ಕನ್ನಡ ಸುದ್ದಿ  /  Astrology  /  Horoscope Today Astrology Prediction 4th April 2024 Sagittarius Capricorn Aquarius Pisces Sts

Horoscope Today: ಅತಿಯಾಗಿ ತಲೆನೋವು ಕಾಡಲಿದೆ, ಮನೆಗೆ ಅಪರೂಪದ ಅತಿಥಿಗಳ ಆಗಮನ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನಭವಿಷ್ಯ

4 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4th April 2024 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(4th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಗುರುವಾರ

ತಿಥಿ : ದಶಮಿ 11.50 ರವರೆಗೂ ಇದ್ದು ನಂತರ ಏಕಾದಶಿ ಆರಂಭವಾಗಲಿದೆ.

ನಕ್ಷತ್ರ : ಶ್ರವಣ ನಕ್ಷತ್ರವು .04.18 ರವರೆಗೂ ಇದ್ದು ನಂತರ ಧನಿಷ್ಠ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.15

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 01.30 ರಿಂದ 03.00

ರಾಶಿ ಫಲ

ಧನಸ್ಸು

ಸುದೀರ್ಘ ಪ್ರಯತ್ನದಿಂದ ಕುಟುಂಬದ ಸಮಸ್ಯೆಯೊಂದಕ್ಕೆ ಪರಿಹಾರ ದೊರೆಯುತ್ತದೆ. ಉದ್ಯೋಗದಲ್ಲಿನ ಸತತ ಬದಲಾವಣೆಯಿಂದ ಬೇಸರ ಉಂಟಾಗಲಿದೆ. ಸರಿಯಾದ ಸಹಕಾರವಿಲ್ಲದೆ ಸ್ವಂತ ಕೆಲಸ ಕಾರ್ಯಗಳು ಅಪೂರ್ಣವಾಗಲಿವೆ. ದೊರೆಯುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಿ. ಜೀವನದ ಒಳ್ಳೆಯ ದಿನಗಳು ಆರಂಭವಾಗುತ್ತವೆ. ವಿದ್ಯಾರ್ಥಿಗಳು ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು. ಹಣಕಾಸಿನ ವಿಚಾರದಲ್ಲಿ ದಿಢೀರ್ ನಿರ್ಧಾರವನ್ನು ತೆಗೆದುಕೊಂಡು ಯಶಸ್ವಿಯಾಗುವಿರಿ. ನಿಮ್ಮ ಕೈ ಕಾಲುಗಳಿಗೆ ಪೆಟ್ಟು ಬೀಳಬಹುದು. ಅಪರೂಪದ ಅತಿಥಿಗಳು ನಿಮ್ಮ ಮನೆಗೆ ಆಗಮಿಸಲಿದ್ದಾರೆ. ನಿಮ್ಮ ಪಾಲಿನ ಆಸ್ತಿಯನ್ನು ಹಣದ ಅವಶ್ಯಕತೆಗಾಗಿ ಮಾರಾಟ ಮಾಡುವಿರಿ. ಮಾನಸಿಕ ಸದೃಢತೆಯನ್ನು ಬೆಳೆಸಿಕೊಳ್ಳಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಮಕರ

ಸದಾಕಾಲ ಯಾವುದಾದರೊಂದು ಕೆಲಸದಲ್ಲಿ ನಿರತರಾಗುವಿರಿ. ಯಾವುದೇ ಕೆಲಸವನ್ನು ಅಪೂರ್ಣಗೊಳಿಸದಿರಿ. ಆತಂಕದ ಸ್ವಭಾವದಿಂದ ಹೊರ ಬರಲು ಪ್ರಯತ್ನಿಸಿ. ಅತಿಯಾದ ಆತ್ಮವಿಶ್ವಾಸವನ್ನು ಬದಿಗಿಟ್ಟು ಕೆಲಸ ಕಾರ್ಯಗಳನ್ನು ಮುಂದುವರೆಸುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ಯಾರೊಂದಿಗೂ ಮನಬಿಚ್ಚಿ ಮಾತನಾಡುವುದಿಲ್ಲ. ಅಚ್ಚರಿಯ ಬದಲಾವಣೆಯೊಂದು ನಿಮ್ಮ ಪರವಾಗಿರುತ್ತದೆ. ಅತಿಯಾದ ತಲೆ ನೋವು ನಿಮ್ಮನ್ನು ಕಾಡಲಿದೆ. ಬೇರೆಯವರ ವಾದ ವಿವಾದಗಳ ಮಧ್ಯಸ್ಥಿಕೆ ವಹಿಸಿದಲ್ಲಿ ತೊಂದರೆ ಉಂಟಾಗಲಿದೆ. ಆಹಾರ ಸೇವನೆಯಲ್ಲಿ ಇತಿಮಿತಿ ಇರಲಿ. ಹಿರಿಯ ಸೋದರನ ನಡುವೆ ಹಣಕಾಸಿನ ವಿಚಾರದಲ್ಲಿ ವಿವಾದ ಉಂಟಾಗುತ್ತದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ತಿಳಿ ಹಸಿರು

ಕುಂಭ

ನಿಮ್ಮ ಮನದಲ್ಲಿರುವ ವಿಚಾರವನ್ನು ಯಾರಿಗೂ ತಿಳಿಸುವುದಿಲ್ಲ. ಸ್ವಂತ ಪ್ರತಿಭೆಯಿಂದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಆಡುವ ಮಾತಿನ ಅರ್ಥ ತಿಳಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಮೊದಲು ಮಾತಿನಿಂದ ಜನರ ಮನಸ್ಸನ್ನು ಗೆಲ್ಲಲು ಪ್ರಯತ್ನಿಸಿ. ಮಾನಸಿಕ ಒತ್ತಡಕ್ಕೆ ಮಣಿಯುವುದಿಲ್ಲ. ವೃತ್ತಿಯಲ್ಲಿ ಬೇಸರ ಮೂಡುತ್ತದೆ. ಮಕ್ಕಳ ಸಹಯೋಗದಿಂದ ಕ್ರಿಯಾತ್ಮಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಿರಿ. ಒಲ್ಲದ ಮನಸ್ಸಿಂದ ವಾಸಸ್ಥಳವನ್ನು ಬದಲಾಯಿಸುವಿರಿ. ನಿಮ್ಮ ಮಾತಿಗೆ ಗೌರವಿಸಿ ಗೃಹಿಣಿಯರು ಗುಡಿ ಕೈಗಾರಿಕೆಯನ್ನು ಆರಂಭಿಸುತ್ತಾರೆ. ಮಕ್ಕಳು ಉದ್ಯೋಗಕ್ಕಾಗಿ ದೂರದ ಸ್ಥಳಕ್ಕೆ ಪ್ರಯಾಣ ಬೆಳೆಸುತ್ತಾರೆ. ನಿಮ್ಮ ಹೊಸ ಉದ್ಯಮದ ರೂಪು ರೇಷೆಗಳನ್ನು ಯಾರಿಗೂ ಹೇಳದೆ ಗುಟ್ಟಾಗಿ ಇಡುವಿರಿ.

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನಸು ಗೆಂಪು

ಮೀನ

ಉಪಯೋಗವಿಲ್ಲದ ಕೆಲಸ ಕಾರ್ಯಗಳನ್ನು ಮಾಡಲು ಇಚ್ಚಿಸುವುದಿಲ್ಲ. ಕುಟುಂಬದಲ್ಲಿನ ಮನಸ್ತಾಪಗಳು ಕೊನೆಗೊಳ್ಳುತ್ತವೆ. ದ್ರವಾಹಾರದಿಂದ ಗಂಟಲಿನ ಸೋಂಕು ಉಂಟಾಗುವುದು. ವೃತ್ತಿ ಕ್ಷೇತ್ರದಲ್ಲಿನ ವಿರೋಧಿಗಳ ಬಗ್ಗೆ ಎಚ್ಚರಿಕೆ ಇರಲಿ. ಕಲಾವಿದರಿಗೆ ದೊಡ್ಡ ಅವಕಾಶವೊಂದು ಬರಲಿದೆ. ಕಡಿಮೆ ಆದಾಯದ ವ್ಯಾಪಾರವನ್ನು ಮಾಡುವುದಿಲ್ಲ. ನೆಮ್ಮದಿ ಇರದು. ಎಲ್ಲರನ್ನೂ ಅನುಮಾನದ ದೃಷ್ಟಿಯಿಂದ ನೋಡುವಿರಿ. ಮಕ್ಕಳ ಜೀವನದ ರೀತಿ ಸಂತೃಪ್ತಿ ನೀಡುತ್ತದೆ. ಪಾಲುಗಾರಿಕೆಯ ಉದ್ಯಮದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ಅನಾವಶ್ಯಕವಾಗಿ ಯಾರನ್ನೂ ನಂಬದಿರಿ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).