Horoscope Today: ಮಾಡದ ತಪ್ಪಿಗೆ ಕ್ಷಮೆ ಕೇಳುವಿರಿ, ಆಡುವ ಮಾತಿನ ಮೇಲೆ ನಿಗಾ ಇರಲಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಮಾಡದ ತಪ್ಪಿಗೆ ಕ್ಷಮೆ ಕೇಳುವಿರಿ, ಆಡುವ ಮಾತಿನ ಮೇಲೆ ನಿಗಾ ಇರಲಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today: ಮಾಡದ ತಪ್ಪಿಗೆ ಕ್ಷಮೆ ಕೇಳುವಿರಿ, ಆಡುವ ಮಾತಿನ ಮೇಲೆ ನಿಗಾ ಇರಲಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

6 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (6th April 2024 Daily Horoscope).

ಏಪ್ರಿಲ್‌ 6ರ ದಿನಭವಿಷ್ಯ
ಏಪ್ರಿಲ್‌ 6ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಶನಿವಾರ

ತಿಥಿ: ದ್ವಾದಶಿ ಬೆಳಿಗ್ಗೆ 7.24 ರವರೆಗೂ ಇರುತ್ತದೆ. ಉಪರಿ ತ್ರಯೋದಶಿ ಇರುತ್ತದೆ.

ನಕ್ಷತ್ರ: ಶತಭಿಷ ನಕ್ಷತ್ರವು ಬೆಳ್ಳಿಗ್ಗೆ 1.17 ರವರೆಗೂ ಇರುತ್ತದೆ. ಅನಂತರ ಪೂರ್ವಾಭಾದ್ರ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 6.11

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 9.00 ರಿಂದ ಬೆಳಿಗ್ಗೆ 10.30

ಸಿಂಹ

ಕುಟುಂಬದಲ್ಲಿ ಎಲ್ಲರ ಮೇಲೂ ಅಧಿಕಾರ ಚಲಾಯಿಸುವಿರಿ. ಇದರಿಂದ ಕೆಲವರ ವಿರೋಧವನ್ನು ಎದುರಿಸುವಿರಿ. ಕುಟುಂಬದ ಮುಖ್ಯ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿ ಬರುತ್ತದೆ. ಮಾಡದ ತಪ್ಪಿಗೆ ಕುಟುಂಬದ ಹಿರಿಯರ ಕ್ಷಮೆಯನ್ನು ಕೇಳುವಿರಿ. ಉದ್ಯೋಗದಲ್ಲಿ ನಿಮ್ಮ ವಿರುದ್ದದ ಷಡ್ಯಂತ್ರವು ವಿಫಲವಾಗಲಿದೆ. ವಿದ್ಯಾರ್ಥಿಗಳು ಹಠದಿಂದ ಉನ್ನತ ವಿದ್ಯಾಭ್ಯಾಸವನ್ನು ಮುಂದುವರೆಸುವರು. ವ್ಯಾಪಾರ ವ್ಯವಹಾರಗಳಲ್ಲಿನ ವಿವಾದವನ್ನು ಕಾನೂನಾತ್ಮಕವಾಗಿ ಗೆಲ್ಲುವಿರಿ. ವಿದೇಶಿ ಸಂಸ್ಥೆಯಲ್ಲಿ ಹಣವನ್ನು ಬಂಡವಾಳವನ್ನಾಗಿ ಹೂಡುವಿರಿ. ಕುಟುಂಬದ ಹಿರಿಯರಿಗೆ ಶುಭ ವರ್ತಮಾನ ದೊರೆಯಲಿದೆ. ತಂದೆಯವರಿಗೆ ಇಷ್ಟವಾದ ತಿಂಡಿ ತಿನಿಸನ್ನು ನೀಡುವಿರಿ.

ಪರಿಹಾರ: ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

ಕನ್ಯಾ

ಆಡುವ ಮಾತಿನ ಮೇಲೆ ಗಮನವಿರಲಿ. ಕೇವಲ ಟೀಕೆ ಮಾಡುವುದರಲ್ಲಿ ದಿನ ಕಳೆಯುವಿರಿ. ಮಾಡುವ ತಪ್ಪನ್ನು ಮುಚ್ಚಿಡಲು ಬೇರೆಯವರ ಮೇಲೆ ಅಪವಾದವನ್ನು ಹಾಕುವಿರಿ. ಖ್ಯಾತ ಸಂಸ್ಥೆಯ ನಿರ್ವಹಣೆಯ ಜವಾಬ್ದಾರಿ ದೊರೆಯುವುದು. ಮಕ್ಕಳಿಗೆ ಅತಿಯಾಗಿ ತಿನ್ನುವ ಚಟವಿರುತ್ತದೆ. ಉತ್ತಮ ಅಭ್ಯಾಸದಿಂದ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಕುಟುಂಬದಲ್ಲಿ ಪರಸ್ಪರ ವಾದ ವಿವಾದಗಳು ಇದ್ದರೂ ಪ್ರೀತಿ ವಿಶ್ವಾಸಕ್ಕೆ ಕೊರತೆ ಇರುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷಿಸಿದ ಯಶಸ್ಸು ಲಭಿಸುತ್ತದೆ. ನೋವೆಲ್ಲವನ್ನು ಮರೆತು ಸಂತಸದಿಂದ ಇರುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ನಷ್ಟಗಳು ಸರಿದೂಗಲಿವೆ. ಮಕ್ಕಳಿಗೆ ಅವರ ಮನ ಮೆಚ್ಚುವ ಉಡುಗೊರೆ ನೀಡುವಿರಿ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ತಿಳಿ ಹಸಿರು

ತುಲಾ

ದುಡುಕಿನ ಮಾತಿನಿಂದ ವಿವಾದ ಉಂಟಾಗಲಿದೆ. ಅನಾವಶ್ಯಕ ಟೀಕೆ ಮಾಡುವ ಬದಲು ಮೌನದಿಂದ ಕಾರ್ಯ ಸಾಧಿಸಬಹುದು. ಸಂಗಾತಿ ಮತ್ತು ಮಕ್ಕಳ ಜೊತೆಯಲ್ಲಿ ದಿನ ಕಳೆಯುವಿರಿ. ಮಾಡುವ ತಪ್ಪನ್ನು ಮುಚ್ಚಿಡದೆ ತಪ್ಪನ್ನು ಒಪ್ಪಿಕೊಳ್ಳುವಿರಿ. ಬೇರೆಯವರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ಕುಟುಂಬದಲ್ಲಿ ಮಂಗಳ ಕಾರ್ಯವೊಂದು ನೆರವೇರುವುದು. ಆಹಾರದಲ್ಲಿ ಶುಚಿತ್ವ ಕಡಿಮೆಯಾಗಿ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿಗೆ ಕೊರತೆ ಇರುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಜಯ ಲಭಿಸುತ್ತದೆ. ಎಲ್ಲರ ಜೊತೆಯಲ್ಲಿ ಮನದ ವಿಚಾರವನ್ನು ಹಂಚಿಕೊಳ್ಳುವಿರಿ. ವಿದ್ಯಾರ್ಥಿಗಳು ಉನ್ನತ ವ್ಯಾಸಂಗದಲ್ಲಿ ನಿರತರಾಗಲಿದ್ದಾರೆ. ಬಹುದಿನಗಳಿಂದ ಯೋಜಿಸಿದ ಪ್ರವಾಸವನ್ನು ರದ್ದು ಪಡಿಸುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನಸುಗೆಂಪುಬಣ್ಣ

ವೃಶ್ಚಿಕ

ಆತ್ಮೀಯರ ಬುದ್ಧಿ ಮಾತನ್ನು ಒಪ್ಪಿದಲ್ಲಿ ತೊಂದರೆಯೊಂದು ದೂರವಾಗಲಿದೆ. ಕುಟುಂಬದಲ್ಲಿ ಸಂದಿಗ್ಧತೆಗೆ ಸಿಲುಕುವ ಪ್ರಸಂಗವೊಂದು ಎದುರಾಗಲಿದೆ. ಬೇಡದ ಮಾತುಕತೆಯಿಂದ ಆಲೋಚನೆಗಳು ಹೆಚ್ಚುತ್ತದೆ. ಕ್ರೀಡಾಮನೋಭಾವನೆಯಿಂದ ಮನಸ್ಸಿನ ನೆಮ್ಮದಿ ಉಳಿಯುತ್ತದೆ. ಉದ್ಯೋಗದಲ್ಲಿನ ಸಮಸ್ಯೆಗಳು ದೂರಾಗಲಿದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಷ್ಟದ ಮಾತಿರದು. ವಿದ್ಯಾರ್ಥಿಗಳಿಗೆ ಸಹಪಾಠಿಗಳ ಸಹಕಾರ ದೊರೆಯಲಿದೆ. ಮುಂಗೋಪದ ಕಾರಣ ಸ್ನೇಹಿತರು ಕಡಿಮೆ. ಭೂ ವ್ಯವಹಾರದಿಂದ ಹಣದ ಕೊರತೆ ಕಡಿಮೆಯಾಗುತ್ತದೆ. ಸಂಗಾತಿಯ ಜೊತೆಯಲ್ಲಿ ವಾದವಿವಾದ ಉಂಟಾಗಲಿದೆ. ಅಶಕ್ತ ವಿದ್ಯಾರ್ಥಿಗಳಿಗೆ ಧನಸಹಾಯ ಮಾಡುವಿರಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.