ಕನ್ನಡ ಸುದ್ದಿ  /  Astrology  /  Horoscope Today Astrology Prediction 4th April 2024 Leo Virgo Libra Scorpio Daily Horoscope Sts

Horoscope Today: ಹೈನುಗಾರಿಕೆಯ ವ್ಯಾಪಾರದಲ್ಲಿ ಲಾಭ, ಕೃಷಿಭೂಮಿ ಕೊಳ್ಳುವ ಕನಸು ನನಸು: ಏಪ್ರಿಲ್‌ 4ರ ದಿನ ಭವಿಷ್ಯ

4 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4th April 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ: ಅಷ್ಟಮಿ 03.14 ರವರೆಗೂ ಇದ್ದು ನಂತರ ನವಮಿ ಆರಂಭವಾಗಲಿದೆ.

ನಕ್ಷತ್ರ : ಪೂರ್ವಾಷಾಢ ನಕ್ಷತ್ರವು ಸಂಜೆ 06.22 ರವರೆಗೂ ಇದ್ದು ನಂತರ ಉತ್ತರಾಷಾಢ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.16

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 03.00 ರಿಂದ 04.30

ರಾಶಿಫಲ

ಸಿಂಹ

ಆತುರದ ನಿರ್ಧಾರ ಆಪತ್ತಿಗೆ ನಾಂದಿ ಆಗಬಹುದು. ಅತಿಯಾದ ಆತ್ಮವಿಶ್ವಾಸದಿಂದ ಹಣಕಾಸಿಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವಿರಿ. ಹಿರಿಯರ ಆದೇಶವನ್ನು ಪಾಲಿಸಿದರೆ ಕಷ್ಟ ನಷ್ಟಗಳು ಕಡಿಮೆ ಆಗುತ್ತವೆ. ಸ್ವಂತ ಉದ್ಯಮ ಇದ್ದಲ್ಲಿ ಕಾರ್ಮಿಕರಿಗೆ ಒತ್ತಡ ಹೆಚ್ಚಾಗುತ್ತದೆ. ಸಂಘ ಸಂಸ್ಥೆಗಳಿಗೆ ಧನ ಸಹಾಯ ಮಾಡುವಿರಿ. ಹೈನುಗಾರಿಕೆಯ ವ್ಯಾಪಾರ ಅಥವಾ ಪಶು ಸಂಗೋಪನೆಯಲ್ಲಿ ಹೆಚ್ಚಿನ ಆದಾಯ ಗಳಿಸುವಿರಿ. ಬೇಸರ ಕಳೆಯಲು ದೂರದ ಊರಿನಲ್ಲಿ ಕೆಲಕಾಲ ತಂಗುವಿರಿ. ನಿಮ್ಮ ಮಕ್ಕಳ ಜೀವನದಲ್ಲಿ ಒಳ್ಳೆಯ ಘಳಿಗೆ ಆರಂಭವಾಗುತ್ತವೆ. ಯವುದೇ ಕೆಲಸವಾದರೂ ಮುನ್ನಡೆ ಸಾಧಿಸುವಿರಿ. ಮಕ್ಕಳ ಜೊತೆಗೂಡೆ ಪರಿಸರ ಸ್ನೇಹಿ ಕೆಲಸವನ್ನು ಮಾಡುವಿರಿ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಗುಲಾಬಿ ಬಣ್ಣ

ಕನ್ಯಾ

ಲಾಭದಾಯಕ ಕೆಲಸ ಕಾರ್ಯಗಳನ್ನು ಮಾಡುವಿರಿ. ಅಲ್ಪ ಪ್ರಮಾಣದ ಸ್ವಾರ್ಥವೂ ನಿಮ್ಮಲ್ಲಿ ಮನೆಮಾಡುತ್ತದೆ. ದುಡುಕಿ ಮಾತನಾಡುವ ಕಾರಣ ವಿರೋಧ ಎದುರಿಸಬೇಕಾಗುತ್ತದೆ. ನಿಮ್ಮ ಹಿರಿಯ ಅಣ್ಣ ಅಥವ ಅಕ್ಕನಿಗೆ ತಾಯಿಯಿಂದ ಹಣದ ಸಹಾಯ ದೊರೆಯಲಿದೆ. ದೇಹದ ತೂಕ ಕಡಿಮೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಕೃಷಿ ಭೂಮಿಯನ್ನು ಕೊಳ್ಳುವ ನಿಮ್ಮ ಆಸೆ ಪೂರೈಸಲಿದೆ. ಜನರೊಂದಿಗೆ ಬೆರೆಯದೆ ದೂರ ಉಳಿಯುವಿರಿ. ಒತ್ತಡಕ್ಕೆ ಒಳಗಾಗಿ ಮುಖ್ಯ ಕೆಲಸವೊಂದು ಮುಂದೂಡಲ್ಪಡುತ್ತದೆ. ದೃಢವಾದ ಮನಸ್ಸಿರದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಇರಲಿದೆ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ತುಲಾ

ಅನಿವಾರ್ಯವಾಗಿ ಉದ್ಯೋಗವನ್ನು ಬದಲಾಯಿಸುವಿರಿ. ಒಳ್ಳೆಯ ಮನಸ್ಸಿನಿಂದ ಕೆಲಸ ಆರಂಭಿಸುವ ಕಾರಣ ಎಲ್ಲರ ಸಹಕಾರ ದೊರೆಯುತ್ತದೆ. ನಿರೀಕ್ಷಿತ ಗುರಿ ತಲುಪುವರೆಗೂ ವಿಶ್ರಾಂತಿ ಪಡೆಯುವುದಿಲ್ಲ. ಖರ್ಚು ವೆಚ್ಚಗಳನ್ನು ನಿಯಂತ್ರಿಸುವಿರಿ. ಕುಟುಂಬದಲ್ಲಿ ನೆಮ್ಮದಿಯ ಕೊರತೆ ಇರುತ್ತದೆ. ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ಮನೆತನದ ಭೂಮಿಯನ್ನು ಕಾನೂನುರೀತ್ಯಾ ಪಡೆಯುವಿರಿ. ಸಮಾಜದಲ್ಲಿ ಉನ್ನತ ಕೀರ್ತಿ ಪ್ರತಿಷ್ಠೆಯನ್ನು ಸಂಪಾದಿಸುವಿರಿ. ನಿಮ್ಮ ತಂದೆಯ ಜೊತೆ ಅನಾವಶ್ಯಕ ವಾದ ವಿವಾದ ಉಂಟಾಗುತ್ತದೆ. ಬೇಸರದಿಂದ ಮೌನಕ್ಕೆ ಶರಣಾಗುವಿರಿ. ಸಾರಿಗೆ ವ್ಯವಸ್ಥೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಬೂದು ಬಣ್ಣ

ವೃಶ್ಚಿಕ

ವಿದ್ಯಾರ್ಥಿಗಳು ಹಟದಿಂದ ವಿಧ್ಯಾಭ್ಯಾಸದಲ್ಲಿ ನಿರತರಾಗುತ್ತಾರೆ. ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವಿರಿ. ಮಹಿಳಾ ಉದ್ಯಮಿಗಳು ನಿರೀಕ್ಷಿತ ಯಶಸ್ಸನ್ನು ಪಡೆಯಲಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ತಂದೆಯವರಿಗೆ ಉದ್ಯೋಗದಲ್ಲಿ ಬಡ್ತಿ ದೊರೆವ ಸೂಚನೆಗಳಿವೆ. ಉದ್ಯೋಗ ನೀಡಿದ ಸಂಸ್ಥೆಯ ಮೂಲಕ ವಿದೇಶಕ್ಕೆ ತೆರಳುವಿರಿ. ಕುಟುಂಬಲ್ಲಿ ಸಕಾರಾತ್ಮಕ ಬದಲಾವಣೆಯೊಂದು ಕಾಣಲಿದೆ. ಮನೆಯವರ ಜೊತೆಯಲ್ಲಿ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ಮನೆತನದ ಆಸ್ತಿ ವಿವಾದ ಗಣ್ಯ ವ್ಯಕ್ತಿಗಳ ಮಧ್ಯಸ್ಥಿಕೆಯಿಂದ ಬಗೆಹರಿಯುವುದು. ಸಂಗಾತಿಯ ಜೊತೆಯಲ್ಲಿ ವ್ಯಾಪಾರ ಆರಂಭಿಸುವ ಸಾಧ್ಯತೆಗಳಿವೆ. ಅವಶ್ಯಕತೆ ಇದ್ದಲ್ಲಿ ಆತ್ಮೀಯರ ಸಲಹೆ ಪಾಲಿಸಿ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).