ಕನ್ನಡ ಸುದ್ದಿ  /  Astrology  /  Horoscope Today Astrology Prediction 5 March 2024 Leo Virgo Libra Scorpio Daily Horoscope Sts

Horoscope Today: ಮನಗೆದ್ದವರ ಜೊತೆಯಲ್ಲೇ ವಿವಾಹ, ಆರ್ಥಿಕ ಪರಿಸ್ಥಿತಿಯಲ್ಲಿ ಏಳು ಬೀಳು; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 5, ಮಂಗಳವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (5 March 2024 Daily Horoscope).

 ಮಾರ್ಚ್​ 5ರ ದಿನಭವಿಷ್ಯ
ಮಾರ್ಚ್​ 5ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (5 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಮಂಗಳವಾರ

ತಿಥಿ : ದಶಮಿ ರಾ.01.24 ರವರೆಗು ಇದ್ದು ಆನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ : ಮೂಲ ನಕ್ಷತ್ರವು ಹ.11.12 ರವರೆಗೆ ಇರುತ್ತದೆ. ಆನಂತರ ಪೂರ್ವಾಷಾಡ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.33

ಸೂರ್ಯಾಸ್ತ: ಸ.06.27

ht kಬೆ.03.00 ರಿಂದ ಬೆ.04.30

ರಾಶಿ ಫಲಗಳು

ಸಿಂಹ

ಹೊಸ ನಿರೀಕ್ಷೆಯಿಂದ ದಿನವನ್ನು ಆರಂಭಿಸುವಿರಿ. ಆತ್ಮವಿಶ್ವಾಸದಿಂದಾಗಿ ಕುಟುಂಬದಲ್ಲಿ ಇಚ್ಚಿಸಿದ ಕೆಲಸಕಾರ್ಯಗಳು ನಡೆಯಲಿವೆ. ಸ್ವಂತ ಕೆಲಸ ಕಾರ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವಿರಿ. ಅನಗತ್ಯ ಖರ್ಚು ವೆಚ್ಚಗಳನ್ನು ನಿಯಂತ್ರಿಸಲಾರಿರಿ. ಉದ್ಯೋಗದಲ್ಲಿ ಒಮ್ಮತದ ಕೊರತೆ ಉಂಟಾಗಬಹುದು. ಸಾಮಾಜಿಕ ಕಳ ಕಳಿ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ. ವಿಧ್ಯಾರ್ಥಿಗಳು ಅಧ್ಯಯನದಲ್ಲಿ ಸಫಲರಾಗುತ್ತಾರೆ. ಸಭೆ ಸಮಾರಂಭಗಳ ಕೇಂದ್ರಬಿಂದುವಾಗುವಿರಿ. ಮನಗೆದ್ದವರ ಜೊತೆಯಲ್ಲಿ ಹಿರಿಯರ ಸಮ್ಮುಖದಲ್ಲಿ ವಿವಾಹವಾಗುತ್ತದೆ. ಆತ್ಮೀಯರ ಜೊತೆಯಲ್ಲಿ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವರಿ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಕನ್ಯಾ

ಮನದ ನೋವನ್ನು ಮರೆಯಲು ಏಕಾಂಗಿಯಾಗಿ ಇರಲು ಇಷ್ಟಪಡುವಿರಿ. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಇರುತ್ತದೆ. ಒಳ್ಳೆಯ ಅಭ್ಯಾಸದ ಕಾರಣ ಆರೋಗ್ಯ ಚೆನ್ನಾಗಿರುತ್ತದೆ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳಲ್ಲಿ ಶ್ರದ್ದೆಯ ಕೊರತೆ ಕಾಣುತ್ತದೆ. ತಪ್ಪು ನಿರ್ಧಾರದಿಂದ ತೊಂದರೆ ಅನುಭವಿಸುವಿರಿ. ಮನದಲ್ಲಿರುವ ಆಸೆ ಆಕಾಂಕ್ಷೆಗಳು ಕಾರ್ಯರೂಪಕ್ಕೆ ಬರಲಿದೆ. ಟೀಕಿಸದೆ ಎಲ್ಲರೊಂದಿಗೆ ಶಾಂತಿ ಸಂಯಮದಿಂದ ವರ್ತಿಸಿ. ವ್ಯಾಪಾರ ವ್ಯವಹಾರದಲ್ಲಿ ಆತ್ಮೀಯರ ಬೆಂಬಲ ದೊರೆಯುತ್ತದೆ. ವಿದ್ಯಾರ್ಥಿಗಳು ಅಧ್ಯಯನದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಬೇಡದ ವಿಚಾರಗಳಿಗೆ ಸಮಯ ವ್ಯರ್ಥ ಮಾಡದಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು ಬಣ್ಣ

ತುಲಾ

ಕುಟುಂಬದಲ್ಲಿ ಸ್ನೇಹದ ಮನೋಭಾವನೆಯ ವಾತಾವರಣ ಇರುತ್ತದೆ. ಮನೆಯ ಆಧನೀಕತೆಗೆ ಹೆಚ್ಚಿನ ಹಣ ಖರ್ಚಾಗಬಹುದು. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳು ನಿಮ್ಮ ಪರವಾಗಿರುತ್ತವೆ. ವ್ಯಾಪಾರ ವ್ಯವಹಾರದಲ್ಲಿ ಬುದ್ಧಿವಂತಿಕೆಯ ಫಲವಾಗಿ ಉತ್ತಮ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುನ್ನಡೆಯುವರು. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಹಣಕಾಸಿನ ವ್ಯವಹಾರದಲ್ಲಿ ಹಾನಿಯಾಗುತ್ತದೆ. ಅನುಭವಸ್ಥರ ಸಲಹೆಯನ್ನು ಪಾಲಿಸಿ. ಆತ್ಮೀಯರೊಂದಿಗೆ ವಿವಾಹಯೋಗವಿದೆ. ಪರೋಪಕಾರಿ ಕೆಲಸದಲ್ಲಿ ಪಾಲ್ಗೊಳ್ಳುವಿರಿ. ಚಿನ್ನಾಭರಣಗಳಿಗೆ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಭೂವಿವಾದವೊಂದು ನೆಮ್ಮದಿ ಕೆಡಿಸುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ವೃಶ್ಚಿಕ

ಕುಟುಂಬದಲ್ಲಿನ ತೊಂದರೆಗಳಿಗೆ ಪ್ರೀತಿ ವಿಶ್ವಾಸವೇ ನಿಜವಾದ ಪರಿಹಾರ. ಅರೋಗ್ಯದಲ್ಲಿ ಚೇತರಿಕೆ ಇರುತ್ತದೆ. ಹಳೆಯ ಸ್ನೇಹಿತರ ಭೇಟಿ ಹೊಸ ಆಯಾಮವನ್ನು ಉಂಟು ಮಾಡುತ್ತದೆ. ಉದ್ಯೋಗದಲ್ಲಿ ಎಲ್ಲರ ಸಹಾಯ ದೊರೆಯುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಏಳು ಬೀಳು ಉಂಟಾಗಬಹುದು. ಅವಶ್ಯಕತೆ ಇದ್ದಲ್ಲಿ ಮಾತ್ರ ಹಣ ವೆಚ್ಚಮಾಡಿರಿ. ಸೋದರಿಯ ಪ್ರೀತಿ ಹೊಸ ಸ್ಪೂರ್ತಿಯನ್ನು ನೀಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ತಾಳ್ಮೆಯಿಂದ ವರ್ತಿಸಿ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ವಿದ್ಯಾರ್ಥಿಗಳು ಹೊಸ ಆಶಯದೊಂದಿಗೆ ಇರುತ್ತಾರೆ. ಹಣಕಾಸಿನ ವ್ಯವಹಾರದಲ್ಲಿ ಲಾಭವಿರುತ್ತದೆ. ಬೆಳ್ಳಿಯ ಪದಾರ್ಥಗಳನ್ನು ಕೊಳ್ಳುವಿರಿ. ಆತ್ಮೀಯರೊಂದಿಗೆ ಸಂತಸದಿಂದ ವೇಳೆ ಕಳೆಯುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

-----------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).