ಕನ್ನಡ ಸುದ್ದಿ  /  Astrology  /  Horoscope Today Astrology Prediction 4 March 2024 Leo Virgo Libra Scorpio Daily Horoscope Sts

Horoscope Today: ಮಕ್ಕಳಿಂದ ಕುಟುಂಬದಲ್ಲಿ ಸಂತಸ, ಕೂಡಿಟ್ಟ ಹಣ ಖರ್ಚು; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 4, ಭಾನುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4 March 2024 Daily Horoscope).

ಮಾರ್ಚ್​ 4ರ ದಿನಭವಿಷ್ಯ
ಮಾರ್ಚ್​ 4ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಸೋಮವಾರ

ತಿಥಿ : ನವಮಿ ರಾ.02.30 ರವರೆಗು ಇದ್ದು ಆನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ : ಜ್ಯೇಷ್ಠ ನಕ್ಷತ್ರವು ಬೆ.11.22 ರವರೆಗೆ ಇರುತ್ತದೆ. ಆನಂತರ ಮೂಲ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.34

ಸೂರ್ಯಾಸ್ತ: ಸ.06.27

ರಾಹುಕಾಲ : ಬೆ.07.30 ರಿಂದ ಬೆ.09.00

ರಾಶಿ ಫಲಗಳು

ಸಿಂಹ

ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಕುಟುಂಬದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಕಾಣುವುದಿಲ್ಲ. ಸಣ್ಣಪುಟ್ಟ ಕೆಲಸ ಕಾರ್ಯಗಳಿಗೂ ಹೆಚ್ಚಿನ ಪ್ರಯತ್ನದ ಅವಶ್ಯಕತೆ. ಎದುರಾಗುವ ಸೋಲನ್ನು ಒಪ್ಪದೆ, ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುತ್ತದೆ. ಉದ್ಯೋಗದಲ್ಲಿ ಎದುರಾದ ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಶಾಂತಿ ಸಂಯಮದಿಂದ ವರ್ತಿಸುವುದು ಬಲುಮುಖ್ಯ. ಮಕ್ಕಳ ಜೊತೆಯಲ್ಲಿ ಒಳ್ಳೆಯ ಬಾಂಧವ್ಯ ಉಂಟಾಗುತ್ತದೆ. ಮಕ್ಕಳಿಂದಾಗಿ ಕುಟುಂಬದಲ್ಲಿ ಸಂತಸದ ಸಮಯಗಳು ಮರುಕಳಿಸುತ್ತವೆ. ಸಂಗಾತಿ ಮತ್ತು ಮಕ್ಕಳ ಜೊತೆ ಸಂತಸದ ಘಳಿಗೆಯನ್ನು ಹಂಚಿಕೊಳ್ಳುವಿರಿ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಕನ್ಯಾ

ಮಾನಸಿಕ ಶಕ್ತಿ ನಿಮ್ಮ ಧೈರ್ಯವನ್ನು ಇಮ್ಮಡಿಗೊಳಿಸುತ್ತದೆ. ಕುಟುಂಬದ ಕೆಲಸಕಾರ್ಯಗಳಲ್ಲಿ ತೊಂದರೆ ಇದ್ದರು, ಪರಸ್ಪರ ಕೊಂದಾಣಿಕೆ ಸದಾ ಉಳಿಯುತ್ತದೆ. ಮಾಡುವ ಪ್ರತಿ ಕೆಲಸ ಕಾರ್ಯದಲ್ಲಿಯೂ ತಂದೆಯ ಸಹಕಾರವಿರುತ್ತದೆ. ಉದ್ಯೋಗದಲ್ಲಿ ತಡವಾದರೂ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯಕ್ಕೆ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ಮನಸ್ಸು ಬದಲಾಯಿಸದೆ ಏಕಾಗ್ರತೆಯಿಂದ ಕಲಿಕೆಯಲ್ಲಿ ತೊಡಗಬೇಕಾಗುತ್ತದೆ. ಆರ್ಥಿಕ ಪ್ರಗತಿ ಕಂಡು ಬರುತ್ತದೆ. ಸಂಗಾತಿಯೊಂದಿಗೆ ಪ್ರೀತಿಯಿಂದ ಬಾಳುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಇರುವ ಮನೆಯನ್ನು ನವೀಕರಿಸಲು ಹೆಚ್ಚಿನ ಹಣ ಬೇಕಾಗಬಹುದು. ಕೂಡಿಟ್ಟ ಹಣವನ್ನು ಖರ್ಚು ಮಾಡುವಿರಿ

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ

ತುಲಾ

ಬಹುದಿನದಿಂದ ಕಾಡುತ್ತಿದ್ದ ಆರೋಗ್ಯದ ಸಮಸ್ಯೆಯು ಪರಿಹಾರಗೊಳ್ಳುತ್ತದೆ. ಸದಾ ಹಸನ್ಮುಖಿಯಾಗಿರುವ ನೀವು ಕುಟುಂಬದಲ್ಲಿ ಸಂತಸ ನೆಲೆಸಲು ಕಾರಣರಾಗುವಿರಿ. ನಿಸ್ವಾರ್ಥ ಸೇವಾ ಪ್ರವೃತ್ತಿಯಿಂದ ಉದ್ಯೋಗದಲ್ಲಿ ಎಲ್ಲರ ವಿಶ್ವಾಸವನ್ನು ಗಳಿಸುವಿರಿ. ಅವಕಾಶ ದೊರೆತರೂ ಉದ್ಯೋಗ ಬದಲಿಸಲು ಸಾಧ್ಯವಾಗುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ. ದುಡುಕಿನಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ತಮ್ಮ ಪಾಲಿನ ಕರ್ತವ್ಯ ನಿರ್ವಹಿಸುತ್ತಾರೆ. ಕಲಿಕೆ ಮುಗಿಯುವ ಮುನ್ನವೇ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ. ಸಂಗಾತಿಯೊಂದಿಗೆ ಹಣದ ವಿಷಯದಲ್ಲಿ ವಿವಾದ ಇರಬಹುದು. ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಗೌರವಯುತ ಸ್ಥಾನ ಲಭಿಸುತ್ತದೆ. ಸಂಗೀತ ಸಾಹಿತ್ಯದಲ್ಲಿ ಆಸಕ್ತಿ ಉಂಟಾಗುತ್ತದೆ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ವೃಶ್ಚಿಕ

ಮುಗಿಯದ ಕೆಲಸ ಕಾರ್ಯಗಳ ನಡುವೆಯೂ ವಿಶ್ರಾಂತಿ ತೆಗೆದುಕೊಳ್ಳುವಿರಿ. ಕುಟುಂಬದಲ್ಲಿ ಸುಖ ಶಾಂತಿ ನೆಲೆಸಲು ಕಾರಣರಾಗುವಿರಿ. ಹಿರಿಯರನ್ನು ಗೌರವಿಸುವ ಕಾರಣ ಎಲ್ಲರ ಸಹಕಾರ ದೊರೆಯುತ್ತದೆ. ಉದ್ಯೋಗದಲ್ಲಿ ಬದಲಾವಣೆಗಳು ಋಣಾತ್ಮಕ ಪ್ರತಿಕ್ರಿಯೆಗೆ ಕಾರಣವಾಗುತ್ತದೆ. ಯೋಚಿಸದೆ ಯಾವುದೇ ಯೋಜನೆಗಳನ್ನು ಒಪ್ಪದಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹಾಕುವ ಬಂಡವಾಳಕ್ಕೆ ಮೋಸವಿರುವುದಿಲ್ಲ. ವಿದ್ಯಾರ್ಥಿಗಳು ಹಠದಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಯಾರ ಮಾತನ್ನು ಸುಲಭವಾಗಿ ನಂಬುವುದಿಲ್ಲ. ಸಣ್ಣ ಮಕ್ಕಳೊಂದಿಗೆ ಬಿಡುವಿನ ವೇಳೆಯನ್ನು ಕಳೆಯುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಸಾಲವಾಗಿ ಹಣವನ್ನು ಕೊಡುವುದು ಮತ್ತು ತೆಗೆದುಕೊಳ್ಳುವುದನ್ನು ಮುಂದೂಡುವುದು ಒಳ್ಳೆಯದು..

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

----------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).