Horoscope Today: ಉದ್ಯೋಗದಲ್ಲಿ ಮೆಚ್ಚುಗೆ-ಯಶಸ್ಸು ಗಳಿಸುವಿರಿ, ಸಾಲದ ವ್ಯವಹಾರ ಬೇಡ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
ಮಾರ್ಚ್ 6, ಬುಧವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (6 March 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6 March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಬುಧವಾರ
ತಿಥಿ : ಏಕಾದಶಿ ರಾ.11.53 ರವರೆಗು ಇದ್ದು ಆನಂತರ ದ್ವಾದಶಿ ಆರಂಭವಾಗುತ್ತದೆ.
ನಕ್ಷತ್ರ: ಪೂರ್ವಾಷಾಡ ನಕ್ಷತ್ರವು ಹ.10.35 ರವರೆಗೆ ಇರುತ್ತದೆ. ಆನಂತರ ಉತ್ತರಾಷಾಡ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.32
ಸೂರ್ಯಾಸ್ತ: ಸ.06.27
ht ಹ.12.00 ರಿಂದ ಹ.01.30
ರಾಶಿ ಫಲಗಳು
ಧನಸ್ಸು
ಕುಟುಂಬದಲ್ಲಿ ಆಶಾದಾಯಕ ಬದಲಾವಣೆ ಕಾಣುತ್ತದೆ. ಉದ್ಯೋಗದಲ್ಲಿ ಸಮಯಕ್ಕೆ ತಕ್ಕಂತೆ ನಡೆದಲ್ಲಿ ಯಾವುದೇ ತೊಂದರೆ ಬಾರದು. ವ್ಯಾಪಾರ ವ್ಯವಹಾರದಲ್ಲಿ ಕೊಂಚ ಅಳುಕು ಸ್ವಭಾವ ಇರುತ್ತದೆ. ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದ ಕೊರತೆ ಕಂಡುಬರುತ್ತದೆ. ಕುಟುಂಬದ ಒಳಗೂ ಹೊರಗೂ ಗೌರವಯುತ ಸ್ಥಾನ ಮಾನ ದೊರೆಯುತ್ತದೆ. ವಿನಾಕಾರಣ ತೆಗೆದುಕೊಳ್ಳುವ ತೀರ್ಮಾನಗಳನ್ನು ಬದಲಿಸದಿರಿ. ಕುಟುಂಬದವ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವಿರಿ. ವೈವಾಹಿಕ ಜೀವನದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಮಕ್ಕಳ ಜೀವನದಲ್ಲಿ ಅನುಕೂಲತೆಗಳು ದೊರೆಯಲಿವೆ. ಹೊಸ ವಾಹನವನ್ನು ಕೊಳ್ಳುವ ಮನಸ್ಸಿರುತ್ತದೆ. ಕಣ್ಣಿನ ತೊಂದರೆ ಉಂಟಾಗಬಹುದು.
ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹಳದಿ ಬಣ್ಣ
ಮಕರ
ಕುಟುಂಬದಲ್ಲಿ ಸಂತಸದ ಜೀವನ ಇರಲಿದೆ. ಮಕ್ಕಳ ಮನ ಮೆಚ್ಚಿಸಲು ಹೆಚ್ಚಿನ ಹಣ ಖರ್ಚುಮಾಡುವಿರಿ. ಉದ್ಯೋಗದಲ್ಲಿ ಅಸಹಜ ಬದಲಾವಣೆ ಕಂಡುಬರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಆದಾಯ ದೊರೆಯುತ್ತದೆ. ಲಾಭವಿರುವ ಕೆಲಸಗಳನ್ನು ಮಾತ್ರವೇ ಮಾಡಲು ಇಷ್ಟ ಪಡುವಿರಿ. ಉದ್ಯೋಗ ಬದಲಿಸಲು ಇದು ಸಕಾಲವಲ್ಲ. ಕಷ್ಟಪಟ್ಟು ದುಡಿದಲ್ಲಿ ಉದ್ಯೋಗದಲ್ಲಿ ಸಾಧಾರಣ ಉನ್ನತಿ ಕಂಡುಬರುತ್ತದೆ. ಮನರಂಜನೆ ಮರೆತು ವಿಧ್ಯಾರ್ಥಿಗಳು ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುವರು. ಹಣಕಾಸಿನ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸದಿರಿ. ಕಾರ್ಮಿಕರಿಗೆ ಸಹಾಯ ಮಾಡುವಿರಿ. ಷೇರಿನ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ.
ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಸಿರು ಬಣ್ಣ
ಕುಂಭ
ಹಠದ ಗುಣದಿಂದಾಗಿ ಕುಟುಂಬದ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಉಂಟಾಗುತ್ತದೆ. ಉದ್ಯೋಗದಲ್ಲಿನ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ವಿದ್ಯಾರ್ಥಿಗಳ ನಿರೀಕ್ಷಿಸಿದ ಯಶಸ್ಸು ಗಳಿಸುತಾರೆ. ಸ್ವಂತ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸುವವರೆಗೂ ರಹಸ್ಯವನ್ನು ಕಾಪಾಡುವಿರಿ. ಸೋದರನ ಜೊತೆಗಿನ ಮನಸ್ತಾಪವು ಕೊನೆಗೊಳ್ಳಲಿದೆ. ತಂದೆಯವರ ವ್ಯಾಪಾರದಲ್ಲಿನ ಯಶಸ್ಸಿಗೆ ಕಾರಣರಾಗುವಿರಿ. ಅನಾವಶ್ಯಕವಾಗಿ ಯಾವುದೇ ಕೆಲಸವನ್ನು ಮುಂದೂಡದಿರಿ. ಸಾಲದ ವ್ಯವಹಾರ ಬೇಡ. ಅತಿ ಸರಳವಾದ ಕೆಲಸವನ್ನೂ ಸಹ ಜಾಗರೂಕತೆಯಿಂದ ನಿಧಾನವಾಗಿ ಮಾಡುವಿರಿ. ಎಲ್ಲರಜೊತೆ ಪ್ರೀತಿ ವಿಶ್ವಾಸದಿಂದ ಇರಲು ಪ್ರಯತ್ನಿಸಿ.
ಪರಿಹಾರ : ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಹಳದಿ ಮಿಶ್ರಿತಕೆಂಪು ಬಣ್ಣ
ಮೀನ
ಕುಟುಂಬದಲ್ಲಿ ಹೊಸ ನಿರೀಕ್ಷೆ ಮತ್ತು ಸಂತಸ ತುಂಬಿರುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಕಾರ್ಯದಕ್ಷತೆಯಿಂದ ಮೆಚ್ಚುಗೆ ಮತ್ತು ಯಶಸ್ಸನ್ನು ಗಳಿಸುವಿರಿ. ಹಣಕಾಸಿನ ಕೊರತೆ ಇದ್ದಲ್ಲಿ ಕುಟುಂಬದರ ಸಹಾಯ ದೊರೆಯುತ್ತದೆ. ಅದೃಷ್ಟದಿಂದ ವಿದ್ಯಾರ್ಥಿಗಳ ಆಶೋತ್ತರಗಳು ಸುಲಭವಾಗಿ ನೆರವೇರಲಿವೆ. ಹಣಕಾಸಿನ ವ್ಯವಹಾರವನ್ನು ಆರಂಭಿಸುವಿರಿ. ಆತ್ಮೀಯರ ಒಡನೆ ಸ್ವಂತ ಮನೆ ಕೊಳ್ಳುವ ಬಗ್ಗೆ ಮಾತುಕತೆ ನಡೆಸುವಿರಿ. ಅಶಕ್ತರ ಜೀವನಕ್ಕೆ ಆಧಾರವಾಗುವಿರಿ. ಸಂಗಾತಿಯ ಒಡಗೂಡಿ ವಿದೇಶ ಪ್ರಯಾಣ ಮಾಡುವಿರಿ. ಹೊಸ ವಾಹನವನ್ನು ಕೊಳ್ಳುವಿರಿ. ಮಕ್ಕಳಿಗೆ ಬೆಳ್ಳಿಯ ಉಡುಗೊರೆ ನೀಡುವಿರಿ. ಕುಟುಂಬದವರ ಜೊತೆ ಮನ ತಣಿಸುವ ತಾಣಕ್ಕೆ ಪ್ರವಾಸಕ್ಕೆ ತೆರಳುವಿರಿ.
ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಬೆಳ್ಳಿಯ ಬಣ್ಣ
--------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ