Horoscope Today: ವ್ಯವಹಾರದಲ್ಲಿ ಉತ್ತಮ ಲಾಭ, ಬಹುದಿನಗಳ ಕೆಲಸ ಪೂರ್ಣಗೊಳ್ಳುತ್ತೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ
4 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4th May 2024 Daily Horoscope).
ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4th May 2024 Horoscope)
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶನಿವಾರ
ತಿಥಿ: ಏಕಾದಶಿ ಸ. 05.51 ರವರೆಗು ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.
ನಕ್ಷತ್ರ : ಪೂರ್ವಾಭಾದ್ರ ನಕ್ಷತ್ರವು ರಾ. 07.44 ರವರೆಗು ಇರುತ್ತದೆ. ಆನಂತರ ಉತ್ತರಾಭಾದ್ರ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.58
ಸೂರ್ಯಾಸ್ತ: ಸಂಜೆ 6.34
ರಾಹುಕಾಲ : ಬೆಳಗ್ಗೆ 9.11 ರಿಂದ ಬೆ. 10.46
ಮೇಷ ರಾಶಿ
ಖರ್ಚು ವೆಚ್ಚಗಳಿಂದಲೇ ದಿನವನ್ನು ಆರಂಭಿಸುವಿರಿ. ಮನದಲ್ಲಿ ಅಳುಕಿನ ಭಾವನೆ ಕಂಡು ಬರುತ್ತವೆ. ನಿಮ್ಮ ಒಡನಾಟದಿಂದ ಕುಟುಂಬದಲ್ಲಿ ಸಂತಸದ ವಾತಾವರಣ ಉಂಟಾಗುತ್ತದೆ. ಸಂಗಾತಿಗೆ ಅಥವಾ ಮನೆಯ ಸದಸ್ಯರಿಗೆ ಅವರಿಗೆ ಇಷ್ಟವಾಗುವಂತಹ ಉಡುಗೊರೆಯನ್ನು ನೀಡುವಿರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಾಯ ಸಹಕಾರ ದೊರೆಯುತ್ತದೆ. ವಿದ್ಯಾರ್ಥಿಗಳು ಮನರಂಜನೆ ಮತ್ತು ಕಲಿಕೆಯಲ್ಲಿ ಮುಂದಿರುತ್ತಾರೆ ನೀರಿಗೆ ಸಂಬಂಧಪಟ್ಟ ವ್ಯಾಪಾರವನ್ನು ಆರಂಭಿಸುವಿರಿ. ಹಣಕಾಸಿನ ವ್ಯವಹ್ಕಾರದಲ್ಲಿ ಉತ್ತಮ ಲಾಭವಿರುತ್ತದೆ. ಆತ್ಮೀಯರಿಗೆ ಹಣಗಳಿಸುವ ಅಮೂಲ್ಯ ಸಲಹೆ ನೀಡುವಿರಿ. ಮಕ್ಕಳನ್ನು ಅಕ್ಕರೆಯಿಂದ ನೋಡಿಕೊಳ್ಳುವಿರಿ.
ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ವೃಷಭ ರಾಶಿ
ಆತ್ಮೀಯರ ಸಮಾರಂಭಕ್ಕೆ ಹಣದ ಸಹಾಯ ಮಾಡುವಿರಿ. ಮಕ್ಕಳ ಜೊತೆ ಅವರ ನೆಚ್ಚಿನ ಸ್ಥಳಕ್ಕೆ ಪ್ರವಾಸ ಕೈಗೊಳ್ಳುವಿರಿ. ಅನಾವಶ್ಯಕವಾದ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವಿರಿ. ಬಹುದಿನದಿಂದ ಉಳಿದಿದ್ದ ಅತಿ ಮುಖ್ಯ ಕೆಲಸವನ್ನು ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ. ಮುತುವರ್ಜಿಯಿಂದ ಯಾವುದೇ ಕೆಲಸಗಳನ್ನು ಮಾಡಬಲ್ಲಿರಿ. ಕುಟುಂಬದಲ್ಲಿ ಹೊಂದಾಣಿಕೆಯ ವಾತಾವರಣ ನೆಲೆಸಿರುತ್ತದೆ. ವಿದ್ಯಾರ್ಥಿಗಳು ಹೊಸ ಆಸೆಯಿಂದ ಕಾದುನೋಡುವ ತಂತ್ರ ಅನುಸರಿಸುತ್ತಾರೆ. ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು. ವ್ಯಾಪಾರ, ವ್ಯವಹಾರಗಳು ಸರಾಗವಾಗಿ ನಡೆಯಲಿವೆ. ಹೊಸ ವಾಹನವನ್ನು ಕೊಳ್ಳಲು ಸಂಗಾತಿಯಿಂದ ಹಣದ ಸಹಾಯ ದೊರೆಯುತ್ತದೆ.
ಪರಿಹಾರ: ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ತಿಳಿಹಸಿರು ಬಣ್ಣ
ಮಿಥುನ ರಾಶಿ
ಕೌಟುಂಬಿಕ ವಿಚಾರಗಳಲ್ಲಿ ಧೃಡವಾದ ನಿಲುವನ್ನು ತೆಗೆದುಕೊಳ್ಳುವುದಿಲ್ಲ. ಆದಾಯದ ಬಗ್ಗೆ ಚಿಂತೆ ಮಾಡುವು. ಕುಟುಂಬದಲ್ಲಿ ಉತ್ತಮ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಜೊತೆಯಲ್ಲಿನ ವಾದ ವಿವಾದದಲ್ಲಿ ಜಯ ಲಭಿಸುತ್ತದೆ. ಪ್ರೀತಿ ವಿಶ್ವಾಸದಿಂದ ಜನರ ಮನಸನ್ನು ಗೆಲ್ಲಲು ಪ್ರಯತ್ನಿಸುವಿರಿ. ವಿದ್ಯಾರ್ಥಿಗಳು ಉತ್ತಮ ಸಾಧನೆಗೆ ಪಾತ್ರರಾಗುತ್ತಾರೆ. ತಂದೆಗೆ ಸಂಬಂಧಪಟ್ಟ ಹಣಕಾಸಿನ ವ್ಯವಹಾರದಲ್ಲಿ ಜಯ ಲಭಿಸುತ್ತದೆ. ಕುಟುಂಬದ ಆಶೋತ್ತರಗಳನ್ನು ಈಡೇರಿಸಲು ಪ್ರಯತ್ನಿಸುವಿರಿ. ಸಣ್ಣ ಬಂಡವಾಳದ ಉದ್ಯಮವನ್ನು ಆರಂಭಿಸುವಿರಿ.
ಪರಿಹಾರ: ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಕಟಕ ರಾಶಿ
ಸಮಯ ವ್ಯರ್ಥಮಾಡದೆ ಕ್ರಿಯಾಶೀಲರಾಗಿ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಕುಟುಂಬದಲ್ಲಿ ಎಲ್ಲರೊಂದಿಗೆ ಶಾಂತಿ ನೆಮ್ಮದಿಯಿಂದ ಬಾಳುವಿರಿ. ಹೆಚ್ಚಿನ ವೇತನಕ್ಕಾಗಿ ಎಲ್ಲರ ವಿರೋಧದ ನಡುವಿಯೂ ಉದ್ಯೋಗವನ್ನು ಬದಲಾಯಿಸುವಿರಿ. ವಿದ್ಯಾರ್ಥಿಗಳು ಸಹಪಾಠಿಗಳನ್ನು ತಮ್ಮೊಡನೆ ಯಶಸ್ಸಿನ ಕಡೆ ಕರೆದೊಯ್ಯುತ್ತಾರೆ. ವ್ಯಾಪಾರದಲ್ಲಿ ಹೆಚ್ಚಿನ ಲಾಭ ಇಲ್ಲದೆ ಹೋದರು ನಷ್ಟ ಉಂಟಾಗದು. ಆಹಾರಕ್ಕೆ ಸಂಬಂಧಿಸಿದ ಪದಾರ್ಥಗಳ ಮಾರಾಟದಲ್ಲಿ ವಿಶೇಷ ಲಾಭ ದೊರೆಯುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಅನಾರೋಗ್ಯದಿಂದ ಬಳಲುವಿರಿ. ದೈಹಿಕವಾಗಿ ನಿತ್ರಾಣರಾಗುವಿರಿ. ಸಾಲದ ವ್ಯವಹಾರದಿಂದ ಆತ್ಮೀಯರೊಬ್ಬರು ದೂರವಾಗುತ್ತಾರೆ. ಕ್ಷಮಾಗುಣ ಬೆಳೆಸಿಕೊಳ್ಳಿ.
ಪರಿಹಾರ: ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).