ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಆಡುವ ಮಾತಿನ ಮೇಲೆ ಎಚ್ಚರವಿರಲಿ, ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗೆ ಶಾಶ್ವತ ಪರಿಹಾರ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಆಡುವ ಮಾತಿನ ಮೇಲೆ ಎಚ್ಚರವಿರಲಿ, ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗೆ ಶಾಶ್ವತ ಪರಿಹಾರ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

5 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (5th June 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(5th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ : ಚತುರ್ದಶಿ ರಾತ್ರಿ 07.10 ರವರೆಗೂ ಇರುತ್ತದೆ. ಆನಂತರ ಅಮಾವಾಸ್ಯೆ ಆರಂಭವಾಗುತ್ತದೆ.

ನಕ್ಷತ್ರ : ಕೃತ್ತಿಕಾ ನಕ್ಷತ್ರವು ರಾ. 09.00ರವರೆಗು ಇರುತ್ತದೆ. ಆನಂತರ ರೋಹಿಣಿ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.43

ರಾಹುಕಾಲ: 12.22 ರಿಂದ 01.58

ರಾಶಿಫಲ

ಧನಸ್ಸು

ಮಾನಸಿಕ ಒತ್ತಡವನ್ನು ತಡೆಯಲಾರದೆ ಕೋಪಕ್ಕೆ ಒಳಗಾಗುವಿರಿ. ಅನಾವಶ್ಯಕವಾದ ಟೀಕೆಯಿಂದ ಬೇಸರಕ್ಕೆ ಒಳಗಾಗುವಿರಿ. ಅತಿಯಾದ ಚಿಂತೆಯಿಂದ ಆರೋಗ್ಯದ ತೊಂದರೆ ಉಂಟಾಗಲಿದೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ವ್ಯವಹರಿಸಿ. ಆದಾಯದಲ್ಲಿ ಸ್ಥಿರತೆ ಇರುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಲಾಭ ಇರಲಿದೆ. ನಿಮ್ಮ ಆಚಾರ ವಿಚಾರಗಳು ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಕುಟುಂಬದ ಒಗ್ಗಟ್ಟಿಗೆ ಧಕ್ಕೆ ಉಂಟಾಗುವ ಘಟನೆಯೊಂದು ನಡೆಯಲಿದೆ. ಆತ್ಮೀಯರು ಹಣದ ಸಹಾಯ ಮಾಡುತ್ತಾರೆ. ಮುಂಗೋಪದಿಂದ ವರ್ತಿಸುವ ಕಾರಣ ಉದ್ಯೋಗಾವಕಾಶವೊಂದು ಕೈಜಾರಲಿದೆ. ಸ್ಥಿರವಾದ ಮನಸ್ಥಿತಿ ಇದ್ದಲ್ಲಿ ಮಾತ್ರ ಧನಾತ್ಮಕ ಫಲತಾಂಶಗಳನ್ನು ಪಡೆಯಲು ಸಾದ್ಯವಾಗುತ್ತದೆ. ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರುವುದಿಲ್ಲ.

ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಆಕಾಶ ನೀಲಿ

ಮಕರ

ಮಕ್ಕಳ ಯಶಸ್ಸಿನಿಂದಾಗಿ ಮನಸ್ಸಿಗೆ ಸಂತಸ ನೆಮ್ಮದಿ ದೊರೆಯುತ್ತದೆ. ಧಾರ್ಮಿಕ ಗುರುಗಳನ್ನು ಭೇಟಿ ಮಾಡುವಿರಿ. ನಿಮ್ಮ ಆದಾಯದಲ್ಲಿ ಉತ್ತಮ ಮಟ್ಟದ ಪ್ರಗತಿ ಕಂಡುಬರುತ್ತದೆ. ಮಂಗಳಕಾರ್ಯಕ್ಕಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಕುಟುಂಬದ ಜವಾಬ್ದಾರಿಯನ್ನು ಯಶಸ್ಚಿಯಾಗಿ ನೆರವೇರಿಸುವಿರಿ. ಸಮಯಕ್ಕೆ ತಕ್ಕಂತೆ ವರ್ತಿಸುವ ಕಾರಣ ಸಂತೃಪ್ತಿಯ ಜೀವನ ನಡೆಸುವಿರಿ. ಸಂಗಾತಿಯ ಅವಶ್ಯಕತೆಗಳನ್ನು ಖುಷಿಯಿಂದ ಪೂರೈಸುವಿರಿ. ಮಕ್ಕಳ ಮೇಲಿನ ಪ್ರೀತಿಯಿಂದ ಮನದ ನೋವನ್ನು ಮರೆಯುವಿರಿ. ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳು ಶಾಶ್ವತ ಪರಿಹಾರದಿಂದ ಮರೆಯರಾಗುತ್ತದೆ. ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದ ಉಂಟಾಗಲಿವೆ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಕುಂಭ

ನಿಮ್ಮ ಮನದ ವಿಚಾರವನ್ನು ಯಾರೊಬ್ಬರೂ ಅರ್ಥಮಾಡಿಕೊಳ್ಳುವುದಿಲ್ಲ. ಕುಟುಂಬದ ವಿಚಾರದಲ್ಲಿ ಅನಾವಶ್ಯಕ ಗೊಂದಲಗಳು ಎದುರಾಗುತ್ತವೆ. ಸಮಯ ಸಂದರ್ಭವನ್ನು ಅರ್ಥ ಮಾಡಿಕೊಳ್ಳಲು ಪ್ರಯ್ಕತ್ನಿಸಿರಿ. ಒಂಟಿತನದಿಂದ ಬೇಸರಕ್ಕೆ ಒಳಗಾಗುವಿರಿ. ಮನದ ಆತಂಕದ ಭಾವನೆಯಿಂದ ಹೊರ ಬರಲು ಪ್ರಯತ್ನಿಸಿ. ದುಂದುಗಾರಿಕೆ ಖರ್ಚು ವೆಚ್ಚಗಳನ್ನು ಕಡಿತಗೊಳಿಸಿ. ಆತ್ಮೀಯರ ಜೊತೆಯಾತ ಮನದ ನೋವನ್ನು ಕಡಿಮೆ ಮಾಡಿರಿ. ಕೋಪವನ್ನು ಎಲ್ಲರೊಂದಿಗೆ ತೋರುವುದಿಲ್ಲ. ಆಡುವ ಮಾತಿನ ಮೇಲೆ ಎಚ್ಚರವಿರಲಿ. ನಿಮ್ಮದಲ್ಲದ ತಪ್ಪಿಗೆ ದಂಡ ತೆರುವಿರಿ. ಕಾನೂನಿನ ಹೋರಾಟದಲ್ಲಿ ಜಯ ಗಳಿಸುವಿರಿ. ಪ್ರತಿಯೊಂದು ಕ್ಷಣದಲ್ಲೂ ನಿಮ್ಮ ಸಂಗಾತಿಯ ಸಹಕಾರ ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭ ಗಳಿಸುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಎಲೆ ಹಸಿರು

ಮೀನ

ನಿಮ್ಮ ಕರ್ತವ್ಯಪ್ರಜ್ಞೆಗೆ ಎಲ್ಲರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತದೆ. ಉತ್ತಮ ನಾಯಕತ್ವದ ಗುಣಗಳಿಂದ ಎಲ್ಲರಿಂದ ಗುರುತಿಸಲ್ಪಡುವಿರಿ. ಶಾಂತರಾಗಿ ಕಂಡರೂ ನಿರಾಶೆ ಉಂಟಾದಲ್ಲಿ ಉದ್ವೇಗದಿಂದ ವರ್ತಿಸುವಿರಿ. ಸಣ್ಣ ಪುಟ್ಟ ವಿಚಾರರಗಳಿಗೂ ವಿಚಲಿತರಾಗುವಿರಿ. ಅತಿಯಾಗಿ ಚಿಂತಿಸಿದಲ್ಲಿ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಮಕ್ಕಳಿಂದ ನಿರಾಸೆಯಾದರೂ ಲಘುವಾಗಿ ಪರಿಗಣಿಸುವಿರಿ. ಕುಟುಂಬದಲ್ಲಿ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಹಿರಿಯರ ಉತ್ತಮ ಆರೋಗ್ಯ ನಿಮ್ಮಆನಂದಕ್ಕೆ ಕಾರಣವಾಗುತ್ತದೆ. ಹಣಕಾಸಿನ ಅನುಕೂಲತೆಯಿಂದ ನೆಮ್ಮದಿ ಗಳಿಸುವಿರಿ. ಉದ್ಯೋಗ ಸ್ಥಳದಲ್ಲಿ ನಿರಾಸೆಯ ಪ್ರತಿಕ್ರಿಯೆ ಕಂಡುಬರುತ್ತದೆ. ಪಾಲುದಾರಿಕೆ ವ್ಯಾಪಾರದಲ್ಲಿ ಎಚ್ಚರಿಕೆ ಇರಬೇಕು. ದಂಪತಿ ನಡುವೆ ಉತ್ತಮ ಅನುಬಂಧ ಇರಲಿದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಕೇಸರಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).