Horoscope Today: ಸಂತಾನ ಲಾಭ, ಮನಬಿಚ್ಚಿ ಆತ್ಮೀಯರೊಂದಿಗೆ ಮಾತನಾಡಿ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
ಮಾರ್ಚ್ 7, ಗುರುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (7 March 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (7 March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಗುರುವಾರ
ತಿಥಿ : ದ್ವಾದಶಿ ರಾ.10.04 ರವರೆಗು ಇದ್ದು ಆನಂತರ ತ್ರಯೋದಶಿ ಆರಂಭವಾಗುತ್ತದೆ.
ನಕ್ಷತ್ರ ಉತ್ತರಾಷಾಡ ನಕ್ಷತ್ರವು ಬೆ.09.38 ರವರೆಗೆ ಇರುತ್ತದೆ. ಆನಂತರ ಶ್ರವಣ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.32
ಸೂರ್ಯಾಸ್ತ: ಸ.06.27
ರಾಹುಕಾಲ : ಬೆ.01.30 ರಿಂದ ಬೆ.03.00
ರಾಶಿ ಫಲಗಳು
ಧನಸ್ಸು
ಧಾರ್ಮಿಕತೆಯ ಕಡೆಗೆ ಹೆಚ್ಚಿನ ಗಮನ ಹರಿಸುವಿರಿ. ಕುಟುಂಬದಲ್ಲಿ ಸಂಭ್ರಮದ ಛಾಯೆ ಉಂಟಾಗಲಿದೆ. ಸಹೋದ್ಯೋಗಿಗಳ ಜೊತೆಯಲ್ಲಿ ಸಹಮತ ಏರ್ಪಡುತ್ತದೆ. ಉದ್ಯೋಗದಲ್ಲಿ ಬದಲಾವಣೆಗಳು ಅನುಕೂಲಕರವಾಗಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಧನಲಾಭವಿರುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿ ಕಳೆದುಕೊಳ್ಳಬಹುದು. ವಿದ್ಯಾರ್ಥಿಗಳು ಶಿಕ್ಷಕರ ಮೇಲೆ ಅವಲಂಭಿತರಾಗುತ್ತಾರೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಆದಾಯವನ್ನು ಹೆಚ್ಚಿಸಿಕೊಳ್ಳುವ ಭರದಲ್ಲಿ ತಪ್ಪು ನಿರ್ಧಾರ ಕೈಗೊಳ್ಳುವಿರಿ. ಹೊಸ ವ್ಯಾಪಾರದ ಬಗ್ಗೆ ಆಲೋಚಿಸುವಿರಿ. ಹಣಕಾಸಿನ ವಿಚಾರದಲ್ಲಿ ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಹೈನುಗಾರಿಕೆಯಲ್ಲಿ ಆಸಕ್ತಿ ಇರಲಿದೆ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ಮಕರ
ಸಂಬಂಧಿಕರ ಆಗಮನದಿಂದ ಕುಟುಂಬದಲ್ಲಿ ಸಂತೋಷವನ್ನು ಉಂಟುಮಾಡುತ್ತದೆ. ಉದ್ಯೋಗದಲ್ಲಿ ಬಹುದಿನದ ತಡವಾದರೂ ಉನ್ನತ ಅಧಿಕಾರ ಈಗ ದೊರೆಯಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಲಾಭವಿದೆ. ವಿದ್ಯಾರ್ಥಿಗಳು ಕಷ್ಟಪಟ್ಟು ತಮ್ಮ ಗುರಿ ಸಾಧಿಸುತ್ತಾರೆ. ಭವಿಷ್ಕ್ಯದ ಜೀವನಕ್ಕೆ ಕುಟುಂಬದ ಹಿರಿಯರ ಸಲಹೆ ಸಹಕಾರಿಯಾಗಲಿದೆ. ಯಾವುದೇ ಕೆಲಸವ ಕಾರ್ಯವಾದರೂ ಶೀಘ್ರವಾಗಿ ನಿರ್ಣಯವನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಮನೆ ಕಟ್ಟಲು ಬೇಕಾದ ಪರಿಕರಣಗಳ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದೆ. ಕೃಷಿಕರಿಗೆ ನಿರೀಕ್ಷಿತ ಅವಕಾಶ ಮತ್ತು ಆದಾಯ ಇರುತ್ತದೆ. ಪ್ರಾಣಿ ಪಕ್ಷಿಗಳಿಂದ ದೂರವಿರುವುದು ಒಳಿತು.
ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಕುಂಭ
ಮೌನ ತೊರೆದು ಮನಬಿಚ್ಚಿ ಆತ್ಮೀಯರೊಂದಿಗೆ ಮಾತನಾಡಿ. ಕುಟುಂಬದವರಿಂದ ಉತ್ತಮ ಸಹಕಾರ ದೊರೆಯಲಿದೆ. ಅವಶ್ಯಕತೆ ಇದ್ದಲ್ಲಿ ಬೇರೆಯವರು ನೀಡುವ ಸಲಹೆ ಸೂಚನೆಯನ್ನು ಪಾಲಿಸಲು ಪ್ರಯತ್ನಿಸಿ. ಕುಟುಂಬದವರೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ. ಉದ್ಯೋಗದಲ್ಲಿ ಯಾವುದೇ ಹೊಸತರ ಬದಲಾವಣೆಗಳು ಕಾಣದು. ವ್ಯಾಪಾರ ವ್ಯವಹಾರಗಳಲ್ಲಿ ಆದಾಯದಲ್ಲಿ ಬದಲಾವಣೆ ಇರದು. ಅನಾವಶ್ಯಕವಾದ ವಿವಾದಗಳಿಂದ ದೂರವಿರಿ. ಸ್ವಂತ ಉದ್ದಿಮೆ ಇದ್ದಲ್ಲಿ ಕಾರ್ಮಿಕರನ್ನು ಪ್ರೀತಿ ವಿಶ್ವಾಸದಿಂದ ನಡೆಸಿಕೊಳ್ಳಿ. ಸಣ್ಣ ವಿಚಾರಗಳಿಗೂ ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ದುಬಾರಿ ವಸ್ತುಗಳ ಬಗ್ಗೆ ಆಸಕ್ತಿ ಇರುತ್ತದೆ.
ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಬೂದು ಬಣ್ಣ
ಮೀನ
ವಯೋವೃದ್ಧರಿಗೆ ಉತ್ತಮ ಆರೋಗ್ಯ ಮರುಕಳಿಸುತ್ತದೆ. ಕುಟುಂಬದಲ್ಲಿ ಆತಂಕದ ವಾತಾವರಣ ಇರುತ್ತದೆ. ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಿ. ದೃಢವಾದ ಸಂಕಲ್ಪದಿಂದ ಮಾತ್ರ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಾಯ ದೊರೆಯಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಹಣಗಳಿಕೆ ಇರುತ್ತದೆ. ಸಂತಾನ ಲಾಭವಿದೆ. ವಿದ್ಯಾರ್ಥಿಗಳು ಹೆಚ್ಚಿನ ವೇಳೆಯನ್ನು ಶಿಕ್ಷಕರ ಜೊತೆಯಲ್ಲಿ ಕಳೆಯುತ್ತಾರೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಆತ್ಮೀಯರೊಂದಿಗೆ ಪಾಲುಗಾರಿಕೆಯ ವ್ಯಾಪಾರವೊಂದನ್ನು ಆರಂಭಿಸುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಸಂಗಾತಿಯೊಂದಿಗೆ ಕುಟುಂಬ ನಿರ್ವಹಣೆಯ ವಿಚಾರದಲ್ಲಿ ಉತ್ತಮ ಸ್ಪಂದನೆ ತೋರುವಿರಿ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ಬೆಳ್ಳಿಯ ಬಣ್ಣ
-------------------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ