ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸಮಾಜದಲ್ಲಿ ವಿಶೇಷ ಸ್ಥಾನಮಾನ ದೊರೆಯಲಿದೆ, ವಾಹನ ಚಾಲನೆ ವೇಳೆ ಮುನ್ನೆಚರಿಕೆ ಅಗತ್ಯ; ಜೂ.19ರ ದಿನ ಭವಿಷ್ಯ

ಸಮಾಜದಲ್ಲಿ ವಿಶೇಷ ಸ್ಥಾನಮಾನ ದೊರೆಯಲಿದೆ, ವಾಹನ ಚಾಲನೆ ವೇಳೆ ಮುನ್ನೆಚರಿಕೆ ಅಗತ್ಯ; ಜೂ.19ರ ದಿನ ಭವಿಷ್ಯ

19 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (19th June 2024 Daily Horoscope).

ಸಮಾಜದಲ್ಲಿ ವಿಶೇಷ ಸ್ಥಾನಮಾನ ದೊರೆಯಲಿದೆ, ವಾಹನ ಚಾಲನೆ ವೇಳೆ ಮುನ್ನೆಚರಿಕೆ ಅಗತ್ಯ; ಜೂ.19ರ ದಿನ ಭವಿಷ್ಯ
ಸಮಾಜದಲ್ಲಿ ವಿಶೇಷ ಸ್ಥಾನಮಾನ ದೊರೆಯಲಿದೆ, ವಾಹನ ಚಾಲನೆ ವೇಳೆ ಮುನ್ನೆಚರಿಕೆ ಅಗತ್ಯ; ಜೂ.19ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (19th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ತ್ರಯೋದಶಿ ತಿಥಿ ದಿನಪೂರ್ತಿ ಇರುತ್ತದೆ.

ನಕ್ಷತ್ರ: ವಿಶಾಖ ನಕ್ಷತ್ರವು 04.08 ರವರೆಗೂ ಇದ್ದು ನಂತರ ಅನೂರಾಧ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.47

ರಾಹುಕಾಲ: ಮಧ್ಯಾಹ್ನ 12.24 ರಿಂದ 2.01

ರಾಶಿಫಲ

ಸಿಂಹ

ಕಷ್ಟಪಟ್ಟು ಕೂಡಿಟ್ಟ ಹಣವನ್ನು ಬೇರೆಯವರಿಗಾಗಿ ಖರ್ಚು ಮಾಡುವಿರಿ. ಸಂಗಾತಿ ಮತ್ತು ಮಕ್ಕಳ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ನಿಮ್ಮ ಬಗ್ಗೆ ನಿಮಗೆ ಹೆಮ್ಮೆ ಇರುತ್ತದೆ. ಕುಟುಂಬದ ವಿಚಾರಗಳಲ್ಲಿ ಅಡೆತಡೆ ಕಂಡು ಬರುತ್ತದೆ. ಕಷ್ಟದ ಪರಿಸ್ಥಿತಿಯಲ್ಲೂ ಬುದ್ದಿವಂತಿಕೆಯಿಂದ ಪಾರಾಗುವಿರಿ. ಸಾಮಾಜಿಕ ರಂಗದಲ್ಲಿ ಗೌರವಯುತ ಸ್ಥಾನ ದೊರೆಯಲಿದೆ. ನಾನೇ ದೊಡ್ಡವನೆಂಬ ಭಾವನೆ ಇರುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಉಷ್ಣದ ತೊಂದರೆ ಇರುತ್ತದೆ. ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುವಿರಿ. ಧಾರ್ಮಿಕ ಕಾರ್ಯಗಳಿಗಾಗಿ ಹಣ ಖರ್ಚಾಗುತ್ತದೆ. ನಿಮಗೆ ಅರಿವಿಲ್ಲದಂತೆ ನಡೆವ ಆಚಾತುರ್ಯದಿಂದ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ :9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಬಿಳಿ ಬಣ್ಣ

ಕನ್ಯಾ

ನಿಮಗೆ ಉತ್ತಮ ಆರೋಗ್ಯವಿರುತ್ತದೆ. ದಂಪತಿ ನಡುವೆ ಅನಾವಶ್ಯಕ ಮನಸ್ತಾಪ ಉಂಟಾಗುತ್ತದೆ. ಆಲಸ್ಯದಿಂದ ಹೊರ ಬಂದು ಕೆಲಸ ನಿರ್ವಹಿಸುವುದು ಉತ್ತಮ. ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಪ್ರಯತ್ನಿಸಿ. ಜೀವನದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಕೋಪ ಕಡಿಮೆ ಮಾಡಿಕೊಂಡು ಪ್ರೀತಿ ವಿಶ್ವಾಸದಿಂದ ಮಾತನಾಡಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ಯಾವುದೇ ಕೆಲಸವನ್ನಾದರೂ ಬಹಳ ಶ್ರದ್ಧೆಯಿಂದ ಮಾಡುವಿರಿ. ಮಕ್ಕಳ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರಲಿವೆ. ಸ್ವಂತ ಮನೆ ಯೋಜನೆ ರೂಪಿಸುವಿರಿ. ವಿಶ್ರಾಂತಿ ಇಲ್ಲದ ದುಡಿಮೆ ಇರುತ್ತದೆ. ಕಮಿಷನ್ ಆಧಾರಿತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ.

 ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ. ಅದೃಷ್ಟದ ಸಂಖ್ಯೆ :12

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ : ಬೂದು

ತುಲಾ

ಬುದ್ಧಿ ಮಾತನ್ನು ಕೇಳುವುದಿಲ್ಲ. ನಿಮ್ಮ ಮನದ ಇಚ್ಛೆಯಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಮನಸ್ಸಿಗೆ ಶಾಂತಿ ಇರುವುದಿಲ್ಲ. ಚಿಕ್ಕ ಪುಟ್ಟ ವಿಚಾರಗಳಿಗೂ ಯೋಚನೆ ಮಾಡುವಿರಿ. ಹಣದ ಕೊರತೆ ಕಂಡುಬರುವುದಿಲ್ಲ. ಸೋದರ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದ ಉಂಟಾಗಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ಕಷ್ಟಗಳಿಗೆ ಹೆದರುವುದಿಲ್ಲ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವುದಿಲ್ಲ. ಇದರಿಂದ ತೊಂದರೆ ಆಗಬಹುದು ಎಚ್ಚರಿಕೆ ಇರಲಿ. ಸಮಾಜದಲ್ಲಿ ವಿಶೇಷ ಸ್ಥಾನಮಾನ ದೊರೆಯಲಿದೆ. ಮಕ್ಕಳ ವಿಚಾರದಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು ಪೂರ್ವ

ಅದೃಷ್ಟದ ಬಣ್ಣ: ಕಂದು

ವೃಶ್ಚಿಕ

ಹಣದ ತೊಂದರೆ ಕಂಡು ಬರುವುದಿಲ್ಲ. ಬುದ್ಧಿವಂತಿಕೆಯಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಸೋದರರ ಜೊತೆ ಉತ್ತಮ ಬಾಂಧವ್ಯ ಉಂಟಾಗುತ್ತದೆ. ಧೈರ್ಯದಿಂದ ಅಪಾಯಕಾರಿ ಕೆಲಸಗಳಿಗೆ ಕೈ ಹಾಕುವಿರಿ. ಸ್ಟಾಕ್ ಮತ್ತು ಷೇರ್‌ಗಳಲ್ಲಿ ಭವಿಷ್ಯದ ಜೀವನಕ್ಕಾಗಿ ಹಣ ಹೂಡಿಕೆ ಮಾಡುವಿರಿ. ಹೊಸ ವಾಹನ ಕೊಳ್ಳುವಿರಿ. ಸುಖ ಸಂತೃಪ್ತಿಯ ಜೀವನ ನಡೆಸುವಿರಿ. ತಂದೆ ತಾಯಿಯ ಪ್ರೀತಿ ಮನಸ್ಸಿಗೆ ನೆಮ್ಮದಿ ಮತ್ತು ಸಂತೋಷ ನೀಡುತ್ತದೆ. ಮಕ್ಕಳ ಜೊತೆಗಿನ ಸಂಬಂಧವು ಸಾಮಾನ್ಯ ಮಟ್ಟದಲ್ಲಿರುತ್ತದೆ. ಇದಕ್ಕೆ ಕಾರಣ ನಿಮ್ಮ ಸಿಡುಕುತನ. ಸರ್ಕಾರಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.