ಕನ್ನಡ ಸುದ್ದಿ  /  Astrology  /  Horoscope Today Astrology Prediction 7 March 2024 Leo Virgo Libra Scorpio Daily Horoscope Sts

Horoscope Today: ವಿವಾಹ ಯೋಗ, ತಂದೆಯವರಿಗಾಗಿ ಹೆಚ್ಚಿನ ಖರ್ಚು; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 7, ಗುರುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (7 March 2024 Daily Horoscope).

ಮಾರ್ಚ್​ 7ರ ದಿನಭವಿಷ್ಯ
ಮಾರ್ಚ್​ 7ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (7 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಗುರುವಾರ

ತಿಥಿ : ದ್ವಾದಶಿ ರಾ.10.04 ರವರೆಗು ಇದ್ದು ಆನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ ಉತ್ತರಾಷಾಡ ನಕ್ಷತ್ರವು ಬೆ.09.38 ರವರೆಗೆ ಇರುತ್ತದೆ. ಆನಂತರ ಶ್ರವಣ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.32

ಸೂರ್ಯಾಸ್ತ: ಸ.06.27

ರಾಹುಕಾಲ : ಬೆ.01.30 ರಿಂದ ಬೆ.03.00

ರಾಶಿ ಫಲಗಳು

ಸಿಂಹ

ಸಿಟ್ಟನ್ನು ಹತೋಟಿಯಲ್ಲಿ ಇಡಿ. ನಿಮ್ಮ ಪ್ರಯತ್ನದಿಂದ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಉದ್ಯೋಗದಲ್ಲಿ ಅಧಿಕಾರ ಸ್ಥಾನಕ್ಕೆ ಬಡ್ತಿ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿನ ಕಾನೂನಿನ ಸಮಸ್ಯೆಯೊಂದು ದೂರವಾಗುತ್ತದೆ. ಹಣದ ಕೊರತೆ ಉಂಟಾಗದು. ವಿದ್ಯಾರ್ಥಿಗಳು ಅವಿರತ ಪ್ರಯತ್ನದಿಂದ ಗುರಿ ತಲುಪಲಿದ್ದಾರೆ. ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳಬಹುದು. ರುಚಿಕರ ಭೋಜನ ಮತ್ತು ಸುಖಕರ ನಿದ್ದೆ ನಿಮ್ಮದಾಗುತ್ತದೆ. ಅವಿವಾಹಿತರಿಗೆ ವಿವಾಹ ಲಾಭವಿದೆ. ಉಳಿತಾಯ ಯೋಜನೆಯಲ್ಲಿ ಹಣವನ್ನು ತೊಡಗಿಸುವಿರಿ. ತಂದೆಯವರಿಗೆ ವಂಶದ ಆಸ್ತಿಯಲ್ಲಿ ನ್ಯಾಯಯುತ ಪಾಲು ದೊರೆಯುತ್ತದೆ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕನ್ಯಾ

ಆತ್ಮೀಯ ಸಹಕಾರವು ಜೀವನಕ್ಕೆ ಹೊಸ ರೂಪವನ್ನು ನೀಡುತ್ತದೆ. ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆಯ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಬೇಸರದ ವಾತಾವರಣದ ನಡುವೆ ಸಹನೆಯಿಂದ ವರ್ತಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಆದಾಯದಲ್ಲಿ ಹೆಚ್ಚು ಕಡಿಮೆ ಆಗಬಹುದು. ಹಣದ ಕೊರತೆ ಕಾಣದು. ಕುಟುಂಬದ ಸದಸ್ಯರ ಜೊತೆಗೂಡಿ ಗುಡಿ ಕೈಗಾರಿಕೆಯೊಂದನ್ನು ಆರಂಭಿಸುವಿರಿ. ತಂದೆಯವರಿಗಾಗಿ ಹೆಚ್ಚಿನ ಖರ್ಚು ಎದುರಾಗುತ್ತದೆ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ. ಅವಿವಾಹಿತರಿಗೆ ವಿವಾಹವಾಗಲಿದೆ. ಸ್ಟಾಕ್ ಮತ್ತು ಷೇನ್​​ನ ವ್ಯವಹಾರದಲ್ಲಿ ಹೆಚ್ಚಿನ ಹಣವನ್ನು ತೊಡಗಿಸುವಿರಿ. ಸಂಗಾತಿಯ ಜೊತೆಯಲ್ಲಿ ಬಂಧುವೊಬ್ಬರ ಮನೆಗೆ ತೆರಳುವಿರಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಳದಿ ಬಣ್ಣ

ತುಲಾ

ಕುಟುಂಬದ ಬಗ್ಗೆ ಒಳ್ಳೆಯ ಭಾವನೆ ನೆಲೆಸಿರುತ್ತದೆ. ಅನ್ಯೋನ್ಯತೆಯ ಕಾರಣ ಕುಟುಂಬದಲ್ಲಿ ಸಂತೋಷ ನೆಲೆಯಾಗುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಧನಲಾಭ ದೊರೆಯುತ್ತದೆ. ಪ್ರಯತ್ನಕ್ಕೆ ತಕ್ಕಂತಹ ಪ್ರತಿಫಲ ದೊರೆಯುತ್ತದೆ. ವಿದೇಶ ಪ್ರಯಾಣ ಯೋಗವಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಉನ್ನತ ಮಟ್ಟವನ್ನು ಉಳಿಸಿಕೊಳ್ಳುತ್ತಾರೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಸಾರ್ವಜನಿಕ ಸಭೆ ಸಮಾರಂಭದಲ್ಲಿ ಮುಖ್ಯಪಾತ್ರ ವಹಿಸುವಿರಿ. ಹಣವನ್ನು ಉಳಿಸಲು ಹೊಸ ಯೋಜನೆ ಆರಂಭಿಸುವಿರಿ. ಆತುರದ ನಿರ್ಧಾರ ಒಳ್ಳೆಯದಲ್ಲ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಸಿರು ಬಣ್ಣ

ವೃಶ್ಚಿಕ

ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಂಡಷ್ಟು ಒಳ್ಳೆಯದು. ಕುಟುಂಬದವರ ಜೊತೆಯಲ್ಲಿ ಹೊಂದಿಕೊಂಡು ಬಾಳುವಿರಿ. ತಪ್ಪನ್ನು ಕ್ಷಮಿಸುವ ಗುಣವನ್ನು ಬೆಳೆಸಿಕೊಳ್ಳಿರಿ. ಉದ್ಯೋಗದಲ್ಲಿ ಬೇಸರ ಉಂಟಾಗಿ ಮೌನಕ್ಕೆ ಶರಣಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ನಿರೀಕ್ಷೆ ಬೇಡ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾಭ್ಯಾಸದಲ್ಲಿ ತೊಡಗುತ್ತಾರೆ. ಕುಟುಂಬದವರ ಆರೋಗ್ಯದ ಕಡೆ ಗಮನವಿರಲಿ. ಸಣ್ಣ ಪ್ರಮಾಣದ ಹಣಕಾಸಿನ ಯೋಜನೆಯನ್ನು ಆರಂಭಿಸುವಿರಿ. ಜಮೀನನ್ನು ಕೊಳ್ಳುವ ಸೂಚನೆ ಇದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭವಿದೆ. ಮನೆಗೆ ಬೇಕಾದ ವಸ್ತುಗಳನ್ನು ಕೊಳ್ಳಿವಿರಿ. ಮಕ್ಕಳು ಸಂತೋಷ ತರುವ ಕೆಲಸವನ್ನು ಮಾಡಲಿದ್ದಾರೆ

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಬಣ್ಣ

-------------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).