ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ನಿಮ್ಮ ಸಮಸ್ಯೆಗಳಿಗೆ ತಂದೆಯಿಂದ ಪರಿಹಾರ ಸಿಗುತ್ತದೆ, ಪ್ರತಿಭೆಗೆ ತಕ್ಕ ಪುರಸ್ಕಾರ ದೊರೆಯಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ನಿಮ್ಮ ಸಮಸ್ಯೆಗಳಿಗೆ ತಂದೆಯಿಂದ ಪರಿಹಾರ ಸಿಗುತ್ತದೆ, ಪ್ರತಿಭೆಗೆ ತಕ್ಕ ಪುರಸ್ಕಾರ ದೊರೆಯಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಜುಲೈ 6ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ನಿಮ್ಮ ಸಮಸ್ಯೆಗಳಿಗೆ ತಂದೆಯಿಂದ ಪರಿಹಾರ ಸಿಗುತ್ತದೆ, ಪ್ರತಿಭೆಗೆ ತಕ್ಕ ಪುರಸ್ಕಾರ ದೊರೆಯಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ನಿಮ್ಮ ಸಮಸ್ಯೆಗಳಿಗೆ ತಂದೆಯಿಂದ ಪರಿಹಾರ ಸಿಗುತ್ತದೆ, ಪ್ರತಿಭೆಗೆ ತಕ್ಕ ಪುರಸ್ಕಾರ ದೊರೆಯಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ : ಪಾಡ್ಯ ರಾತ್ರಿ 03.43 ರವರೆಗೂ ಇದ್ದು ನಂತರ ಬಿದಿಗೆ ಆರಂಭವಾಗುತ್ತದೆ.

ನಕ್ಷತ್ರ: ಪುನರ್ವಸು ನಕ್ಷತ್ರವು ರಾತ್ರಿ 04.55 ರವರೆಗೆ ಇದ್ದು ನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: ಬೆಳಗ್ಗೆ 09.16 ರಿಂದ 10.52

ರಾಶಿಫಲ

ಮೇಷ

ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ನಿಮ್ಮ ತಂದೆಯವರು ಸೂಕ್ತ ಪರಿಹಾರ ನೀಡುತ್ತಾರೆ. ಬುದ್ಧಿವಂತಿಕೆಯಿಂದ ಉದ್ಯೋಗದಲ್ಲಿನ ಅಡ್ಡಿ ಆತಂಕಗಳನ್ನು ದೂರ ಮಾಡುವಿರಿ. ಸ್ವಂತ ಪ್ರತಿಭೆಗೆ ಉತ್ತಮ ಪುರಸ್ಕಾರ ದೊರೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ನಿರೀಕ್ಷಿತ ವರಮಾನ ದೊರೆಯಲಿದೆ. ವಿದ್ಯಾರ್ಥಿಗಳು ಆತಂಕದ ಪರಿಸ್ಥಿತಿಯಲ್ಲಿಯೂ ತಮ್ಮ ಸ್ಥಾನವನ್ನು ಕಾಪಾಡಿಕೊಳ್ಳುತ್ತಾರೆ. ನಿಮಗೆ ಅರಿಯದ ವಿಚಾರವನ್ನು ಬೇರೆಯವರೊಂದಿಗೆ ಚರ್ಚಿಸಿ ತಿಳಿದುಕೊಳ್ಳುವಿರಿ. ಸೋದರ ಅಥವಾ ಸೋದರಿಯ ಜೊತೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ. ಮಕ್ಕಳ ಜೀವನದಲ್ಲಿನ ತಪ್ಪುಗಳನ್ನು ಸರಿಪಡಿಸಿ ಅವರನ್ನು ಸರಿದಾರಿಗೆ ತರುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಆದಾಯವಿರುತ್ತದೆ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ವೃಷಭ

ನಿಮ್ಮ ತಂದೆಯವರಿಗೆ ಸೇರಿದ ಭೂಮಿಯನ್ನು ನಿಮಗೆ ನೀಡುತ್ತಾರೆ. ಬೇರೆಯವರ ವಿವಾದಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗುವಿರಿ. ಸೋದರರಿಗೆ ಸಮಾಜದ ಗಣ್ಯದಿಂದ ಸಹಾಯ ದೊರೆಯಲಿದೆ. ಉದ್ಯೋಗ ಬದಲಿಸುವ ಯೋಗವಿದ್ದು ಅದರಿಂದ ಉತ್ತಮ ಫಲಗಳನ್ನು ಪಡೆಯುವಿರಿ. ನಿಮ್ಮ ತಂದೆಯವರು ನೀವು ತಪ್ಪು ಮಾಡಿದಾಗ ಖಂಡಿಸಿ ಸರಿದಾರಿಗೆ ತರುವರು. ಸಮಾಜದಲ್ಲಿ ನಿಮ್ಮದೇ ಆದ ಪ್ರತಿಷ್ಠಿತ ಸ್ಥಾನ ದೊರೆಯುತ್ತದೆ. ಬುದ್ಧಿವಂತಿಕೆಯಲ್ಲಿ ವಂಶದವರಿಗೆ ನಿಮಗೆ ಪ್ರಥಮ ಸ್ಥಾನ ಲಭಿಸುತ್ತದೆ. ಸಭೆ ಸಮಾರಂಭಗಳಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವಿರಿ. ಉತ್ತಮ ಭಾಷಾಜ್ಞಾನವಿರುತ್ತದೆ. ನಿಮ್ಮಲ್ಲಿರುವ ವಿಶೇಷ ಜ್ಞಾನವನ್ನು ಎಲ್ಲರಿಗೂ ಹಂಚುವಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನಸುಗೆಂಪು

ಮಿಥುನ

ಸ್ವಂತ ಭೂಮಿಯನ್ನು ಕೊಳ್ಳುವುದರಲ್ಲಿ ಯಶಸ್ವಿಯಾಗುವಿರಿ. ಪಶು ಸಂಗೋಪನೆಯ ಬಗ್ಗೆ ಆಸಕ್ತಿ ಮೂಡುತ್ತದೆ. ಸಮಾಜದ ಪ್ರಮುಖ ವ್ಯಕ್ತಿಯಾಗಿ ಬಾಳುವಿರಿ. ಕಣ್ಣಿನ ದೋಷವು ದೂರವಾಗಿ ನಿಮ್ಮಲ್ಲಿ ವಿಶೇಷವಾದ ಜನಾಕರ್ಷಕ ಶಕ್ತಿಯು ಕಂಡುಬರುತ್ತದೆ. ನಿಮ್ಮ ಮಕ್ಕಳಿಗೆ ವಿದ್ಯೆಗಿಂತಲೂ ಹೆಚ್ಚಿನ ಬುದ್ಧಿಶಕ್ತಿ ಇರುತ್ತದೆ. ಸಮಾಜದ ಗಣ್ಯ ವ್ಯಕ್ತಿಯ ಸ್ನೇಹ ದೊರೆಯಲಿದೆ. ವೈಭವದ ಮತ್ತು ದುಬಾರಿ ವಸ್ತುಗಳನ್ನು ಕೊಳ್ಳುವಿರಿ. ರಕ್ತದೋಷವಿದ್ದಲ್ಲಿ ಆರೋಗ್ಯದ ಬಗ್ಗೆ ಗಮನ ನೀಡಬೇಕು. ನಿಮ್ಮ ಮಕ್ಕಳಿಗೆ ವಿಶೇಷ ಕೀರ್ತಿ ಲಭಿಸುತ್ತದೆ. ನಿಮ್ಮ ಮಕ್ಕಳ ವಿದ್ಯಾಭ್ಯಾಸದಲ್ಲಿನ ಸಾಧನೆಯಿಂದ ನಿಮಗೆ ಸಮಾಜದಲ್ಲಿ ವಿಶೇಷ ಗೌರವ ಲಭಿಸುತ್ತದೆ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕಟಕ

ಸಂಪೂರ್ಣ ಅರಿವಿಲ್ಲದೆ ಯಾವುದೇ ಕೆಲಸವನ್ನು ಆರಂಭಿಸುವುದಿಲ್ಲ. ಆತುರವಿದ್ದರೂ ತಪ್ಪು ನಿರ್ಧಾರ ಕೈಗೊಳ್ಳುವುದಿಲ್ಲ. ಆದರೆ ಕುಟುಂಬದಲ್ಲಿ ಒಮ್ಮತವಿರುವುದಿಲ್ಲ. ಭೂ ವ್ಯವಹಾರದಿಂದ ಉತ್ತಮ ವರಮಾನವಿರುತ್ತದೆ. ಬೇರೆಯವರ ವಿವಾದಗಳಲ್ಲಿ ಸಂಧಾನ ನಡೆಸುವಲ್ಲಿ ಯಶಸ್ಸನ್ನು ಕಾಣುವಿರಿ. ಕುಟುಂಬದ ಹಿರಿಯರ ಸಹಾಯ ಸಹಕಾರ ದೊರೆಯುತ್ತದೆ. ಉದ್ಯೋಗದಲ್ಲಿ ಉತ್ತಮ ಯಶಸ್ಸು ಮತ್ತು ಗೌರವ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುತ್ತದೆ. ತಂದೆಯವರ ಬುದ್ದಿವಾದದ ಕಾರಣ ಆಪತ್ತಿನಿಂದ ಪಾರಾಗುವಿರಿ. ನಿಮ್ಮ ಮುಖದಲ್ಲಿ ಗೆಲುವಿನ ಆತ್ಮವಿಶ್ವಾಸ ತುಂಬಿರುತ್ತದೆ. ಸಮಾಜದಲ್ಲಿ ಉನ್ನತ ಸ್ಥಾನಮಾನ ದೊರೆಯುತ್ತದೆ. ಆತಂಕದ ಪರಿಸ್ಥಿತಿಯಲ್ಲಿ ಧೃತಿಗೆಡದೆ ಸೂಕ್ತ ಪರಿಹಾರವನ್ನು ಕಂಡುಹಿಡಿಯುವಿರಿ. ನಿಮ್ಮಿಂದ ಯಾರಿಗೂ ತೊಂದರೆ ಉಂಟಾಗುವುದಿಲ್ಲ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.