ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಗಣ್ಯ ವ್ಯಕ್ತಿಗಳ ಪರಿಚಯ, ಉತ್ತಮ ಆದಾಯವಿದ್ದರೂ ಹಣದ ಕೊರತೆ; ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ

ಗಣ್ಯ ವ್ಯಕ್ತಿಗಳ ಪರಿಚಯ, ಉತ್ತಮ ಆದಾಯವಿದ್ದರೂ ಹಣದ ಕೊರತೆ; ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ

5 ಜೂನ್‌ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (5th June 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ
ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (5th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ : ಚತುರ್ದಶಿ ರಾತ್ರಿ 07.10 ರವರೆಗೂ ಇರುತ್ತದೆ. ಆನಂತರ ಅಮಾವಾಸ್ಯೆ ಆರಂಭವಾಗುತ್ತದೆ.

ನಕ್ಷತ್ರ : ಕೃತ್ತಿಕಾ ನಕ್ಷತ್ರವು ರಾ. 09.00ರವರೆಗು ಇರುತ್ತದೆ. ಆನಂತರ ರೋಹಿಣಿ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.43

ರಾಹುಕಾಲ: 12.22 ರಿಂದ 01.58

ರಾಶಿಫಲ

ಮೇಷ

ಗೃಹಿಣಿಯರ ಆರೋಗ್ಯದಲ್ಲಿ ತೊಂದರೆ ಕಂಡುಬರಲಿದೆ. ಮನೆಯ ಜವಾಬ್ದಾರಿ ಜೊತೆಗೆ ವಿಶ್ರಾಂತಿಯ ಅವಶ್ಯಕತೆ ಇದೆ. ಉತ್ತಮ ಆದಾಯವಿದ್ದರೂ ಹಣದ ಕೊರತೆ ನಿಮ್ಮನ್ನು ಕಾಡುತ್ತದೆ. ಅನಾವಶ್ಯಕವಾಗಿ ಚಿಂತೆ ಅಥವ ಒತ್ತಡಕ್ಕೆ ಒಳಗಾಗದೆ ಧೈರ್ಯದಿಂದ ಮುಂದುವರೆಯುವಿರಿ. ಇರುವ ಹಣದಲ್ಲಿಯೇ ಮನೆ ನಿಭಾಯಿಸಿ. ತಾನಾಗಿಯೆ ದೊರೆವ ಹಣದ ಸಹಾಯವನ್ನು ತಿರಸ್ಕರಿಸದಿರಿ. ಆತ್ಮೀಯರಿಗೆ ಉಡುಗೊರೆಗಳನ್ನು ನೀಡಬೇಕಾಗುತ್ತದೆ. ನೀಡಿದ ಭರವಸೆಯನ್ನು ಪೂರೈಸದ ಕಾರಣ ಮಕ್ಕಳ ವಿರೋಧ ಎದುರಿಸಬೇಕಾಗುತ್ತದೆ. ಉದ್ಯೋಗದಲ್ಲಿ ನಿಮ್ಮ ನಿರೀಕ್ಷೆ ನಿಜವಾಗಲಿದೆ. ವಾದದಲ್ಲಿ ತೊಡಗದೆ ಮಾತುಕತೆಯಿಂದ ವಿವಾದವನ್ನು ಕೊನೆಗೊಳಿಸುವಿರಿ. ಸಂಗಾತಿಯ ಮಾತುಗಳಿಗೆ ಒಪ್ಪಿಗೆ ಸೂಚಿಸುವಿರಿ. ಕುಟುಂಬದಲ್ಲಿ ಸಂತಸ ಮನೆಮಾಡಿರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು

ವೃಷಭ

ಯಾವುದೇ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವುದಿಲ್ಲ. ಸಂತೋಷಕ್ಕಾಗಿ ಕುಟುಂಬದ ಸದಸ್ಯರ ಜೊತೆ ಪ್ರವಾಸಕ್ಕೆ ತೆರಳುವಿರಿ. ನಿಮ್ಮಲ್ಲಿನ ಹಣವನ್ನು ಧಾರ್ಮಿಕ ಚಟುವಟಿಕೆಗಳಿಗೆ ಬಳಸುವಿರಿ. ಹೊರಾಂಗಣ ಕ್ರೀಡೆಯಲ್ಲಿ ಆಸಕ್ತಿ ಇರುವವರಿಗೆ ವಿನೂತನ ಅವಕಾಶ ದೊರೆಯುತ್ತದೆ. ಆತ್ಮೀಯರ ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಮನೆಯ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ಸಮಾಜದ ಗಣ್ಯವ್ಯಕ್ತಿಗಳ ಜೊತೆ ಬಾಂಧವ್ಯ ಸುಧಾರಿಸುತ್ತದೆ. ನಿಮ್ಮ ಸಲಹೆಯನ್ನು ಒಪ್ಪದೆ ಮಕ್ಕಳು ತೊಂದರೆಗೆ ಒಳಗಾಗುತ್ತಾರೆ. ಉದ್ಯೋಗದಲ್ಲಿ ಯಾವುದೆ ತೊಂದರೆ ಕಾಣದು. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಹೊಸಬರ ಆಗಮನವು ಆದಾಯವನ್ನು ಹೆಚ್ಚಿಸುತ್ತದೆ. ಮತ್ತೊಬ್ಬರ ಜೊತೆ ಮಾತನಾಡುವಾಗಿ ಯೋಚಿಸಿ. ಶಾಂತಿ ಸಹನೆಯಿಂದ ಇರುವುದು ಒಳ್ಳೆಯದು.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಮಿಥುನ

ನಿಮ್ಮಲ್ಲಿನ ಸ್ವಾರ್ಥರಹಿತ ಮನೋಭಾವನೆ ಎಲ್ಲರ ಮನ ಗೆಲ್ಲುತ್ತದೆ. ಕೆಲಸ ಮಾಡುವ ರೀತಿಯಿಂದ ಸಹೋದ್ಯೋಗಿಗಳ ವಿಶ್ವಾಸವನ್ನು ಗಳಿಸುವಿರಿ. ಸುಲಭವಾಗಿ ಹೊಗಳಿಕೆಗೆ ಮರುಳಾಗುವುದಿಲ್ಲ. ಸ್ಟಾಕ್ ಮತ್ತು ಷೇರುಗಳ ವ್ಯವಹಾರದಲ್ಲಿ ಮಧ್ಯಮಗತಿಯ ವರಮಾನ ಗಳಿಸುವಿರಿ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಲಾಭ ಗಳಿಸುವಿರಿ. ಮಕ್ಕಳು ನಿಮ್ಮ ಪ್ರೀತಿ ವಿಶ್ವಾಸವನ್ನು ನಿರೀಕ್ಷಿಸುತ್ತಾರೆ ನಿರಾಸೆ ಮಾಡದಿರಿ. ಕುಟುಂಬದಲ್ಲಿ ನೆಮ್ಮದಿ ಮತ್ತು ಸಂತೋಷ ಇರುತ್ತದೆ. ಕುಟುಂಬದ ಹಿರಿಯರೊಡನೆ ಧಾರ್ಮಿಕ ಸ್ಥಳಕ್ಕೆ ತೆರಳುವ ಸೂಚನೆಗಳಿವೆ. ಸ್ನೇಹಿತರ ಮೂಲಕ ನಿಮ್ಮ ಮುಖ್ಯ ಕೆಲಸವೊಂದು ಕೈಗೂಡಲಿದೆ. ದೈನಂದಿನ ಜೀವನದಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾದರೂ ಯಾವುದೇ ತೊಂದರೆ ಎದುರಾಗದು.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು

ಕಟಕ

ಮಿತಿ ಇಲ್ಲದ ಜವಾಬ್ದಾರಿಗಳ ನಡುವೆಯೂ ಎಲ್ಲರೊಡನೆ ಸಂತಸದಿಂದ ಇರುವಿರಿ. ಸಹೋದ್ಯೋಗಿಗಳ ಜೊತೆ ಸ್ನೇಹ ಪ್ರೀತಿಯಿಂದ ವರ್ತಿಸುವಿರಿ. ಆರಂಭಿಸುವ ಯಾವುದೇ ಕೆಲಸವಾದರೂ ಯಶಸ್ಸು ಗಳಿಸುವಿರಿ. ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳದಿರಿ. ಬೇರೆಯವರ ಜಯವನ್ನೂ ಆನಂದಿಸುವಿರಿ. ಸಮಾಜದ ಗೌರವವೊಂದು ನಿಮಗೆ ದೊರೆಯಲಿದೆ. ಆರೋಗ್ಯದಲ್ಲಿ ಚೇತರಿಕೆ ಇರುತ್ತದೆ. ಬೆಲೆ ಬಾಳುವ ಪ್ರಾಚೀನಕಾಲದ ವಸ್ತುಗಳನ್ನು ಕೊಳ್ಳುವಿರಿ. ಸಂಗಾತಿಗೆ ಚಿನ್ನ ಬೆಳ್ಳಿಯ ಆಭರಣವನ್ನು ಉಡುಗೊರೆಯಾಗಿ ನೀಡುವಿರಿ. ಪ್ರಯತ್ನಪಟ್ಟಲ್ಲಿ ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ತಪ್ಪು ತಿಳುವಳಿಕೆಯಿಂದ ಸೋದರರ ಬಗ್ಗೆ ಅಸಮಾಧಾನ ಉಂಟಾಗಲಿದೆ. ದಂಪತಿ ನಡುವೆ ಉತ್ತಮ ಅನುಬಂಧ ಇರುತ್ತದೆ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).