ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸಂಬಂಧಿಕರಿಂದ ಬೇಸರದ ಸುದ್ದಿ, ಯಂತ್ರ-ವಾಹನದಿಂದ ತೊಂದರೆ ಅನುಭವಿಸಲಿದ್ದೀರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಸಂಬಂಧಿಕರಿಂದ ಬೇಸರದ ಸುದ್ದಿ, ಯಂತ್ರ-ವಾಹನದಿಂದ ತೊಂದರೆ ಅನುಭವಿಸಲಿದ್ದೀರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಜುಲೈ 5ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (5th July 2024 Daily Horoscope).

ಸಂಬಂಧಿಕರಿಂದ ಬೇಸರದ ಸುದ್ದಿ, ಯಂತ್ರ-ವಾಹನದಿಂದ ತೊಂದರೆ ಅನುಭವಿಸಲಿದ್ದೀರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಸಂಬಂಧಿಕರಿಂದ ಬೇಸರದ ಸುದ್ದಿ, ಯಂತ್ರ-ವಾಹನದಿಂದ ತೊಂದರೆ ಅನುಭವಿಸಲಿದ್ದೀರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(5th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ : ಅಮಾವಾಸ್ಯೆ ರಾತ್ರಿ 03.49 ರವರೆಗು ಇದ್ದು ನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ: ಆರ್ದ್ರೆ ನಕ್ಷತ್ರವು ರಾತ್ರಿ 04.16 ರವರೆಗೆ ಇದ್ದು ನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 10.51 ರಿಂದ 12.27

ರಾಶಿಫಲ

ಧನಸ್ಸು

ಸಂಬಂಧಿಕರಿಂದ ಬೇಸರದ ಸುದ್ದಿಯೊಂದು ಬರಲಿದೆ. ನಿಮ್ಮ ತಂದೆಯವರು ಆಪತ್ತಿನಿಂದ ಪಾರಾಗುತ್ತಾರೆ. ಉದ್ಯೋಗದಲ್ಲಿ ಅಡ್ಡಿ ಆತಂಕಗಳು ಎದುರಾದರೂ ಯಾವುದೇ ತೊಂದರೆ ಉಂಟಾಗುವುದಿಲ್ಲ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ನಿಮ್ಮಲ್ಲಿನ ಬುದ್ದಿವಂತಿಕೆ ಮತ್ತು ಆತ್ಮವಿಶ್ವಾಸವು ಸಮಸ್ಯೆಯನ್ನು ಗೆಲ್ಲಲು ಕಾರಣವಾಗುತ್ತದೆ. ಸಹೋದ್ಯೋಗಿಗಳ ತೊಂದರೆ ಎದುರಾದರೂ ಹಿರಿಯ ಅಧಿಕಾರಿಗಳ ಬೆಂಬಲ ನಿಮಗಿರುತ್ತದೆ. ವೃತ್ತಿಯಲ್ಲಿ ಪ್ರಗತಿಪರ ಬದಲಾವಣೆಗಳು ಕಂಡು ಬರುತ್ತವೆ. ಯುವಕ ಯುವತಿಯರಿಗೆ ವಿಶೇಷವಾದ ಅನುಕೂಲತೆಗಳು ದೊರೆಯುತ್ತವೆ. ಆತುರದ ನಿರ್ಧಾರಗಳು ನಿಮ್ಮನ್ನು ಕಷ್ಟಕ್ಕೆ ದೂಡುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಮಾತ್ರ ತಮ್ಮ ಕಾರ್ಯ ಸಾಧಿಸಬಲ್ಲರು.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನಸುಗೆಂಪು

ಮಕರ

ನಿಮ್ಮ ಸೋದರರು ಹಣಕಾಸಿನ ತೊಂದರೆಗೆ ಸಿಲುಕುತ್ತಾರೆ. ನಿಮ್ಮ ತಂದೆಯವರನ್ನು ಸಂಬಂಧಿಕರ ಉಪಟಳದಿಂದ ಪಾರು ಮಾಡುವಿರಿ. ವೃತ್ತಿಜೀವನದಲ್ಲಿ ಬೇಸರದ ಸನ್ನಿವೇಶಗಳು ಎದುರಾಗಲಿವೆ. ನಿಮ್ಮ ಮನಸ್ಸಿಗೆ ಶಾಂತಿ ನೆಮ್ಮದಿ ಇರುವುದಿಲ್ಲ. ಸ್ವಜನ ಪಕ್ಷಪಾತವು ನಿಮ್ಮ ಪ್ರಗತಿಗೆ ಅಡ್ಡಗಾಲಾಗುತ್ತದೆ. ಅರಿವಿಲ್ಲದಂತೆ ನಿಮ್ಮ ಮಕ್ಕಳು ವಿದ್ಯಾಭ್ಯಾಸದ ವಿಚಾರದಲ್ಲಿ ತಪ್ಪು ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಂಧು ಬಾಂಧವರ ಜೊತೆ ಉತ್ತಮ ಒಡನಾಟ ಇರುತ್ತದೆ. ಜೀವನದಲ್ಲಿ ತೊಂದರೆಗಳು ಎದುರಾಗ ನಿಮ್ಮಲ್ಲಿ ಆತ್ಮವಿಶ್ವಾಸ ಮತ್ತು ಗೆಲ್ಲಲೇಬೇಕೆಂಬ ಹಟ ಹೆಚ್ಚುತ್ತದೆ. ಅತಿಯಾದ ನಿಧಾನತೆಯಿಂದ ದೊರೆಯುವ ಅವಕಾಶಗಳನ್ನು ಕಳೆದುಕೊಳ್ಳುವಿರಿ. ಜೀವನದ ಕ್ರಮವನ್ನು ಬದಲಾಯಿಸಿಕೊಳ್ಳುವಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕುಂಭ

ತಂದೆಯವರಿಗೆ ಇದ್ದ ದೊಡ್ಡ ಮಟ್ಟದ ಹೆಸರು ನಿಮ್ಮ ಜೀವನವನ್ನು ರೂಪಿಸುತ್ತದೆ. ನಿಮ್ಮ ಸುತ್ತಮುತ್ತ ವಿರೋಧಿಗಳಿದ್ದರೂ ಅಂಜದೆ ಕೆಲಸ ಕಾರ್ಯದಲ್ಲಿ ತೊಡಗುವಿರಿ. ಸ್ನೇಹಿತರನ್ನು ಹೆಚ್ಚಿನ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಬಂಧು-ಬಳಗದಿಂದ ದೂರ ಉಳಿಯಲು ಬಯಸುವಿರಿ. ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಯಂತ್ರ ಅಥವಾ ವಾಹನದ ತೊಂದರೆಯನ್ನು ಎದುರಿಸುವಿರಿ. ಸೋದರನ ಜೀವನದ ರೀತಿ ನೀತಿಯ ಬಗ್ಗೆ ಗಮನವಿರಲಿ. ದಂಪತಿ ನಡುವೆ ಅನಾವಶ್ಯಕ ವಾದ ವಿವಾದಗಳಿರುತ್ತವೆ. ಬೇರೆಯವರ ಹಣಕಾಸಿನ ಜವಾಬ್ದಾರಿಯನ್ನು ವಹಿಸಿಕೊಂಡಲ್ಲಿ ತೊಂದರೆ ಇದೆ. ನಿಮ್ಮ ಮಕ್ಕಳಿಗೆ ಕಲೆಯೊಂದು ಒಲಿದಿರುತ್ತದೆ. ಅವರು ಮಾಡುವ ಕೆಲಸ ಕಾರ್ಯಗಳಲ್ಲಿ ಸದಾ ಉನ್ನತ ಮಟ್ಟದ ಯಶಸ್ಸು ಗಳಿಸುತ್ತಾರೆ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ

ಮೀನ

ಯಾವುದೇ ರೀತಿಯ ಅಡ್ಡಿ ಆತಂಕಗಳನ್ನು ಮೀರಿ ಕೆಲಸ ಕಾರ್ಯಗಳನ್ನು ಮಾಡುವಿರಿ. ಸಮಯಕ್ಕೆ ತಕ್ಕಂತೆ ಮನಸ್ಸನ್ನು ಬದಲಾಯಿಸಬಲ್ಲಿರಿ. ಇದರಿಂದ ಯಶಸ್ಸು ಸದಾಕಾಲ ನಿಮಗೆ ದೊರೆಯುತ್ತದೆ. ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆ ಇರುವುದಿಲ್ಲ. ಇದರಿಂದ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ ಸದಾಕಾಲ ಏಕಾಂಗಿಯಾಗಿ ಇರಲು ಬಯಸುವಿರಿ ಸ್ನೇಹಿತರೊಂದಿಗೆ ಸಂತೋಷದಿಂದ ಇರುವಿರಿ. ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಇರುವ ಜನರ ಸ್ನೇಹ ಪ್ರೀತಿಯನ್ನು ಸಂಪಾದಿಸುವಿರಿ. ಭೂ ವ್ಯವಹಾರದಲ್ಲಿ ನಿರೀಕ್ಷಿತ ಲಾಭವನ್ನು ಗಳಿಸುವಿರಿ. ಸಣ್ಣಪುಟ್ಟ ಕೆಲಸ ಕಾರ್ಯಗಳಾದರೂ ಹೆಚ್ಚಿನ ಶ್ರದ್ಧೆಯಿಂದ ಮಾಡಬಯಸುವಿರಿ. ತಪ್ಪು ಮಾಡಿ ಕ್ಷಮೆ ಕೇಳುವ ಪರಿಸ್ಥಿತಿ ಎದುರಾಗುವುದಿಲ್ಲ. ನ್ಯಾಯ ನೀತಿಗೆ ಹೆಚ್ಚಿನ ಗೌರವ ನೀಡುವಿರಿ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.