Horoscope Today: ಬಿದ್ದು ಸೊಂಟಕ್ಕೆ ಪೆಟ್ಟಾಗುವ ಸಾಧ್ಯತೆ, ಸಾಲದ ವ್ಯವಹಾರದಿಂದ ನಷ್ಟ; ಮೇಷದಿಂದ ಕಟಕ ರಾಶಿವರೆಗೆ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಬಿದ್ದು ಸೊಂಟಕ್ಕೆ ಪೆಟ್ಟಾಗುವ ಸಾಧ್ಯತೆ, ಸಾಲದ ವ್ಯವಹಾರದಿಂದ ನಷ್ಟ; ಮೇಷದಿಂದ ಕಟಕ ರಾಶಿವರೆಗೆ ದಿನಭವಿಷ್ಯ

Horoscope Today: ಬಿದ್ದು ಸೊಂಟಕ್ಕೆ ಪೆಟ್ಟಾಗುವ ಸಾಧ್ಯತೆ, ಸಾಲದ ವ್ಯವಹಾರದಿಂದ ನಷ್ಟ; ಮೇಷದಿಂದ ಕಟಕ ರಾಶಿವರೆಗೆ ದಿನಭವಿಷ್ಯ

6 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (6th April 2024 Daily Horoscope).

ಏಪ್ರಿಲ್‌ 6ರ ದಿನಭವಿಷ್ಯ
ಏಪ್ರಿಲ್‌ 6ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಶನಿವಾರ

ತಿಥಿ: ದ್ವಾದಶಿ ಬೆಳಿಗ್ಗೆ 7.24 ರವರೆಗೂ ಇರುತ್ತದೆ. ಉಪರಿ ತ್ರಯೋದಶಿ ಇರುತ್ತದೆ.

ನಕ್ಷತ್ರ: ಶತಭಿಷ ನಕ್ಷತ್ರವು ಬೆಳ್ಳಿಗ್ಗೆ 1.17 ರವರೆಗೂ ಇರುತ್ತದೆ. ಅನಂತರ ಪೂರ್ವಾಭಾದ್ರ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 6.11

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 9.00 ರಿಂದ ಬೆಳಿಗ್ಗೆ 10.30

ಮೇಷ

ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಕಷ್ಟ ನಷ್ಟಗಳಿಂದ ಪಾರಾಗುವಿರಿ. ದುಡುಕಿನ ತೀರ್ಮಾನದಿಂದ ಕುಟುಂಬದಲ್ಲಿ ಸಂಧಿಗ್ಧ ಪರಿಸ್ಥಿತಿ ಎದುರಾಗುತ್ತದೆ. ಕೆಲಸ-ಕಾರ್ಯಗಳಲ್ಲಿ ಆರಂಭದಲ್ಲಿ ನಿರಾಸೆ ಉಂಟಾಗಲಿದೆ. ಉದ್ಯೋಗದಲ್ಲಿ ಆತ್ಮೀಯರಿಂದ ವಿವಾದವನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಪ್ರತಿ ವಿಚಾರದಲ್ಲಿಯೂ ಸಹಪಾಠಿಗಳನ್ನು ಅವಲಂಬಿಸುತ್ತಾರೆ. ವ್ಯಾಪಾರ ವ್ಯವಹಾರಗಳು ಲಾಭದಲ್ಲಿ ಸಾಗುತ್ತದೆ. ಹಣಕಾಸಿನ ತೊಂದರೆಯು ಕಡಿಮೆಯಾಗುತ್ತದೆ. ವಯೋವೃದ್ಧರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ದೂರದೂರಿಗೆ ಪ್ರಯಾಣ ಬೆಳೆಸುವಿರಿ. ಕುಟುಂಬದಲ್ಲಿನ ಧಾರ್ಮಿಕ ಕಾರ್ಯದ ನಿರ್ವಹಣಾ ಜವಾಬ್ದಾರಿ ನಿಮ್ಮದಾಗುತ್ತದೆ.

ಪರಿಹಾರ: ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ವೃಷಭ

ಮನದಲ್ಲಿರುವ ವಿಚಾರವನ್ನು ಆತ್ಮೀಯರಲ್ಲಿ ಹಂಚಿಕೊಳ್ಳುವಿರಿ. ಜೀವನಶೈಲಿಯನ್ನು ಬದಲಾಯಿಸಿಕೊಳ್ಳಲು ತೀರ್ಮಾನಿಸುವಿರಿ. ಬೇಸರದ ಕಾರಣ ಮುಖ್ಯವಾದ ಕೆಲಸ ಕಾರ್ಯಗಳನ್ನು ಆರಂಭಿಸುವುದಿಲ್ಲ. ಉದ್ಯೋಗದಲ್ಲಿ ಪ್ರಗತಿ ಇಲ್ಲದೆ ನೀರಸ ವಾತಾವರಣ ಉಂಟಾಗುತ್ತದೆ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದ ಬಗ್ಗೆ ಒಲವು ತೋರುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿನ ನಿಮ್ಮ ನಿರೀಕ್ಷೆ ಹುಸಿಯಾಗದು. ಹಣಕಾಸಿನ ಸಂಸ್ಥೆಯನ್ನು ನಡೆಸುತ್ತಿದ್ದಲ್ಲಿ ಉತ್ತಮ ಆದಾಯವಿರುತ್ತದೆ. ಪಾಲುದಾರಿಕೆ ವ್ಯಾಪಾರದಲ್ಲಿ ವರಮಾನವು ಹೆಚ್ಚುತ್ತದೆ. ಆದಾಯಕ್ಕೆ ತಕ್ಕಂತ ಖರ್ಚು ವೆಚ್ಚಗಳು ಎದುರಾಗಲಿವೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಾಲದ ವ್ಯವಹಾರ ನಷ್ಟವನ್ನು ಉಂಟು ಮಾಡಲಿದೆ. ಸಾರಿಗೆ ಸೇವೆಯನ್ನು ಕಲ್ಪಿಸಲು ಹೊಸ ವಾಹನಗಳನ್ನು ಕೊಳ್ಳುವಿರಿ.

ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಿಥುನ

ಕುಟುಂಬದ ಹಿರಿಯರ ಆಂತರ್ಯವನ್ನುಅರ್ಥ ಮಾಡಿಕೊಳ್ಳಲು ವಿಫಲರಾಗುವಿರಿ. ಸರಳವಾದ ಕೆಲಸ ಕಾರ್ಯಗಳನ್ನು ಪೂರೈಸಲು ಸಹ ಬೇರೊಬ್ಬರ ಸಹಾಯದ ನಿರೀಕ್ಷೆ ಇರಲಿದೆ. ಕುಟುಂಬದಲ್ಲಿ ನಲಿವಿನ ವಾತಾವರಣ ಇರುತ್ತದೆ. ಉದ್ಯೋಗದಲ್ಲಿನ ಒತ್ತಡವನ್ನು ಎದುರಿಸುವಿರಿ. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಥಿತಿಯನ್ನು ಬೆಳೆಸಿಕೊಳ್ಳುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಹಾಕಿದ ಬಂಡವಾಳಕ್ಕೆ ಮೋಸವಾಗದು. ಸಂಗಾತಿಗೆ ಕಣ್ಣಿನ ತೊಂದರೆ ಇರುತ್ತದೆ. ಮನೆಮಂದಿಯೊಡನೆ ಕಿರು ಪ್ರವಾಸಕ್ಕೆ ತೆರಳುವಿರಿ. ಒಡವೆ ವಸ್ತ್ರಗಳನ್ನು ಕೊಳ್ಳುವಿರಿ. ಆರೋಗ್ಯದಲ್ಲಿ ಏರುಪೇರು ಕಂಡುಬರುತ್ತದೆ. ಸಂಗಾತಿ ನಡೆಸುವ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ.

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ಕಟಕ

ಚುರುಕುತನದಿಂದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಕೆಲಸ ಮಾಡುವ ಮನಸ್ಸಿದ್ದರೂ ವಯಸ್ಸು ಅಡ್ಡಿಯಾಗುತ್ತದೆ. ಕುಟುಂಬದ ವಿವಾದವನ್ನು ಎದುರಿಸಿ ಶಾಂತಿ ನೆಲೆಸಲು ಕಾರಣರಾಗುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ವಿದ್ಯಾರ್ಥಿಗಳು ಆಟವಾಡಿದಷ್ಟೇ ಸುಲಲಿತವಾಗಿ ಕಲಿಕೆಯಲ್ಲೂ ಮುಂದಿರುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗವನ್ನು ಬದಲಿಸುವ ತೀರ್ಮಾನಕ್ಕೆ ಬರುವಿರಿ. ಅವಿವಾಹಿತರಿಗೆ ಅಪರಿಚಿತರ ಸಹಾಯದಿಂದ, ಗೃಹಿಣಿಯರಿಗೆ ತವರಿಂದ ಶುಭ ವರ್ತಮಾನ ಸಿಗಲಿದೆ. ಬಿದ್ದು ಸೊಂಟಕ್ಕೆ ಪೆಟ್ಟು ಬೀಳುವ ಸಾಧ್ಯತೆಗಳಿವೆ ಎಚ್ಚರವಿರಲಿ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.