ಕನ್ನಡ ಸುದ್ದಿ  /  Astrology  /  Horoscope Today Astrology Prediction 6 March 2024 Leo Virgo Libra Scorpio Daily Horoscope Sts

Horoscope Today: ವ್ಯಾಪಾರ ವ್ಯವಹಾರದಲ್ಲಿ ಯಶಸ್ಸು, ಕತ್ತು ನೋವು ಕಾಡಲಿದೆ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 6, ಬುಧವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (6 March 2024 Daily Horoscope).

ಮಾರ್ಚ್​ 6ರ ದಿನಭವಿಷ್ಯ
ಮಾರ್ಚ್​ 6ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಬುಧವಾರ

ತಿಥಿ : ಏಕಾದಶಿ ರಾ.11.53 ರವರೆಗು ಇದ್ದು ಆನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ: ಪೂರ್ವಾಷಾಡ ನಕ್ಷತ್ರವು ಹ.10.35 ರವರೆಗೆ ಇರುತ್ತದೆ. ಆನಂತರ ಉತ್ತರಾಷಾಡ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.32

ಸೂರ್ಯಾಸ್ತ: ಸ.06.27

ರಾಹುಕಾಲ : ಹ.12.00 ರಿಂದ ಹ.01.30

ರಾಶಿ ಫಲಗಳು

ಸಿಂಹ

ಕುಟುಂಬದಲ್ಲಿ ಬಿಗುವಿನ ವಾತಾವರಣ ಕಂಡುಬರುತ್ತದೆ. ನಿಮ್ಮ ನಿರ್ಧಾರವೇ ಅಂತಿಮವಾಗುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ಗಳಿಸುವಿರಿ. ಸೇವಾಧಾರಿತ ವ್ಯಾಪಾರ ವ್ಯವಹಾರದಲ್ಲಿ ವಿಶೇಷ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಗುರು ಹಿರಿಯರಿಂದ ಮಾರ್ಗದರ್ಶನ ಪಡೆಯುತ್ತಾರೆ. ಸರಕಾರದ ಅನುದಾನದಲ್ಲಿ ಸಮಾಜಸೇವೆಯ ಸೇವಾವೃತ್ತಿ ಆರಂಭಿಸುವಿರಿ. ಅವಿವಾಹಿತರಿಗೆ ವಿವಾಹದ ಮಾತಾಗುತ್ತದೆ. ಶಾಂತಿ ಸಹನೆಯಿಂದ ಎಲ್ಲರ ಮನಸ್ಸನ್ನು ಗೆಲ್ಲಬಲ್ಲಿರಿ. ಧಾರ್ಮಿಕ ಗುರುಗಳ ಆಶೀರ್ವಾದ ದೊರೆಯುತ್ತದೆ. ಅಪರಿಚಿತರಿಂದ ಹಣವನ್ನು ಪಡೆದು ದಿನದ ಕೆಲಸ ಆರಂಭಿಸುವಿರಿ. ಧಾರ್ಮಿಕ ಕೇಂದ್ರದ ಅಭಿವೃದ್ಧಿಗೆ ಸಹಾಯ ಮಾಡುವಿರಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಕನ್ಯಾ

ಕೌಟುಂಬಿಕ ಕಲಹವೊಂದು ಅಂತಿಮ ಹಂತಕ್ಕೆ ಬರಲಿದೆ. ಉದ್ಯೋಗದಲ್ಲಿ ಸ್ಥಿರತೆ ಕಂಡುಬರದ ಕಾರಣ ಉದ್ಯೋಗವನ್ನು ಬದಲಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಕಲಿಕೆಯಲ್ಲಿ ಮುಂದುವರೆಯಬೇಕು. ಪರಿಸರವನ್ನು ಕಾಪಾಡುವ ಕಾಯಕವನ್ನು ಆರಿಸುವಿರಿ. ಯಂತ್ರ ಸಂಬಂಧಿತ ಸಂಸ್ಥೆಯಲ್ಲಿ ವ್ಯಾಪಾರದ ಸಹಯೋಗ ದೊರೆಯುತ್ತದೆ. ನೀರಿನ ಜೊತೆ ಚೆಲ್ಲಾಟವಾಡದಿರಿ. ಹಿರಿಯ ಸೋದರನ ಜೊತೆಯಲ್ಲಿ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಇರುತ್ತದೆ. ಕತ್ತಿನಲ್ಲಿ ನೋವಿನ ತೊಂದರೆ ಇರುತ್ತದೆ. ಚಿನ್ನ ಬೆಳ್ಳಿಯ ಒಡವೆಗಳಿಗೆ ಹೆಚ್ಚಿನ ಹಣ ಖರ್ಚಾಗಬಹುದು. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ತುಲಾ

ಕುಟುಂಬದ ಎಲ್ಲರಲ್ಲಿ ಆತುರದ ಭಾವನೆ ಸ್ವಭಾವ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಇರದು. ಹಣಕಾಸಿನ ವ್ಯವಹಾರದ ಮಧ್ಯಸ್ಥಿಕೆಯಲ್ಲಿ ತೊಂದರೆ ಎದುರಿಸುವಿರಿ. ತಂದೆಯವರ ವ್ಯಾಪಾರದಲ್ಲಿ ನೆರವಾದಲ್ಲಿ ಹೆಚ್ಚಿನ ಅನುಕೂಲವಿದೆ. ತಾಯಿಯವರಿಗೆ ಸೋದರ ವರ್ಗದವರಿಂದ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ರಾಜಕೀಯದ ನಂಟು ದೊರೆಯುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಪ್ರಯತ್ನದಿಂದ ಉನ್ನತ ಅಧಿಕಾರ ಗಳಿಸುವಿರಿ. ಯಂತ್ರ ಜ್ಞಾನಗಳಿಸಲು ವಿದೇಶಕ್ಕೆ ತೆರಳುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕಿನ ತೀರ್ಮಾನವನ್ನು ತೆಗೆದುಕೊಳ್ಳದಿರಿ. ಪಾಲುಗಾರಿಕೆ ವ್ಯಾಪಾರವು ಮಧ್ಯಮಗತಿಯಲ್ಲಿ ನಡೆಯಲಿದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಇರಬಹುದು.

ಪರಿಹಾರ : ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ವೃಶ್ಚಿಕ

ಕುಟುಂಬದಲ್ಲಿ ಎಲ್ಲರೂ ಹಠದಿಂದ ವರ್ತಿಸುವ ಕಾರಣ ನೆಮ್ಮದಿ ಇರದು. ಛಲದ ಗುಣದಿಂದ ನೆಮ್ಮ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಉದ್ಯೋಗದಲ್ಲಿ ಸ್ನೇಹಮಯ ಪರಿಸರವಿರುತ್ತದೆ. ಉದ್ಯೋಗದಲ್ಲಿನ ವಿವಾದದಿಂದ ಬುದ್ಧಿವಂತಿಕೆಯಿಂದ ಪಾರಾಗುವಿರಿ. ವ್ಯಾಪಾರ ವ್ಯವಹಾರದ್ದಲ್ಲಿ ಯಶಸ್ವಿಯಾಗಿ ಮುಂದುವರಿಯುವಿರಿ. ವಾಸ ಸ್ಥಳವನ್ನು ಬದಲಾಯಿಸುವಿರಿ. ಹಣಕಾಸಿನ ಕೊರತೆಯು ಕ್ರಮೇಣವಾಗಿ ಕಡಿಮೆ ಆಗುತ್ತದೆ. ವಿದ್ಯಾರ್ಥಿಗಳು ಸತತ ಅಭ್ಯಾಸದಲ್ಲಿ ತೊಡಗುತ್ತಾರೆ. ಸಂಗಾತಿಯ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದಗಳು ಉಂಟಾಗುತ್ತವೆ. ಭೂವ್ಯವಹಾರದಲ್ಲಿ ಸಾಧಾರಣ ಲಾಭವಿರುತ್ತದೆ. ಸಾಲದ ವ್ಯವಹಾರ ಮಾಡದಿರಿ. ಚರ್ಮದ ದೋಷ ಇರಲಿದೆ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

--------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).