ಕನ್ನಡ ಸುದ್ದಿ  /  Astrology  /  Horoscope Today Astrology Prediction 4 March 2024 Sagittarius Capricorn Aquarius Pisces Daily Horoscope Sts

Horoscope Today: ಶಾಂತಿ ಸಹನೆಯಿಂದ ಶುಭಫಲ ಸಿಗಲಿದೆ, ಸಂಗಾತಿ ಜೊತೆ ಮನಸ್ತಾಪ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

ಮಾರ್ಚ್​ 4, ಸೋಮವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4 March 2024 Daily Horoscope).

ಮಾರ್ಚ್​ 4ರ ದಿನಭವಿಷ್ಯ
ಮಾರ್ಚ್​ 4ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಸೋಮವಾರ

ತಿಥಿ : ನವಮಿ ರಾ.02.30 ರವರೆಗು ಇದ್ದು ಆನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ : ಜ್ಯೇಷ್ಠ ನಕ್ಷತ್ರವು ಬೆ.11.22 ರವರೆಗೆ ಇರುತ್ತದೆ. ಆನಂತರ ಮೂಲ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.34

ಸೂರ್ಯಾಸ್ತ: ಸ.06.27

ht ಬೆ.07.30 ರಿಂದ ಬೆ.09.00

ರಾಶಿ ಫಲಗಳು

ಧನಸ್ಸು

ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ಕುಟುಂಬದಲ್ಲಿ ಭಯದ ವಾತಾವರಣ ತಲೆದೂರುತ್ತದೆ. ಉದ್ಯೋಗದಲ್ಲಿ ಕೆಲಸ ಕಾರ್ಯಗಳಲ್ಲಿ ಅಡ್ಡಿ ಆತಂಕಗಳು ಎದುರಾಗಲಿವೆ. ಅನಿವಾರ್ಯವಾಗಿ ಉದ್ಯೋಗವನ್ನು ಬದಲಿಸುವ ಸೂಚನೆಗಳಿವೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರಮಾನವಿರುತ್ತದೆ. ವಿದ್ಯಾರ್ಥಿಗಳು ಮನಸ್ಸಿಟ್ಟು ಕಲಿಕೆಯಲ್ಲಿ ಮುಂದುವರೆಯಬೇಕು. ಅಜೀರ್ಣತೆಯ ತೊಂದರೆ ನಿಮ್ಮನ್ನು ಕಾಡಬಹುದು. ಭೂ ವ್ಯವಹಾರದಲ್ಲಿ ವಿವಾದವಿದೆ. ಆತ್ಮೀಯರ ಬೆಂಬಲವಿದ್ದರೂ ವ್ಯವಹಾರಿಸುವ ವೇಳೆ ಎಚ್ಚರಿಕೆ ಇರಲಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಸಂಗಾತಿಯ ಬಗ್ಗೆ ಇರುವ ತಪ್ಪು ಅಭಿಪ್ರಾಯವು ಮರೆಯಾಗುತ್ತದೆ. ಶಿಸ್ತು ಮತ್ತು ಸಂಯಮದ ಜೀವನ ನಡೆಸುವಿರಿ. ರಕ್ತ ಸಂಬಂಧಿಕರೊಬ್ಬರು ಭೂಮಿಗೆ ಸಂಬಂಧಪಟ್ಟಂತೆ ತೊಂದರೆ ನೀಡಬಹುದು. ಮಕ್ಕಳ ಜೊತೆಯಲ್ಲಿ ಸಂತೋಷದಿಂದ ಬಾಳುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಕರ

ಕುಟುಂಬದ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಬಹುದು. ಯಾವುದಾದರೂ ಒಂದು ಯೋಚನೆಯು ಸದಾ ನಿಮ್ಮನ್ನು ಕಾಡುತ್ತದೆ. ಹಿರಿಯರ ಸಲಹೆಯನ್ನು ಪಾಲಿಸಿದರೆ ಯಾವುದೇ ತೊಂದರೆ ಎದುರಾಗುವುದಿಲ್ಲ. ಉದ್ಯೋಗದಲ್ಲಿ ನಿಧಾನಗತಿಯಲ್ಲಿ ಸಕಾರಾತ್ಮಕ ಬದಲಾವಣೆಗಳು ಉಂಟಾಗಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯಕ್ಕೆ ಕೊರತೆ ಇರುವುದಿಲ್ಲ. ಬುದ್ಧಿವಂತಿಕೆಯ ಮಾತುಕತೆಯಿಂದ ಎದುರಾಗುವ ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಹಿಡಿಯುವಿರಿ. ವಿದ್ಯಾರ್ಥಿಗಳು ನಿಧಾನಗತಿಯಲ್ಲಿ ನಿರೀಕ್ಷಿತ ಮಟ್ಟವನ್ನು ತಲುಪಲಿದ್ದಾರೆ. ಆತ್ಮೀಯರೊಂದಿಗೆ ಅನಾವಶ್ಯಕ ವಾದ ವಿವಾದಗಳು ಎದುರಾಗಲಿವೆ. ಸಂಗಾತಿಯ ಸಹಯೋಗದಲ್ಲಿ ಪಾಲುಗಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಸ್ವಂತ ಬಳಕೆಗಾಗಿ ಹೊಸ ವ್ಯಾಪಾರವನ್ನು ಆರಂಭಿಸುವಿರಿ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕುಂಭ

ನಿಮ್ಮಲ್ಲಿರುವ ಹಾಸ್ಯದ ಮನೋಭಾವನೆ ಕುಟುಂಬದ ಕಷ್ಟ ನಷ್ಟಗಳನ್ನು ಮರೆಸುತ್ತದೆ. ಶಾಂತಿ ಸಹನೆಯ ಗುಣ ಶುಭ ಫಲಗಳನ್ನು ನೀಡಲಿದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಂಡುಬರುವುದಿಲ್ಲ. ಆದರೆ ಕರ್ತವ್ಯ ಪಾಲನೆಯಲ್ಲಿ ಯಶಸ್ಸು ಗಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ವಿದ್ಯಾರ್ಥಿಗಳು ಸಹಪಾಠಿಗಳಿಂದ ದೂರವಿದ್ದು ವಿದ್ಯಾಭ್ಯಾಸದಲ್ಲಿ ಮುಂದುವರೆಯುತ್ತಾರೆ. ವಂಶದ ಹಿರಿಯರ ಒಡವೆ ವಸ್ತ್ರಗಳನ್ನು ಉಳಿಸಿಕೊಳ್ಳಲು ಹೆಚ್ಚಿನ ಹಣ ಖರ್ಚಾಗಬಹುದು. ಕುಟುಂಬದ ಸದಸ್ಯರ ಜೊತೆಯಲ್ಲಿ ನೋವನ್ನು ಮರೆಯಲು ಒಳಾಂಗಣ ಆಟಗಳಲ್ಲಿ ತೊಡಗುವಿರಿ. ಸ್ನೇಹಿತರೊಂದಿಗೆ ಪಾರುಗಾರಿಕೆಯ ವ್ಯಾಪಾರ ಒಂದನ್ನು ಆರಂಭಿಸುವಿರಿ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮೀನ

ಯಾವುದೇ ವಿಚಾರವಾದರೂ ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳದೆ ಆರಂಭಿಸುವುದಿಲ್ಲ. ಕುಟುಂಬದಲ್ಲಿ ನೆಮ್ಮದಿಗೆ ಕೊರತೆ ಇರದು. ಉದ್ಯೋಗ ಕ್ಷೇತ್ರದಲ್ಲಿ ಎಲ್ಲರ ವಿಶ್ವಾಸವನ್ನು ಸಂಪಾದಿಸುವಿರಿ. ಅತಿ ವಿಳಂಬವಾಗಿ ಕೆಲಸ ಆರಂಭಿಸಿದರೆ ಪೂರ್ಣ ಫಲಿತಾಂಶ ದೊರೆಯುವುದಿಲ್ಲ . ಸಂಬಂಧಿಕರೊಬ್ಬರ ಹಣಕಾಸಿನ ವ್ಯವಹಾರದಿಂದ ಒತ್ತಡ ಎದುರಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ನಷ್ಟಗಳು ಸಮ ಪ್ರಮಾಣದಲ್ಲಿ ಇರಲಿವೆ. ವಿದ್ಯಾರ್ಥಿಗಳು ಒತ್ತಡದ ನಡುವೆಯೂ ಸಾಧನೆ ಮಾಡಬಲ್ಲರು. ಸಂಗಾತಿಗೆ ನಿಮ್ಮ ಬಗ್ಗೆ ಅನಾವಶ್ಯಕ ಮನಸ್ತಾಪವಿರುತ್ತದೆ. ಕೆಲಸ ಕಾರ್ಯಗಳಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಒಳ್ಳೆಯ ಅಭ್ಯಾಸಗಳನ್ನು ರೂಡಿಸಿಕೊಳ್ಳುವಿರಿ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹಸಿರು ಬಣ್ಣ

----------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).