Horoscope Today: ವೈವಾಹಿಕ ಜೀವನ ಸುಖಮಯವಾಗಿರುತ್ತದೆ, ಆತ್ಮೀಯ ಮಿತ್ರರಿಗೆ ದುಬಾರಿ ಕಾಣಿಕೆ ನೀಡಲಿದ್ದೀರಿ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
4 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4th April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಗುರುವಾರ
ತಿಥಿ : ದಶಮಿ 11.50 ರವರೆಗೂ ಇದ್ದು ನಂತರ ಏಕಾದಶಿ ಆರಂಭವಾಗಲಿದೆ.
ನಕ್ಷತ್ರ : ಶ್ರವಣ ನಕ್ಷತ್ರವು .04.18 ರವರೆಗೂ ಇದ್ದು ನಂತರ ಧನಿಷ್ಠ ನಕ್ಷತ್ರ ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 06.15
ಸೂರ್ಯಾಸ್ತ: ಸಂಜೆ 06.31
ರಾಹುಕಾಲ: 01.30 ರಿಂದ 03.00
ರಾಶಿ ಫಲ
ಮೇಷ
ಸಭೆ ಸಮಾರಂಭಗಳಲ್ಲಿ ಅಥಿತಿಗಳಾಗಿ ಭಾಗವಹಿಸುವಿರಿ. ಬುದ್ಧಿವಂತಿಕೆಯಿಂದ ಅವಕಾಶವನ್ನು ನಿಮ್ಮದಾಗಿಸಿಕೊಳ್ಳುವಿರಿ. ನೀವು ಆಡುವ ಪ್ರತಿ ಮಾತಿಗೂ ಮನ್ನಣೆ ದೊರೆಯುತ್ತದೆ. ನಿಮ್ಮ ಬಾಳ ಸಂಗಾತಿಯ ಜೊತೆಗಿನ ಸಮಸ್ಯೆಯೊಂದು ಕೊನೆಗೊಳ್ಳಲಿದೆ. ಆತ್ಮೀಯರೊಬ್ಬರು ಧನಸಹಾಯ ಮಾಡುತ್ತಾರೆ. ನಿಮ್ಮ ಹಣ-ಕಾಸಿನ ಕೊರತೆಯನ್ನು ಕಡಿಮೆ ಆಗಲಿದೆ. ವಾಣಿಜ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರು ಸಿಹಿ ಸುದ್ಧಿಯನ್ನು ನಿರೀಕ್ಷಿಸಬಹುದು. ಮಹಿಳಾ ಉದ್ಯೋಗಿಗಳಿಗೆ ಶುಭದಿನ. ಅಜೀರ್ಣದ ತೊಂದರೆ ನಿಮ್ಮನ್ನು ಕಾಡಬಹುದು. ಕಲಾವಿದರಿಗೆ ಪ್ರಶಸ್ತಿ-ಸಮ್ಮಾನ ದೊರೆಯುತ್ತವೆ. ಅಧಿಕಾರ ವಲಯದಲ್ಲಿ ಇರುವವರು ಹೆಚ್ಚಿನ ಜವಾಬ್ದಾರಿಗೆ ಸಿದ್ದರಾಗಬೇಕು.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಹಳದಿ
ವೃಷಭ
ನಿಮ್ಮ ತಾಯಿಯವರ ಆರೋಗ್ಯದಲ್ಲಿ ಕೊಂಚ ಏರುಪೇರು ಇರುತ್ತದೆ. ಆದಾಯದ ಬಗ್ಗೆ ಹೊಸ ಯೋಜನೆಗಳನ್ನು ರೂಪಿಸಲು ಪ್ರಯತ್ನಿಸುವಿರಿ. ಆಸ್ತಿಯ ತಗಾದೆ ಇದ್ದಲ್ಲಿ ಪರಿಹಾರ ದೊರೆಯುತ್ತದೆ. ಸ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ಲಾಭವಿದೆ. ಮಕ್ಕಳ ವಿಧ್ಯಾಭ್ಯಾಸಕ್ಕೆ ಸಂಬಂಧಿಸಿದ ಅಡ್ಡಿಯೊಂದು ದೂರವಾಗಲಿದೆ. ತೋಟಗಾರಿಕೆಯಲ್ಲಿ ತೊಡಗಿದವರಿಗೆ ಮಧ್ಯಮ ಮಟ್ಟದ ಲಾಭ ದೊರೆಯಲಿದೆ. ಹಿರಿಯರ ಹೆಸರಿನಲ್ಲಿನ ಮನೆಯೊಂದನ್ನು ನವೀಕರಿಸುವ ಕೆಲಸ ಆರಂಭಿಸುವಿರಿ. ಅತಿಯಾದ ಕೆಲಸದ ಕಾರಣ ದಿನಾಂತ್ಯದಲ್ಲಿ ವಿಶ್ರಾಂತಿಯ ಮೊರೆ ಹೋಗುವಿರಿ. ದುಡುಕಿನ ನಿರ್ಧಾರಬೇಡ. ಕಣ್ಣಿನ ತೊಂದರೆಯಿಂದ ಬಳಲುವಿರಿ.
ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು :ಈಶಾನ್ಯ
ಅದೃಷ್ಟದ ಬಣ್ಣ : ಹಸಿರು ಬಣ್ಣ
ಮಿಥುನ
ಮಕ್ಕಳ ಬಗ್ಗೆ ಅನಾವಶ್ಯಕ ಚಿಂತೆಮಾಡುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಖರ್ಚಿನಲ್ಲಿ ಹಿಡಿತ ಇರುವ ಕಾರಣ ಹಣದ ತೊಂದರೆ ಉಂಟಾಗುವುದಿಲ್ಲ. ಕುಟುಂಬದ ಸದಸ್ಯರ ಮನದಾಳವನ್ನು ಅರಿತು ನಡೆಯುವಿರಿ. ಕೌಟುಂಬಿಕ ವಿಚಾರಗಳಲ್ಲಿ ಶ್ರದ್ದೆ ವಹಿಸುವಿರಿ. ನಿಮ್ಮ ತೀರ್ಮಾನಗಳನ್ನು ಎಲ್ಲರೂ ಗೌರವಿಸುತ್ತಾರೆ. ಉದ್ಯೋಗದಲ್ಲಿ ನಿರೀಕ್ಷಿಸಿದ ಅನುಕೂಲತೆಗಳು ದೊರೆಯುತ್ತದೆ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ತಂದೆ ತಾಯಿಗಳ ಸಹಾಯ ದೊರೆಯುತ್ತದೆ. ಕಷ್ಟಪಟ್ಟು ಸಮಯ ವ್ಯರ್ಥ ಮಾಡದೆ ಓದುವ ಕಾರಣ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡುತ್ತಾರೆ. ಹಣ ಉಳಿತಾಯ ಮಾಡಲು ಸಫಲರಾಗುವಿರಿ. ಸಮಾಜ ಸೇವೆಯಲ್ಲಿ ನೆಮ್ಮದಿ ಕಾಣುವಿರಿ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ನೀಲಿ ಬಣ್ಣ
ಕಟಕ
ನಿಮ್ಮ ಸೋದರಿಯ ಜೀವನದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆಯಲಿದೆ. ನಿಮ್ಮ ಕ್ರಿಯಾಶೀಲ ವ್ತ್ಯಕ್ತಿತ್ವ ಜನಮನ್ನಣೆ ಗಳಿಸುತ್ತದೆ. ಜನೋಪಕಾರಿ ಕೆಲಸವೊಂದನ್ನು ಮಾಡುವಿರಿ. ಸಮಾಜದಲ್ಲಿ ವಿಶೇಷವಾದ ಗೌರವ ದೊರೆಯುತ್ತದೆ. ಅನಿವಾರ್ಯವಾಗಿ ಬೇರೆಯವರಿಂದ ಹಣದ ಸಹಾಯ ಪಡೆಯುವಿರಿ. ಆತ್ಮೀಯ ಮಿತ್ರರಿಗೆ ದುಬಾರಿ ಕಾಣಿಕೆ ನೀಡಲಿದ್ದೀರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ವಾದ ವಿವಾದಗಳಿಗೆ ಅವಕಾಶ ಕೊಡದೆ ಕೆಲಸ ಸಾಧಿಸುವಿರಿ. ಹಿರಿಯ ಅಧಿಕಾರಿಗಳ ನಡುವಿನ ಮಾತುಕತೆ ಹೊಸ ಅವಕಾಶವನ್ನು ಕಲ್ಪಿಸುತ್ತದೆ. ಇಂದಿನ ಖರ್ಚು ವೆಚ್ಚಗಳನ್ನು ಸರಿತೂಗಿಸಲು ವಿಫಲರಾಗುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ.
ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೇರಳೆ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).