ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಿವಿಧ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡುವಿರಿ, ಪಾಲುದಾರಿಕೆ ವ್ಯಾಪಾರದಲ್ಲಿ ಲಾಭ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ವಿವಿಧ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡುವಿರಿ, ಪಾಲುದಾರಿಕೆ ವ್ಯಾಪಾರದಲ್ಲಿ ಲಾಭ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

3 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (3rd June 2024 Daily Horoscope).

 ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(3rd June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ದ್ವಾದಶಿ ರಾತ್ರಿ 10.59 ರವರೆಗೂ ಇದ್ದು ನಂತರ ತ್ರಯೋದಶಿ ಆರಂಭವಾಗುತ್ತದೆ

ನಕ್ಷತ್ರ: ಅಶ್ವಿನಿ ನಕ್ಷತ್ರವು ರಾತ್ರಿ 11.13ರವರೆಗೂ ಇದ್ದು ನಂತರ ಭರಣಿ ನಕ್ಷತ್ರ ಆರಂಭವಾಗುತ್ತದೆ

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.42

ರಾಹುಕಾಲ: ಬೆಳಗ್ಗೆ 07.34 ರಿಂದ 09.10

ರಾಶಿಫಲ

ಧನಸ್ಸು

ಉತ್ತಮ ಆರೋಗ್ಯ ಇರಲಿದೆ. ಹಣಕಾಸಿನ ವಿಚಾರದಲ್ಲಿ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಅಧ್ಯಯನ ಮಾತ್ರವಲ್ಲದೆ ಕ್ರೀಡಾಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ನಕಾರಾತ್ಮಕ ಭಾವನೆಗಳನ್ನು ಬದಿಗೊತ್ತಿ ಸದಾಕಾಲ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿರುವಿರಿ. ಸಂಬಂಧಿಕರೊಂದಿಗೆ ಆರಂಭಿಸಿರುವ ಪಾಲುದಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭವಿದೆ. ಜನ ಸಾಮಾನ್ಯರ ಜೊತೆ ಆತ್ಮೀಯತೆಯಿಂದ ಬೆರೆಯುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕದೆ ಯೋಚಿಸಿ ತೀರ್ಮಾನ ತೆಗೆದುಕೊಳ್ಳೂವಿರಿ. ಕುಟುಂಬದ ಒಗ್ಗಟ್ಟಿನ ಫಲವಾಗಿ ಆರ್ಥಿಕ ಪ್ರಗತಿ ಉಂಟಾಗಲಿದೆ. ಸ್ವಂತ ಸಮಸ್ಯೆಗಳನ್ನು ಬದಿಗೊತ್ತಿ ಬೇರೆಯವರಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಸಂತಸ ಹಂಚಿಕೊಳ್ಳುವಿರಿ.

ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ಮಕರ

ನಿಮ್ಮ ಮನಸ್ಸಿನ ಚಿಂತೆ ದೂರವಾಗಲಿದೆ. ಉದ್ಯೋಗದಲ್ಲಿನ ಕೆಲವು ಘಟನೆಗಳಿಂದ ಬೇಸರಗೊಳ್ಳುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಸಾಧಾರಣವಾಗಿರುತ್ತದೆ. ಯೋಗ ಪ್ರಾಣಾಯಾಮದಲ್ಲಿ ನಂಬಿಕೆ ಇರುತ್ತದೆ. ಧಾರ್ಮಿಕ ಆಚರಣೆಗಾಗಿ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ವಿಫರಾಗುವಿರಿ. ಸಂಬಂಧಿಯೊಬ್ಬರನ್ನು ಭೇಟಿ ಮಾಡಲು ದೂರದ ಊರಿಗೆ ತೆರಳುವಿರಿ. ಆತುರದ ನಿರ್ಣಯ ತೆಗೆದುಕೊಳ್ಳದಿರಿ. ಮಕ್ಕಳ ದೈನಂದಿನ ಚಟುವಟಿಕೆಗಳು ನಿಮ್ಮನ್ನು ನಿರಾಸೆಗೊಳಿಸುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಇರಲಿದೆ. ಪಶು ಸಂಗೋಪನೆಯಲ್ಲಿ ಆಸಕ್ತಿ ತೋರುವಿರಿ. ದುಬಾರಿ ವಸ್ತುಗಳನ್ನು ಕೊಳ್ಳುವಿರಿ. ಕುಟುಂಬದ ಹಿರಿಯರ ಸಲಹೆಯನ್ನು ಒಪ್ಪಿಕೊಳ್ಳುವಿರಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಂದು

ಕುಂಭ

ನಿಮ್ಮ ಮನೋಭಿಲಾಷೆಗಳು ಈಡೇರಲಿವೆ. ಮನದ ಆಸೆಗಳನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ಸ್ನೇಹಪೂರ್ವಕ ವರ್ತನೆ ಸ್ನೇಹ ಸಂಬಂಧವನ್ನು ಬಲಪಡಿಸುತ್ತದೆ. ಸುತ್ತ ಮುತ್ತಲಿನ ಪರಿಸರವನ್ನು ಕಾಪಾಡಿ ಜನ ಮನ್ನಣೆ ಗಳಿಸುವಿರಿ. ಸಂಗಾತಿಯ ಮನದ ಗೊಂದಲವನ್ನು ಸುಲಭವಾಗಿ ನಿವಾರಿಸುವಿರಿ. ನಿರಾಸೆಯಾದಾಗ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಕುಟುಂಬದ ಹಿರಿಯರ ಸಲಹೆಯಿಂದ ಹಣ ಉಳಿಸಲು ಸಾಧ್ಯವಾಗಲಿದೆ. ಹೆಣ್ಣು ಮಕ್ಕಳ ಅಗತ್ಯತೆಗಳನ್ನು ಪೂರೈಸಲು ವಿಫಲರಾಗುವಿರಿ. ಮಕ್ಕಳು ಮೊಮ್ಮಕ್ಕಳ ಆಗಮನದಿಂದ ಸಂತೋಷ ಹೆಚ್ಚಾಗಲಿದೆ. ಜೀವನದಲ್ಲಿ ಮಹತ್ತರ ಬದಲಾವಣೆ ಕಾಣಲಿದೆ. ಉದ್ಯೋಗದಲ್ಲಿ ಅನಾವಶ್ಯಕ ಭಿನ್ನಾಭಿಪ್ರಾಯ ಉದ್ಭವಿಸುತ್ತವೆ.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ತಿಳಿ ಹಸಿರು

ಮೀನ

ಅರ್ಧಕ್ಕೆ ನಿಂತ ಕೆಲಸಗಳನ್ನು ಪೂರ್ಣಗೊಳಿಸುವಿರಿ. ನಿಮ್ಮ ಸರಿಯಾದ ಆಲೋಚನೆಗಳು ಯಶಸ್ಸನ್ನು ನೀಡುತ್ತದೆ. ಸೋಲಿಗೆ ಸೊರಗದೆ ಸಮಾಧಾನದಿಂದ ನಡೆದುಕೊಳ್ಳುವಿರಿ. ಜನಸಾಮಾನ್ಯರು ನೆನಪಿಡಬೇಕಾದ ಕೆಲಸವೊಂದನ್ನು ಮಾಡುವಿರಿ. ಸ್ವಂತ ಉದ್ಯಮ ಇದ್ದಲ್ಲಿ ಮಧ್ಯಮಗತಿಯ ಲಾಭ ದೊರೆಯುತ್ತದೆ. ಯಾವುದೇ ವಿಚಾರವಾದರೂ ಮೊದಲು ಯೋಚಿಸಿ ನಂತರ ಕಾರ್ಯರೂಪಕ್ಕೆ ತರುವಿರಿ. ಭವಿಷ್ಯದ ಉತ್ತಮ ಜೀವನಕ್ಕಾಗಿ ಹಲವು ಯೋಜನೆಯಲ್ಲಿ ಹಣದ ಹೂಡಿಕೆ ಮಾಡುವಿರಿ. ತೆಗೆದುಕೊಂಡ ತೀರ್ಮಾನವನ್ನು ಅನಗತ್ಯವಾಗಿ ಬದಲಾಯಿಸುವಿರಿ. ಹಣಕಾಸಿನ ವ್ಯವಹಾರವನ್ನು ಗೌಪ್ಯವಾಗಿ ಇಡುವಿರಿ. ದಾಂಪತ್ಯದಲ್ಲಿ ಪ್ರೀತಿ ವಿಶ್ವಾಸ ಇರುತ್ತದೆ. ಗುರು ಹಿರಿಯರ ಆಶೀರ್ವಾದ ನಿಮಗೆ ದೊರೆಯುತ್ತದೆ. ವಿಶ್ರಾಂತಿ ಇಲ್ಲದೆ ದಿನವಿಡೀ ದುಡಿಯಬೇಕಾಗುತ್ತದೆ.

ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).