್ನು ಉಳಿಸಿಕೊಳ್ಳಲು ಸಂಬಂಧಿಕರು ಪ್ರಯತ್ನಿಸುತ್ತಾರೆ. ಪೂರ್ಣಗೊಳಿಸಬೇಕಾದ ಕೆಲಸ ಕಾರ್ಯಗಳು ಇಂದು ಅಧಿಕವಾಗಿರುತ್ತದೆ. ನಿಮ್ಮ ಯೋಜನೆಗಳು ನಿಜವಾಗಲಿವೆ. ಷೇರು ಮಾರುಕಟ್ಟೆಯಲ್ಲಿ ಹೂಡಿದ್ದ ಹಣಕ್ಕೆ ಉತ್ತಮ ಲಾಭ ತರುತ್ತವೆ. ದೂರದ ಸಂಬಂಧಿಯೊಬ್ಬರ ಕಾರ್ಯಕ್ರಮಕ್ಕೆ ತೆರಳುವಿರಿ. ಎಲ್ಲರ ಜೊತೆಯಲ್ಲಿ ಸಂತೋಷದಿಂದ ದಿನ ಕಳೆಯುವಿರಿ. ಅನಿರೀಕ್ಷಿತ ಸುದ್ದಿಯೊಂದು ನಿಮಗೆ ಸಂತಸವನ್ನು ನೀಡಲಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ನಿಮ್ಮಲ್ಲಿನ ಆತಂರಿಕ ಜ್ಞಾನವನ್ನು ಎಲ್ಲರಿಗೂ ತಿಳಿಯುವ ವೇದಿಕೆಯೊಂದು ಸಿದ್ದವಾಗಲಿದೆ. ಸ್ರೀಯರು ಸಮಾಜದ ಕೇಂದ್ರ ಬಿಂದುವಾಗಲಿದ್ದಾರೆ. ದಂಪತಿಗಳ ನಡುವೆ ಉತ್ತಮ ಭಾಂದವ್ಯ ರೂಪುಗೊಳ್ಳುತ್ತದೆ. ಕಣ್ಣಿನ ತೊಂದರೆ ನಿಮ್ಮನ್ನು ಕಾಡಲಿದೆ.
ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).