ಪ್ರಯತ್ನ ಪಟ್ಟರೆ ಸರ್ಕಾರಿ ಉದ್ಯೋಗ ದೊರೆಯುವುದು, ಹೊಸಬರ ಸ್ನೇಹ ಮಾಡುವಾಗ ಎಚ್ಚರ: ಮೇ 6ರ ದಿನ ಭವಿಷ್ಯ
Daily Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (6th May 2024 Daily Horoscope).
ದಿನ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (2nd May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಸೋಮವಾರ
ತಿಥಿ : ತ್ರಯೋದಶಿ 01.01 ರವರೆಗೂ ಇದ್ದು ನಂತರ ಚತುರ್ದಶಿ ಆರಂಭವಾಗುತ್ತದೆ.
ನಕ್ಷತ್ರ : ರೇವತಿ ನಕ್ಷತ್ರವು 04.29 ರವರೆಗೂ ಇದ್ದು ನಂತರ ಅಶ್ವಿನಿ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.57
ಸೂರ್ಯಾಸ್ತ: ಸಂಜೆ 06.35
ರಾಹುಕಾಲ: ಬೆಳಗ್ಗೆ 07.35 ರಿಂದ 09.10
ರಾಶಿಫಲ
ಸಿಂಹ
ನಿಮ್ಮ ವಿಜಯವನ್ನು ಕಂಡು ಹೊಟ್ಟೆಕಿಚ್ಚು ಪಡುವ ಜನ ಇರುತ್ತಾರೆ. ತಂದೆಯ ವೃತ್ತಿಯನ್ನು ಅನುಸರಿಸುವಿರಿ. ಪ್ರಯತ್ನಪಟ್ಟಲ್ಲಿ ಸರ್ಕಾರಿ ನೌಕರಿ ದೊರೆಯುತ್ತದೆ. ಸಮಾಜದ ಮುಖ್ಯ ಸ್ಥಾನವನ್ನು ಅಲಂಕರಿಸುವಿರಿ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಸಂತಾನ ಲಾಭವಿದೆ. ಅನ್ಯರ ಸ್ನೇಹ ಬೆಳಸುವ ಮುನ್ನ ಒಮ್ಮೆ ಯೋಚಿಸುವಿರಿ. ಜನರಿಗೆ ಅನುಕೂಲವಾಗುವ ಕೆಲಸ ಕಾರ್ಯಾಗಳನ್ನು ಆರಂಭಿಸುವಿರಿ. ಹಣಕಾಸಿನ ವಿವಾದವೊಂದು ಅಂತ್ಯಗೊಳ್ಳಲಿದೆ. ಸರ್ಕಾರದ ಅನುದಾನದಲ್ಲಿ ವ್ಯಾಪಾರವನ್ನು ಆರಂಭಿಸುವಿರಿ. ಧಾರ್ಮಿಕ ಕೆಲಸಗಳಲ್ಲಿ ಹೆಚಿನ ಆಸಕ್ತಿ ಇರುತ್ತದೆ. ಕುಟುಂಬದ ಸದಸ್ಯರ ಜೊತೆ ಮಾಡುವ ವ್ಯಾಪಾರದಲ್ಲಿ ಲಾಭವಿದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕೆಂಪು
ಕನ್ಯಾ
ವಿಶೇಷವಾದ ಸ್ಥಾನ ಮಾನ ದೊರೆಯುತ್ತದೆ. ನಿಮ್ಮ ಮಾತು ಮತ್ತು ಕಾರ್ಯವೈಖರಿಯನ್ನು ಎಲ್ಲರೂ ಗೌರವಿಸುತ್ತಾರೆ. ಹೆಚ್ಚಿನ ಪ್ರಯತ್ನದಿಂದ ಸರ್ಕಾರಿ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ. ರಾಜಕಾರಣಿಗಳಿಗೆ ಶುಭ ಸುದ್ಧಿಯೊಂದು ದೊರೆಯಲಿದೆ. ಆಸ್ತಿ ವಿಚಾರದಲ್ಲಿ ತಂದೆಗೆ ಕಾನೂನಿನ ಅನ್ವಯ ಜಯ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಶುಭವಿದೆ. ವಂಶದ ವೃತ್ತಿಯನ್ನು ಆರಂಭಿಸುವಿರಿ. ನಿಮ್ಮನ್ನು ಅಜೀರ್ಣ ಕಾಡುತ್ತದೆ. ಹಳ್ಳಿಯ ವಾತಾವರಣವನ್ನು ಬಯಸಿ ಕೃಷಿ ಭೂಮಿ ಕೊಳ್ಳುವಿರಿ. ತಪ್ಪು ಮಾಹಿತಿಯನ್ನು ನಂಬಿ ಆತ್ಮೀಯರ ಜೊತೆ ವಾದದಲ್ಲಿ ತೊಡಗುವಿರಿ. ಬೇರೆಯವರನ್ನು ಪ್ರೀತಿ ವಿಶ್ವಾಸದಿಂದ ಕಾಣಲು ಪ್ರಯತ್ನಿಸಿ.
ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಎಲೆ ಹಸಿರು
ತುಲಾ
ಗರ್ಭಿಣಿಯರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ವೃತ್ತಿಕ್ಷೇತ್ರದಲ್ಲಿ ಆಂತರಿಕ ಶತ್ರುಗಳಿರುತ್ತಾರೆ. ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ನಿಮ್ಮದಾಗಲಿದೆ. ಮನಸ್ಸಿಲ್ಲದೇ ಹೋದರೂ ಉದ್ಯೋಗ ಬದಲಾಯಿಸುವ ಸಂದರ್ಭ ಎದುರಾಗುತ್ತದೆ. ಕುಟುಂಬದ ವಯೋವೃದ್ಧರ ಆರೋಗ್ಯದಲ್ಲಿ ಏರಿಳಿಕೆ ಇರುತ್ತದೆ. ಮನದಲ್ಲಿರುವ ಆಸೆ ಆಕಾಂಕ್ಷೆಗಳು ಈಡೇರಲು ಹೆಚ್ಚಿನ ಪರಿಶ್ರಮ ಬೇಕಾಗುತ್ತದೆ. ವಿದೇಶದಲ್ಲಿ ಉದ್ಯೋಗ ಲಭಿಸುತ್ತದೆ. ಕುಟುಂಬದಲ್ಲಿ ಅಶಾಂತಿಯ ಸನ್ನಿವೇಶ ಎದುರಾಗುತ್ತದೆ. ವಿದ್ಯಾರ್ಥಿಗಳು ಯಶಸ್ಸಿನಿಂದ ತೇಲಾಡುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭವಿರುತ್ತದೆ. ಸಾಲದ ವ್ಯವಹಾರದಲ್ಲಿ ಹಿನ್ನೆಡೆ ಇರುತ್ತದೆ.
ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು ನೈರುತ್ಯ
ಅದೃಷ್ಟದ ಬಣ್ಣ: ಕೇಸರಿ
ವೃಶ್ಚಿಕ
ಅತಿಯಾದ ಕೋಪ ನಿಮ್ಮಲಿನ ಬುದ್ಧಿವಂತಿಕೆಯನ್ನು ಮರೆ ಮಾಚುತ್ತದೆ. ಸಮಯಕ್ಕೆ ತಕ್ಕಂತೆ ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವಿರಿ. ಚಾಡಿಮಾತನ್ನು ನಂಬಿ ನೆಮ್ಮದಿ ಕೆಡಿಸಿಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ನಿರೀಕ್ಷೆಯಂತೆ ಬಡ್ತಿ ದೊರೆಯುತ್ತದೆ. ನಿಮ್ಮ ಕಾರ್ಯ ದಕ್ಷತೆಯನ್ನು ಹಿರಿಯ ಅಧಿಕಾರಿಗಳು ಪ್ರಶಂಶಿಸುತ್ತಾರೆ. ಸಂಗಾತಿಯ ಸಹಕಾರ ಸದಾ ದೊರೆಯುತ್ತದೆ. ವಿದ್ಯಾರ್ಥಿಗಳು ಚುರುಕುತನದಿಂದ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುತ್ತಾರೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಸ್ವಗೃಹ ಭೂಲಾಭವಿದೆ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ಆರೋಗದಲ್ಲಿ ಸಮಸ್ಯೆ ಎದುರಾಗುತ್ತದೆ. ಒಲ್ಲದ ಮನಸ್ಸಿನಿಂದ ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ.
ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
