ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕುಟುಂಬದ ಯಜಮಾನಿಕೆ ನಿಮ್ಮದಾಗುತ್ತದೆ, ವಾಹನ ಚಾಲನೆ ವೇಳೆ ಎಚ್ಚರವಿರಲಿ; ಸಿಂಹದಿಂದ ವೃಶ್ಚಿಕರಾಶಿವರೆಗೆ ದಿನಭವಿಷ್ಯ

Horoscope Today: ಕುಟುಂಬದ ಯಜಮಾನಿಕೆ ನಿಮ್ಮದಾಗುತ್ತದೆ, ವಾಹನ ಚಾಲನೆ ವೇಳೆ ಎಚ್ಚರವಿರಲಿ; ಸಿಂಹದಿಂದ ವೃಶ್ಚಿಕರಾಶಿವರೆಗೆ ದಿನಭವಿಷ್ಯ

ಜೂನ್ 6, 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (6th June 2024 Daily Horoscope).

ವಾಹನ ಚಾಲನೆ ವೇಳೆ ಎಚ್ಚರವಿರಲಿ; ಸಿಂಹದಿಂದ ವೃಶ್ಚಿಕರಾಶಿವರೆಗೆ ದಿನಭವಿಷ್ಯ
ವಾಹನ ಚಾಲನೆ ವೇಳೆ ಎಚ್ಚರವಿರಲಿ; ಸಿಂಹದಿಂದ ವೃಶ್ಚಿಕರಾಶಿವರೆಗೆ ದಿನಭವಿಷ್ಯ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಬ್ರಹ್ಮಶ್ರೀ ಚಿಲಕಮರ್ತಿ ಪ್ರಭಾಕರ ಚಕ್ರವರ್ತಿ ಶರ್ಮಾ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣಪಕ್ಷ, ಗುರುವಾರ

ತಿಥಿ: ಅಮಾವಾಸ್ಯೆ ಸಂಜೆ 5.44 ರವರೆಗೂ ಇರುತ್ತದೆ. ಅನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ: ರೋಹಿಣಿ ನಕ್ಷತ್ರವು ರಾತ್ರಿ 8.22 ರವರೆಗೂ ಇರುತ್ತದೆ. ಅನಂತರ ಮೃಗಶಿರ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳ್ಳಿಗ್ಗೆ 5.52

ಸೂರ್ಯಾಸ್ತ: ಸಂಜೆ 6.44

ರಾಹುಕಾಲ: ಮಧ್ಯಾಹ್ನ 1.58 ರಿಂದ ಮಧ್ಯಾಹ್ನ 3.34

ಸಿಂಹ

ನಿಮ್ಮನ್ನು ಅರ್ಥಮಾಡಿಕೊಳ್ಳಲು ಯಾರೂ ಪ್ರಯತ್ನಿಸುವುದಿಲ್ಲ. ಬೇರಯವರ ಯಶಸ್ಸನ್ನು ಆಚರಿಸುವ ಮನಸ್ಸಿರುತ್ತದೆ. ಕುಟುಂಬದ ಯಜಮಾನಿಕೆ ಬಯಸದೇ ಬರುತ್ತದೆ. ತಂದೆಯ ಮಾರ್ಗದರ್ಶನದಲ್ಲಿ ಹಣಕಾಸಿನ ವ್ಯವಹಾರದಲ್ಲಿ ಯಶಸ್ಸು ಗಳಿಸುವಿರಿ. ಮನಸ್ಸಿಲ್ಲದೆ ಹೋದರು ಒತ್ತಡಕ್ಕೆ ಮಣಿದು ವೃತ್ತಿಯನ್ನು ಬದಲಿಸುತ್ತೀರಿ. ಸಮಾಜದ ಮುಖ್ಯ ಸ್ಥಾನವು ನಿಮ್ಮದಾಗಲಿದೆ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಸಂತಾನ ಲಾಭವಿದೆ. ಸಿಡುಕುತನದಿಂದ ಹೊರಬಂದು ಎಲ್ಲರೊಂದಿಗೆ ಸ್ನೇಹ ಬೆಳಸುವಿರಿ. ರಾಜಕೀಯದಲ್ಲಿ ಆಸಕ್ತಿ ಮೂಡಲಿದೆ. ಸಾಲದ ವ್ಯವಹಾರದಲ್ಲಿ ಯೋಚಿಸಿ ಮುಂದುವರೆಯುವಿರಿ. ಮಾತನಾಡದೆ ಬಂಧು-ಬಳಗದವರ ಮನಸ್ಸನ್ನು ಅರಿತುಕೊಳ್ಳಲು ಪ್ರಯತ್ನಿಸುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಕನ್ಯಾ

ಹಣ ಮತ್ತು ಸ್ಥಾನಮಾನಕ್ಕೆ ಹೆಚ್ಚಿನ ಬೆಲೆ ನೀಡುವುದಿಲ್ಲ. ದೂರದ ಸಂಬಂಧಿಕರ ಸಹಕಾರ ನಿಮಗಿರುತ್ತದೆ. ವಂಶದ ಆಸ್ಥಿಯ ವಿವಾದವನ್ನು ಮಾತುಕತೆಯಿಂದ ದೂರಮಾಡುವಿರಿ. ಅಮೂಲ್ಯವಾದ ಕಾಣಿಕೆಯನ್ನು ಪಡೆಯುವಿರಿ. ನಿಮ್ಮ ಒಳ್ಳೆಯ ನಡವಳಿಕೆ ಕುಟುಂಬದ ಗೌರವವನ್ನು ಹೆಚ್ಚಿಸಲಿದೆ. ನಿರುದ್ಯೋಗಿಗಳಿಗೆ ಸರ್ಕಾರಿ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ. ರಾಜಕಾರಣಿಗಳ ಮನದಾಸೆಯೊಂದು ನೆರವೇರಲಿದೆ. ಹಣಕಾಸಿನ ಹಗರಣವೊಂದು ಕಾನೂನಿನ ಸಹಾಯದಿಂದ ಕೊನೆಗೊಳ್ಳಲಿದೆ, ಕೃಷಿ ಕಾರ್ಯದಲ್ಲಿ ಆಸಕ್ತಿ ಮೂಡುತ್ತದೆ. ಹೊಸ ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಆರೋಗ್ಯದ ತೊಂದರೆ ಇರಲಿದೆ.

ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನೀಲಿ ಬಣ್ಣ

ತುಲಾ

ನಿಮ್ಮಲ್ಲಿನ ಕ್ರೀಡಾ ಮನೋಭಾವನೆ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ದೈಹಿಕ ಸದೃಢತೆ ಉತ್ತಮ ಆರೋಗ್ಯ ನೀಡಲಿದೆ. ವಿದ್ಯಾರ್ಥಿಗಳು ಸದಾಕಾಲ ಕ್ರೀಡಾ ಚಟುವಟಿಕೆಗಳಲ್ಲಿ ನಿರತರಾಗುತ್ತಾರೆ. ಕುಟುಂಬದಲ್ಲಿ ಎಂದೆಂದಿಗೂ ಆನಂದ ತುಂಬಿರುತ್ತದೆ. ತಾಯಿಯ ಆರೋಗ್ಯದ ಬಗ್ಗೆ ಚಿಂತೆ ಮೂಡುತ್ತದೆ. ಸೋಲುವ ವೇಳೆಯಲ್ಲಿ ಅತಿಯಾದ ಕೋಪದಿಂದ ವರ್ತಿಸುವಿರಿ. ವಂಶದ ಹಿರಿಯ ವ್ಯಕ್ತಿಯೊಬ್ಬರನ್ನು ಭೇಟಿ ಮಾಡುವಿರಿ. ಸ್ನೇಹಿತರು ಮತ್ತು ಸಂಬಂಧಿಗಳೊಡನೆ ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ದಾಂಪತ್ಯ ಜೀವನದಲ್ಲಿ ಸಂತಸ ಮನೆ ಮಾಡುತ್ತದೆ. ಮಹಿಳಾ ಉದ್ಧಿಮೆಗಾರರಿಗೆ ವಿಶೇಷ ಸಹಾಯ ಮತ್ತು ಆದಾಯ ದೊರೆಯುತ್ತದೆ. ಹೊರಗಿನ ಜನರ ಮಾತುಗಳಿಗೆ ಪ್ರಾಶಸ್ತ್ಯ ನೀಡದಿರಿ.

ಪರಿಹಾರ: ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ವೃಶ್ಚಿಕ

ಉತ್ತಮ ಹವ್ಯಾಸಗಳ ಕಾರಣ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಹೊಸ ವ್ಯಾಪಾರ ವ್ಯವಹಾರ ಪ್ರಾರಂಭಿಸಲು ಯೋಜನೆ ರೂಪಿಸುವಿರಿ. ಕುಟುಂಬದ ಆದಾಯದಲ್ಲಿ ಗಣನೀಯ ಏರಿಕೆ ಕಂಡುಬರುತ್ತದೆ. ಶಾಂತಿ ನೆಮ್ಮದಿಯ ಜೀವನ ನಡೆಸುವಿರಿ. ಸಂಗಾತಿಯ ಆರೋಗ್ಯದಲ್ಲಿ ಏರಿಳಿತ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಕುಟುಂಬದ ಹಿರಿಯರ ಬೆಂಬಲ ದೊರೆಯುತ್ತದೆ. ಪ್ರಯೋಜನವಿಲ್ಲದ ವಿಚಾರಗಳಿಗೆ ಚಿಂತೆ ಮಾಡುವಿರಿ. ನಿಮ್ಮ ಕಷ್ಟ ನಷ್ಟಗಳು ಮರೆಯಾಗಲಿದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ನಿಮ್ಮ ಮನದ ಯೋಜನೆಯನ್ನು ಕಾರ್ಯಗತಗೊಳಿಸಲು ಯಶಸ್ವಿಯಾಗುವಿರಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಸಿರುತ್ತದೆ. ಮನರಂಜನೆಗಾಗಿ ಸಮಯವನ್ನು ಮೀಸಲಿಡುವಿರಿ.

ಪರಿಹಾರ: ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).