ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರದಲ್ಲಿನ ಸಮಸ್ಯೆ ಬಹುಕಾಲ ಉಳಿಯದು; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Horoscope Today: ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರದಲ್ಲಿನ ಸಮಸ್ಯೆ ಬಹುಕಾಲ ಉಳಿಯದು; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

5 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (5th May 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯ ಇಂದಿನ ರಾಶಿ ಭವಿಷ್ಯ ತಿಳಿಯಿರಿ.
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯ ಇಂದಿನ ರಾಶಿ ಭವಿಷ್ಯ ತಿಳಿಯಿರಿ.

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (5th May 2024 Horoscope)

ಶ್ರೀಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ: ದ್ವಾದಶಿ ಹ. 03.25 ರವರೆಗು ಇರುತ್ತದೆ ಆನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ: ಉತ್ತರಾಭಾದ್ರ ನಕ್ಷತ್ರವು ಸ. 06.04 ರವರೆಗು ಇರುತ್ತದೆ. ಆನಂತರ ರೇವತಿ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.35

ರಾಹುಕಾಲ: ಸಂಜೆ 05.04 ರಿಂದ ಸಂಜೆ 06.38

ಸಿಂಹ ರಾಶಿ

ನಿಮ್ಮ ವರ್ತನೆಯಿಂದ ಕುಟುಂಬದಲ್ಲಿ ಸಂತಸವನ್ನು ಉಂಟುಮಾಡುತ್ತದೆ. ಶಾಂತಿ ಸಹನೆಯಿಂದ ಎಲ್ಲರೊಂದಿಗೆ ಬಾಳುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಉಂಟಾಗುವುದಿಲ್ಲ. ನಿಮ್ಮ ಪಾತ್ರ ಇಲ್ಲದೆ ಯಾವುದೇ ಕೆಲಸ ಕಾರ್ಯಗಳು ನಡೆಯಲಾರದು. ಜನಸೇವೆ ಮಾಡುವಲ್ಲಿ ವೇಳೆ ಮೀಸಲಿಡುವಿರಿ. ಸಹೋದ್ಯೋಗಿಗಳ ಕಷ್ಟನಷ್ಟಗಳಿಗೆ ಸ್ಪಂದಿಸುವಿರಿ . ವ್ಯಾಪಾರ ವ್ಯವಹಾರದಲ್ಲಿ ಎದುರಾಗುವ ತೊಂದರೆ ಬಹುಕಾಲ ಉಳಿಯದು. ವಿದ್ಯಾರ್ಥಿಗಳು ಬುದ್ಧಿವಂತಿಕೆಯ ಮಾತುಕತೆಯಿಂದ ತಮ್ಮ ಕೆಲಸ ಸಾಧಿಸುತ್ತಾರೆ. ಕುಟುಂಬದ ಆಸ್ತಿಯ ವಿವಾದವು ಅಂತ್ಯಗೊಳ್ಳುತ್ತವೆ.

ಪರಿಹಾರ: ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಕನ್ಯಾ ರಾಶಿ

ಸಮಯದ ಅಭಾವದಿಂದ ಕುಟುಂಬದ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಲಿದೆ. ವಿದೇಶಿ ನಿರ್ವಹಣೆಯ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ . ತಂದೆಯವರೊಡನೆ ಪಾಲುಗಾರಿಕೆಯಲ್ಲಿ ವ್ಯಾಪಾರ ವ್ಯವಹಾರವನ್ನು ಆರಂಭಿಸುವಿರಿ. ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ದೊರೆಯುವ ಕಾರಣ ಮಹತ್ತರ ಬದಲಾವಣೆ ಉಂಟಾಗುತ್ತದೆ. ಹಣಕಾಸಿನ ಸಹಾಯ ದೊರೆತರೆ ದೊಡ್ಡ ಸಾಧನೆ ಮಾಡಬಲ್ಲಿರಿ. ಪ್ರವಾಸವನ್ನು ಆಯೋಜಿಸುವ ವ್ಯಾಪಾರದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ.

ಪರಿಹಾರ: ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 9

ಅಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ತುಲಾ ರಾಶಿ

ಕುಟುಂಬದ ಶಾಂತಿ ನೆಮ್ಮದಿ ಉಳಿಯುವಲ್ಲಿ ಮುಖ್ಯ ಪ್ರಾತ್ರಾ ವಹಿಸುವಿರಿ. ಆತುರದ ಬುದ್ಧಿ ನಿಮ್ಮಲ್ಲಿ ಇರುತ್ತದೆ. ಉಧ್ಯೋಗದಲ್ಲಿ ವಿಶೇಷ ಬದಲಾವಣೆ ಮತ್ತು ಉನ್ನತ ಗೌರವ ಲಭಿಸುತ್ತವೆ. ದೊರೆತ ಅವಕಾಶವನ್ನು ಬಳಸಿ ಉದ್ಯೋಗವನ್ನು ಬದಲಿಸಿ ವಿದೇಶಕ್ಕೆ ತೆರಳಬೇಕಾಗುತ್ತದೆ. ಮಹಿಳೆಯರು ಯಂತ್ರ ಸಂಬಂಧಿ ಸಂಸ್ಥೆಯ ಜೊತೆ ವ್ಯಾಪಾರದ ಒಪ್ಪಂದ ಮಾಡುತ್ತಾರೆ. ವಿದ್ಯಾರ್ಥಿಗಳು ಅತಿಯಾದ ಆತ್ಮವಿಶ್ಚಾಸದಿಂದ ಆತಂಕದ ಕ್ಷಣವನ್ನು ಎದುರಿಸಲಿದ್ದಾರೆ. ಅನಾವಶ್ಯಕ ವಾದ ವಿವಾದಗಳಿಂದ ದೂರ ಉಳಿಯುವಿರಿ.

ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಶ್ಚಿಕ ರಾಶಿ

ನಿಮ್ಮಲ್ಲಿನ ಧೈರ್ಯದ ಗುಣವು ಕುಟುಂಬವನ್ನು ತೊಂದರೆಗಳಿಂದ ದೂರಮಾಡಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ನಿಮ್ಮಲ್ಲಿನ ಅಚಲವಾದ ವಿಶ್ವಾಸ ಉದ್ಯೋಗದಲ್ಲಿ ಉನ್ನತ ಮಟ್ಟವನ್ನು ನೀಡುತ್ತದೆ. ಬುದ್ಧಿವಂತಿಕೆಯ ನಿರ್ಣಯಗಳಿಂದ ಹಣಕಾಸಿನ ಸಮಸ್ಯೆಯಿಂದ ಪಾರಾಗುವಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದು ನಡೆಯಲಿದೆ. ದುರಾಸೆ ತೋರದೆ ಅವಶ್ಯಕತೆ ಇರುವಷ್ಟು ಹಣವನ್ನು ಸಂಪಾದಿಸುವಿರಿ. ಕಷ್ಟದ ಪರಿಸ್ಥಿತಿಯಲ್ಲಿಯೂ ಹಣವನ್ನು ಉಳಿಸುವಿರಿ. ಮಕ್ಕಳು ವಿದ್ಯಾಭ್ಯಾಸದ ಸಲುವಾಗಿ ನಿಮ್ಮಿಂದ ದೂರ ಉಳಿವ ಸನ್ನಿವೇಶ ಎದುರಾಗಲಿದೆ.

ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).