ಹಣಕಾಸಿನ ವ್ಯವಹಾರದಲ್ಲಿ ಇದ್ದ ಗೊಂದಲಕ್ಕೆ ತೆರೆ, ನೇರ ಮಾತಿನಿಂದ ಸಂಬಂಧಿಕರೊಂದಿಗೆ ಮನಸ್ತಾಪ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
4 ಜೂನ್ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4th June 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4th June 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಮಂಗಳವಾರ
ತಿಥಿ: ತ್ರಯೋದಶಿ ರಾತ್ರಿ 09.15 ರವರೆಗೂ ಇರುತ್ತದೆ ನಂತರ ಚತುರ್ದಶಿ ಆರಂಭವಾಗುತ್ತದೆ.
ನಕ್ಷತ್ರ: ಭರಣಿ ನಕ್ಷತ್ರವು ರಾತ್ರಿ 09.58ರವರೆಗೂ ಇದ್ದು ನಂತರ ಕೃತ್ತಿಕ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.42
ರಾಹುಕಾಲ: 03.34 ರಿಂದ ಸಂಜೆ 05.10
ರಾಶಿ ಫಲ
ಸಿಂಹ
ಎದುರಾಗುವ ವಿಷಮ ಪರಿಸ್ಥಿತಿಯನ್ನು ನಿಯಂತ್ರಿಸುವಿರಿ. ಮನದಲ್ಲಿನ ಯೋಚನೆ ದೂರವಾಗುತ್ತದೆ. ಆತ್ಮವಿಶ್ವಾಸವು ಹೊಸ ಜೀವನಕ್ಕೆ ನಾಂದಿ ಆಗಲಿದೆ. ಕುಟುಂಬದಲ್ಲಿ ಉತ್ತಮ ಹೊಂದಾಣಿಕೆ ಇರುವ ಕಾರಣ ನೆಮ್ಮದಿ ಇರುತ್ತದೆ. ಹಣಕಾಸಿನ ಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ವಂಶದ ಆಸ್ತಿಯಲ್ಲಿನ ನ್ಯಾಯಯುತ ಭಾಗ ದೊರೆಯಲಿದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಉಂಟಾಗಲಿದೆ. ಮಕ್ಕಳನ್ನುಪ್ರೀತಿ ವಿಶ್ವಾಸದಿಂದ ಕಾಣುವಿರಿ. ನೇರ ನಿಷ್ಠುರದ ನಡೆ ನುಡಿಯಿಂದ ಸಂಬಂಧಿಕರ ಜೊತೆ ಮನಸ್ತಾಪ ಉಂಟಾಗಬಹುದು. ನಿಮ್ಮಲ್ಲಿ ಉತ್ತಮ ಸಂಘಟನಾ ಗುಣ ಎಲ್ಲರ ಮನ ಗೆಲ್ಲುತ್ತದೆ. ಜನಸಾಮಾನ್ಯರಿಂದ ದೂರ ಉಳಿಯಲು ಪ್ರಯತ್ನಿಸುವಿರಿ. ಸಂಗಾತಿಯ ಜೊತೆ ಉತ್ತಮ ಬಾಂಧವ್ಯ ಇರುತ್ತದೆ.
ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಬೂದು
ಕನ್ಯಾ
ಒಮ್ಮೆ ತೆಗೆದುಕೊಳ್ಳುವ ನಿರ್ಣಯಗಳನ್ನು ಅನಾವಶ್ಯಕವಾಗಿ ಬದಲಾಯಿಸುವಿರಿ. ಕೆಲಸ ಕಾರ್ಯಗಳು ಕೈಗೂಡದೆ ಹೋದಲ್ಲಿ ಸಹನೆ ಕಳೆದುಕೊಳ್ಳುವಿರಿ. ನಿಮ್ಮ ತಪ್ಪನ್ನು ಮರೆಮಾಚಿ ಬೇರೆಯವರ ತಪ್ಪನ್ನು ಟೀಕಿಸುವಿರಿ. ಹಣಕಾಸಿನ ವಿಚಾರದಲ್ಲಿ ಸಮಾಧಾನ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಹಣದ ವ್ಯವಹಾರದಲ್ಲಿನ ಗೊಂದಲ ನಿವಾರಣೆ ಆಗಲಿದೆ. ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆಯ ವಾತಾವರಣ ಇರುತ್ತದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ದಂಪತಿ ನಡುವೆ ಉತ್ತಮ ಪ್ರೀತಿ ವಿಶ್ವಾಸ ಮನೆಮಾಡಿರುತ್ತವೆ. ನಿಮ್ಮಲ್ಲಿರುವ ತಪ್ಪನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸುವಿರಿ. ಮನರಂಜನಾ ಮಾಧ್ಯಮದಲ್ಲಿ ಅವಕಾಶ ದೊರೆಯಲಿದೆ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ : ಕಂದು
ತುಲಾ
ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ. ನಿಮ್ಮ ಮಕ್ಕಳಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ಆತುರ ಪಡುವುದಿಲ್ಲ. ಹಣದ ಕೊರತೆ ಕಾಣುವುದಿಲ್ಲ. ಅತಿಯಾದ ಆತ್ಮವಿಶ್ವಾಸದಿಂದ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಕುಟುಂಬದ ಸೌಖ್ಯಕ್ಕಾಗಿ ಯಾವುದೇ ತ್ಯಾಗಕ್ಕೂ ಹಿಂಜರಿಯುವುದಿಲ್ಲ. ಮನದಲ್ಲಿನ ಅಭಿಪ್ರಾಯವನ್ನು ವ್ಯಕ್ತಪಡಿಸಲು ವಿಫಲರಾಗುವಿರಿ. ಅನಿರಾರ್ಯವಾಗಿ ಆತ್ಮೀಯರಿಂದ ಹಣವನ್ನು ಪಡೆಯುವಿರಿ. ಹೊಸ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ತೋರುವುದಿಲ್ಲ. ಮನ ಬಿಚ್ಚಿ ಮಾತನಾಡುವುದನ್ನು ಕಲಿಯಬೇಕಿದೆ.
ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು ದಕ್ಷಿಣ
ಅದೃಷ್ಟದ ಬಣ್ಣ: ಕಪ್ಪು
ವೃಶ್ಚಿಕ
ಯಾರನ್ನೂ ತಾರತಮ್ಯದಿಂದ ಕಾಣುವುದಿಲ್ಲ. ನಿಮಗೆ ಅರಿವಿಗೆ ಬಾರದೆ ಜನಸೇವೆ ಮಾಡುವಿರಿ. ಕೋಪ ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಸಕಾರಾತ್ಮಕ ಧೋರಣೆಯಿಂದ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಹಟದಿಂದ ಸದಾಕಾಲ ಯಶಸ್ಸಿನ ಹಾದಿಯಲ್ಲಿ ಸಾಗುವಿರಿ. ಸಾಲವಾಗಿ ಹಣ ನೀಡುವುದನ್ನು ಮತ್ತು ಪಡೆಯುವುದನ್ನು ಇಷ್ಟಪಡುವುದಿಲ್ಲ. ಕೆಲಸದ ನಡುವೆ ವಿಶ್ರಾಂತಿ ತೆಗೆದುಕೊಳ್ಳುವಿರಿ. ಅಪೂರ್ಣಗೊಂಡ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ತಲ್ಲೀನರಾಗುವಿರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಿಶ್ವಾಸ ಇರಲಿವೆ. ಎದುರಾಗುವ ಸಮಸ್ಯೆಗಳಿಗೆ ಬೆದರದೆ ಪರಿಹಾರವನ್ನು ಕಂಡು ಹಿಡಿಯುವಿರಿ. ಹಣದ ಕೊರತೆ ಕಡಿಮೆ ಆಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ತಿಳಿ ಹಸಿರು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).