ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ನಿಮ್ಮ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಳ್ಳುವ ಜನರ ಬಗ್ಗೆ ಎಚ್ಚರವಿರಲಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

ನಿಮ್ಮ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಳ್ಳುವ ಜನರ ಬಗ್ಗೆ ಎಚ್ಚರವಿರಲಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

5 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (5th June 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (5th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ : ಚತುರ್ದಶಿ ರಾತ್ರಿ 07.10 ರವರೆಗೂ ಇರುತ್ತದೆ. ಆನಂತರ ಅಮಾವಾಸ್ಯೆ ಆರಂಭವಾಗುತ್ತದೆ.

ನಕ್ಷತ್ರ : ಕೃತ್ತಿಕಾ ನಕ್ಷತ್ರವು ರಾ. 09.00ರವರೆಗು ಇರುತ್ತದೆ. ಆನಂತರ ರೋಹಿಣಿ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.43

ರಾಹುಕಾಲ: 12.22 ರಿಂದ 01.58

ರಾಶಿಫಲ

ಸಿಂಹ

ಆತುರದ ನಿರ್ಧಾರ ತೆಗೆದುಕೊಳ್ಳದೆ ಹೋದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಕುಟುಂಬದಲ್ಲಿ ಮಂಗಳಕಾರ್ಯವೊಂದನ್ನು ಆಯೋಜಿಸುವಿರಿ. ಮನಸ್ಸಿನ ಸಂತೋಷಕ್ಕಾಗಿ ಅಶಕ್ತರಿಗೆ ಹಣದ ಸಹಾಯ ಮಾಡುವಿರಿ. ಹಣ ಉಳಿತಾಯದ ಬಗ್ಗೆ ಕುಟುಂಬದ ಹಿರಿಯರ ಸಲಹೆ ಪಡೆಯುವಿರಿ. ಮಕ್ಕಳು ನಿಮ್ಮ ಮಾತುಗಳನ್ನು ಒಪ್ಪದೇ ಹೋಗಬಹುದು. ವಿದ್ಯಾರ್ಥಿಗಳು ಉನ್ನತ ಅಧ್ಯಯನದ ಬಗ್ಗೆ ಹೆಚ್ಚಿನ ಗಮನ ನೀಡುತ್ತಾರೆ. ಕಷ್ಟವೆನಿಸಿದರೂ ನಿಮ್ಮ ಮನದ ಆಶೋತ್ತರಗಳನ್ನು ಈಡೇರಿಸಿಕೊಳ್ಳುವಿರಿ. ಸಾಲದ ವ್ಯವಹಾರದಲ್ಲಿ ತೊಂದರೆ ಎದುರಾಗುತ್ತದೆ. ಸಂಗಾತಿ ಜೊತೆ ಪ್ರೀತಿ ವಿಶ್ವಾಸ ಹೆಚ್ಚುತ್ತದೆ. ಅಪೂರ್ಣಗೊಂಡ ಹಣಕಾಸಿನ ಯೋಜನೆಗಳನ್ನು ಪೂರ್ಣಗೊಳಿಸುವಿರಿ. ಮಕ್ಕಳ ವಿಚಾರಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನಸು ಗೆಂಪು

ಕನ್ಯಾ

ನಿಮ್ಮಲ್ಲಿನ ದೈಹಿಕ ಶಕ್ತಿಯು ಹೆಚ್ಚುತ್ತದೆ. ಸಾಹಸ ಕ್ರೀಡೆಗಳಲ್ಲಿ ಭಾಗವಹಿಸಿ ಯಶಸ್ಸನ್ನು ಗಳಿಸುವಿರಿ. ತೆಗೆದುಕೊಂಡ ತೀರ್ಮಾನಗಳನ್ನು ಅನಾವಶ್ಯಕವಾಗಿ ಬದಲಾಯಿಸುವಿರಿ. ನಿಮ್ಮ ತಪ್ಪನ್ನು ಮರೆತು ಬೇರೆಯವರನ್ನು ಟೀಕಿಸುವಿರಿ. ನಿಮ್ಮಆದಾಯದ ಮಟ್ಟ ಗಣನೀಯವಾಗಿ ಹೆಚ್ಚಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಆತುರದಿಂದ ಉದ್ಯೋಗ ಬದಲಾಯಿಸಿ ಒತ್ತಡಕ್ಕೆ ಒಳಗಾಗುವಿರಿ. ಕೆಲಸಕ್ಕೆ ಮೊದಲ ಆದ್ಯತೆ ನೀಡುವಿರಿ. ನಿಮ್ಮ ಬಗ್ಗೆ ಕುಟುಂಬದ ಸದಸ್ಯರಿಗೆ ಬೇಸರ ಇರುತ್ತದೆ. ವ್ಯಯುಕ್ತಿಕ ಜೀವನದ ಬಗ್ಗೆ ಯೋಚಿಸಬೇಕಾಗುತ್ತದೆ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೈಹಿಕವಾಗಿ ಬಳಲುವಿರಿ. ಬೇಸರ ಮರೆತು ನಿಮ್ಮ ಸಂಗಾತಿಯು ಸಹಾಯಕ್ಕೆ ಬರಲಿದ್ದಾರೆ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ತುಲಾ

ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗದು. ಸಮಯ ವ್ಯರ್ಥ ಮಾಡದೆ ಯಾವುದಾದರೊಂದು ಕೆಲಸದಲ್ಲಿ ನಿರತರಾಗುವಿರಿ. ಆತುರದಿಂದ ಯಶಸ್ಸನ್ನು ಗಳಿಸಲು ಸಾಧ್ಯವಾಗದು ಎಂಬ ನಿಜ ತಿಳಿಯುವಿರಿ. ಬೇರೆಯವರ ತಪ್ಪನ್ನು ಎಲ್ಲರಿಗೂ ತಿಳಿಯುವಂತೆ ಮಾಡುವಿರಿ. ಸದಾಕಾಲ ಓಡಾಟದಲ್ಲಿ ಮಗ್ನರಾಗುವಿರಿ. ಮಾಡುವ ತಪ್ಪನ್ನು ಮರೆಮಾಚುವಿರಿ. ಹಣಕಾಸಿನ ವ್ಯವಹಾರದಲ್ಲಿ ಅಸಹಜ ನಿಲುವು ತಾಳುವಿರಿ. ಹೊಗಳುವವರ ಮಾತನ್ನು ನಿಜವೆಂದು ನಂಬುವಿರಿ. ಅತಿಯಾದ ಖರ್ಚು ವೆಚ್ಚಗಳನ್ನು ಕಡಿತಗೊಳಿಸಿ. ನಿಮ್ಮ ಸುತ್ತಮುತ್ತಲಿನ ಜನ ನಿಮ್ಮಒಳ್ಳೆಯತನವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಾರೆ. ಚಾಡಿ ಮಾತಿಗೆ ಓಗೊಡದಿರಿ. ಆತ್ಮೀಯರೊಬ್ಬರ ತಪ್ಪಿಗೆ ನೀವು ಬೆಲೆ ತೆರುವಿರಿ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ

ವೃಶ್ಚಿಕ

ಉದರ ಸಂಬಂಧಿ ಸಮಸ್ಯೆಯಿಂದ ಬಳಲುವಿರಿ. ಆಹಾರ ಕ್ರಮದ ಬದಲಾವಣೆಯಿಂದ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಬಹುದಿನದಿಂದ ಕಾಡುತ್ತಿದ್ದ ಹಣಕಾಸಿನ ಸಮಸ್ಯೆ ದೂರವಾಗಲಿದೆ. ಹಿಂದೊಮ್ಮೆ ನಿಮಗಾದ ತೊಂದರೆಗೆ ಪರಿಹಾರ ಪಡೆಯುವಿರಿ. ಸಣ್ಣ ಪುಟ್ಟ ವಿಷಗಳಿಗೂ ಕೋಪಗೊಳ್ಳುವಿರಿ. ಪಾಲುದಾರಿಕೆಯ ವ್ಯಾಪಾರದಲ್ಲಿ ಹಣ ಹೂಡಿ ಉತ್ತಮ ಲಾಭ ಗಳಿಸುವಿರಿ. ಜನಸಾಮಾನ್ಯರಿಗಾಗಿ ಸಂಧಾನ ಸಭೆ ನಡೆಸುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಹಣಕಾಸಿನ ವ್ಯವಹಾರದಲ್ಲಿ ಬೇರೆಯವರ ಹಸ್ತಕ್ಷೇಪದಿಂದ ತೊಂದರೆ ಉಂಟಾಗಬಹುರು. ಆತ್ಮೀಯರೊಬ್ಬರ ಜೊತೆ ವಿವಾದ ಉಂಟಾಗಬಹುದು. ಬೇರೆಯವರ ಕೆಲಸ ಕಾರ್ಯಗಳಲ್ಲಿ ಸಹಕರಿಸುವಿರಿ. ಹಣದ ತೊಂದರೆ ಇರುವುದಿಲ್ಲ. ಆದರೆ ಎಚ್ಚರಿಕೆಯಿಂದ ವ್ಯವಹರಿಸಬೇಕು. ನಿಮ್ಮ ಕೆಲಸ ಕಾರ್ಯಗಳಿಗೆ ಎಲ್ಲರ ಸಹಮತ ಇರುತ್ತದೆ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).