Horoscope Today: ಅಪಜಯದ ಭಯದಿಂದ ತಪ್ಪು ಹಾದಿಯಲ್ಲಿ ನಡೆಯುವಿರಿ, ಆರೋಗ್ಯದ ಬಗ್ಗೆ ಗಮನವಿರಲಿ; ಧನು ರಾಶಿಯಿಂದ ಮೀನದವರೆಗೆ ದಿನಭವಿಷ್ಯ
6 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (6th April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಶನಿವಾರ
ತಿಥಿ: ದ್ವಾದಶಿ ಬೆಳಿಗ್ಗೆ 7.24 ರವರೆಗೂ ಇರುತ್ತದೆ. ಉಪರಿ ತ್ರಯೋದಶಿ ಇರುತ್ತದೆ.
ನಕ್ಷತ್ರ: ಶತಭಿಷ ನಕ್ಷತ್ರವು ಬೆಳ್ಳಿಗ್ಗೆ 1.17 ರವರೆಗೂ ಇರುತ್ತದೆ. ಅನಂತರ ಪೂರ್ವಾಭಾದ್ರ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ: ಬೆಳಿಗ್ಗೆ 6.11
ಸೂರ್ಯಾಸ್ತ: ಸಂಜೆ 6.31
ರಾಹುಕಾಲ: ಬೆಳಿಗ್ಗೆ 9.00 ರಿಂದ ಬೆಳಿಗ್ಗೆ 10.30
ಧನಸ್ಸು
ಜೀವನದಲ್ಲಿ ಸರಿಯಾದ ಮಾರ್ಗವನ್ನು ಆಯ್ಕೆ ಮಾಡಲು ವಿಫಲರಾಗುವಿರಿ. ದೊರೆಯುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸಿ. ತೆಗೆದುಕೊಂಡ ನಿರ್ಧಾರವನ್ನು ಬದಲಿಸದೇ ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ. ಅಪಜಯದ ಭಯ ತಪ್ಪಾದ ಹಾದಿಯಲ್ಲಿ ನಡೆಸುತ್ತದೆ. ಮಕ್ಕಳೊಂದಿಗೆ ವಿದ್ಯಾಭ್ಯಾಸದ ವಿಚಾರಕ್ಕಾಗಿ ವಿದೇಶಕ್ಕೆ ತೆರಳುವಿರಿ. ಕುಟುಂಬದಲ್ಲಿ ಪರಸ್ಪರ ನಂಬಿಕೆ ಇರುವ ಕಾರಣ ನೆಮ್ಮದಿ ಇರುತ್ತದೆ. ಉದ್ಯೋಗದಲ್ಲಿ ಹೊಸ ಬದಲಾವಣೆಗಳು ನಿಮಗೆ ಅನುಕೂಲಕರವಾಗಿರುತ್ತವೆ. ಬೇಸಾಯವನ್ನೇ ನೆಚ್ಚಿಕೊಂಡವರಿಗೆ ಹಣದ ಸಹಾಯ ದೊರೆಯುತ್ತದೆ. ಖರ್ಚು ವೆಚ್ಚಗಳನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.
ಪರಿಹಾರ: ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಮಕರ
ದೇಹದ ತೂಕ ಮಿತಿ ಮೀರುವ ಸಾಧ್ಯತೆ ಇದೆ. ಸರಳ ದೈಹಿಕ ವ್ಯಾಯಾಮ ಉತ್ತಮ ಆರೋಗ್ಯವನ್ನು ಉಳಿಸುತ್ತದೆ. ಹಣದ ಅತಿಯಾಸೆ ಇರುವುದಿಲ್ಲ. ಸಿಕ್ಕಿದಷ್ಟಕ್ಕೆ ಸಂತೃಪ್ತಿ ಪಡುವಿರಿ. ಕುಟುಂಬದಲ್ಲಿ ಬೇಸರ ತರಿಸುವಂತಹ ಮಾತನ್ನು ಅರಿವಿಲ್ಲದೆ ಆಡುವಿರಿ. ಸಮಾಜದ ಒಳಿತಿಗಾಗಿ ಕೆಲಸ ಮಾಡುವ ಬಯಕೆ ಉಂಟಾಗಲಿದೆ. ಕಷ್ಟದ ಕೆಲಸ ಕಾರ್ಯಗಳಿಗೆ ಹೆದರುವುದಿಲ್ಲ. ವಿಶ್ರಾಂತಿ ಇಲ್ಲದೆ ಕೆಲಸ ನಿರ್ವಹಿಸುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಬಾರದು. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಗಂಭೀರವಾಗಿ ಪರಿಗಣಿಸಬೇಕು. ಸೋಮಾರಿತನವನ್ನು ಕಡಿಮೆಮಾಡಿಕೊಳ್ಳಬೇಕು. ಆರೋಗ್ಯದ ಬಗ್ಗೆ ಗಮನ ಇರಲಿ.
ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ಕುಂಭ
ಕುಟುಂಬದಲ್ಲಿ ನಿರೀಕ್ಷೆಗೂ ಮೀರಿದ ಬೆಂಬಲ ದೊರೆಯುತ್ತದೆ. ಪ್ರಭಾವಿ ಜನರ ಸಹಕಾರ ದೊರೆಯುತ್ತದೆ. ಎಲ್ಲರಿಗೂ ಮಾದರಿಯಾಗಬಲ್ಲ ಮನೋಧರ್ಮ ನಿಮ್ಮಲ್ಲಿ ಇರುತ್ತದೆ. ಗುಟ್ಟಾಗಿ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಅನಿರೀಕ್ಷಿತ ಧನ ಲಾಭವಿದೆ. ಹಣವನ್ನು ಉಳಿಸಲು ವಿಫಲರಾಗುವಿರಿ. ಅತಿಯಾದ ಒತ್ತಡ ಇದ್ದರೂ ಪ್ರವಾಸವನ್ನು ಆಯೋಜಿಸುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ಉನ್ನತ ಅಧಿಕಾರ ಯೋಗವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರದ್ಧೆ ತೋರುವುದರಿಂದ ವರಮಾನಕ್ಕೆ ಕೊರತೆಯಾಗದು. ಜನಸಾಮಾನ್ಯರಿಗೆ ಸಹಾಯಕವಾಗುವ ಸೇವಾ ಪೂರ್ವ ವೃತ್ತಿಯಲ್ಲಿ ಲಾಭವಿದೆ. ವಿದ್ಯಾರ್ಥಿಗಳಿಗೆ ಶುಭವಿದೆ. ನೂತನ ವಸ್ತ್ರಗಳಿಗೆ ಹೆಚ್ಚಿನ ಹಣ ವಿನಿಯೋಗಿಸುವಿರಿ.
ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ಮೀನ
ಮನರಂಜನೆಗಾಗಿ ಹೆಚ್ಚಿನ ಹಣ ಖರ್ಚು ಮಾಡುವಿರಿ. ಬೇರೊಬ್ಬರ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಕಂಡುಬರುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಿಸದಿರಿ. ಉದ್ಯೋಗದಲ್ಲಿ ಗಮನವಿರದೆ ಹೋದಲ್ಲಿ ವಿವಾದವೊಂದು ಎದುರಾಗಲಿದೆ. ವಿದ್ಯಾರ್ಥಿಗಳು ನಿಷ್ಠೆಯಿಂದ ಕಲಿಕೆಯಲ್ಲಿ ಮಗ್ನರಾಗುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಿಲ್ಲ. ವಿದೇಶ ಪ್ರಯಾಣ ಯೋಗವಿದೆ. ಆತ್ಮೀಯರೊಂದಿಗೆ ಪಾಲುದಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ಶೀತ ವಾಯುವಿನ ದೋಷ ಇರುತ್ತದೆ. ಮನೆಯಲ್ಲಿ ಸಾಕಿರುವ ಪ್ರಾಣಿಗಳ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ. ವಾಹನ ಚಾಲನೆ ಮಾಡುವ ವೇಳೆ ಗಮನ ಇರಲಿ.
ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).