ತಾಯಿಯ ಆರೋಗ್ಯದಲ್ಲಿ ಏರಿಳಿತ, ಕೆಲಸದ ಸ್ಥಳದಲ್ಲಿ ಅಪವಾದ ಹೊರಲಿದ್ದೀರಿ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ತಾಯಿಯ ಆರೋಗ್ಯದಲ್ಲಿ ಏರಿಳಿತ, ಕೆಲಸದ ಸ್ಥಳದಲ್ಲಿ ಅಪವಾದ ಹೊರಲಿದ್ದೀರಿ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ತಾಯಿಯ ಆರೋಗ್ಯದಲ್ಲಿ ಏರಿಳಿತ, ಕೆಲಸದ ಸ್ಥಳದಲ್ಲಿ ಅಪವಾದ ಹೊರಲಿದ್ದೀರಿ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಜುಲೈ 5ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (5th July 2024 Daily Horoscope).

ತಾಯಿಯ ಆರೋಗ್ಯದಲ್ಲಿ ಏರಿಳಿತ, ಕೆಲಸದ ಸ್ಥಳದಲ್ಲಿ ಅಪವಾದ ಹೊರಲಿದ್ದೀರಿ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ತಾಯಿಯ ಆರೋಗ್ಯದಲ್ಲಿ ಏರಿಳಿತ, ಕೆಲಸದ ಸ್ಥಳದಲ್ಲಿ ಅಪವಾದ ಹೊರಲಿದ್ದೀರಿ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (5th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ : ಅಮಾವಾಸ್ಯೆ ರಾತ್ರಿ 03.49 ರವರೆಗು ಇದ್ದು ನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ: ಆರ್ದ್ರೆ ನಕ್ಷತ್ರವು ರಾತ್ರಿ 04.16 ರವರೆಗೆ ಇದ್ದು ನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 10.51 ರಿಂದ 12.27

ರಾಶಿಫಲ

ಸಿಂಹ

ವೃತ್ತಿ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರಲಿವೆ. ನಿಮ್ಮ ತಾಯಿಯ ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ಮಕ್ಕಳಿಗೆ ಉದ್ಯೋಗ ದೊರೆತರೂ ನೆಮ್ಮದಿ ಇರುವುದಿಲ್ಲ. ನೀವು ಉದ್ಯೋಗದ ಸಲುವಾಗಿ ಕುಟುಂಬದಿಂದ ದೂರ ಉಳಿಯಬೇಕಾದ ಸಂದರ್ಭ ಎದುರಾಗುತ್ತದೆ. ಕಲಾವಿದರಿಗೆ ಉನ್ನತ ಮನ್ನಣೆ ದೊರೆಯುತ್ತದೆ. ಹಳೆಯ ಸ್ನೇಹಿತರೊಬ್ಬರನ್ನು ಭೇಟಿ ಮಾಡುವಿರಿ. ಅಧೀನದಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಂದ ಅಪವಾದವೊಂದನ್ನು ಎದುರಿಸುವಿರಿ. ನೀರಿನಿಂದ ತೊಂದರೆ ಇದೆ ಎಚ್ಚರಿಕೆ ಇರಲಿ. ಪುಟ್ಟ ಮಕ್ಕಳ ಆರೋಗ್ಯದಲ್ಲಿ ತೊಂದರೆ ಇದೆ. ನಿಮ್ಮ ಮಕ್ಕಳ ವಿದ್ಯಾಭ್ಯಾಸದಲ್ಲಿ ಬದಲಾವಣೆಗಳು ಕಂಡುಬರುತ್ತವೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಬಿಳಿ ಬಣ್ಣ

ಕನ್ಯಾ

ಕುಟುಂಬದ ಹಿರಿಯರ ಹೆಸರಿನಲ್ಲಿ ವೃದ್ಧಾಶ್ರಮದಲ್ಲಿ ಆಹಾರದ ವ್ಯವಸ್ಥೆ ಮಾಡುವಿರಿ. ಕಷ್ಟ ದಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ನಿಮ್ಮ ತಾಯಿಯವರಿಗೆ ಶೀತಕ್ಕೆ ಸಂಬಂಧಿಸಿದ ತೊಂದರೆ ಇರುತ್ತದೆ. ಕೃಷಿ ಕಾರ್ಯದಲ್ಲಿ ಆಸಕ್ತಿ ಮೂಡುತ್ತದೆ. ನಿಮ್ಮ ಮಕ್ಕಳಿಗೆ ಗುರು ಸಮಾನವಾದ ಉದ್ಯೋಗ ದೊರೆಯುತ್ತದೆ. ನೀವು ತೊಂದರೆಗೆ ಸಿಲುಕಿದಾಗ ತಂದೆಯವರಿಂದ ಸಹಕಾರ ದೊರೆಯಲಿದೆ. ನಿಮ್ಮಲ್ಲಿರುವ ಹಟದ ಪ್ರಕೃತಿ ಸೋಲಿನಿಂದ ಪಾರು ಮಾಡುತ್ತದೆ. ಉಪಯೋಗ ಇರಲಿ ಇಲ್ಲದೆ ಹೋಗಲಿ ಪದೇ ಪದೇ ಪ್ರವಾಸ ಮಾಡಬೇಕಾಗುತ್ತದೆ. ಆತುರದ ಬುದ್ಧಿಯನ್ನುತೊರೆದು ಸಂಯಮದಿಂದ ವರ್ತಿಸಿದರೆ ಯಾವುದೇ ತೊಂದರೆ ಕಂಡು ಬರುವುದಿಲ್ಲ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ : ಬೂದು

ತುಲಾ

ಸೋದರರ ಜೊತೆಯಲ್ಲಿ ಉತ್ತಮ ಅನುಬಂಧ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ದುಡುಕಿ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳುವುದಿಲ್ಲ. ಆದಾಯವು ಹೆಚ್ಚುತ್ತದೆ. ಕಮಿಷನ್ ಆಧಾರಿತ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಇರುತ್ತದೆ. ಕುಟುಂಬದ ಗೌರವಕ್ಕೆ ಹಾನಿ ಉಂಟು ಮಾಡುವ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಯಾವುದೇ ಯೋಚನೆ ಇಲ್ಲದೆ ನಿಮ್ಮ ಮನಸ್ಸಿಗೆ ತೋರಿದ ವಿಚಾರವನ್ನು ಹೇಳುವಿರಿ. ನಾನೇ ಹೆಚ್ಚು ನನ್ನ ಕೆಲಸವೇ ಸರಿ ಎಂಬ ಭಾವನೆ ಇರುತ್ತದೆ. ಉದ್ಯೋಗದಲ್ಲಿ ನಿಮಗೆ ಉನ್ನತ ಅಧಿಕಾರ ದೊರೆಯಲಿದೆ. ನಿಮ್ಮ ಅಧೀನದಲ್ಲಿರುವ ಕಾರ್ಮಿಕರ ಜೊತೆ ಸೋದರ ಪ್ರೀತಿಯಿಂದ ಇರುವಿರಿ. ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕಂದು ಬಣ್ಣ

ವೃಶ್ಚಿಕ

ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸಿ. ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳು ಎದುರಾಗಲಿವೆ. ಜನಸಾಮಾನ್ಯರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ತಂದೆಯವರ ಕೋಪದ ಬುದ್ಧಿಯಿಂದ ಎಲ್ಲರಲ್ಲೂ ಬೇಸರ ಮೂಡುತ್ತದೆ. ಹೆಣ್ಣು ಮಕ್ಕಳಿಗೆ ಉತ್ತಮ ಸಹಾಯ ಸಹಕಾರ ದೊರೆಯುತ್ತದೆ. ತಂದೆಗೆ ಸಂಬಂಧಪಟ್ಟ ವಂಶದ ಆಸ್ತಿಯ ಅಲ್ಪ ಭಾಗ ಪರರ ಪಾಲಾಗುತ್ತದೆ. ಸೋದರಿಗೆ ಅನಾರೋಗ್ಯವಿರುತ್ತದೆ. ಗೃಹಿಣಿಯರು ಬುದ್ಧಿವಂತಿಕೆಯಿಂದ ಹಣ ಮತ್ತು ಒಡವೆಗಳನ್ನು ಶೇಖರಿಸಿ ಇಡುತ್ತಾರೆ. ಮಗಳು ಅಥವಾ ಮಗನಿಗೆ ಉಡುಗೊರೆಯಾಗಿ ವಾಹನವನ್ನು ನೀಡುವಿರಿ. ಸೋದರ ಅಥವಾ ಸೋದರಿಗೆ ಸಂಬಂಧದಲ್ಲಿ ವಿವಾಹ ನಿಶ್ಚಯ ಆಗುತ್ತದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ತಿಳಿ ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.