ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕುಟುಂಬದಲ್ಲಿ ನಡೆಯಬೇಕಿದ್ದ ಮಂಗಳ ಕಾರ್ಯ ನಿಲ್ಲಲಿದೆ, ಸ್ನೇಹಿತನ ಜೊತೆ ಹಣದ ವಿಚಾರವಾಗಿ ಮುನಿಸು; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಕುಟುಂಬದಲ್ಲಿ ನಡೆಯಬೇಕಿದ್ದ ಮಂಗಳ ಕಾರ್ಯ ನಿಲ್ಲಲಿದೆ, ಸ್ನೇಹಿತನ ಜೊತೆ ಹಣದ ವಿಚಾರವಾಗಿ ಮುನಿಸು; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಜುಲೈ 4ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ಕುಟುಂಬದಲ್ಲಿ ನಡೆಯಬೇಕಿದ್ದ ಮಂಗಳ ಕಾರ್ಯ ನಿಲ್ಲಲಿದೆ, ಸ್ನೇಹಿತನ ಜೊತೆ ಹಣದ ವಿಚಾರವಾಗಿ ಮುನಿಸು; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ಕುಟುಂಬದಲ್ಲಿ ನಡೆಯಬೇಕಿದ್ದ ಮಂಗಳ ಕಾರ್ಯ ನಿಲ್ಲಲಿದೆ, ಸ್ನೇಹಿತನ ಜೊತೆ ಹಣದ ವಿಚಾರವಾಗಿ ಮುನಿಸು; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಗುರುವಾರ

ತಿಥಿ : ಚತುರ್ದಶಿ ರಾತ್ರಿ 04.24 ರವರೆಗು ಇರುತ್ತದೆ. ಆನಂತರ ಅಮಾವಾಸ್ಯೆ ಆರಂಭವಾಗುತ್ತದೆ.

ನಕ್ಷತ್ರ : ಮೃಗಶಿರ ನಕ್ಷತ್ರವು ರಾತ್ರಿ 04.07 ರವರೆಗೆ ಇದ್ದು ನಂತರ ಆರ್ದ್ರೆ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 02.03 ರಿಂದ 03.39

ರಾಶಿಫಲ

ಸಿಂಹ

ತಂದೆ ಮಕ್ಕಳ ನಡುವೆ ಇದ್ದ ಮನಸ್ತಾಪ ದೂರವಾಗುತ್ತದೆ. ನಿಮ್ಮ ತಂದೆಯವರ ಸಹಾಯದಿಂದ ನಿಮ್ಮ ಬಹುದೊಡ್ಡ ಕನಸೊಂದು ನನಸಾಗಲಿದೆ. ನಡೆಯಬೇಕಿದ್ದ ಕುಟುಂಬದ ಮಂಗಳ ಕಾರ್ಯವೊಂದು ನಿಂತು ಹೋಗುವುದು. ದಂಪತಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಅನಾವಶ್ಯಕ ಭಿನ್ನಾಭಿಪ್ರಾಯ ಇರುತ್ತದೆ. ನ್ಯಾಯದ ಪಕ್ಷಪಾತಿಗಳು. ಆದ್ದರಿಂದ ನಿಮಗೆ ಮಿತ್ರರಿಗಿಂತ ವಿರೋಧಿಗಳೇ ಹೆಚ್ಚಾಗಿರುತ್ತಾರೆ. ದುಡುಕುತನದ ಮಾತುಕತೆಯಿಂದ ತೊಂದರೆಗೆ ಒಳಗಾಗುವಿರಿ. ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ನಿಮ್ಮ ಕರ್ತವ್ಯವನ್ನು ಸರಿಯಾದ ರೀತಿ ಮಾಡಿ ಮುಗಿಸುವಿರಿ. ನಿಮ್ಮ ಬುದ್ಧಿವಾದವನ್ನು ಯಾರೊಬ್ಬರೂ ಕೇಳುವುದಿಲ್ಲ. ಮೌನವಾಗಿದ್ದಷ್ಟು ನಿಮ್ಮ ಮನಸ್ಸಿಗೆ ಶಾಂತಿ ನೆಮ್ಮದಿ ಲಭಿಸುತ್ತದೆ. ಸಾಲದ ವ್ಯವಹಾರದಿಂದ ತೊಂದರೆ ಅನುಭವಿಸುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ

ಕನ್ಯಾ

ಮಾಡುವ ತಪ್ಪನ್ನು ಪ್ರಾಮಾಣಿಕತೆಯಿಂದ ಒಪ್ಪಿಕೊಳ್ಳುವಿರಿ. ಇದರಿಂದಾಗಿ ಉದ್ಯೋಗದಲ್ಲಿನ ತೊಂದರೆ ಮರೆಯಾಗುತ್ತದೆ. ಮೇಲಧಿಕಾರಿಗಳ ಮೆಚ್ಚುಗೆ ದೊರೆಯುತ್ತದೆ. ನಿಮ್ಮ ಪಾಲಿನ ಕೆಲಸ ಕಾರ್ಯಗಳನ್ನು ಶ್ರದ್ದೆಯಿಂದ ಮಾಡುವಿರಿ. ನಿಮ್ಮ ಬಳಿ ಎಷ್ಟೇ ಹಣವಿದ್ದರೂ ಸರಳ ಜೀವನವನ್ನು ನಡೆಸುವಿರಿ. ರಾಜಕೀಯದಲ್ಲಿ ಆಸಕ್ತಿ ಇದ್ದರೆ ಉತ್ತಮ ಅವಕಾಶ ದೊರೆಯಲಿದೆ. ಸಂಗಾತಿಯೊಂದಿಗೆ ಉತ್ತಮ ಅನುಬಂಧ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಸ್ನೇಹಿತರೊಂದಿಗೆ ಮನಸ್ತಾಪ ಉಂಟಾಗುತ್ತದೆ. ಅಳುಕಿನ ಸ್ವಭಾವವಿರುತ್ತದೆ. ಪ್ರವಾಸದ ವೇಳೆ ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸಿ. ಆತ್ಮೀಯರೊಬ್ಬರನ್ನು ತಪ್ಪಾಗಿ ಅರ್ಥೈಸಿಕೊಂಡು ಅವರಿಂದ ದೂರವಾಗುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ತುಲಾ

ಎಲ್ಲರಿಗೂ ಉತ್ತಮ ಮಾದರಿಯಾಗಿ ಬಾಳುವಿರಿ. ನಿಮ್ಮಗುಣಕ್ಕೆ ತಕ್ಕನಾದ ವ್ಯಕ್ತಿಗಳ ಸ್ನೇಹ ಸಂಪಾದಿಸುವಿರಿ. ಸಂಗಾತಿ ಖುಷಿಯಾಗಿರುವಂತೆ ನೋಡಿಕೊಳ್ಳುವಿರಿ. ಕುಟುಂಬದ ಬಹುತೇಕ ಜವಾಬ್ದಾರಿಗಳು ನಿಮ್ಮನ್ನು ಆಧರಿಸುತ್ತದೆ. ನೀವು ತೆಗೆದುಕೊಳ್ಳುವ ನಿರ್ಣಯವನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಹಣಕಾಸಿನ ತೊಂದರೆ ಕಂಡು ಬರುವುದಿಲ್ಲ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾಗುವುದು. ಕುಟುಂಬಕ್ಕೆ ಸಂಬಂಧಿಸಿದ ಭೂವಿವಾದವು ಬಿಗುವಿನ ವಾತಾವರಣವನ್ನು ಉಂಟುಮಾಡುತ್ತದೆ. ನಿಮ್ಮಲ್ಲಿರುವ ಶಾಂತಿ ಸೌಹಾರ್ದಯುತ ಗುಣವು ಅಪಾಯದಿಂದ ಪಾರು ಮಾಡುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚು ಕ್ರಿಯಾಶೀಲರಾಗುತ್ತಾರೆ. ಸಮಯವನ್ನು ವ್ಯರ್ಥ ಮಾಡದೆ ಯಾವುದಾದರೂ ಒಂದು ಚಟುವಟಿಕೆಯಲ್ಲಿ ತೊಡಗುವರು. ಹಣಕಾಸಿನ ಪ್ರಗತಿಗಾಗಿ ಸಣ್ಣ ಪ್ರಮಾಣದ ವ್ಯಾಪಾರವನ್ನು ಆರಂಭಿಸುವಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ..

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ ಕಿತ್ತಳೆ

ವೃಶ್ಚಿಕ

ನಿಮ್ಮ ಕೆಲಸ ಕಾರ್ಯಗಳ ಬಗ್ಗೆ ತಾಯಿಯವರ ಗಮನವಿರುತ್ತದೆ. ಜೀವನದಲ್ಲಿ ತಪ್ಪು ನಿರ್ಣಯ ತೆಗೆದುಕೊಂಡರೆ ಸರಿಪಡಿಸುವ ಜವಾಬ್ದಾರಿ ಅವರದಾಗುತ್ತದೆ. ಕಿರಿಯ ಸೋದರರೊಂದಿಗೆ ಇದ್ದ ಹಣಕಾಸಿನ ವಿಚಾರದ ಮನಸ್ತಾಪವು ಮರೆಯಾಗುತ್ತದೆ. ಉದ್ಯೋಗದಲ್ಲಿ ಇದ್ದ ಅಡಚಣೆ ದೂರವಾಗಿ ಪರಿಸ್ಥಿತಿಯು ಸಹಜ ಸ್ಥಿತಿಗೆ ಮರಳುತ್ತದೆ. ಯಾರೊಂದಿಗೂ ವಾದದಲ್ಲಿ ತೊಡಗಿದೆ ಬುದ್ಧಿವಂತಿಕೆಯಿಂದ ಕೆಲಸ ಸಾಧಿಸುವಿರಿ. ಮಕ್ಕಳ ವಿಚಾರದಲ್ಲಿ ನಿಮ್ಮ ತೀರ್ಮಾನವೇ ಅಂತಿಮವಾಗುತ್ತದೆ. ಅವರ ಜೀವನ ರೂಪಿಸಲು ಹಲವು ಯೋಜನೆಗಳನ್ನು ರೂಪಿಸುವಿರಿ. ಪಾಲುದಾರಿಕೆ ವ್ಯಾಪಾರದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ತಂದೆಯವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ. ಆತ್ಮೀಯರ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.