ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವಿಶ್ರಾಂತಿ ಇಲ್ಲದ ಕಾರಣ ಆರೋಗ್ಯದಲ್ಲಿ ತೊಂದರೆ, ವ್ಯಾಪಾರದಲ್ಲಿ ಉತ್ತಮ ಲಾಭವಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

Horoscope Today: ವಿಶ್ರಾಂತಿ ಇಲ್ಲದ ಕಾರಣ ಆರೋಗ್ಯದಲ್ಲಿ ತೊಂದರೆ, ವ್ಯಾಪಾರದಲ್ಲಿ ಉತ್ತಮ ಲಾಭವಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

5 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (5th May 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಯ ದಿನ ಭವಿಷ್ಯ ತಿಳಿಯಿರಿ.
ಮೇಷ, ವೃಷಭ, ಮಿಥುನ, ಕಟಕ ರಾಶಿಯ ದಿನ ಭವಿಷ್ಯ ತಿಳಿಯಿರಿ.

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (5th May 2024 Horoscope)

ಇಂದಿನ ಪಂಚಾಂಗ

ಶ್ರೀಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ: ದ್ವಾದಶಿ ಹ. 03.25 ರವರೆಗು ಇರುತ್ತದೆ ಆನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ: ಉತ್ತರಾಭಾದ್ರ ನಕ್ಷತ್ರವು ಸ. 06.04 ರವರೆಗು ಇರುತ್ತದೆ. ಆನಂತರ ರೇವತಿ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.35

ರಾಹುಕಾಲ: ಸಂಜೆ 05.04 ರಿಂದ ಸಂಜೆ 06.38

ಮೇಷ ರಾಶಿ

ಕುಟುಂಬದ ಆಂತರೀಕ ವ್ಯಾಜ್ಯಗಳು ಮಾತುಕತೆಯಿಂದ ಪರಿಹಾರವಾಗಲಿದೆ. ಹಳೆಯ ಭೂವಿವಾದವನ್ನು ಕಾನೂನಾತ್ಮಕವಾಗಿ ಪರಿಹರಿಸುವಿರಿ. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳಿಗೆ ಹೊಂದಿಕೊಂಡು ಬಾಳುವಿರಿ. ವ್ಯಾಪಾರ ವಹಿವಾಟಿನಲ್ಲಿ ಮುಂಚಿನ ಆಸಕ್ತಿ ಇರುವುದಿಲ್ಲ. ನಯವಾದ ಮಾತಿನಿಂದ ತೊಂದರೆಯಿಂದ ಪಾರಾಗುವಿರಿ. ವಿದ್ಯಾರ್ಥಿಗಳಿಗೆ ಕಲಿಕೆಯ ಅವಧಿಯಲ್ಲಿಯೇ ಅಂತರಾಷ್ಟ್ರೀಯ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಮೃದುವಾದ ಬೆಲೆ ಬಾಳುವ ವಸ್ತುಗಳ ಖರೀದಿ ಮಾಡುವಿರಿ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ವೃಷಭ ರಾಶಿ

ಆತ್ಮವಿಶ್ವಾಸದಿಂದ ಕುಟುಂಬದ ನಿರ್ವಹಣೆಯಲ್ಲಿ ಯಶಸ್ವಿ ಆಗುವಿರಿ. ಸ್ವಂತ ಹಣಕಾಸಿನ ವ್ಯವಹಾರದಲ್ಲಿ ಲೋಪದೋಷ ಕಂಡುಬರುತ್ತದೆ. ನಿರೀಕ್ಷೆ ಇಲ್ಲದೆ ಹಣಕಾಸಿನ ಸಂಸ್ಥೆಯ ನಿರ್ವಹಣೆ ನಿಮ್ಮದಾಗಲಿದೆ. ಉದ್ಯೋಗದಲ್ಲಿನ ಆತಂರಿಕ ಬದಲಾವಣೆಗಳು ವಿಶೇಷವಾದ ಅನುಕೂಲ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಮಧ್ಯಮ ಮಟ್ಟದ ಲಾಭ ದೊರೆಯುತ್ತದೆ. ಕುಟುಂಬದ ಹಿರಿಯರ ವ್ಯಾಪಾರಕ್ಕೆ ಸಹಾಯ ಮಾಡುವಿರಿ. ವಿದ್ಯಾರ್ಥಿಗಳಿಗೆ ವಿದೇಶಪ್ರಯಾಣ ಯೋಗವಿದೆ.

ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ : ಹಳದಿ ಬಣ್ಣ

ಮಿಥುನ ರಾಶಿ

ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ನೆಲೆಸಿರುತ್ತದೆ. ಹೆಚ್ಚಿನ ವೇತನದ ನಿರೀಕ್ಷೆಯಿಂದ ಉಧ್ಯೋಗವನ್ನು ಬದಲಾಯಿಸುವಿರಿ. ವ್ಯಾಪಾರ ವಹಿವಾಟಿನಲ್ಲಿ ಉತ್ತಮ ಲಾಭವಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಉತ್ತಮ ಬದಲಾವಣೆಗಳನ್ನು ಕಾಣಲಿದ್ದಾರೆ. ಉತ್ತಮ ಅನುಕೂಲತೆಗಾಗಿ ವಾಸ ಸ್ಥಳವನ್ನು ಬದಲಾಯಿಸುವಿರಿ. ಮನಸ್ಸಿಲ್ಲದೆ ಹೊಸ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ . ಸ್ನೇಹಿತರ ಜೊತೆಯಲ್ಲಿ ಹಣಕಾಸಿನ ವ್ಯವಹಾಲ್ಲಿ ಮನಸ್ತಾಪ ಉಂಟಾಗಲಿದೆ. ಅನಿವಾರ್ಯವಾಗಿ ಕುಟುಂಬದ ಹಿರಿಯರ ಕಟ್ಟುಪಾಡುಗಳಿಗೆ ಗೌರವ ನೀಡುವಿರಿ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಹಸಿರುಬಣ್ಣ

ಕಟಕ ರಾಶಿ

ಕುಟುಂಬದಲ್ಲಿ ಆರೋಗ್ಯದಲ್ಲಿ ಆತಂಕದ ಭಾವನೆ ಮನೆಮಾಡಿರುತ್ತದೆ. ಉದ್ಯೋಗದಲ್ಲಿ ಯಾವುದೆ ಅಡ್ಡಿ ಆತಂಕಗಳು ಇರುವುದಿಲ್ಲ. ಉದ್ಯೋಗವನ್ನು ಬದಲಿಸುವಿರಿ. ಸಮಾಜದಲ್ಲಿ ಉನ್ನತ ಸ್ಥಾನ ಗಳಿಸುವಿರಿ. ಆತುರದ ನಿರ್ದಾರದಿಂದ ವ್ಯಾಪಾರ ವ್ಯವಹಾರದಲ್ಲಿ ಹಿನ್ನೆಡೆ ಉಂಟಾಗುತ್ತದೆ. ವಿದ್ಯಾರ್ಥಿಗಳು ಉನ್ನತ ಸಾಧನೆಯನ್ನು ಮಾಡುತ್ತಾರೆ. ಕುಟುಂಬದ ಎಲ್ಲರ ಪ್ರೀತಿ ಗೆಲ್ಲುವಿರಿ. ಸಂಗಾತಿಯ ಆರೋಗ್ಯದಲ್ಲಿನ ತೊಂದರೆ ದೂರವಾಗುತ್ತದೆ. ಆಡುವ ಮಾತಿನ ಮೇಲೆ ಗಮನವಿರಲಿ. ಇರುವ ಮನೆಯನ್ನು ನವೀಕರಣಗೊಳಿಸಲು ಹೆಚ್ಚಿನ ಹಣ ಖರ್ಚಾಗುತ್ತದೆ. ಅನಿರೀಕ್ಷಿತ ಧನ ಲಾಭವಿದೆ. ಸಾಲದ ವ್ಯವಹಾರದಿಂದ ಕಸಿವಿಸಿ ಉಂಟಾಗಲಿದೆ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).